ಅಪರಾಧ
Madikeri-ಯಾವ ಸಸ್ಪೆನ್ಸ್ ಥ್ರಿಲ್ಲರ್ ಫಿಲ್ಮ್ ಗೂ ಕಡಿಮೆ ಇಲ್ಲದಂತ ಮಡಿಕೇರಿಯಲ್ಲಾದ ನೈಜ ಘಟನೆ : ಪತ್ನಿ ನಾಪತ್ತೆ ದೂರು ಕೊಟ್ಟವನಿಗೆ ಕೊಲೆ ಕೇಸ್ ಜಡಿದು ಜೈಲಿಗಟ್ಟಿದ ಪೊಲೀಸರು..! 5 ವರ್ಷಗಳ ಬಳಿಕ ಅಮಾಯಕ ಪತಿಗೆ ಶಾಕ್ : ರೆಡ್ ಹ್ಯಾಂಡ್ ಆಗಿ ಪ್ರಿಯಕರನ ಜೊತೆ ಸಿಕ್ಕಿಬಿದ್ದ ಪತ್ನಿ..!
ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಗಂಡ ಸುರೇಶ್ ಎರಡು ವರ್ಷ ಜೈಲು ಶಿಕ್ಷೆ ಕೂಡ ಅನುಭವಿಸಿದ್ದಾನೆ. ಆದರೆ ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ!
ಮಡಿಕೇರಿ: ಐದು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ ಇದೀಗ ಯಾವ ಸಸ್ಪೆನ್ಸ್, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ಟಿಸ್ಟ್ ಸಿಕ್ಕಿದೆ.
ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಗಂಡ ಸುರೇಶ್ ಎರಡು ವರ್ಷ ಜೈಲು ಶಿಕ್ಷೆ ಕೂಡ ಅನುಭವಿಸಿದ್ದಾನೆ. ಆದರೆ ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ!
ಇದನ್ನು ಗಂಡ ಸುರೇಶ್ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ
ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿರುತ್ತಾರೆ. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, 2020 ರ ನವೆಂಬರ್ನಲ್ಲಿ ಇದ್ದಕ್ಕಿದ್ದಂತೆ ಒಂದಿನ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಸ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲಿಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲರೂ ಸುಮ್ಮನಾಗಿದ್ದರು. ಪತ್ನಿ ಗಣೇಶ್ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿ ಹೋಗಿರುವುದು ಗೊತ್ತಿದ್ದರೂ ಸುರೇಶ್ ಮನನೊಂದು ಸುಮ್ಮನಾಗಿದ್ದರು.
ಸುರೇಶ್ ವಿರುದ್ಧ ಕೊಲೆ ಆರೋಪ
ಸುರೇಶ್ಗೆ ದುರಾದೃಷ್ಟ ವಕ್ಕರಿಸಿತು. 2021ರ ಜೂನ್ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ. ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತುಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ಯಾವುದೋ ಮಹಿಳೆಯ ಸೀರೆ ಲಂಗ, ಒಳ ಉಡುಪು ಚಪ್ಪಲಿ ಎಲ್ಲಾ ತೋರಿಸಿ, ‘ಇದು ನಿನ್ನದೇ ಹೆಂಡತಿಯದ್ದು. ನೀನೇ ಕೊಲೆ ಮಾಡಿದ್ದೀ, ಒಪ್ಪಿಕೋ’ ಎಂದು ಚಿತ್ರ ಹಿಂಸೆ ಕೊಟ್ಟಿದ್ದರಂತೆ. ಇದೇ ಪ್ರಕರಣದಲ್ಲಿ 18-07-2021ರಲ್ಲಿ ಬೆಟ್ಟದಪುರ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿ ನಂತರ ಅವರು ಜೈಲು ಸೇರಿದ್ದಾರೆ.
ಡಿಎನ್ಎ ಪರೀಕ್ಷೆಯಿಂದ ಬಯಲಾದ ರಹಸ್ಯ
ಜೈಲುಪಾಲಾದ ಸುರೇಶ್ಗೆ ಮೈಸೂರಿನ ಪಾಂಡು ಪೂಜಾರಿ ಎಂಬ ವಕೀಲರ ರೂಪದಲ್ಲಿ ಸಹಾಯ ಬರುತ್ತದೆ. 2022ರ ಜನವರಿಯಲ್ಲಿ ವಕೀಲರ ಕೊರಿಕೆ ಮೇರೆಗೆ ಮಲ್ಲಿಗೆ ಅಸ್ತಿ ಪಂಜರ ಹಾಗೂ ಆಕೆಯ ತಾಯಿಯ ರಕ್ತದ ಮಾದರಿ ಸಂಗ್ರಹಿಸಿ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅಲ್ಲಿ ಬೆಟ್ಟದಪುರ ಪೊಲಿಸರು ಮಲ್ಲಿಗೆಯದ್ದು ಎಂದು ಪ್ರತಿಪಾದಿಸಿದ ದೇಹ ಆಕೆಯದ್ದಲ್ಲ ಎಂಬ ವರದಿ ಬರುತ್ತದೆ. ಆದರೂ ಬೆಟ್ಟದಪುರ ಪೊಲೀಸರು ಸುರೇಶನನ್ನು ಎರಡು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿರುತ್ತಾರೆ. ಇದಾದ ಬಳಿಕ ವಕೀಲ ಪಾಂಡು, ಹರಸಾಸಹಪಟ್ಟು ಹೈಕೋರ್ಟ್ ಮೊರೆ ಹೋಗಿ 2024ರಲ್ಲಿ ಸುರೇಶ್ ಅವರನ್ನು ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು.
ಪತ್ನಿಯ ಪತ್ತೆಗೆ ಪೊಲೀಸ್ ಮೊರೆ
ಇಷ್ಟೆಲ್ಲ ಆದ ಬಳಿಕ, ಕೊಲೆಯಾಗಿರುವ ಮಹಿಳೆ ತನ್ನ ಹೆಂಡತಿಯಲ್ಲ. ತಾನು ಕೊಲೆ ಮಾಡಿಲ್ಲ, ಹೆಂಡತಿಯನ್ನು ಹುಡುಕಿಕೊಡಿ ಎಂದು ಸುರೇಶ್ ಮತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.
ಲವರ್ ಜತೆ ಪ್ರತ್ಯಕ್ಷವಾದ ಮಲ್ಲಿಗೆ
ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲಗಲ ಎಂದು ಯೋಚಿಸಿದ ಸುರೇಶ್ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಹೊತೆ ವಿರಾಜಪೇಟೆ ತಾಲ್ಲೂಕಿನ ಟಿಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.
ಸದ್ಯ ಮಲ್ಲಿಗೆಯನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಬೆಟ್ಟದಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಕೀಲ ಪಾಂಡು ಅವರ ಶ್ರಮದಿಂದಾಗಿ ಮಲ್ಲಿಗೆಯನ್ನು ಇದೀಗ ಮೈಸೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನ್ಯಾಯಾಲಯ ಇದೀಗ ಸುಳ್ಳು ಆರೋಪ ಪಟ್ಟಿ ದಾಖಲಿಸಿದ ಬೆಟ್ಟದಪುರ ಠಾಣೆ ತನಿಖಾಧಿಕಾರಿ, ಮೈಸೂರು ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ.
ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಯಾಕೆ ಮಲ್ಲಿಗೆಯನ್ನು ಹುಡುಕಲಿಲ್ಲ, ಇತ್ತ ಬೆಟ್ಟದ ಪುರ ಠಾಣೆ ಪೊಲಿಸರು ಯಾವುದೋ ಮಹಿಳೆಯ ಮೃತದೇಹವನ್ನು ಮಲ್ಲಿಗೆಯದ್ದೇ ದೇಹ ಎಂದು ಯಾಕೆ ಕೇಸ್ ದಾಖಲಿಸಿದ್ದರು, ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು, ಆಕೆಯನ್ನು ಯಾರು ಕೊಲೆ ಮಾಡಿದ್ದು ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಹಾಗೇಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized21 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು24 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಸ್ಥಳೀಯ23 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ


















