ಸ್ಥಳೀಯ
DK Shivakumar-ಬೆಳ್ತಂಗಡಿಯಲ್ಲಿ ಏಪ್ರಿಲ್ 20ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ – ಡಿ.ಕೆ ಶಿವಕುಮಾರ್ ಭಾಗಿ : ಪೂರ್ವಭಾವಿ ಸಭೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ದಿನಾಂಕ 20.04.2024ನೇ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು.ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ದಿನಾಂಕ 20.04.2024ನೇ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು.ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರ ಸಮಾವೇಶವನ್ನು ಎಲ್ಲರಿಗೂ ಸೇರಿ ಯಶಸ್ವಿಗೊಳಿಸಬೇಕು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಚಿವರು ಹಾಗೂ ಪಕ್ಷದ ರಾಜ್ಯಮಟ್ಟದ ಜಿಲ್ಲಾ ಮಟ್ಟದ ಪ್ರಮುಖರು ಪಾಲ್ಗೊಳ್ಳುತ್ತಾರೆ, ಎಂದರು. ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನೆಯ ಕೈಪಿಡಿಯನ್ನು ಬಿಡುಗಡೆಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಕಾಂಗ್ರೆಸ್ ನಗರ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟ, ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಕೆಪಿಸಿಸಿ ಸದಸ್ಯರಾದ ಕೇಶವ ಪಿ ಬೆಳಾಲು, ಪಕ್ಷದ ಪ್ರಮುಖರಾದ ಸುಭಾಷ್ ಚಂದ್ರ ರೈ, ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರಗೌಡ, ಶ್ರೀಮತಿ ವಂದನಾ ಭಂಡಾರಿ, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಬಿ ಎಂ ಹಮೀದ್, ಅಲ್ಪಸಂಖ್ಯಾತ ಘಟಕದ ನಗರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕರಿಮ್ ಗೇರ್ ಕಟ್ಟೆ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಸೆಬಾಸ್ಟಿಯನ್,, ಎಸ್, ಸಿ, ಘಟಕದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು, ಎಸ್ ಟಿ ಘಟಕದ ನಗರ ಸಮಿತಿಯ ಅಧ್ಯಕ್ಷರಾದ ಜಯಾನಂದ ಪಿಲಿಕಲ, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ, ಪಂಚಾಯತ್ ರಾಜ್ ಸಂಘಟನೆಯ ನಗರ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ವೇಗಸ್, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರೋಹಿ ಪುದುವೆಟ್ಟು, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಮೆರಿಟಾ ಪಿಂಟೋ, ತಾಲೂಕು ನಾಮದೇ ರಾವ್ ಮುಂಡಾಜೆ ಮೇಲ್ಮೈನ್ ಸಿಕ್ವೇರಾ, ಸುನಿಲ್ ಜೈನ್, ಬೇಬಿ ಸುವರ್ಣ ಮಾಲಾಡಿ,ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿಕೆ ಶ್ರೀಧರ್ ಕಲೆಂಜ, ವಿನುತಾ ರಜತ್ ಗೌಡ ಭೂ ನ್ಯಾಯ ಮಂಡಳಿಯ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಬೊಮ್ಮಣ್ಣ ಗೌಡ ಪುದುವೆಟ್ಟು , ಹಾಗೂ ಪಕ್ಷದ ಪ್ರಮುಖರಾದ ಜೈವಿಕ್ರಂ ಕಲ್ಲಾಪು ಅಬ್ದುಲ್ ರಹೀಮ್, ರಾಜಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ಮೊಹಮದ್ ಹನೀಫ್ ಉಜಿರೆ, ಬಾಲಕೃಷ್ಣ ಗೌಡ ಕೇರಿ ಮಾರ್, ರಜತ್ ಗೌಡ ಉಜಿರೆ, ಕಲಂದರ್ ಕೊಕ್ಕಡ, ಪ್ರವೀಣ್ ಹಳ್ಳಿ ಮನೆ, ರಮಾನಂದ ಸಾಲಿಯಾನ್ ಮುಂಡೂರು, ದೇವಿಪ್ರಸಾದ್ ಶೆಟ್ಟಿ, ರವೀಂದ್ರ ಅಮೀನ್ ಬಳೆಂಜ, ಪ್ರವೀಣ್ ಪಿಂಟೋ, ಗಪೂರ್ ಪುದುವೆಟ್ಟು, ಸುಧೀರ್ ಕುಮಾರ್ ಶೆಟ್ಟಿ ಮಚ್ಚಿನ, ನಾರಾಯಣ ಪೂಜಾರಿ ಮಚ್ಚಿನ ಸದಾಶಿವ ಹೆಗಡೆ ಮೆಚ್ಚಿನ, ಸತೀಶ್ ಹೆಗ್ಡೆ, ಮಾಲಾಡಿ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ಮಾಲಾಡಿ, ಹಾಗೂ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಸರಕಾರದ ನಾಮನಿರ್ದೇಶತ ಸದಸ್ಯರು ಗ್ರಾಮ ಪಂಚಾಯತ್ ಸದಸ್ಯರು ಪಟ್ಟಣ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿರಿದ್ದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು14 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ11 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
Uncategorized13 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್14 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ12 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್13 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















