Connect with us

ಬೆಂಗಳೂರು

Honeytrap-ಡೇಂಜರ್ ಟೀಚರ್ ! ಮಗಳನ್ನು ಸ್ಕೂಲಿಗೆ ಡ್ರಾಪ್ ಮಾಡಲು ಬಂದ ತಂದೆಯ ಹನಿಟ್ರ್ಯಾಪ್ – ಒಂದು ಮುತ್ತಿಗೆ 50ಸಾವಿರ ವಸೂಲಿ

Published

on

Ad Widget

Ad Widget

Ad Widget

Ad Widget

ಟೀಚರ್ ಒಬ್ಬಳು, ಪೋಷಕರನ್ನೇ ಹನಿಟ್ರ್ಯಾಪ್ (Honey Trap) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಪೋಷಕನಿಗೆ ಒಂದು ಕಿಸ್ ನೀಡಿ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ (Blackmail) ಮಾಡಿ 50,000ಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾಳೆ.

Ad Widget

Ad Widget

Ad Widget

Ad Widget

ಸಮಾಜದಲ್ಲಿ ಶಿಕ್ಷಕರಿಗೆ ಪೂಜ್ಯನೀಯ ಸ್ಥಾನವಿದೆ. ‘ಗುರು’ ಎಂದರೆ ಕೇವಲ ಅಕ್ಷರ ಕಲಿಸುವವರಲ್ಲ, ಮೌಲ್ಯಗಳನ್ನು ಬಿತ್ತುವವರು, ಮಕ್ಕಳ ಭವಿಷ್ಯಕ್ಕೆ ದಾರಿ ತೋರುವ ದಿಕ್ಸೂಚಿ. ಪೋಷಕರು ತಮ್ಮ ಮಕ್ಕಳನ್ನು ಅತ್ಯಂತ ನಂಬಿಕೆಯಿಂದ ಶಾಲೆಯ ಶಿಕ್ಷಕರ ವಶಕ್ಕೆ ಒಪ್ಪಿಸುತ್ತಾರೆ. ಇಂತಹ ಪವಿತ್ರವಾದ, ನಂಬಿಕೆಯ ಮೇಲೆ ನಿಂತಿರುವ ಶಿಕ್ಷಕ-ಪೋಷಕ ಸಂಬಂಧವು ಹಾದಿ ತಪ್ಪಿದರೆ ಏನಾಗಬಹುದು ಎಂಬುದಕ್ಕೆ ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಈ ಘಟನೆಯೇ ಕಠೋರ ಸಾಕ್ಷಿ.

Ad Widget

Ad Widget alt="Ad Widget"/>

Ad Widget

ಈ ಪ್ರಕರಣದಲ್ಲಿ ಟೀಚರ್ ಒಬ್ಬಳು, ಪೋಷಕರನ್ನೇ ಹನಿಟ್ರ್ಯಾಪ್ (Honey Trap) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಪೋಷಕನಿಗೆ ಒಂದು ಕಿಸ್ ನೀಡಿ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ (Blackmail) ಮಾಡಿ 50,000ಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾಳೆ.

Ad Widget

Ad Widget <> Ad Widget

ಏನಿದು ಪ್ರಕರಣ
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಪ್ರಿಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ಎಂಬ ಶಿಕ್ಷಕಿ, ತನ್ನ ಶಾಲೆಯಲ್ಲಿದ್ದ ಮಗುವಿನ ತಂದೆಯಾದ ರಾಕೇಶ್ ಎಂಬ ಉದ್ಯಮಿಗೆ ಹನಿಟ್ರ್ಯಾಪ್ ಮಾಡಿ, ಹಣ ಸುಲಿಗೆ ಮಾಡಿದ ಘಟನೆ ನಡೆದಿದೆ. ಪ್ರಿಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ ಈ ಶಿಕ್ಷಕಿ ಆರಂಭದಲ್ಲಿ 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದಾಗ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ.

ಘಟನೆಯ ಹಿನ್ನೆಲೆ:
2023ರಲ್ಲಿ ಶ್ರೀದೇವಿಗೆ ರಾಕೇಶ್ ಅವರ ಪರಿಚಯವಾಗಿದೆ. ಆತ ತನ್ನ ಮಕ್ಕಳನ್ನು ಪ್ರೀಸ್ಕೂಲ್ ಗೆ ಡ್ರಾಪ್ ಮಾಡಲು ಬರುತ್ತಿದ್ದ. ಅವನಲ್ಲಿದ್ದ ಐಷರಾಮಿ ಕಾರು, ಅವನ ಲೈಪ್‌ ಸ್ಟೈಲ್‌ ಅನ್ನು ಗಮನಿಸಿದ ಶ್ರೀದೇವಿಯು ರಾಕೇಶ್‌ ಒಬ್ಬ ಶ್ರೀಮಂತ ಮಿಕ ಎಂಬುದನ್ನು ಕಂಡುಕೊಂಡಿದ್ದಳು. ಅವನನ್ನು ಹೇಗಾದರೂ ಬುಟ್ಟಿಗೆ ಹಾಕಿ ಹಣ ವಸೂಲಿ ಮಾಡಲು ಸಿದ್ದತೆ ಮಾಡಿಕೊಂಡಿದ್ದಾಳೆ
,ಅದರಂತೆ ಶಾಲಾ ನಿರ್ವಹಣೆ ಮತ್ತು ತಂದೆಯ ಚಿಕಿತ್ಸೆಯ ಕಾರಣ ನೀಡಿ ಆರಂಭದಲ್ಲಿ ಆಕೆ ರಾಕೇಶ್‌ ನಿಂದ 4 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದಾಳೆ. 2024ರ ಮಾರ್ಚ್ನಲ್ಲಿ ಹಣ ಹಿಂದಿರುಗಿಸುವುದಾಗಿ ಹೇಳಿದ್ದರೂ, ಸಮಯಕ್ಕೆ ಸರಿಯಾಗಿ ಕೊಡಲಿಲ್ಲ. ರಾಕೇಶ್ ಹಣ ಕೇಳಿದಾಗ, “ಈಗ ಕಷ್ಟವಿದೆ, ಹಣ ಕೊಡಲು ಆಗುವುದಿಲ್ಲ, ನೀವು ಶಾಲೆಯ ಪಾಲುದಾರರಾಗಿ” ಎಂದು ಆಫರ್ ನೀಡಿದ್ದಳು.
ಇದಾದ ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದಿದೆ. ಕೇವಲ ಶಾಲೆಯ ವಿಷಯಗಳಷ್ಟೇ ಅಲ್ಲದೆ, ವೈಯಕ್ತಿಕ ಮಾತುಕತೆಗಳು ಹೆಚ್ಚಾದವು. ಸಲುಗೆಯ ಸ್ನೇಹ ಚಿಗುರೊಡೆಯಿತು. ಇಬ್ಬರೂ ಹಲವೆಡೆ ಜೊತೆಯಾಗಿ ಸುತ್ತಾಡಿದ್ದರು ಕೂಡ. ಈ ಆತ್ಮೀಯತೆ ಎಷ್ಟರ ಮಟ್ಟಿಗೆ ಬೆಳೆದಿತ್ತೆಂದರೆ, ಶ್ರೀದೇವಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು, ಅವಳೊಂದಿಗೆ ಮಾತನಾಡಲೆಂದೇ ರಾಕೇಶ್ ಪ್ರತ್ಯೇಕವಾದ ಹೊಸ ಸಿಮ್ ಕಾರ್ಡ್ ಮತ್ತು ಫೋನ್ ಅನ್ನೇ ಖರೀದಿಸಿದ್ದರು!

Ad Widget

Ad Widget

ಆದರೆ, ರಾಕೇಶ್ ಮತ್ತೆ ಹಣ ಕೇಳಿದಾಗ, ಶ್ರೀದೇವಿ ಹಣ ಹಿಂದಿರುಗಿಸುವ ಬದಲು, ಸಂಬಂಧ ಮುಂದುವರಿಸುವ ಪ್ರಸ್ತಾಪ ಇಟ್ಟರು ಎನ್ನಲಾಗಿದೆ. ಇದಕ್ಕೆ ರಾಕೇಶ್ ಒಪ್ಪದಿದ್ದಾಗ, ಆಕೆ ರಾಕೇಶ್ ಮನೆಗೆ ಹೋಗಿ ಮುತ್ತಿಟ್ಟು, ಅದನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡಿ 50,000 ರೂಪಾಯಿ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೇಸತ್ತ ರಾಕೇಶ್, ಆಕೆಗಾಗಿ ಬಳಸುತ್ತಿದ್ದ ಸಿಮ್ ಕಾರ್ಡ್ ಮುರಿದು ಹಾಕಿದ್ದರು.

ಬೆದರಿಕೆ ಮತ್ತು ಸುಲಿಗೆ:
ಮಾರ್ಚ್ 12 ರಂದು, ಶ್ರೀದೇವಿ ರಾಕೇಶ್ ಪತ್ನಿಗೆ ಕರೆ ಮಾಡಿ, ಮಕ್ಕಳ ಟಿಸಿ ಕೊಡುವುದಾಗಿ ಹೇಳಿ ರಾಕೇಶ್ನನ್ನು ಶಾಲೆಗೆ ಕರೆಯಿಸಿಕೊಂಡಿದ್ದರು. ರಾಕೇಶ್ ಶಾಲೆಗೆ ಹೋದಾಗ, ಅಲ್ಲಿ ಶ್ರೀದೇವಿ ಜೊತೆ ಸಾಗರ್ ಮತ್ತು ಗಣೇಶ್ ಎಂಬ ಇತರ ಇಬ್ಬರು ಇದ್ದರು. “ಶ್ರೀದೇವಿಗೂ ಸಾಗರ್ಗೂ ನಿಶ್ಚಿತಾರ್ಥವಾಗಿದೆ, ನೀನು ಆಕೆಯೊಂದಿಗೆ ಏಕೆ ಸುತ್ತುತ್ತಿದ್ದೀಯಾ?” ಎಂದು ಗಣೇಶ್ ಬೆದರಿಸಿ, ಈ ವಿಚಾರ ಯಾರಿಗೂ ತಿಳಿಯಬಾರದೆಂದರೆ 1 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟರು. ನಂತರ 20 ಲಕ್ಷಕ್ಕೆ ಇಳಿದು, ಅಂತಿಮವಾಗಿ ಒಂದು ಲಕ್ಷಕ್ಕೂ ಹೆಚ್ಚು ಹಣವನ್ನು (ಸುಮಾರು 1.20 ರಿಂದ 1.90 ಲಕ್ಷದವರೆಗೆ ಎಂದು ಮೂಲಗಳಲ್ಲಿ ವ್ಯತ್ಯಾಸವಿದೆ) ಪಡೆದು ರಾಕೇಶ್ನನ್ನು ಕಳುಹಿಸಿದ್ದರು. ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು.

ಪೊಲೀಸ್ ದೂರು ಮತ್ತು ಬಂಧನ:
ಈ ಘಟನೆಯಿಂದಾಗಿ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಾದ ಶ್ರೀದೇವಿ, ಸಾಗರ್ ಮತ್ತು ಗಣೇಶ್ ಕಾಳೆ (ಮೂವರೂ ವಿಜಯಪುರ ಮೂಲದವರು) ಅವರನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ಮಹಾಲಕ್ಷ್ಮಿ ಲೇಔಟ್ನ ಪ್ರಿಸ್ಕೂಲ್ ಶಿಕ್ಷಕಿ ಶ್ರೀದೇವಿ ಮತ್ತು ಪೋಷಕ ರಾಕೇಶ್ ನಡುವಿನ ಪ್ರಕರಣ ಕೇವಲ ಒಂದು ಹನಿಟ್ರ್ಯಾಪ್ ಅಥವಾ ಬ್ಲ್ಯಾಕ್ಮೇಲ್ ಪ್ರಕರಣವಾಗಿ ಕಾಣುತ್ತಿಲ್ಲ. ಇದು ಅದಕ್ಕೂ ಮೀರಿದ, ನೈತಿಕ ಅಧಃಪತನದ, ನಂಬಿಕೆ ದ್ರೋಹದ ಕರಾಳ ಕಥೆಯಾಗಿದೆ. ಶಿಕ್ಷಕಿಯೊಬ್ಬಳು ತನ್ನ ಸ್ಥಾನದ ಜವಾಬ್ದಾರಿಯನ್ನು ಮರೆತು, ಪೋಷಕನೊಂದಿಗೆ ಆರ್ಥಿಕ ವ್ಯವಹಾರ ನಡೆಸಿ, ನಂತರ ಸಲುಗೆಯನ್ನು ಬೆಳೆಸಿ, ಅಂತಿಮವಾಗಿ ಅದೇ ಸಲುಗೆಯನ್ನು ದುರ್ಬಳಕೆ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡುವ ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ.

ಇನ್ನು ಒಬ್ಬ ಪೋಷಕನಾಗಿ ರಾಕೇಶ್‌ ಮಾಡಿರುವುದು ನೈತಿಕ ಅದ:ಪತನದ ಕಾರ್ಯವನ್ನೆ. ತನ್ನ ಸಣ್ಣ ಮಗುವನ್ನು ನೋಡಿಕೊಳ್ಳಲು ಹಾಗು ಅಕ್ಷರ ಕಲಿಸಲು ನಿಯೋಜಿಸದ ಶಿಕ್ಷಕಿಯನ್ನೆ ಪಟಾಯಿಸಲು ನೋಡಿರುವುದು ನಾಗರೀಕ ಸಮಾಜ ಒಪ್ಪುವಂತಹದಲ್ಲ.ಈಘಟನೆಯೂ ರಾಕೇಶ್‌ ನ ಮಗುವಿನ ಮೇಲೆ ಗಾಢ ಪರಿಣಾಮ ಬೀರಿರುವ ಸಾಧ್ಯತೆಯೂ ಇದೆ. ಮುಂದಿನ ದಿನಗಳಲ್ಲಿ ಆ ಮಗುವಿಗೆ ಶಿಕ್ಷಕಿಯರ ಬಗ್ಗೆ ಯಾವ ಬಾವನೇ ಇದೀತು… ಬೇರೆ ಶಿಕ್ಷಕಿಯರ ಕುರಿತಾಗಿಯೂ ಗೌರವ ಭಾವನೆ ಇರಬಹುದೇ ಎನ್ನುವುದು ಸದ್ಯ ಚರ್ಚೆಯಾಗುತ್ತಿರುವ ವಿಚಾರ

ಮೊದಲು ಹಣದ ಸಹಾಯ, ನಂತರ ಪಾಲುದಾರಿಕೆಯ ಆಹ್ವಾನ, ಬಳಿಕ ಹೆಚ್ಚಿದ ಒಡನಾಟ, ಪ್ರತ್ಯೇಕ ಸಿಮ್ ಬಳಕೆ – ಇವೆಲ್ಲವೂ ವೃತ್ತಿಪರತೆಯ ಎಲ್ಲೆಗಳನ್ನು ಮೀರಿದ ಹೆಜ್ಜೆಗಳು. ಶಿಕ್ಷಕಿಯ ಸ್ಥಾನದಲ್ಲಿದ್ದ ವ್ಯಕ್ತಿ ಈ ರೀತಿಯ ವೈಯಕ್ತಿಕ ಮತ್ತು ಆರ್ಥಿಕ ಸಂಬಂಧಗಳನ್ನು ಪೋಷಕನೊಂದಿಗೆ ಬೆಳೆಸಿಕೊಳ್ಳುವುದೇ ಮೊದಲ ತಪ್ಪು. ಇಲ್ಲಿಂದಲೇ ನೈತಿಕ ಸ್ಖಲನಕ್ಕೆ ದಾರಿ ತೆರೆದುಕೊಂಡಿದೆ. “ನಿನ್ನೊಂದಿಗೆ ಸಂಬಂಧದಲ್ಲಿರುತ್ತೇನೆ” ಎಂದು ಹೇಳಿ ಹಣ ಕೇಳುವುದು, ಮುತ್ತಿಟ್ಟು ಬ್ಲ್ಯಾಕ್ಮೇಲ್ ಮಾಡುವುದು – ಇವು ಶಿಕ್ಷಕ ವೃತ್ತಿಯ ಘನತೆಗೆ ಮಸಿ ಬಳಿಯುವ ಹೇಯ ಕೃತ್ಯಗಳು.

Ad Widget
Click to comment

Leave a Reply

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!