ಶಿಕ್ಷಣ
Dwaraka-ದ್ವಾರಕಾ ಪ್ರತಿಷ್ಠಾನ ಮತ್ತು ಯಕ್ಷದೀವಿಗೆ (ರಿ.) ತುಮಕೂರು ಇದರ ವತಿಯಿಂದ “ಚಿಣ್ಣರ ಉದ್ಯಾನವನ” ದಲ್ಲಿ “ಚಂದ್ರಮಂಡಲ ಚರಿತೆ” ಕಾರ್ಯಕ್ರಮ
ಮಾ.30ರಂದು ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ಯಕ್ಷದೀವಿಗೆ (ರಿ.) ತುಮಕೂರು ಸಹಯೋಗದಲ್ಲಿ ಪುತ್ತೂರು ನಗರದ “ಚಿಣ್ಣರ ಉದ್ಯಾನ” ದಲ್ಲಿ “ಚಂದ್ರಮಂಡಲ ಚರಿತೆ” ಯಕ್ಷಗಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸುಂದರ ಪೂಜಾರಿ ಬಡಾವು ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸಭೆ ಪುತ್ತೂರು ಇವರು ಉದ್ಘಾಟಿಸಿ ಮಾತಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಾ.30ರಂದು ದ್ವಾರಕಾ ಕಾರ್ಪೊರೇಷನ್ ಪ್ರೈ. ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ಯಕ್ಷದೀವಿಗೆ (ರಿ.) ತುಮಕೂರು ಸಹಯೋಗದಲ್ಲಿ ಪುತ್ತೂರು ನಗರದ “ಚಿಣ್ಣರ ಉದ್ಯಾನ” ದಲ್ಲಿ “ಚಂದ್ರಮಂಡಲ ಚರಿತೆ” ಯಕ್ಷಗಾನ ಕಾರ್ಯಕ್ರಮದ ಉದ್ಘಾಟನೆಯನ್ನು ಸುಂದರ ಪೂಜಾರಿ ಬಡಾವು ಸ್ಥಾಯಿ ಸಮಿತಿ ಅಧ್ಯಕ್ಷರು, ನಗರಸಭೆ ಪುತ್ತೂರು ಇವರು ಉದ್ಘಾಟಿಸಿ ಮಾತಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಉಪಾಧ್ಯಕ್ಷರಾದ ಬಾಲಚಂದ್ರ ಕೆಮ್ಮಿಂಜೆ ಮತ್ತು ಸಂಸ್ಥೆಯ ಕಾರ್ಯದರ್ಶಿ ಗಣರಾಜ ಕುಂಬ್ಳೆ ಸಭೆಯಲ್ಲಿ ಉಪಸ್ಥಿತರಿದ್ದರು.
ಗಣ್ಯರನ್ನು ಸಂಸ್ಥೆಯ ಉಪಾಧ್ಯಕ್ಷರಾದ ಅಮೃತಕೃಷ್ಣ ಎನ್ ಇವರು ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಣ್ಯರು ಮಾತನಾಡುತ್ತಾ ಪುತ್ತೂರು ನಗರದಲ್ಲಿರುವ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಆಶಿಸುತ್ತಾ ದ್ವಾರಕಾ ಪ್ರತಿಷ್ಠಾನದ ಇಂತಹ ಸಮಾಜಮುಖಿ ಕೆಲಸವನ್ನು ಪ್ರಸಂಶಿಸಿದರು.

ಸಭಾ ಕಾರ್ಯಕ್ರಮದ ನಂತರ ಪದ್ಮನಾಭ ಸಿಬಂತಿ ಮತ್ತು ಆರತಿ ಪಟ್ರಮೆ ಇವರ ನೇತೃತ್ವದ ಯಕ್ಷದೀವಿಗೆ (ರಿ.) ತುಮಕೂರು ತಂಡದಿಂದ ಯಕ್ಷಗಾನ ಪ್ರದರ್ಶನ ನಡೆಯಿತು.
ಯಕ್ಷಗಾನದಲ್ಲಿ ಭಾಗವತರಾಗಿ ಪ್ರಶಾಂತ್ ರೈ ಮುಂಡಾಲಗುತ್ತು ಹಾಗೂ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ, ಅವಿನಾಶ ಬೈಪಡಿತ್ತಾಯ ಮತ್ತು ಆದಿತ್ಯಕೃಷ್ಣ ದ್ವಾರಕಾ ಇವರು ಸಹಕರಿಸಿ, ಯಕ್ಷದೀವಿಗೆ ತಂಡದವರು ಮುಮ್ಮೇಳದಲ್ಲಿ ಪಾತ್ರವನ್ನು ನಿರ್ವಹಿಸಿದರು.
ಈ ಕಾರ್ಯಕ್ರಮದ ನಿರೂಪಣೆ, ಸ್ವಾಗತ ಮತ್ತು ಧನ್ಯವಾದ ಸಮರ್ಪಣೆಯನ್ನು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ ಇವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು6 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಸ್ಥಳೀಯ11 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ10 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್12 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ11 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ10 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ7 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಬಿಗ್ ನ್ಯೂಸ್10 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















