Connect with us

ಕಾರ್ಯಕ್ರಮಗಳು

Puttur-ಪುತ್ತೂರು ಜಾತ್ರೆಯಲ್ಲಿ ವ್ಯಾಪಾರ ಮಾಡಿ ತಮ್ಮ ಮಕ್ಕಳ ಮದುವೆ ಮಾಡಿದ್ದೇವೆ, ಮನೆ ಕಟ್ಟಿದ್ದೇವೆ ಎಂಬ ಮಾತು ಬಡ ವ್ಯಾಪಾರಿಗಳ ಬಾಯಿಂದ ಬರಬೇಕು : ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಹೃದಯಭಾಗದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯೆಂದರೆ ಭಕ್ತಸಾಗರವೇ ಹರಿದು ಬರುತ್ತದೆ. ಈ ಜಾತ್ರೆಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲ, ಸಣ್ಣ ವ್ಯಾಪಾರಿಗಳಿಗೂ ಬದುಕಿನ ಬೆಳಕಾಗಬಲ್ಲ ವೇದಿಕೆ. ಈ ಬಾರಿ ದೇವಸ್ಥಾನದ ಆಡಳಿತ ಮಂಡಳಿಯು ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ತಾತ್ಕಾಲಿಕ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಹೊಸ ರೀತಿಯಲ್ಲಿ ಆಯೋಜಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರಿನ ಹೃದಯಭಾಗದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯೆಂದರೆ ಭಕ್ತಸಾಗರವೇ ಹರಿದು ಬರುತ್ತದೆ. ಈ ಜಾತ್ರೆಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲ, ಸಣ್ಣ ವ್ಯಾಪಾರಿಗಳಿಗೂ ಬದುಕಿನ ಬೆಳಕಾಗಬಲ್ಲ ವೇದಿಕೆ. ಈ ಬಾರಿ ದೇವಸ್ಥಾನದ ಆಡಳಿತ ಮಂಡಳಿಯು ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ತಾತ್ಕಾಲಿಕ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಹೊಸ ರೀತಿಯಲ್ಲಿ ಆಯೋಜಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಗ್ಗೆ ಮಾತನಾಡುತ್ತಾ, “ನಮ್ಮೂರಿನ ಹೆಮ್ಮೆಯ ಜಾತ್ರೆ ಇದು. ಭಕ್ತರಷ್ಟೇ ಅಲ್ಲ, ವ್ಯಾಪಾರಿಗಳೂ ಇದರ ಅವಿಭಾಜ್ಯ ಅಂಗ. ಈ ಬಾರಿ ನಾವು ಸಣ್ಣಪುಟ್ಟ ವ್ಯಾಪಾರಿಗಳಿಗೂ ಅನುಕೂಲವಾಗುವಂತೆ ಹರಾಜು ವ್ಯವಸ್ಥೆಯನ್ನು ರೂಪಿಸಿದ್ದೇವೆ. ಇದರಿಂದ ಬಡವರು ಕೂಡಾ ವ್ಯಾಪಾರ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಗುರುವಾರ ದೇವಸ್ಥಾನದ ಸಭಾಭವನದಲ್ಲಿ ಜಾತ್ರಾ ಗದ್ದೆಯಲ್ಲಿ ಮಳಿಗೆಗಳನ್ನು ಹಾಕಲು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಭಟ್ ಅವರು, ವ್ಯಾಪಾರಿಗಳಿಲ್ಲದೆ ಜಾತ್ರೆಯಿಲ್ಲ, ಜಾತ್ರೆಯಿಲ್ಲದೆ ವ್ಯಾಪಾರಿಗಳಿಲ್ಲ. ಎಲ್ಲರೂ ಪರಸ್ಪರ ಪೂರಕರು. ಹಾಗಾಗಿ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಉತ್ತಮ ವ್ಯಾಪಾರ ನಡೆಸುವಂತಾಗಬೇಕು ಎಂದು ಆಶಿಸಿದರು. ಒಂದು ವೇಳೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಯಾವುದೇ ತೊಂದರೆಗಳಿದ್ದಲ್ಲಿ ನೇರವಾಗಿ ದೇವಸ್ಥಾನದ ಕಚೇರಿಯನ್ನು ಅಥವಾ ತಮ್ಮನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.



Ad Widget

ಅಂಗಡಿಗಳ ಹರಾಜು ಸುಸೂತ್ರವಾಗಿ ನಡೆಯಲು ವಾಸ್ತು ತಜ್ಞರಾದ ಪಿ.ಜಿ. ಜಗನ್ನಿವಾಸ ರಾವ್ ಅವರು ದೇವಸ್ಥಾನಕ್ಕೆ ಸೇವೆಯ ರೂಪದಲ್ಲಿ ನೀಲನಕ್ಷೆಯನ್ನು ಸಿದ್ಧಪಡಿಸಿಕೊಟ್ಟಿದ್ದಾರೆ. ಅದರ ಪ್ರಕಾರವೇ ಆಯಾ ಜಾಗಗಳಲ್ಲಿ ಮಳಿಗೆಗಳನ್ನು ನಿರ್ಮಿಸಬೇಕು ಎಂದು ಸೂಚಿಸಲಾಯಿತು.

Ad Widget

Ad Widget

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ನಳಿನಿ ಪಿ ಶೆಟ್ಟಿ, ದಿನೇಶ್ ಪಿ.ವಿ, ಈಶ್ವರ ಬೇಡೆಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್ ಏಲಂ ನಿಯಮಗಳನ್ನು ಸಭೆಗೆ ವಿವರಿಸಿದರು.

ಗಿರೀಶ್ ಕುಮಾರ್ ಅವರು ಹರಾಜು ಕೂಗುವ ಪ್ರಕ್ರಿಯೆಯನ್ನು ನಿರ್ವಹಿಸಿದರು. ದೇವಸ್ಥಾನದ ಕಚೇರಿ ವ್ಯವಸ್ಥಾಪಕರಾದ ಹರೀಶ್ ಶೆಟ್ಟಿ, ಸಚಿನ್, ಯಶವಂತ ಹಾಗೂ ದಿನೇಶ್ ಪಿವಿಯವರು ಬಿಡ್ಡುದಾರರಿಂದ ಮುಂಗಡ ಹಣವನ್ನು ಸ್ವೀಕರಿಸುವ ಕಾರ್ಯದಲ್ಲಿ ನಿರತರಾಗಿದ್ದರು. ವಿನೋದ್ ಅವರು ಹಣ ಪಾವತಿಸಿದವರನ್ನು ಗುರುತಿಸಿ ಸಭಾಭವನಕ್ಕೆ ಪ್ರವೇಶ ನೀಡುವ ಜವಾಬ್ದಾರಿಯನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ನಗರಸಭೆಯ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಉದ್ಯಮಿ ರೋಶನ್ ರೈ ಬನ್ನೂರು, ನವೀನ್ಚಂದ್ರ, ವಿದ್ಯಾಮಾತಾ ಅಕಾಡೆಮಿಯ ಅಧ್ಯಕ್ಷರಾದ ಭಾಗ್ಯೇಶ್ ರೈ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಳಿಗೆ ಪಡೆದವರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳು:
• ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ, ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಗಲಾಟೆ, ಗೊಂದಲಕ್ಕೆ ಕಾರಣವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
• ಯಶಸ್ವಿ ಬಿಡ್ಡುದಾರರು ಹರಾಜು ನಡೆದ ದಿನವೇ ಪೂರ್ಣ ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬೇಕು. ತಪ್ಪಿದಲ್ಲಿ ಮುಂಗಡ ಹಣವನ್ನು ಮುಟ್ಟುಗೋಲು ಹಾಕಿ ಮರು ಹರಾಜು ಮಾಡಲಾಗುವುದು.
• ವೆಂಕಟ್ರಮಣ ದೇವಸ್ಥಾನದಿಂದ ರಥಬೀದಿಗೆ ಬರುವ ಕಂಬಳ ಗದ್ದೆಯ ಜಾಗದಲ್ಲಿ ಮತ್ತು ಕಂಬಳದ ಸ್ಟೇಜಿನ ಸುತ್ತಲೂ ಅನಧಿಕೃತವಾಗಿ ಯಾವುದೇ ಮಳಿಗೆಗಳನ್ನು ಹಾಕಬಾರದು ಹಾಗೂ ಐಸ್ಕ್ರೀಂ ಗಾಡಿಗಳನ್ನು ನಿಲ್ಲಿಸುವುದು ಸಂಪೂರ್ಣ ನಿಷಿದ್ಧ.
• ಸಂತೆ ಸ್ಥಳದಲ್ಲಿ ಜೂಜು, ಲಕ್ಕಿಡಿಪ್, ಮಾಂಸದ ಹೋಟೆಲ್ಗಳನ್ನು ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸ್ವಚ್ಛತೆಯನ್ನು ಕಾಪಾಡಬೇಕು. ಧ್ವನಿವರ್ಧಕ ಅಳವಡಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯಬೇಕು ಮತ್ತು ಕರ್ಕಶ ಶಬ್ದದ ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದೆ.
• ಮಳಿಗೆಯ ಹೊರಗೆ ಬಾಡಿಗೆ ಜನರೇಟರ್ ಅಳವಡಿಸಬಾರದು. ಜನರೇಟರ್ ಅಳವಡಿಕೆಗೆ ಕಚೇರಿಯಿಂದ ಅಥವಾ ಮೆಸ್ಕಾಂನಿಂದ ಅನುಮತಿ ಪಡೆಯಬೇಕು.
• ಹರಾಜಿನಲ್ಲಿ ಮಳಿಗೆ ಪಡೆದವರು ಕಚೇರಿಯಿಂದ ನೀಡುವ ಪರವಾನಿಗೆ ಪತ್ರ ಮತ್ತು ಭಾವಚಿತ್ರವನ್ನು ಮಳಿಗೆಯ ಮುಂಭಾಗದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.
• ಯಾವುದೇ ಕಾರಣಕ್ಕೂ ಪಡೆದ ಮಳಿಗೆಯನ್ನು ಉಪ ಗುತ್ತಿಗೆಗೆ ನೀಡುವಂತಿಲ್ಲ. ನೀಡಿದ್ದು ಕಂಡುಬಂದಲ್ಲಿ ಪರವಾನಿಗೆಯನ್ನು ರದ್ದುಪಡಿಸಲಾಗುವುದು.
• ಜಾತ್ರೆಯು ಬೇಸಿಗೆಯಲ್ಲಿ ನಡೆಯುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಗದ್ದೆ ಬಯಲಿನಲ್ಲಿ ತೆರೆಯುವ ಹೋಟೆಲ್, ತಿಂಡಿ ತಿನಿಸು ಮತ್ತು ಜ್ಯೂಸ್ ಅಂಗಡಿಗಳ ಮಾಲಕರು ಆಹಾರ ಸುರಕ್ಷತಾ ಪರವಾನಿಗೆಯನ್ನು ತಾಲ್ಲೂಕು ಆರೋಗ್ಯ ಅಧಿಕಾರಿಯಿಂದ ಪಡೆಯಬೇಕು.

ಹೆಚ್ಚುವರಿಯಾಗಿ 110 ಮಳಿಗೆಗಳು:
ಈ ಬಾರಿ ಅನ್ನಪ್ರಸಾದ ವಿತರಣೆಯನ್ನು ಕೆರೆಯ ಬಳಿ ಸ್ಥಳಾಂತರಿಸಿದ್ದರಿಂದ ಅಂಗಡಿ ಮಳಿಗೆ ಹಾಕಲು ವಿಶಾಲವಾದ ಜಾಗ ಲಭ್ಯವಾಗಿದೆ. ಹೀಗಾಗಿ ಈ ಬಾರಿ 110 ಹೆಚ್ಚುವರಿ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಎಲ್ಲಾ ಬಡವರಿಗೂ ವ್ಯಾಪಾರಕ್ಕೆ ಅವಕಾಶ ಸಿಗಬೇಕೆಂಬ ಉದ್ದೇಶದಿಂದ ಒಬ್ಬರಿಗೆ ಗರಿಷ್ಠ ಎರಡು ಮಳಿಗೆಗಳನ್ನು ಮಾತ್ರ ನೀಡಲಾಗುವುದು. ಇದರಿಂದ ಮುಂದೊಂದು ದಿನ ಪುತ್ತೂರು ಜಾತ್ರೆಯಲ್ಲಿ ವ್ಯಾಪಾರ ಮಾಡಿ ತಮ್ಮ ಮಕ್ಕಳ ಮದುವೆ ಮಾಡಿದ್ದೇವೆ ಅಥವಾ ಮನೆ ಕಟ್ಟಿದ್ದೇವೆ ಎಂಬ ಸಂತಸದ ಮಾತು ಬಡ ವ್ಯಾಪಾರಿಗಳ ಬಾಯಿಂದ ಬರಬೇಕು. ಅದೇ ನಮ್ಮ ಪ್ರಯತ್ನದ ನಿಜವಾದ ಫಲಿತಾಂಶ ಎಂದು ಈಶ್ವರ ಭಟ್ ಪಂಜಿಗುಡ್ಡೆ ಅವರು ಹೇಳಿದರು.

ಒಟ್ಟಾರೆಯಾಗಿ ಈ ಬಾರಿ ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯು ಕೇವಲ ಧಾರ್ಮಿಕ ಮಹೋತ್ಸವವಾಗಿರದೇ, ಸಣ್ಣ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕೆ ಒಂದು ಮಹತ್ವದ ವೇದಿಕೆಯಾಗಲಿದೆ ಎಂಬುದರಲ್ಲಿ ಸಂಶಯವಿಲ್ಲ.

Ad Widget
Click to comment

Leave a Reply

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಕಾರ್ಯಕ್ರಮಗಳು

Swachha Bharat Mission-ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿಟ್ಲದಲ್ಲಿ 3 ಟಿಪಿಡಿ ಸಾಮರ್ಥ್ಯದ ಎಂಆರ್‌ಎಫ್ ಘಟಕಕ್ಕೆ ಸಂಸದ ಕ್ಯಾ. ಚೌಟ ಚಾಲನೆ

Published

on



Ad Widget

Ad Widget

Ad Widget

Ad Widget

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಕೇಂದ್ರ ಪುರಸ್ಕೃತ ವಿವಿಧ ಯೋಜನೆಯಡಿ ಸುಮಾರು 60.10 ಲಕ್ಷ ರೂಪಾಯಿಗಳ ಅನುದಾನದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಈ ಘನ ತ್ಯಾಜ್ಯ ಘಟಕದಲ್ಲಿ ಒಣತ್ಯಾಜ್ಯ ಸಂಗ್ರಹಿಸುವುದಕ್ಕೆ 3 ಟಿಪಿಡಿ ಸಾಮರ್ಥ್ಯದ ಮೆಟೀರಿಯಲ್‌ ರಿಕವರಿ ಫೆಸಿಲಿಟಿ ಘಟಕವನ್ನು ನಿರ್ಮಿಸಲಾಗುತ್ತದೆ. ಆ ಮೂಲಕ ವಿಟ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬಹಳ ವೈಜ್ಞಾನಿಕವಾದ ಒಣ ಕಸ ಸಂಗ್ರಹ ಹಾಗೂ ವಿಲೇವಾರಿ ವ್ಯವಸ್ಥೆ ಅಳವಡಿಕೆಯಾಗುತ್ತಿದೆ. ಇದು ಗ್ರಾಮೀಣ ಭಾಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನ ಪ್ರಕ್ರಿಯೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ.

Ad Widget

Ad Widget <> Ad Widget

ವಿಟ್ಲದ ಎಂಆರ್‌ಎಫ್‌ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು , ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಅಲ್ಲದೆ, ಒಣ ಕಸವನ್ನು ಈ ರೀತಿಯ ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಜತೆಗೆ ಆರ್ಥಿಕವಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲ ಕಲ್ಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ, ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲೇ ಆಧುನಿಕ ಮೂಲಸೌಕರ್ಯಗಳು ಬೆಳೆಯಬೇಕು. ಈ ₹60.10 ಲಕ್ಷದ ಯೋಜನೆಯು ನಮ್ಮ ವಿಟ್ಲ ಪಟ್ಟಣ ಪಂಚಾಯತಿಯನ್ನು ಮಾದರಿ ಮತ್ತು ಸ್ವಾವಲಂಬಿ ಪಟ್ಟಣವನ್ನಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.



Ad Widget

ಈ ಕಾರ್‍ಯಕ್ರಮದ ಬಳಿಕ ಪ್ರಧಾನಮಂತ್ರಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 5ರ ಪಳಿಕೆಯಲ್ಲಿ ಸಂಸದ ಕ್ಯಾ.ಚೌಟ ಅವರು ಕಾರ್ಯಕರ್ಯರೊಂದಿಗೆ ಸಸಿ ನೆಟ್ಟು ನೀರುಣಿಸಿದರು.

Ad Widget

Ad Widget

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಬಿಜೆಪಿ ಮುಖಂಡರಾದ ದೇವಪ್ಪ ಪೂಜಾರಿ, ಸಂಜಯ್ ಪ್ರಭು, ಪ್ರಸನ್ನ ದರ್ಬೆ, ನಿತೀಶ್ ಕುಮಾರ್ ಶಾಂತಿವನ, ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ , ಉದಯ ಆಲಂಗಾರ್, ಹರೀಶ್ ಸಿ.ಎಚ್ ಉಪಸ್ಥಿತರಿದ್ದರು.

Ad Widget
Continue Reading

ಕಾರ್ಯಕ್ರಮಗಳು

Bantare Serige-2026-ಅ.3ರಂದು ‘ಬಂಟೆರೆ ಸೇರಿಗೆ-2026’: 15 ಸಾಧಕರಿಗೆ ಪ್ರಶಸ್ತಿ; ಬಂಟರ ಸಂಘಕ್ಕೆ 5.50 ಎಕರೆ ಜಾಗದ ಹಕ್ಕುಪತ್ರ ಹಸ್ತಾಂತರ; 3,000 ಮಂದಿಯ ಸಾಮರ್ಥ್ಯದ ಮದುವೆ ಹಾಲ್ ನಿರ್ಮಾಣಕ್ಕೆ ಯೋಜನೆ

Published

on



Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ‘ಬಂಟೆರೆ ಸೇರಿಗೆ-2026’ ಕಾರ್ಯಕ್ರಮ ಅ.3ರಂದು ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 9ಕ್ಕೆ ದುಗ್ಗಮ್ಮ ದೇರಣ್ಣ ಶೆಟ್ಟಿ ಸಭಾಭವನದಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಎರಡು ರಥಗಳಲ್ಲಿ ಸಾಧಕರು, ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ರಾಜರಸ್ತೆ ಮೂಲಕ ಬಂಟರ ಭವನಕ್ಕೆ ಕರೆತರಲಾಗುವುದು. ಅರಿಯಡ್ಕ ಚಿಕ್ಕಪ್ಪ ನ್ಯಾಕ್ ಮಹಾದ್ವಾರ ಉದ್ಘಾಟಿಸಲಿದ್ದು, ದಂಬೆಕ್ಕಾನ ಸದಾಶಿವ ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ.

Ad Widget

Ad Widget <> Ad Widget

ಬೆಳಿಗ್ಗೆ 11ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜಿತ್ ಕುಮಾರ್ ರೈ ಮಾಲಾಡಿ ಶುಭಾಶಂಸನೆ ಮಾಡಲಿದ್ದು, ಶಶಿಧರ್ ಶೆಟ್ಟಿ ಬರೋಡಾ ಪ್ರಶಸ್ತಿ ಪ್ರದಾನ, ಆರ್.ಕೆ. ಶೆಟ್ಟಿ ಮುಂಬೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಜಗನ್ನಾಥ ರೈ ಬೀಡು ಮುಖ್ಯ ಅತಿಥಿಯಾಗಿರುವರು.



Ad Widget

ಪ್ರಶಸ್ತಿ ಪುರಸ್ಕೃತರು: ಸಹಕಾರರತ್ನ *ಸವಣೂರು ಸೀತಾರಾಮ ರೈ, **ಚನಿಲ ತಿಮ್ಮಪ್ಪ ಶೆಟ್ಟಿ, **ಮಿತ್ರಂಪಾಡಿ ಪುರಂದರ ರೈ, **ಡಾ. ಸಂದೀಪ್ ರೈ, ಸಹಕಾರರತ್ನ **ಅಗರಿ ನವೀನ್ ಭಂಡಾರಿ, **ಸುಬೇದಾರ್ ಮೇಜರ್ ರಮೇಶ್ ರೈ ಬೋಳೋಡಿ, **ಚಂದ್ರಹಾಸ್ ರೈ ಬನ್ನೂರು ಬಾಳಿಕೆ, **ಜಯಲಕ್ಷ್ಮಿ ಶೆಟ್ಟಿ, **ಸತೀಶ್ ರೈ ಕುತ್ಯಾಡಿ, **ಪ್ರವೀಣ್ ಭಂಡಾರಿ ಪುರ, **ಡಾ. ಸತ್ಯವತಿ ಆಳ್ವ, **ಸರೋಜ ಉಮೇಶ್ ರೈ ಮನವಳಿಕೆ, ಪಿಯುಸಿ ವಿಭಾಗದ **ಸಸ್ತಿ ಶೆಟ್ಟಿ, *ಸಮೃದ್ಧಿ ಶೆಟ್ಟಿ ಹಾಗೂ ಶರಣ್ಯ ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರಗಳ ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು.

Ad Widget

Ad Widget

ಅಶೋಕ್ ರೈಗೆ ವಿಶೇಷ ಸನ್ಮಾನ

ಪುತ್ತೂರಿನ ಮರೀಲ್‌ನಲ್ಲಿ ಬಂಟರ ಸಂಘಕ್ಕೆ ಸರ್ಕಾರದಿಂದ 5.50 ಎಕರೆ ಜಾಗ ಮಂಜೂರು ಮಾಡಿಸಲು ಸಹಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಹಕ್ಕುಪತ್ರವನ್ನು ಸಂಘಕ್ಕೆ ಹಸ್ತಾಂತರಿಸಲಿದ್ದು, ಜಾಗಕ್ಕೆ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಶಾಸಕರೇ ಭರಿಸಿದ್ದಾರೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಮಂಜೂರಾದ ಜಾಗದಲ್ಲಿ ಮೊದಲ ಹಂತವಾಗಿ ಅಡ್ಯಾರ್ ಗಾರ್ಡನ್ ಮಾದರಿಯ ಮದುವೆ ಹಾಲ್ ಮತ್ತು ಭೋಜನ ಶಾಲೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸುಮಾರು 3,000 ಮಂದಿಗೆ ಅವಕಾಶ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದಿನ ಹಂತಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಪುತ್ತೂರು ಮೂಲದ ಸೌಮ್ಯ ಪ್ರಿಯ ಹೆಗ್ಡೆ ಅರಿಯಡ್ಕ ಹಾಗೂ ಉಮೇಶ್ ಪೂಂಜ ದೇರ್ಲ ಅವರನ್ನು ಸನ್ಮಾನಿಸಲಾಗುವುದು. ಪ್ರಧಾನ ಕಾರ್ಯದರ್ಶಿ ಅಮರನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಾಂಸಾಹಾರಿ ಭೋಜನದ ವ್ಯವಸ್ಥೆ ಇದೆ.

ಸುದ್ದಿಗೋಷ್ಠಿಯಲ್ಲಿ ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ, ನಿತ್ಯಾನಂದ ಶೆಟ್ಟಿ ಮನವಳಿಕೆ, ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ಭಾಗ್ಗೇಶ್ ರೈ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading