ವಿದ್ಯಾವಂತ, ಪ್ರಜ್ಞಾವಂತ ಸಮಾಜದಲ್ಲಿ ಜೂಜಾಟಗಳ ಹಾಗೂ ದುಶ್ಚಟಗಳ ರೀತಿ ಬದಲಾಗಿದೆ ಅದರ ಜಾಹಿರಾತುಗಳ ರೀತಿಯೂ ಬದಲಾಗಿದೆ. ಕ್ಷಿಪ್ರವಾಗಿ ಹಾಗೂ ದುಡಿಯದೆಯೇ ದುಡ್ಡು ಮಾಡುವ ಧಾವಂತದಲ್ಲಿ ಇಂದಿನ ಯುವ ಜನತೆ ಆನ್ […]" /> ವಿದ್ಯಾವಂತ, ಪ್ರಜ್ಞಾವಂತ ಸಮಾಜದಲ್ಲಿ ಜೂಜಾಟಗಳ ಹಾಗೂ ದುಶ್ಚಟಗಳ ರೀತಿ ಬದಲಾಗಿದೆ ಅದರ ಜಾಹಿರಾತುಗಳ ರೀತಿಯೂ ಬದಲಾಗಿದೆ. ಕ್ಷಿಪ್ರವಾಗಿ ಹಾಗೂ ದುಡಿಯದೆಯೇ ದುಡ್ಡು ಮಾಡುವ ಧಾವಂತದಲ್ಲಿ ಇಂದಿನ ಯುವ ಜನತೆ ಆನ್ […]"> Astrology-ಎಲ್ಲರ ಕೈಯಲ್ಲೂ ಮೊಬೈಲ್ ಇದ್ದರೂ ಕೆಲವರು ಮಾತ್ರವೇ ಏಕೆ ಈ ಗೇಮ್ ಆಡುತ್ತಾರೆ ಹಾಗೂ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ? : ಜ್ಯೋತಿಷ್ಯ ಏನೂ ಹೇಳುತ್ತದೆ ? - Nikhara News | Kannada News Website
Connect with us

ಪುತ್ತೂರು

Astrology-ಎಲ್ಲರ ಕೈಯಲ್ಲೂ ಮೊಬೈಲ್ ಇದ್ದರೂ ಕೆಲವರು ಮಾತ್ರವೇ ಏಕೆ ಈ ಗೇಮ್ ಆಡುತ್ತಾರೆ ಹಾಗೂ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ? : ಜ್ಯೋತಿಷ್ಯ ಏನೂ ಹೇಳುತ್ತದೆ ?

Published

on

Ad Widget

Ad Widget

Ad Widget

Ad Widget

ಜಾತಕದಲ್ಲಿ ರಾಹು ಗ್ರಹದ ನಕಾರಾತ್ಮಕ ಪ್ರಭಾವವು ಅದೃಷ್ಟದ ಆಟಗಳಿಂದ ಗೆಲ್ಲಬಲ್ಲೆ ಎಂಬ ಹುಚ್ಚು ಆಲೋಚನೆಯು ಹುಟ್ಟಿಕೊಳ್ಳುವಂತೆ ಮಾಡಬಲ್ಲದು. ಮತ್ತು ಕರ್ಮಗಳನ್ನು ಅನುಭವಿಸಲು ಅವಕಾಶವನ್ನು ಮಾಡಿಕೊಡುವ ಶನಿ ಪ್ರಭಾವಿತ ಅವಧಿಗಳು.

Ad Widget

Ad Widget

Ad Widget

Ad Widget

ದುಶ್ಚಟ, ಜೂಜಾಟಗಳಿಂದ ಹೊರಬರಲು ಜ್ಯೋತಿಷ್ಯರ ಸಲಹೆಯು ಒಂದು ಮಾರ್ಗ..ಶಿವಪ್ರಸಾದ್ ಭಾರದ್ವಾಜ್ ಜ್ಯೋತಿಷ್ಯರು 9448410257

Ad Widget

Ad Widget alt="Ad Widget"/>

Ad Widget

ವಿದ್ಯಾವಂತ, ಪ್ರಜ್ಞಾವಂತ ಸಮಾಜದಲ್ಲಿ ಜೂಜಾಟಗಳ ಹಾಗೂ ದುಶ್ಚಟಗಳ ರೀತಿ ಬದಲಾಗಿದೆ ಅದರ ಜಾಹಿರಾತುಗಳ ರೀತಿಯೂ ಬದಲಾಗಿದೆ.

Ad Widget

Ad Widget <> Ad Widget

ಕ್ಷಿಪ್ರವಾಗಿ ಹಾಗೂ ದುಡಿಯದೆಯೇ ದುಡ್ಡು ಮಾಡುವ ಧಾವಂತದಲ್ಲಿ ಇಂದಿನ ಯುವ ಜನತೆ ಆನ್ ಲೈನ್ ಗೇಮ್ ಎಂಬ ಮಾಯಾವಿಯ ಗೆಳೆತನ ಬೆಳೆಸಿ ದುಡ್ಡು ಸುರಿದು ಆಡಿ ಸೋತು ಕೊನೆಗೆ ಮನೆಯವರ ಚಿನ್ನ, ಆಸ್ತಿ ಎಲ್ಲವೂ ಕಳೆದುಕೊಳ್ಳುವವರೆಗೂ ಈ ಹುಚ್ಚಾಟ ನಿಲ್ಲಿಸದೆ ಕೊನೆಗೆ ಆತ್ಮಹತ್ಯೆಗೆ ಶರಣಾಗುವ ಸಾಕಷ್ಟು ಉದಾಹರಣೆಗಳು ನಮಗೆ ಕಾಣಸಿಗುತ್ತಿವೆ.

ಈ ಜೂಜಾಟಗಳು ಯುವ ಜನತೆಯನ್ನು ಕಂಗಾಲು ಮಾಡುವುದರ ಜೊತೆಗೆ ಹೆತ್ತವರ ಬದುಕನ್ನು ಕರಾಳತೆಗೆ ದೂಡುತ್ತಿದೆ. ಇತ್ತ ಆತಂಕ, ಭಯ, ಖಿನ್ನತೆಗೆ ಒಳಗಾದವರು ನೋವನ್ನು ಮರೆಯಲು ಗಾಂಜಾ, ಸಿಗರೇಟು, ಮದ್ಯಪಾನದಂತಹ ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯ ಜೊತೆಗೆ ಬದುಕನ್ನು ಕೊನೆಗಾಣಿಸಲು ಕಾರಣವಾಗುತ್ತಿದೆ. ಕಾಲೇಜು ಶಿಕ್ಷಣದಲ್ಲಿ ಈ ಕುರಿತು ಅರಿವು ಮೂಡಿಸಬೇಕಾದ ಅನಿವಾರ್ಯತೆ ಇಂದಿನ ಶಿಕ್ಷಣ ವ್ಯವಸ್ಥೆಯ ಮುಂದಿದೆ.

Ad Widget

Ad Widget

ಎಲ್ಲರ ಕೈಯಲ್ಲೂ ಮೊಬೈಲ್ ಇದ್ದರೂ ಕೆಲವರು ಮಾತ್ರವೇ ಏಕೆ ಈ ಗೇಮ್ ಆಡುತ್ತಾರೆ ಹಾಗೂ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ?
ಜಾತಕದಲ್ಲಿ ರಾಹು ಗ್ರಹದ ನಕಾರಾತ್ಮಕ ಪ್ರಭಾವವು ಅದೃಷ್ಟದ ಆಟಗಳಿಂದ ಗೆಲ್ಲಬಲ್ಲೆ ಎಂಬ ಹುಚ್ಚು ಆಲೋಚನೆಯು ಹುಟ್ಟಿಕೊಳ್ಳುವಂತೆ ಮಾಡಬಲ್ಲದು. ಮತ್ತು ಕರ್ಮಗಳನ್ನು ಅನುಭವಿಸಲು ಅವಕಾಶವನ್ನು ಮಾಡಿಕೊಡುವ ಶನಿ ಪ್ರಭಾವಿತ ಅವಧಿಗಳು.

ಜೂಜಾಟಕ್ಕೆ ಒಳಗಾದವರ ಅಥವಾ ದುಶ್ಚಟಗಳಿಗೆ ಬಲಿಯಾಗುತ್ತಿರುವವರ ಜಾತಕಗಳನ್ನು ವಿಮರ್ಶೆ ಮಾಡಿ ಸೂಕ್ತವಾದ ಪರಿಹಾರ(ವೈಜ್ಞಾನಿಕವಾದ ರೀತಿಯಲ್ಲಿ)ಗಳನ್ನು ಮಾಡಿಸಿಕೊಳ್ಳುವುದರ ಮೂಲಕ ಬದುಕನ್ನು ಬದಲಾಯಿಸಿಕೊಳ್ಳುವುದು ಒಳಿತು…

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!