ಚಿನ್ನ-ಬೆಳ್ಳಿ ದರ
Gold Rate Today – ಸತತ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತಟಸ್ಥ; ಇಲ್ಲಿದೆ ಇಂದಿನ ದರಗಳ ಮಾಹಿತಿ
ಏಪ್ರಿಲ್ ತಿಂಗಳ ಆರಂಭದ ದಿನವೇ ಬರೋಬ್ಬರಿ 930 ರೂಪಾಯಿ ಹೆಚ್ಚಳ ಆಗಿದ್ದ ಚಿನ್ನದ ಬೆಲೆ ಇಂದು ತಟಸ್ಥವಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ ಅಥವಾ ಇಳಿಕೆ ಯಾವುದೂ ಆಗಿಲ್ಲ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಇಲ್ಲಿದೆ ಮಾಹಿತಿ
ಬೆಂಗಳೂರು: ಏಪ್ರಿಲ್ ತಿಂಗಳ ಆರಂಭದ ದಿನವೇ ಬರೋಬ್ಬರಿ 930 ರೂಪಾಯಿ ಹೆಚ್ಚಳ ಆಗಿದ್ದ ಚಿನ್ನದ ಬೆಲೆ ಎರಡನೇ ದಿನ ತಟಸ್ಥವಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಏರಿಕೆ ಅಥವಾ ಇಳಿಕೆ ಯಾವುದೂ ಆಗಿಲ್ಲ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಇಲ್ಲಿದೆ ಮಾಹಿತಿ
ಇಂದಿನ ಚಿನ್ನದ ದರ
ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯ ಟ್ರೆಂಡ್ನಲ್ಲಿದ್ದರೂ, ಇಂದು ಮಾತ್ರ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ . ನಿನ್ನೆಯ ಬೆಲೆಯೇ ಮುಂದುವರಿದಿದೆ. ಹಾಗಾಗಿ ಏಪ್ರಿಲ್ 2 ರಂದು 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 8,510 ರೂ ಗೆ ಆಗಿದೆ. 24 ಕ್ಯಾರೆಟ್ ಚಿನ್ನದ ದರ ರೂ 9,284 ರುಪಾಯಿ ಆಗಿದೆ. 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 85,100 ರೂಗೆ ಆಗಿದ್ದು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 92,840 ರೂ ಆಗಿದೆ.
ಬೆಂಗಳೂರಿನ ಚಿನ್ನದ ಬೆಲೆ
ಬೆಂಗಳೂರಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 8,510 ರೂ ಇದೆ. ಬೆಳ್ಳಿಯ ಬೆಲೆಯಲ್ಲೂ ತಟಸ್ಥವಾಗಿದ್ದು ಗ್ರಾಂ ಬೆಳ್ಳಿಯ ಬೆಲೆ 105 ರೂ ರೂ ಆಗಿದೆ. ಕೆಜಿ ಬೆಳ್ಳಿಯ ಬೆಲೆ 1,05,000 ರೂ ಇದೆ.
ಪ್ರಮುಖ ನಗರಗಳಲ್ಲಿ ಇಂದು 1 ಗ್ರಾಂ ಚಿನ್ನದ ಬೆಲೆ
ನಗರಗಳು 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು: 8,510; 9284
ಚೆನ್ನೈ: 8,510; 9284
ಕೇರಳ: 8,510; 9284
ದಿಲ್ಲಿ: 8,525; 9,299
ಹೈದರಾಬಾದ್: 8,510; 9284
ಕೋಲ್ಕತ್ತಾ: 8,510; 9284
ಮುಂಬಯಿ: 8,510; 9284
ಮಾ.1 ರಂದು 7,940 ರೂ ನಷ್ಟಿದ್ದ ಚಿನ್ನದ ಬೆಲೆ ಮಾ. 31 ರಂದು 8425 ರೂ ಆಗಿದೆ, ಒಂದು ತಿಂಗಳಲ್ಲಿ ಬರೋಬ್ಬರಿ 485 ರೂ ಏರಿಕೆ ಆಗಿದೆ. ಇದೀಗ ಏಪ್ರಿಲ್ ತಿಂಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆಯ ಟ್ರೆಂಡ್ ಜಾರಿಯಲ್ಲಿದೆ. ಇಂದು ಮಾತ್ರ ಚಿನ್ನದ ಬೆಲೆ ತಟಸ್ಥವಾಗಿದೆ. ಇತರ ಷೇರುಗಳು ಇಳಿದಿದ್ದು, ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಅಮೆರಿಕದ ಹೊಸ ನೀತಿಗಳಿಂದ ಚಿನ್ನದ ಬೆಲೆ ಏರಿಕೆ ಆಗಿತ್ತು. ಅಲ್ಲದೆ ಚಿನ್ನದ ಬೆಲೆ ಭಾರೀ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಚಿನ್ನ ಖರೀದಿಗೆ ವ್ಯಾಪಾರಿಗಳು ಹಾಗೂ ಗ್ರಾಹಕರು ಮುಗಿಬೀಳುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತಿದೆ.
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ದಕ್ಷಿಣ ಕನ್ನಡ23 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಬಿಗ್ ನ್ಯೂಸ್9 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ8 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಅಂತರ ರಾಜ್ಯ7 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ8 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಸಿನೆಮಾ7 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ7 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಮಂಗಳೂರು2 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!















