ಮೈಸೂರು
Vijayendra-ರಾಹುಲ್ ಗಾಂಧಿ ಪ್ರಧಾನಿಯಾಗ್ತಿದ್ದರೆ LPG ಬೆಲೆ 2500 ರೂ ಆಗ್ತಿತ್ತು : ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಕುರಿತು ತೀವ್ರ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರಮಣಕಾರಿ ಭಾಷಣ ಮಾಡಿದ್ದಾರೆ.
ಮೈಸೂರು, ಏ.08: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಕುರಿತು ತೀವ್ರ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರಮಣಕಾರಿ ಭಾಷಣ ಮಾಡಿದ್ದಾರೆ. “ರಾಹುಲ್ ಗಾಂಧಿಯಂತಹವರು ಪ್ರಧಾನಿಯಾಗಿದ್ದರೆ, ಅಡುಗೆ ಅನಿಲದ ಬೆಲೆ ಈಗಿನ 850 ರೂಪಾಯಿಗಳ ಬದಲಿಗೆ 2,500 ರೂಪಾಯಿಗಳನ್ನು ಮೀರಿರುತ್ತಿತ್ತು” ಎಂದು ಅವರು ಲೇವಡಿ ಮಾಡಿದರು.
ವಿಜಯೇಂದ್ರ ಅವರು, “ಕೇಂದ್ರ ಸರ್ಕಾರವು ಆಗಸ್ಟ್ 2023ರಲ್ಲಿ ಅಡುಗೆ ಅನಿಲದ ಬೆಲೆಯನ್ನು 200 ರೂಪಾಯಿಗಳಷ್ಟು ಇಳಿಸಿತ್ತು. ಆಗ ಬೆಲೆ 907 ರೂಪಾಯಿಯಿಂದ ಕಡಿಮೆಯಾಗಿತ್ತು. ಈಗ ರೂ. 50 ಹೆಚ್ಚಳವಾದರೂ ಅದು 850 ರೂಪಾಯಿಗಳಷ್ಟೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಹೆಚ್ಚಿಸಿದೆ. ಆದರೆ ಇದರ ಹೊರೆ ಸಾಮಾನ್ಯ ಜನರ ಮೇಲೆ ಬೀಳದಂತೆ ನೋಡಿಕೊಂಡಿದೆ” ಎಂದು ಸಮರ್ಥಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರ ಉಜ್ವಲ ಯೋಜನೆಯನ್ನು ಪ್ರಸ್ತಾಪಿಸಿದ ವಿಜಯೇಂದ್ರ, “ಗುಡಿಸಲುಗಳಲ್ಲಿ ವಾಸಿಸುವ ಬಡವರಿಗೂ ಅಡುಗೆ ಅನಿಲ ಸೌಲಭ್ಯ ಕಲ್ಪಿಸಿದವರು ಮೋದಿ. ಮಾರ್ಚ್ 2023ರಲ್ಲಿ ಸಿಲಿಂಡರ್ ಬೆಲೆ 1,107 ರೂಪಾಯಿಗಳಷ್ಟಿತ್ತು. ಆದರೆ ಈಗ ಕೇಂದ್ರ ಸರ್ಕಾರದ ನೀತಿಗಳಿಂದ ಜನರಿಗೆ ಉಪಯುಕ್ತವಾಗಿದೆ” ಎಂದು ಹೇಳಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅವರು, “ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಹಾಲಿನ ಬೆಲೆಯನ್ನು 9 ರೂಪಾಯಿಗಳಷ್ಟು ಏರಿಸಿದೆ. ಪೆಟ್ರೋಲ್, ಡೀಸೆಲ್ ಮೇಲೆ 7.50 ರೂಪಾಯಿ ತೆರಿಗೆ ಹೆಚ್ಚಿಸಿದೆ. ನೀರು, ಕಸದ ಮೇಲೂ ಶುಲ್ಕ ವಿಧಿಸುತ್ತಿದೆ. 48 ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೇಬು ಖಾಲಿ ಮಾಡಿದ್ದಾರೆ. ಇದಕ್ಕಾಗಿಯೇ ತಜ್ಞರ ಸಮಿತಿ ರಚಿಸಿದ್ದಾರೆಯೇ?” ಎಂದು ಪ್ರಶ್ನಿಸಿದರು.
“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೂ ಕೇಂದ್ರ ಸರ್ಕಾರ ಜನರಿಗೆ ಹೊರೆಯಾಗದಂತೆ ನಿರ್ಧಾರ ತೆಗೆದುಕೊಂಡಿದೆ. ಆದರೆ ರಾಜ್ಯ ಸರ್ಕಾರ ಹಾಲು, ನೀರು, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲದರ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇದು ಯಾವ ರಾಜ್ಯದ ಸರ್ಕಾರವೂ ಮಾಡದ ಕೆಲಸ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರನ್ನು ಆರ್ಥಿಕವಾಗಿ ಕುಗ್ಗಿಸುತ್ತಿದೆ” ಎಂದು ಆರೋಪಿಸಿದರು.
“48 ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರಿಗೆ ಹೊರೆ ಹೇರುತ್ತಿರುವವರು ಸಿದ್ದರಾಮಯ್ಯರೇ? ಅಥವಾ ಮೋದಿಯೇ? ಜನರೇ ಉತ್ತರಿಸಲಿ” ಎಂದು ವಿಜಯೇಂದ್ರ ತಮ್ಮ ಭಾಷಣದಲ್ಲಿ ಜನರನ್ನು ಕೇಳಿದರು. ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸುವ ಸೂಚನೆ ನೀಡಿದರು.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್6 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು7 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ6 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಸ್ಥಳೀಯ7 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಅಂತರ ರಾಜ್ಯ7 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು8 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ7 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















