ನಿಧನ ವಾರ್ತೆ
Suresh Vitla-ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ಹಠಾತ್ ಕುಸಿದು ಬಿದ್ದು ನಿಧನ
ತುಳು ರಂಗಭೂಮಿಯ ಪ್ರತಿಭಾವಂತ ಮತ್ತು ಬಹುಮುಖಿ ಕಲಾವಿದರಾಗಿದ್ದ ಸುರೇಶ್ ವಿಟ್ಲ (55) ಅವರು ಭಾನುವಾರ ನಿಧನರಾದರು. ವಿಟ್ಲದ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ವಿಟ್ಲ: ತುಳು ರಂಗಭೂಮಿಯ ಪ್ರತಿಭಾವಂತ ಮತ್ತು ಬಹುಮುಖಿ ಕಲಾವಿದರಾಗಿದ್ದ ಸುರೇಶ್ ವಿಟ್ಲ (55) ಅವರು ಭಾನುವಾರ ನಿಧನರಾದರು. ವಿಟ್ಲದ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಸುಮಾರು ಎರಡು ದಶಕಗಳಿಂದ (20 ವರ್ಷಗಳಿಂದ) ಮಂಜೇಶ್ವರದ ಪ್ರತಿಷ್ಠಿತ ‘ಶಾರದಾ ಆರ್ಟ್ಸ್’ ಸಂಸ್ಥೆಯೊಂದಿಗೆ ನಿಕಟ ಒಡನಾಟ ಹೊಂದಿದ್ದ ಸುರೇಶ್ ವಿಟ್ಲ ಅವರು, ಸಂಸ್ಥೆಯ ಬೆಳವಣಿಗೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ಅವರು ತಮ್ಮ ಕಲಾ ಸೇವಾವಧಿಯಲ್ಲಿ 18ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಟ ನಟನಾ ಶೈಲಿಯಿಂದ ಕಲಾಭಿಮಾನಿಗಳ ಮನ ಗೆದ್ದಿದ್ದರು.
ಅವರ ನಟನಾ ಪ್ರತಿಭೆ ಕೇವಲ ಒಂದು ಪಾತ್ರಕ್ಕೆ ಸೀಮಿತವಾಗಿರಲಿಲ್ಲ. ಪೋಷಕ ನಟನಾಗಿ, ಗಂಭೀರ ಖಳನಾಯಕನಾಗಿ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಹಾಸ್ಯ ಪಾತ್ರಧಾರಿಯಾಗಿ ಅಷ್ಟೇ ಅಲ್ಲದೆ, ಸವಾಲಿನ ಸ್ತ್ರೀ ಪಾತ್ರಗಳನ್ನೂ ಲೀಲಾಜಾಲವಾಗಿ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಅವರ ಅಭಿನಯಕ್ಕೆ ತುಳು ರಂಗಭೂಮಿಯಲ್ಲಿ ವಿಶೇಷ ಸ್ಥಾನವಿತ್ತು.
ಸುರೇಶ್ ವಿಟ್ಲ ಅವರ ಅಕಾಲಿಕ ನಿಧನವು ತುಳು ರಂಗಭೂಮಿ ಹಾಗೂ ಕಲಾ ವಲಯಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದು, ಅವರ ಕುಟುಂಬಕ್ಕೆ ಹಾಗೂ ಅಪಾರ ಕಲಾಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹಲವು ಗಣ್ಯರು ಮತ್ತು ಕಲಾವಿದರು ಸಂತಾಪ ಸೂಚಿಸಿದ್ದಾರೆ.
ನಿಧನ ವಾರ್ತೆ
Kankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.
ಶಾಲೆಯಿಂದ ಮನೆ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.
ಕಂಕನಾಡಿಯಲ್ಲಿ ಸೈಂಟ್ ಜೋಸೆಫ್ ಅನುದಾನಿತ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಬಾಲಕ ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಹೊರಗೆ ಬಂದಿದ್ದ. ಯಾವಾಗಲೂ ತಾಯಿ ಕರೆದೊಯ್ಯಲು ಬರುತ್ತಿದ್ದು ತಾಯಿ ಬರದೇ ಇದ್ದುದರಿಂದ ಶಾಲೆಯಿಂದ ಹೊರಗೆ ಬಂದಿದ್ದ ಹುಡುಗ ಕಂಕನಾಡಿ- ಫಳೀರ್ ರಸ್ತೆ ಬದಿಯಲ್ಲಿ ಮನೆ ಕಡೆಗೆ ನಡೆದು ಹೋಗಲು ರಸ್ತೆ ದಾಟಿದ್ದ. ಈ ವೇಳೆ, ಸ್ಟೇಟ್ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ರಾಜಲಕ್ಷ್ಮಿ ಎನ್ನುವ 4 ನಂಬರಿನ ಬಸ್ ಡಿಕ್ಕಿಯಾಗಿದ್ದು ಅದರ ಎಡಬದಿಯ ಹಿಂಭಾಗದ ಚಕ್ರ ಹರಿದು ಬಾಲಕ ತೀವ್ರ ಗಾಯಗೊಂಡಿದ್ದಾನೆ.
ಕೂಡಲೇ ಬಾಲಕನನ್ನು ಬಸ್ಸಿನ ಸಿಬಂದಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದು ಸಂಜೆಯ ವೇಳೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬಸ್ ತಾಗಿದ ರಭಸಕ್ಕೆ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟಿದ್ದು ದೇಹದ ಒಂದು ಬದಿಗೆ ತೀವ್ರ ಪೆಟ್ಟು ಬಿದ್ದಿತ್ತು. ಬಸ್ ಚಾಲಕನ ನಿರ್ಲಕ್ಷ್ಯದ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಧನ ವಾರ್ತೆ
Kolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಪಾರ್ಸೆಲ್ ರೂಪದ ವಸ್ತುವೊಂದು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅದರಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರೊಳಗೆ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ.
ಮೃತ ಮಹಿಳೆಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ಮೃತದೇಹವನ್ನು ಕುಳಿತ ಭಂಗಿಯಲ್ಲಿ ಕೈಕಾಲುಗಳನ್ನು ಕಟ್ಟಿ ಗೋಣಿ ಚೀಲದಲ್ಲಿ ತುಂಬಿಸಲಾಗಿತ್ತು. ಬಳಿಕ ಅದರ ಮೇಲೆ ಪ್ಲಾಸ್ಟಿಕ್ ಕವರ್ ಸುತ್ತಿ, ಪಾರ್ಸೆಲ್ ಪ್ಲಾಸ್ಟರ್‌ನಿಂದ ಬಿಗಿಯಾಗಿ ಕಟ್ಟಲಾಗಿತ್ತು. ಮೃತದೇಹವನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಾಲಿಯ ಮೇಲೆ ಇರಿಸಿ ಎಸೆದಿರುವುದು ಪೊಲೀಸರ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:
ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಸೋಕೋ ತಂಡ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಸಿಟಿವಿ ಸುಳಿವು; ವಿಶೇಷ ತಂಡ ರಚನೆ:
ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮೃತದೇಹವನ್ನು ಎಸೆದು ಹೋಗಿರುವ ದೃಶ್ಯಗಳು ಹೆದ್ದಾರಿಯ ಟೋಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸುಂದರಪಾಳ್ಯ ಅಂತಾರಾಜ್ಯ ಗಡಿ ಪ್ರದೇಶದಲ್ಲಿರುವ ಹಿನ್ನೆಲೆಯಲ್ಲಿ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ.
ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ. ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ.
ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಕುಟುಂಬಸ್ಥರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ನವೆಂಬರ್ 27ರಂದು ಹರ್ಷಿತ್ ಕೊನೆಯುಸಿರೆಳೆದಿದ್ದಾರೆ.
ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.
-
ಬಿಗ್ ನ್ಯೂಸ್20 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್20 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ23 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ನಿಧನ ವಾರ್ತೆ1 hour agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ1 hour agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ1 hour agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ47 minutes agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ಅಂತರ ರಾಜ್ಯ53 minutes agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!















