ಅಪರಾಧ
Karkala-ಕಾರ್ಕಳ: ಅಣ್ಣ-ತಮ್ಮಂದಿರ ವೈಯಕ್ತಿಕ ದ್ವೇಷ; ದೇವಸ್ಥಾನಕ್ಕೆ ಭೇಟಿ ನೀಡಿದ ವ್ಯಕ್ತಿಗೆ ಹಲ್ಲೆ; ದೂರು-ಪ್ರತಿದೂರು ದಾಖಲು
ದೇವರ ಹೆಸರಲ್ಲಿ ಶುರುವಾದಂತೆ ಕಂಡ ಜಗಳ, ಕೊನೆಗೆ ಅಣ್ಣ-ತಮ್ಮಂದಿರ ಹಳೆಯ ದ್ವೇಷದ ಕಥೆಯಾಗಿ ಹೊರಹೊಮ್ಮಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಎ. 3ರಂದು ರಾತ್ರಿ ದುರ್ಗಾ ಗ್ರಾಮದಲ್ಲಿ ದೇವಸ್ಥಾನ ಪೂಜೆ ವಿಚಾರದಲ್ಲಿ ಹಿಂದೂ ಮತ್ತು ಮುಸ್ಲಿಂ ವ್ಯಕ್ತಿಗಳ ನಡುವೆ ಗಲಾಟೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ದೂರು-ಪ್ರತಿದೂರು ದಾಖಲಾಗಿದೆ.
ದೇವರ ಹೆಸರಲ್ಲಿ ಶುರುವಾದಂತೆ ಕಂಡ ಜಗಳ, ಕೊನೆಗೆ ಅಣ್ಣ-ತಮ್ಮಂದಿರ ಹಳೆಯ ದ್ವೇಷದ ಕಥೆಯಾಗಿ ಹೊರಹೊಮ್ಮಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಎ. 3ರಂದು ರಾತ್ರಿ ದುರ್ಗಾ ಗ್ರಾಮದಲ್ಲಿ ದೇವಸ್ಥಾನ ಪೂಜೆ ವಿಚಾರದಲ್ಲಿ ಹಿಂದೂ ಮತ್ತು ಮುಸ್ಲಿಂ ವ್ಯಕ್ತಿಗಳ ನಡುವೆ ಗಲಾಟೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ದೂರು-ಪ್ರತಿದೂರು ದಾಖಲಾಗಿದೆ.
ನಿಟ್ಟಿ ಗ್ರಾಮದ ವಿಶ್ವನಾಥ್ ಅವರು ದೂರು ನೀಡಿದ್ದು, ತೆಳ್ಳಾರಿನ ಮೇಲಿನ ಕುಕ್ಕಾಜೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿದ ಮೇಲೆ ಸಂಜೆ ಸ್ಕೂಟರ್ನಲ್ಲಿ ವಾಪಸಾಗುತ್ತಿದ್ದಾಗ ಕುಕ್ಕಾಜೆ ನಿವಾಸಿ ರಿಯಾಜ್ ಸ್ಕೂಟರ್ ತಡೆದು ನಿಲ್ಲಿಸಿ ನೀನು ಇಲ್ಲಿಗೆ ಯಾಕೆ ಬಂದಿದ್ದೀಯ? ನಿನಗೆ ಬೇರೆ ದೇವಸ್ಥಾನ ಇಲ್ಲವೇ. ನೀನು ಇಲ್ಲಿ ಯಾಕೆ ಬರುವುದು ಎಂದು ಹೇಳಿ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಆರೋಪಿ ರಿಯಾಜ್ನ ಮಕ್ಕಳಾದ ರಿಯಾನ್ ಮತ್ತು ರಿಪ್ಪಾನ್ ಹಾಗೂ ರಿಮಾನ್ ಅಲ್ಲಿಗೆ ಬಂದು ಮರದ ದೊಣ್ಣೆಯಿಂದ ಹೊಡೆದಿದ್ದಾರೆ. ವಿಷಯ ತಿಳಿದ ದೇವಸ್ಥಾನ ನಿರ್ವಹಿಸುವ ಜಾಹೀರ್, ನಜೀರ್ ಅವರು ಗಲಾಟೆ ಬಿಡಿಸಲು ಮುಂದಾಗಿದ್ದು ಅವರಿಗೂ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
ಎಸ್ಪಿ ಹೇಳಿದ್ದೇನು?
ರಿಯಾಜ್, ನಜೀರ್, ಜಾಹೀರ್ ಅಣ್ಣ ತಮ್ಮಂದಿರಾಗಿದ್ದು ನೆರೆಕೆರೆ ಮನೆಗಳಲ್ಲಿ ಒಂದೆ ಕಡೆವಾಸ ಮಾಡಿಕೊಂಡು ಅಲ್ಲಿರುವ ಚಾಮುಂಡಿ ದೇವರನ್ನು ಪೂಜಿಸಿಕೊಂಡು ಬರುತ್ತಿದ್ದಾರೆ. ಜಾಹೀರ್ ಮತ್ತು ನಜೀರ್ ಮನೆಯ ಮಧ್ಯದಲ್ಲಿ ಸಣ್ಣದಾದ ಚಾಮುಂಡಿ ದೇವರ ಗುಡಿ ಇದೆ. ಇಲ್ಲಿ ಹಲವಾರು ಹಿಂದು, ಮುಸ್ಲಿಂ ಸಮುದಾಯದವರು ಆಗಮಿಸಿ ಪೂಜಿಸುತ್ತಾರೆ.
ರಿಯಾಜ್ನ ಮನೆಯಲ್ಲಿಯೂ ಪ್ರತ್ಯೇಕವಾಗಿ ಚಾಮುಂಡಿ ದೇವರಿಗೆ ಪೂಜೆ ಮಾಡುತ್ತಿದ್ದಾರೆ. ರಿಯಾಜ್ ಮತ್ತು ಜಾಹೀರ್ ನಡುವೆ ಹಣಕಾಸು, ಸಿವಿಲ್ ವಿಚಾರದಲ್ಲಿ ಗಲಾಟೆ ನಡೆಯುತ್ತಿತ್ತು. ಅಲ್ಲದೆ ಜಾಹೀರ್ನ ದೇವಸ್ಥಾನಕ್ಕೆ ಹೆಚ್ಚು ಜನ ಹೋಗುತ್ತಿದ್ದಾರೆ. ತನ್ನ ದೇವಸ್ಥಾನಕ್ಕೆ ಹೆಚ್ಚು ಜನ ಬರುತ್ತಿಲ್ಲ ಎಂದು ರಿಯಾಜ್ ವೈಮನಸ್ಸು ಹೊಂದಿದ್ದ.
ಇದೇ ವಿಚಾರದಲ್ಲಿ ಎ. 3ರಂದು ಸಂಜೆ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಅಲ್ಲಿ ಪೂಜೆಗೆ ಬಂದಿದ್ದ ವಿಶ್ವನಾಥ್ ಸಹ ಸೇರಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಹೇಳಿದ್ದಾರೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಶಿಕ್ಷಣ10 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ9 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಸ್ಥಳೀಯ9 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ8 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ9 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ9 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ9 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















