ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್ ಪಿನ್ಯಾಕಲ್ ಗೆ ಚಾಲನೆ
ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಪಿನ್ಯಾಕಲ್ ಐಟಿಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್ ಪಿನ್ಯಾಕಲ್-25 ಕ್ಕೆ ಚಾಲನೆ ನೀಡಲಾಯಿತು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಪಿನ್ಯಾಕಲ್ ಐಟಿಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್ ಪಿನ್ಯಾಕಲ್-25 ಕ್ಕೆ ಚಾಲನೆ ನೀಡಲಾಯಿತು.
ಸೋಷಿಯಲ್ ಮೀಡಿಯಾ ಇನ್‌ಪ್ಲುಎನ್ಸರ್ ಹಾಗೂ ತುಳು ಕಂಟೆಂಟ್ ಕ್ರಿಯೇಟರ್ ಶರಣ್ ಚಿಲಿಂಬಿ ದೀಪ ಬೆಳಗಿಸುವುದರ ಮೂಲಕ ಐಟಿ ಫೆಸ್ಟ್ ಅನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು “ಪಾಠಗಳಿಂದ ಮಾತ್ರವಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಬಹಳಷ್ಟು ಕಲಿಯಲು ಸಾಧ್ಯವಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಹೆಚ್ಚು ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಜನರು ಇತರರಿಗಿಂತ ಒಂದು ಹೆಜ್ಜೆ ಮುಂದಿರುತ್ತಾರೆ.ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲಕರ ವಾತಾವರಣವಿದೆ. ನನಗೆ ಈ ಕಾಲೇಜಿನ ಆವರಣವನ್ನು ಪ್ರವೇಶಿಸುತ್ತಿರುವಂತೆಯೇ ಸಕಾರಾತ್ಮಕ ಭಾವನೆ ಬರುತ್ತಿದೆ” ಎಂದು ಹೇಳಿ ಕಾಲೇಜು ಜೀವನದಲ್ಲಿ ಸ್ಪರ್ಥೆಗಳಲ್ಲಿ ಭಾಗವಹಿಸಿದ್ದು ಹೇಗೆ ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಲು ಸಹಕಾರಿಯಾಯಿತು ಎಂಬುದನ್ನು ತಿಳಿಸಿದರು.

ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು “ ವಿದ್ಯಾರ್ಥಿಗಳು ಸೃಜನಶೀಲರಾಗಿರಲು ಕಲಿಯಬೇಕು. ಇತರರನ್ನು ಅನುಕರಿಸುವವರು ಹಲವರಿರಬಹುದು ಆದರೆ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಬೇಕೆಂದಲ್ಲಿ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು “ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕರಾದ ಅತಿ ವಂ| ಲಾರೆನ್ಸ್ ಮಸ್ಕರೇನಸ್‌ರವರು “ ಅವಕಾಶ ಸಿಕ್ಕಾಗಲೆಲ್ಲಾ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ. ತರಗತಿಯೊಳಗೆ ಕಲಿಯುವುದು ಮತ್ತು ಈ ರೀತಿಯ ಸ್ಪರ್ಧೆಗಳಿಂದ ಕಲಿಯುವುದು ಸಿದ್ಧಾಂತ ಮತ್ತು ಪ್ರಾಯೋಗಿಕತೆಯಂತೆ. ಜೀವನದಲ್ಲಿ ಯಶಸ್ವಿಯಾಗಲು ಎರಡೂ ಮುಖ್ಯ. ಜ್ಞಾನ ಮತ್ತು ಅನುಭವವಿಲ್ಲದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸುವುದು ಕಷ್ಟಕರವಾಗಿರುತ್ತದೆ. ಓದಿನ ಜೊತೆಗೆ ಸುತ್ತಲೂ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಿಮ್ಮನ್ನು ಮುಕ್ತವಾಗಿರಿಸಿಕೊಳ್ಳಿ. ಜೀವನದಲ್ಲಿ ಕಲಿಕೆ ಹಾಗೂ ಸ್ಪರ್ಧೆಗಳಿಗೆ ಸಮಾನವಾದ ಪ್ರಾಮುಖ್ಯತೆ ನೀಡಿ. ವಿನಮ್ರತೆಯು ನಮ್ಮ ಬಹಳ ಎತ್ತರಕ್ಕೆ ಕೊಂಡೊಯ್ಯುತ್ತದೆ “ ಎಂದು ಹೇಳಿದರು.
2023-24ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಬಿ ಸಿ ಎ ಪದವಿ ವಿಭಾಗದಲ್ಲಿ ನಾಲ್ಕನೇ gÁåAPï ಪಡೆದ ಚೈತಾಲಿ ಎಸ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಗಣಕವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸೌಮ್ಯ ಸನ್ಮಾನ ಭಾಷಣ ಮಾಡಿದರು.
ಸುರಭಿ ಮತ್ತು ಬಳಗ ಪ್ರಾರ್ಥಿಸಿದರು. ಪಿನ್ಯಾಕಲ್-25ರ ವಿದ್ಯಾರ್ಥಿ ಸಂಯೋಜಕ ಲೆನಿನ್ ಸ್ವಾಗತಿಸಿದರು. ಪಿನ್ಯಾಕಲ್-25 ವಿದ್ಯಾರ್ಥಿ ಸಂಯೋಜಕ ಹವ್ಯಾಸ್ ಯು ವಂದಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸೃಜನಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರೂ ಗಣಕವಿಜ್ಞಾನ ವಿಭಾಗದ ಡೀನ್ ಹಾಗೂ ಮುಖ್ಯಸ್ಥರಾದ ಡಾ| ವಿನಯಚಂದ್ರ ಹಾಗೂ ಪಿನ್ಯಾಕಲ್-25ರ ಸಂಯೋಜಕಿ ಡಾ| ಗೀತಾ ಪೂರ್ಣಿಮಾ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.


















