ಬಿಗ್ ನ್ಯೂಸ್
ಸುಳ್ಯ ಕಂಡ ಅಪರೂಪದ ಸಾಹಿತಿ, ವಿದ್ವಾನ್, ನಿವೃತ್ತ ಉಪನ್ಯಾಸಕ ಜಿ. ಟಿ. ಮುಡೂರು ಇನ್ನಿಲ್ಲ
ಸುಳ್ಯ: ಏ 21 : ಹಿರಿಯ ಸಾಹಿತಿ, ವಿದ್ವಾನ್,ಸುಳ್ಯ ತಾಲೂಕಿನ ಪಂಜ ನಿವಾಸಿ ಟಿ.ಜಿ.ಮುಡೂರು ಎಂದೇ ಪ್ರಖ್ಯಾತರಾಗಿದ್ದ ತಮ್ಮಯ್ಯ ಗೌಡ ಮುಡೂರು ಅವರು ಏ.20 ರಂದು ಇಹಲೋಕ ತ್ಯಜಿಸಿದರು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ ಅವರಿಗೆ 95 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವದ ಅಪಾರ ಪಾಂಡಿತ್ಯದ ಮುಡೂರುರವರು ಸುಳ್ಯ ಕಂಡ ಅಪರೂಪದ ಸಾಹಿತಿಯಾಗಿದ್ದರು
ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಅವರು ಕೃಷಿ ಕ್ಷೇತ್ರದಲ್ಲೂ ಕೈಯಾಡಿಸಿದವರು. ಕನ್ನಡ ಹಾಗೂ ತುಳು ಭಾಷೆಯಲ್ಲಿ ಹತ್ತು ಹಲವು ಮೌಲ್ಯಯುತ ಕೃತಿಗಳನ್ನು ರಚಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದವರು. ಅವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಎ.21 ರಂದು ಪೂರ್ವಾಹ್ನ ಸಾರ್ವಜನಿಕ ಅಂತಿಮ ದರ್ಶನದ ಬಳಿಕ ಜಿಟಿ ಮೂಡೂರು ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುಬ್ಬಪ್ಪ ಗೌಡ ಹಾಗೂ ಬಾಲಕ್ಕ ದಂಪತಿ ಪುತ್ರನಾಗಿ ಕಳಂಜ ಗ್ರಾಮದ ವಾರಣಾಸಿಯಲ್ಲಿ 1927 ನೇ ನ .24 ರಂದು ಟಿ.ಜಿ ಮುಡೂರು ಜನಿಸಿದರು. 1948 ರಿಂದ ಪ್ರಾಥಮಿಕ , ಪ್ರೌಢಶಾಲೆಗಳಲ್ಲಿ ದುಡಿದು ನಂತರ ಉಪನ್ಯಾಸಕ ರಾಗಿ ಕೆಲಸ ನಿರ್ವಹಿಸಿ 1982 ರಲ್ಲಿ ವೃತ್ತಿ ಬದುಕಿಗೆ ವಿದಾಯ ಹೇಳಿದರು.ಮದರಾಸು ವಿಶ್ವವಿದ್ಯಾನಿಲಯದಿಂದ ಕನ್ನಡ ವಿದ್ವಾನ್ ಹಾಗೂ ಮೈಸೂರು ಎಂ.ಎ ಹಾಗೂ ಬಿ.ಎಡ್ ಪದವಿ ಗಳಿಸಿದರು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಲ್ಲಿ ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ 15 ವರ್ಷಗಳ ಕಾಲ, ಸುಳ್ಯ ಘಟಕವಾದಾಗ ತಾಲೂಕ ಕ.ಸಾ.ಪ. ಅಧ್ಯಕ್ಷರಾಗಿ 3 ವರ್ಷ ಕಾರ್ಯ ನಿರ್ವಹಿಸಿರುತ್ತಾರೆ.ಸುಬ್ರಹ್ಮಣ್ಯ , ಪಂಜ , ಅಡ್ಕಾರುಗಳಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನಗಳು ಇವರ ನೇತೃತ್ವದಲ್ಲಿ ಸಂಘಟಿಸಲ್ಪಟ್ಟಿದೆ. ಸುಳ್ಯದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ಇವರ ನೇತೃತ್ವದಲ್ಲಿ ನಡೆದಿದೆ.1997 ರಲ್ಲಿ ಅರಂತೋಡುನಲ್ಲಿ ಜರಗಿದ ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.

ತಾಲೂಕು ರಾಜ್ಯೋತ್ಸವ ಪ್ರಶಸ್ತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿ, ಮಂಡ್ಯ ಲಲಿತಾಕಲಾ ಆಕಾಡೆಮಿ ಪ್ರಶಸ್ತಿ ಇವರಿಗೆ ಸಂದ ಪ್ರಮುಖ ಪ್ರಶಸ್ತಿ ಪುರಸ್ಕರಗಳು. ಸುಳ್ಯದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಸ್ಕೃತಿ ದಿಬ್ಬಣದಲ್ಲಿ ಹಾಗೂ ಟಿ.ಜಿ.ಮುಡೂರು ಬದುಕು ಬರಹಗಳ ಅಭಿನಂದನಾ ಗ್ರಂಥ- ನಂದಾದೀಪವನ್ನು ಅರ್ಪಿಸಿ ಅವರ ಹುಟ್ಟೂರು ಪಂಜದಲ್ಲಿ ಅವರನ್ನು ಸನ್ಮಾನಿಸಲಾಗಿತ್ತು.
ಸಾಹಿತ್ಯ ಕೃಷಿ :
1964 ರಿಂದಲೇ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಇವರು ಕಾಡಮಲ್ಲಿಗೆ, ಹೊಸತು ಕಟ್ಟು, ಕುಡಿಮಿಂಚು, ಪ್ರಗತಿಯಕರೆ, ಬಾನಂಚೆ ಇವರ ಕವನ ಸಂಕಲನಗಳು. ಅಬ್ಬಿಯ ಮಡಿಲು, ಕಣ್ ಕನಸು ತೆರೆದಾಗ – ಇವರ ಕಾದಂಬರಿಗಳು ಮತ್ತು ಕಥಾ ಸಂಕಲನಗಳು. ಗೀಟುಗೆರೆ ಅಂಕಣ ದಿಂದ ಇವರು ತುಂಬಾ ಜನಪ್ರಿಯರಾದರು. ಬೆಳ್ಳಿಬೆಳಕು ‘ಇವರ ಮುಕ್ತಕಗಳು ‘ ಜೀವನದಯಾಷ್ಟಮಿ ‘ ಇವರು ರಚಿಸಿದ ಗದ್ಯಾನುದವಾದರೆ , ಧಾರಾ ಪಯಸ್ವಿನಿ ಇವರ ಪ್ರಬಂಧ ಲೇಖನಗಳು, ನಂದಾದೀಪ , ಶ್ರೀಮತಿ , ಶಿವಕುಮಾರಿ , ಕೇರಳ ಕುಮಾರಿ , ಸಖು , ಅಚ್ಚರಿಯ ಅರಳೆಲೆ ,ಮಧ್ಯಮಾ ಇವರು ರಚಿಸಿದ ನಾಟಕಗಳು.
ಇನ್ಸೂರಳಿಯ ‘ ಮತ್ತು ‘ ಮರಳಿ ಮನೆಗೆ ‘ – ಇವರ ಪ್ರಹಸನಗಳು. ಹುತ್ತದಲ್ಲಿ ಹೂ , ದಯೆಯ ದಾಂಗುಡಿ , ಅಮರ ಕಲ್ಯಾಣ ಕ್ರಾಂತಿ – ಇವರು ರಚಿಸಿದ ಬಾನುಲಿ ರೂಪಕಗಳು. ಮಕುಟೋರು ಭಂಗ ಮತ್ತು ಸಾವೋಲಿದ ಸಾವಿತ್ರಿ- ಇವರ ಛಂದೊ ನಾಟಕಗಳು. ಹೊಸಕೆರೆಯ ಹೊನ್ನಮ್ಮ ಇವರ ಜಾನಪದ ಗೀತಾರೂಪಕ ಹಾಗು
ಗುರುವನಗುಡಿ , ಸೊನ್ನೆಯಿಂದ ಸೊನ್ನೆಗೆ- ಗೀತಾ ರೂಪಕಗಳು, ಹೃದಯ ರೂಪಕ- ಇವರ ಆಂಗ್ಲ ನಾಟಕದ ರೂಪಾಂತರ. ಸಿಡಿಲ ಮರಿ ಅಶ್ವತ್ಥಾಮನ್ ಮತ್ತು ಮೋಹನ ಮುರಲಿ ಇವರ ಖಂಡಕಾವ್ಯಗಳು. ಪ್ರಥಮ ಸ್ವಾತಂತ್ರ್ಯ ಸಮರ- ಎಂಬ ಯಕ್ಷಗಾನ ಪ್ರಸಂಗವನ್ನು ರಚಿಸಿದ್ದಾರೆ.
ಒಪ್ಪಕುಂಞಿ – ಇವರ ಹವಿಗನ್ನಡ ಪ್ರಹಸನವಾದರೆ , ಬೊಳ್ಳಾಕನ ಮುಗ್ತ್ -ಇವರ ಅರೆಭಾಷೆ ಕೃತಿ. ತುಳು ಭಾಷೆಯಲ್ಲಿ ಇವರು ಜಾಗೀರ್‌ದಾರ್ ಜಗ್ಗೆ , ಗ್ರಾಜುವೇಟ್ ಗಿರಿಜ , ಸೀನನಸಿನಿಮೊ , ಗಟ್ಯಾಂಡ ರೊಟ್ಟಿ , ತೆಲುಪಾಂಡ ಪಲ್ಲವು , ದೂರದ ಕುಕ್ಕು ಮುಟ್ಟದ ಅಂಬಟೆ , ಕೆಡ್ಡಾಸೊ , ಬಲಿಪರ್ಬ , ಜೋಕುಳೆ ಬುದ್ಧಿ ಎಂಬ 10 ನಾಟಕ ಪ್ರಹಸನಗಳನ್ನು , ಸುಗ್ಗಿ ಪುಣ್ಣಮೆ , ಎಂಬ ತುಳು ಜಾನಪದ ಹಾಡುಗಳ ಸಂಕಲನವನ್ನೂ ,’ ಕೋಟಿ- ಚೆನ್ನಯ್ಯ ‘ ಎಂಬ ತುಳು ಯಕ್ಷಗಾನ ರೂಪಕವನ್ನೂ ರಚಿಸಿರುತ್ತಾರೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
-
ಅಪರಾಧ22 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ22 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್21 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ20 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ19 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ20 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಮಂಗಳೂರು20 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್20 hours agoGirish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ















