Connect with us

ಬಿಗ್ ನ್ಯೂಸ್

RK Nayar | ಸುಳ್ಯ ಮೂಲದ ಗುಜರಾತ್ ನ ಉದ್ಯಮಿ ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ.ಆರ್.ಕೆ.ನಾಯರ್ ಅವರ ಬಗ್ಗೆ ಟ್ವಿಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ವಿಡಿಯೋ ಹಂಚಿಕೊಂಡ ಆನಂದ್ ಮಹೇಂದ್ರ – ಮಧೂರು ಕ್ಷೇತ್ರದಲ್ಲಿ ತುಳುವಿನಲ್ಲಿ ಮನಬಿಚ್ಚಿ ಮಾತನಾಡಿದ್ದ ನಾಯರ್

Published

on



Ad Widget

Ad Widget

Ad Widget

Ad Widget

ಮುಂಬೈ : ಸುಳ್ಯ ಮೂಲದ ಗುಜರಾತ್‌ನ ಉದ್ಯಮಿ, ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ, ಭಾರತ್ ವನದ ಜನಕ ಡಾ.ಆರ್.ಕೆ.ನಾಯರ್ (RK Nayar) ಅವರ ಬಗ್ಗೆ ಮಹೀಂದ್ರ ಗ್ರೂಪ್ ಆಫ್ ಕಂಪೆನಿಯ ಚೇರ್ಮೆನ್ ಆನಂದ್ ಮಹೇಂದ್ರ ಅವರು ಟ್ವಿಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ‘ಮಿಯಾವಾಕಿ ಅರಣ್ಯ ಎಂದರೇನು ಎಂದು ನನಗೆ ತಿಳಿದಿತ್ತು, ಆದರೆ ಡಾ. ನಾಯರ್ ಅವರ ಬಗ್ಗೆ ಮತ್ತು ಅವರು ಭಾರತದಲ್ಲಿ ವಿಶ್ವದ ಅತಿದೊಡ್ಡ ಅರಣ್ಯವನ್ನು ಹೇಗೆ ರಚಿಸಿದರು ಎಂಬುದರ ಬಗ್ಗೆ ನನಗೆ ತಿಳಿದಿರಲಿಲ್ಲ. ನಮ್ಮ ನಡುವೆ ಅಂತಹ ವೀರರಿದ್ದಾರೆ ಎಂದು ನಾನು ಕೃತಜ್ಞನಾಗಿದ್ದೇನೆ… ಎಂದು ಟ್ವಿಟ್ ಮಾಡಿರುವುದರ ಜೊತೆಗೆ ಭಾರತದಲ್ಲಿ ಡಾ.ಆರ್.ಕೆ.ನಾಯರ್ ಅವರು ರಚಿಸಿದ ಮಿಯಾವಾಕಿ ಅರಣ್ಯಗಳ ಹಾಗೂ ಆ ಕುರಿತು ಡಾ.ಆರ್.ಕೆ.ನಾಯರ್ ವಿವರಿಸುವ ವೀಡಿಯೋ ಡಾಕ್ಯುಮೆಂಟರಿಯನ್ನು ಹಂಚಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆನಂದ್ ಮಹೀಂದ್ರಾ ಅವರು ದೇಶದ ವಿವಿಧ ಹಾಗು ಹೋಗುಗಳ ಬಗ್ಗೆ ತಮ್ಮ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡುತ್ತಾರೆ. ಅವರ ಎಕ್ಸ್ ಖಾತೆಗೆ 11.5 ಮಿಲಿಯನ್ ಫಾಲೋವರ್ಸ್ ಇದ್ದಾರೆ. ನಾಯರ್ ಕುರಿತು ಅವರು ಮಾಡಿದ 2.8 ಲಕ್ಷ ವೀಮ್ಸ್ ಬಂದಿದೆ.

Ad Widget

Ad Widget <> Ad Widget

ಆನಂದ್‌ ಮಹೀಂದ್ರ ಅವರಂತಹಾ ವ್ಯಕ್ತಿಗಳು ‘ನಮ್ಮನ್ನು ಗುರುತಿಸಿ ನಮ್ಮ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ತುಂಬಾ ಸಂತಸ ತಂದಿದೆ ಎಂದು ಡಾ. ಆರ್.ಕೆ.ನಾಯರ್ ಪ್ರತಿಕ್ರಿಯಿಸಿದ್ದಾರೆ.



Ad Widget

ಜಪಾನ್‌ನ ಮಿಯಾವಾಕಿ ಮಾದರಿಯಲ್ಲಿ ಡಾ.ಆರ್.ಕೆ.ನಾಯರ್ ಅವರು 32 ಲಕ್ಷಕ್ಕೂ ಅಧಿಕ ಗಿಡಗಳನ್ನು ಬೆಳೆಸುವ ಮೂಲಕ ದೇಶದ ಅರಣ್ಯವನ್ನು ಉಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅವರು ಬೆಳೆಸಿದ ವನಗಳಿಗೆ ‘ಭಾರತ ವನ’ ಎಂದು ನಾಮಕರಣ ಮಾಡಿದ್ದಾರೆ. 2011ರಲ್ಲಿ ತನ್ನ ಪರಿಸರ ಸಂರಕ್ಷಣಾ ಅಭಿಯಾನ ಆರಂಭಿಸಿದ ಡಾ.ನಾಯರ್ ಇದುವರೆಗೆ 12 ರಾಜ್ಯಗಳಲ್ಲಿ 122 ಹೊಸ ಕಾಡುಗಳನ್ನು ನಿರ್ಮಿಸಿದ್ದಾರೆ. 32 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದಾರೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಯ ಸ್ಮೃತಿ ವನವೂ ಸೇರಿದೆ.

Ad Widget

Ad Widget

ಕುಚ್ ಭೂಕಂಪದಲ್ಲಿ ಮಡಿದವರ ನೆನಪಿಗಾಗಿ ನಿರ್ಮಿಸಿದ ಸ್ಮೃತಿ ವನದಲ್ಲಿ 5.25 ಲಕ್ಷ ಗಿಡ ಬೆಳೆಸಲಾಗಿದೆ.

ಡಾ.ಆರ್.ಕೆ.ನಾಯರ್. ಅವರು ಇದುವರೆಗೆ 122 ಕಾಡುಗಳನ್ನು ಸೃಷ್ಠಿಸಿ 32 ಲಕ್ಷಕ್ಕೂ ಅಧಿಕ ಮರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಒಂದು ಕೋಟಿ ಗಿಡ ನೆಡುವುದು ಅವರ ಗುರಿ.

ಇವರು ಇತ್ತಿಚೆಗೆ ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮನಬಿಚ್ಚಿ ಮಾತನಾಡಿದ್ದರು. ಅದರ ವಿಡಿಯೋ ಇಲ್ಲಿದೆ.

Ad Widget

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading