Connect with us

ಸ್ಥಳೀಯ

Belthangady-ಬೆಳ್ತಂಗಡಿ: ಸತಿ ಪತಿಗಳಾದ ಹಸುಗೂಸನ್ನು ಕಾಡಿನಲ್ಲಿ ತ್ಯಜಿಸಿದ ಯುವಕ – ಯುವತಿ; ಕುತ್ತೊಟ್ಟು ದೇಗುಲದಲ್ಲಿ ಕುಟುಂಬದ ಸಮ್ಮುಖ ವಿವಾಹ – ಇನ್ನೂ ಹೆತ್ತವರ ಮಡಿಲು ಸೇರದ ಮಗು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಸಮೀಪದ ನಿರ್ಜನ ಕಾಡಿನಲ್ಲಿ, ಮಾರ್ಚ್ 22 ರಂದು ಪುಟ್ಟ ಕಂದಮ್ಮವೊಂದು ಅನಾಥವಾಗಿ ಪತ್ತೆಯಾಗಿ ಭಾರಿ ಸುದ್ದಿಯಾಗಿತ್ತು. ಆ ಎಳೆಗೂಸಿನ ಅಳಲು ಕೇಳುವವರಾರು ಇರಲಿಲ್ಲ. ಈ ಘಟನೆ ಎಲ್ಲರ ಮನಕಲಕಿತ್ತು, ಕರುಳು ಹಿಂಡಿತ್ತು.

Ad Widget

Ad Widget

Ad Widget

Ad Widget

ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಸಮೀಪದ ನಿರ್ಜನ ಕಾಡಿನಲ್ಲಿ, ಮಾರ್ಚ್ 22 ರಂದು ಪುಟ್ಟ ಕಂದಮ್ಮವೊಂದು ಅನಾಥವಾಗಿ ಪತ್ತೆಯಾಗಿ ಭಾರಿ ಸುದ್ದಿಯಾಗಿತ್ತು. ಆ ಎಳೆಗೂಸಿನ ಅಳಲು ಕೇಳುವವರಾರು ಇರಲಿಲ್ಲ. ಈ ಘಟನೆ ಎಲ್ಲರ ಮನಕಲಕಿತ್ತು, ಕರುಳು ಹಿಂಡಿತ್ತು.

Ad Widget

Ad Widget alt="Ad Widget"/>

Ad Widget

ಆದರೆ ವಿಚಿತ್ರವೆಂದರೇ, ಆ ಕಂದಮ್ಮನಿಗೆ ತಂದೆ-ತಾಯಿ ಇದ್ದರು! ವಿವಾಹ ಪೂರ್ವ ಸಂಬಂಧಕ್ಕೆ ಮಗು ಜನಿಸಿದ್ದರಿಂದ ಅದರ ತಂದೆ – ತಾಯಿ ಲೋಕಾಪವಾದಕ್ಕೆ ಅಂಜಿ ಮಗುವನ್ನು ಕಾಡಿನಲ್ಲಿ ತ್ಯಜಿಸಿದರು ಎನ್ನಲಾಗಿದೆ. ಆದರೇ ಇದೀಗ ಈ ಪ್ರಕರಣ ಸುಖಾಂತ್ಯದತ್ತ ಸಾಗಿದ್ದು, ಮಗುವಿನ ಹೆತ್ತವರು ಮಗುವಿನ ಜನನದ ಬಳಿಕ ವಿವಾಹವಾಗಿದ್ದಾರೆ

Ad Widget

Ad Widget <> Ad Widget

ಪೊಲೀಸರ ತನಿಖೆಯ ವೇಳೆ ಆ ಹಸುಗೂಸು ಬೆಳಾಲು ಗ್ರಾಮದ ಮಾಯ ಪ್ರದೇಶದ ನಿವಾಸಿ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಬಳಿಯ ಪಾಂಗಾಳದ ಸುಶ್ಮಿತಾ ಅವರ ಪ್ರೀತಿಯ ಕುಡಿ ಎಂಬ ಸತ್ಯ ಹೊರಬಿದ್ದಿತ್ತು.

ಯಾವ ಅಂಜಿಕೆಯೋ, ಯಾವ ಅಸಹಾಯಕತೆಯೋ, ಆ ಕಂದಮ್ಮನನ್ನು ಕಾಡಿನಲ್ಲಿ ಬಿಡಲು ಕಾರಣವಾಗಿತ್ತು. ಆದರೆ ಈಗ, ತಮ್ಮ ಮಗುವಿಗಾಗಿ, ತಮ್ಮ ಪ್ರೀತಿಗಾಗಿ ಆ ತಂದೆ-ತಾಯಿ ಒಂದಾಗಿದ್ದಾರೆ.

Ad Widget

Ad Widget

ಎರಡೂ ಕುಟುಂಬಗಳ ಹಿರಿಯರ ಸಮ್ಮುಖದಲ್ಲಿ, ಪವಿತ್ರ ನಡ ಗ್ರಾಮದ ಕುತ್ತೊಟ್ಟುಕುತ್ತೊಟ್ಟು ಶ್ರೀ ಸತ್ಯನಾರಾಯಣ ದೇವಸ್ಥಾನದ ಸನ್ನಿಧಿಯಲ್ಲಿ ರಂಜಿತ್ ಮತ್ತು ಸುಶ್ಮಿತಾ ಸತಿಪತಿಗಳಾಗಿದ್ದಾರೆ. ಇದೊಂದು ಅತ್ಯಂತ ಭಾವುಕ ಕ್ಷಣವಾಗಿತ್ತು, ಬಹುಶಃ ಒಂದು ಹೊಸ ಬದುಕಿನ ಭರವಸೆಯ ಕ್ಷಣವೂ ಆಗಿತ್ತು.

ಆದರೆ, ಕಂದಮ್ಮ ಮಾತ್ರ ಇನ್ನೂ ತಂದೆ-ತಾಯಿಯ ಮಡಿಲು ಸೇರಿಲ್ಲ. ಸದ್ಯಕ್ಕೆ, ಆ ಪುಟ್ಟ ಜೀವ ಪುತ್ತೂರಿನ ವಾತ್ಸಲ್ಯಧಾಮದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರ ಆರೈಕೆಯಲ್ಲಿದೆ.

ತಮ್ಮ ಕರುಳಿನ ಕುಡಿಯನ್ನು ಮರಳಿ ಪಡೆಯಲು ಈ ನವದಂಪತಿಗಳು ಈಗ ದೃಢ ಸಂಕಲ್ಪ ಮಾಡಿದ್ದಾರೆ. “ನಮ್ಮ ಮಗುವನ್ನು ಕಾನೂನು ಪ್ರಕಾರ ಹೋರಾಡಿ ವಾಪಸ್ ಪಡೆಯುತ್ತೇವೆ” ಎಂದು ಅವರು ಭರವಸೆಯ ಮಾತುಗಳನ್ನಾಡಿದ್ದಾರೆ. ತಂದೆ-ತಾಯಿಯ ವಾತ್ಸಲ್ಯಕ್ಕಾಗಿ ಕಾಯುತ್ತಿರುವ ಆ ಕಂದಮ್ಮ ಶೀಘ್ರದಲ್ಲೇ ಅವರ ಮಡಿಲು ಸೇರಲಿ ಎನ್ನುವ ಹಾರೈಕೆ ಕುಟುಂಬ ಸದಸ್ಯರದ್ದಾಗಿದೆ.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!