ಶಿಕ್ಷಣ
Mangalore University-ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟ; ಎಸ್‌ಎಂಎಸ್ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್
ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಎ.7 ರಂದು ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಎ.7 ರಂದು ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.

ದಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಲಕ್ಷ್ಮೀರವರು ಆಯ್ಕೆಯಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್ ಜೊತೆಗೆ ಗ್ಲಾಮರಸ್ ಗೇಮ್. ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್, ದೈಹಿಕ ಕ್ಷಮತೆ, ನಿರಂತರ ಅಭ್ಯಾಸ ಬಹಳ ಮುಖ್ಯ ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಜ್ಞಾನಾಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.

ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ ಡಾ| ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ಓಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್‌ನಲ್ಲಿ ಸಾಧನೆ ಮಾಡಬೇಕಾದರೆ ಬದ್ಧತೆ ಬಹಳ ಮುಖ್ಯ. ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್‌ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಬಿಗ್ ನ್ಯೂಸ್10 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ9 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ದಕ್ಷಿಣ ಕನ್ನಡ24 hours ago
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ
-
ನಿಧನ ವಾರ್ತೆ9 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ7 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ9 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ10 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ಅಂತರ ರಾಜ್ಯ8 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ

















