ದಕ್ಷಿಣ ಕನ್ನಡ
Puttur Ambika Vidyaalaya 2nd PUC Result 2025 : ದ್ವಿತೀಯ ಪಿಯುಸಿ ಫಲಿತಾಂಶ:ಅದ್ಭುತ ಸಾಧನೆ ಮೆರೆದ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ

• ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ
ಅಂಬಿಕಾ ಸಂಸ್ಥೆಗಳ ಪದವಿ ಪೂರ್ವ ವಿದ್ಯಾಲಯ, ಬಪ್ಪಳಿಗೆ (ವಸತಿಯುತ) ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಶೇ. 99.12 ಫಲಿತಾಂಶದೊಂದಿಗೆ ಸಾಧನೆ.
• 228 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 122 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
• ವಿಜ್ಞಾನ ವಿಭಾಗದ ಅಜಿತ್ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 6ನೇ ಸ್ಥಾನ
Puttur Ambika Vidyaalaya 2nd PUC Result 2025 : ದ್ವಿತೀಯ ಪಿಯುಸಿ ಫಲಿತಾಂಶ:ಅದ್ಭುತ ಸಾಧನೆ ಮೆರೆದ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ಅಜಿತ್ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ.
ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿಜ್ಞಾನ ವಿಭಾಗದಲ್ಲಿ 228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 127 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ ಬಪ್ಪಳಿಗೆಯ ವಿಜ್ಞಾನ ವಿಭಾಗದಲ್ಲಿ 177 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೧೦೧ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 75 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಪುತ್ತೂರು ಚಿಕ್ಕಮುಡ್ನೂರಿನ ಶ್ರೀನಿವಾಸ ಬಡೆಕಿಲ್ಲಾಯ ಮತ್ತು ರೇಖಾ ಕೆ.ವಿ. ದಂಪತಿಯ ಪುತ್ರ ಅಜಿತ್ ಕುಮಾರ್ ಕೆ.ಎಸ್. (594), ಪುತ್ತೂರಿನ ಚಿದಾನಂದ ಪೂಜಾರಿ ಮತ್ತು ಶೋಭಾ ಎಂ. ದಂಪತಿಯ ಪುತ್ರಿ ಹಿಮಾನಿ ಎ.ಸಿ. (594), ಪುತ್ತೂರು ಬಪ್ಪಳಿಗೆಯ ಬಿ.ಕೆ. ಸುರೇಶ್ ಮತ್ತು ಜಯಂತಿ ಎಸ್. ದಂಪತಿಯ ಪುತ್ರಿ ಕೆ.ಎಸ್. ಮನೀಶಾ (593), ಕಡಬ ಕಾಣಿಯೂರಿನ ಪದ್ಮನಾಭ ಜಿ. ಮತ್ತು ಹೇಮಾವತಿ ದಂಪತಿಯ ಪುತ್ರ ಉತ್ತಮ್ ಜಿ. (593),
ಕಡಬ ಕಾಣಿಯೂರಿನ ಪ್ರದೀಪ್ ಬಿ. ಮತ್ತು ವಿದ್ಯಾ ದಂಪತಿಯ ಪುತ್ರ ವಿಕಾಸ್ ಬಿ. (589), ಕಡೇಶಿವಾಲಯದ ನರಸಿಂಹ ರಾವ್ ಮತ್ತು ಸಂಧ್ಯಾ ರಾವ್ ದಂಪತಿಯ ಪುತ್ರ ಆದಿತ್ಯ ಡಿ. ರಾವ್ (589), ಕಡಬ ಸುಬ್ರಹ್ಮಣ್ಯದ ರಾಘವೇಂದ್ರ ಆಚಾರ್ ಮತ್ತು ಸುಧಾಮಣಿ ದಂಪತಿಯ ಪುತ್ರಿ ಅನ್ವಿತಾ ಕೆ. (587), ಬಂಟ್ವಾಳ ಪೆರ್ನೆಯ ಚಂದ್ರಶೇಖರ್ ಎನ್. ಮತ್ತು ವನಿತಾ ದಂಪತಿಯ ಪುತ್ರ ವಿಷ್ಣುಪ್ರಸಾದ್ (587), ಸುಳ್ಯ ಐವರ್ನಾಡಿನ ವಿಶ್ವನಾಥ ಎಸ್. ಮತ್ತು ಗೀತಾ ಕೆ. ದಂಪತಿಯ ಪುತ್ರಿ ದ್ವಿತಿ ಎಸ್. (585),
ಸುಳ್ಯ ಕನಕಮಜಲಿನ ಜಿ. ಮುರಲಿಕೃಷ್ಣ ಭಟ್ ಮತ್ತು ಶ್ವೇತಾ ಎಂ. ಭಟ್ ದಂಪತಿಯ ಪುತ್ರಿ ವೈಷ್ಣವಿ ಜಿ. ಭಟ್ (585), ಪುತ್ತೂರು ಹೆಬ್ಬಾರಬೈಲಿನ ರಾಮಗೋಪಾಲ ನೂಜಾಜೆ ಮತ್ತು ಪೂರ್ಣಿಮಾ ನೂಜಾಜೆ ದಂಪತಿಯ ಪುತ್ರ ಶ್ರೀಶ ನಿಡ್ವಣ್ಣಾಯ (585), ಪುತ್ತೂರು ಕಲ್ಲೇಗದ ಧರ್ಮಪಾಲ್ ಕೆ. ಮತ್ತು ಲತಾಕುಮಾರಿ ದಂಪತಿಯ ಪುತ್ರ ಅಕ್ಷಯ್ ಡಿ.ಎಲ್. (585), ಸುಳ್ಯದ ಶ್ರೀಧರ ರಾವ್ ಎಚ್. ಮತ್ತು ರಾಜೇಶ್ವರಿ ಎಸ್. ರಾವ್ ದಂಪತಿಯ ಪುತ್ರಿ ಅಮೂಲ್ಯ ರಾವ್ (585), ಪುತ್ತೂರಿನ ಶಿವರಾಮ್ ಆಳ್ವ ಮತ್ತು ಸೀಮಾ ಆಳ್ವ ದಂಪತಿಯ ಪುತ್ರಿ ವರ್ಷಿಣಿ ಆಳ್ವ (584), ಸುಳ್ಯ ಪೆರುವಾಜೆಯ ಹೊನ್ನಪ್ಪ ಗೌಡ ಮತ್ತು ಆಶಾಲತಾ ದಂಪತಿಯ ಪುತ್ರಿ ಸಾನ್ವಿ ಜೆ. ಎಚ್. (584),
ಕಾಸರಗೋಡು ಮಂಜೇಶ್ವರದ ರಾಮಕೃಷ್ಣ ಭಟ್ ಎಮ್. ಮತ್ತು ವೇದಾವತಿ ಎ. ದಂಪತಿಯ ಪುತ್ರಿ ಸಂಹಿತಾ ಎಂ. (೫೮೩), ಪುತ್ತೂರು ಬನ್ನೂರಿನ ಎಂ. ಕೇಶವ ಮತ್ತು ಪುಷ್ಪಲತಾ ದಂಪತಿಯ ಪುತ್ರಿ ಎಂ. ಮೃಣಾಲಿ (583), ಕಡಬ ಬಳ್ಪದ ವಿಶ್ವೇಶ್ವರ ಬಿ. ಮತ್ತು ಪುಷ್ಪಲತಾ ಯು. ದಂಪತಿಯ ಪುತ್ರಿ ಮಹತಿ ಬಿ. (583), ಬಂಟ್ವಾಳ ಪೆರ್ನೆಯ ಉಮೇಶ್ ನಾಯಕ್ ಮತ್ತು ಉಷಾ ದಂಪತಿಯ ಪುತ್ರ ಸಂಜಯ್ ಕುಮಾರ್ (581), ಪುತ್ತೂರಿನ ಜೀವನ್ ಮತ್ತು ಜ್ಯೋತಿಲಕ್ಷ್ಮಿ ದಂಪತಿಯ ಪುತ್ರಿ ಜೋಶಿತಾ (580), ಕಾಸರಗೋಡಿನ ರಮೇಶ್ ಭಟ್ ವೈ.ವಿ. ಮತ್ತು ಸವಿತ ದಂಪತಿಯ ಪುತ್ರ ಅನ್ವಿತ್ ಆರ್. ಭಟ್. (580) ಉತ್ತಮ ಅಂಕಗಳೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
Uncategorized22 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್16 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು19 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ20 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized20 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ21 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ19 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್20 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















