ಅಂತರ ರಾಜ್ಯ
Rana-ಮುಂಬೈ ದಾಳಿ ಸೂತ್ರಧಾರ ಉಗ್ರ ರಾಣಾ ಕರೆತರುವ ವಿಮಾನಕ್ಕೆ ಡಮ್ಮಿ ಕೋಡ್ ಬಳಕೆ : ತಡರಾತ್ರಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಿ : 18 ದಿನಗಳ ಕಾಲ ಕಸ್ಟಡಿಗೆ
2008ರ ಮುಂಬೈ ದಾಳಿಯ ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹಾವ್ವೂರ್ ರಾಣಾನನ್ನು ಕೋರ್ಟ್ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದೆ.
ನವದೆಹಲಿ: 2008ರ ಮುಂಬೈ ದಾಳಿಯ ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹಾವ್ವೂರ್ ರಾಣಾನನ್ನು ಕೋರ್ಟ್ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದೆ.
ಮಧ್ಯರಾತ್ರಿವರೆಗೂ ನಡೆದ ವಿಚಾರಣೆ ವೇಳೆ ಎನ್ಐಎ ಕಚೇರಿ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು.
ಹಿರಿಯ ವಕೀಲ ದಯಾನ್ ಕೃಷ್ಣನ್ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕ ನರೇಂದರ್ ಮಾನ್ ಎನ್ಐಎ ಪರ ವಾದಿಸಿದರು. ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಪಿಯೂಷ್ ಸಚ್ದೇವ ತಹವ್ವೂರ್ ರಾಣಾ ಪರ ವಾದಿಸಿದರು.
ತಹವ್ವೂರ್ ರಾಣಾನ ಯಶಸ್ವಿ ಹಸ್ತಾಂತರದ ಬಗ್ಗೆ ಮಾತನಾಡಿದ ಅಮೆರಿಕದ ವಕ್ತಾರ ಟ್ಯಾಮಿ ಬ್ರೂಸ್, ಜಾಗತಿಕ ಭಯೋತ್ಪಾದನೆಯನ್ನು ಎದುರಿಸಲು ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತಿರುವುದರಿಂದ ಅವುಗಳ ನಡುವಿನ ಕ್ರಿಯಾಶೀಲತೆಯ ಬಗ್ಗೆ ಯುಎಸ್ ಹೆಮ್ಮೆಪಡುತ್ತದೆ ಎಂದು ಹೇಳಿದರು.
ಅಮೆರಿಕದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆತಂದ ಬಳಿಕ ಎನ್ಐಎ ಬಂಧಿಸಿತು. ಬಂಧನದ ಬಳಿಕ ತಡರಾತ್ರಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಈ ವೇಳೆ ಎನ್ಐಎ ಪರ ವಕೀಲರು, ಮುಂಬೈ ದಾಳಿಯ ಪಿತೂರಿಗ ಸಂಬಂಧಿಸಿದಂತೆ ಉಗ್ರ ಹೆಡ್ಲಿ ಮತ್ತು ರಾಣಾ ನಡುವಿನ ಇಮೇಲ್ ಪುರಾವೆಗಳನ್ನು ಉಲ್ಲೇಖಿಸಿದರು. ಕ್ರಿಮಿನಲ್ ಪಿತೂರಿಯ ಭಾಗವಾಗಿ ಡೇವಿಡ್ ಹೆಡ್ಲಿ ಭಾರತಕ್ಕೆ ಭೇಟಿ ನೀಡುವ ಮೊದಲು ತಹವ್ವೂರ್ ರಾಣಾನ ಜೊತೆ ಸಂಪೂರ್ಣ ಕಾರ್ಯಾಚರಣೆಯ ಬಗ್ಗೆ ಚರ್ಚಿಸಿದ್ದ. ಹೀಗಾಗಿ ಆತನನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ 18 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿತು.
ಕ್ರಿಮಿನಲ್ ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವುದು, ಕೊಲೆ ಮತ್ತು ನಕಲಿ ದಾಖಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯಡಿಯಲ್ಲಿ ರಾಣಾ ಮೇಲೆ ಆರೋಪ ಹೊರಿಸಲಾಗಿದೆ. 64 ವರ್ಷದ ತಹವ್ವೂರ್ ರಾಣಾನನ್ನು ವಿಚಾರಣೆ ಎದುರಿಸಲು ಮುಂಬೈಗೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.
ವಿಶೇಷ ವಿಮಾನ :
ಮುಂಬೈ ದಾಳಿಕೋರ ತಹಾವ್ವೂರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ವಿಶೇಷ ವಿಮಾನದಲ್ಲಿ ಕರೆತರಲಾಗಿದೆ. ಈ ಕರೆ ತರುವ ಪ್ರಕ್ರಿಯೆ ಬಹಳ ರಹಸ್ಯವಾಗಿತ್ತು. ಈ ಕರೆ ತರುವ ಕಾರ್ಯಾಚರಣೆಗೆ ಬಳಸಲಾದ ವಿಮಾನಕ್ಕೆ ಡಮ್ಮಿ ಕೋಡ್ (Dummy Code) ನೀಡಲಾಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.
ವಿಮಾನವು ಪಾಲಂ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಇಳಿಯುವವರೆಗೂ ವಿಧ್ವಂಸಕ ಕೃತ್ಯಗಳು ನಡೆಯವ ಸಾಧ್ಯತೆ ಇದ್ದ ಕಾರಣ ಹಸ್ತಾಂತರ ಪ್ರಕ್ರಿಯೆ ಬಹಳ ಸವಾಲಿನಿಂದ ಕೂಡಿತ್ತು. ಗೃಹ ಸಚಿವಾಲಯ, NSA ಕಚೇರಿ, ಗುಪ್ತಚರ ಇಲಾಖೆ ರಾಣಾನನ್ನು ಕರೆದುಕೊಂಡು ಬರುವ ವಿಮಾನವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತ್ತು.
ವಿಮಾನವು ಪಾಲಂ ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಇಳಿಯುವವರೆಗೂ ವಿಧ್ವಂಸಕ ಕೃತ್ಯಗಳು ನಡೆಯವ ಸಾಧ್ಯತೆ ಇದ್ದ ಕಾರಣ ಹಸ್ತಾಂತರ ಪ್ರಕ್ರಿಯೆ ಬಹಳ ಸವಾಲಿನಿಂದ ಕೂಡಿತ್ತು. ಗೃಹ ಸಚಿವಾಲಯ, NSA ಕಚೇರಿ, ಗುಪ್ತಚರ ಇಲಾಖೆ ರಾಣಾನನ್ನು ಕರೆದುಕೊಂಡು ಬರುವ ವಿಮಾನವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತ್ತು.
ರಾಣಾನನ್ನು ಕರೆತಂದ ಗಲ್ಫ್ಸ್ಟ್ರೀಮ್ G550 (Gulfstream) ವಿಮಾನ ಸಾರ್ವಜನಿಕ ವಿಮಾನ ಟ್ರ್ಯಾಕರ್ಗಳಲ್ಲಿ ಪತ್ತೆಯಾಗುವುದನ್ನು ತಪ್ಪಿಸಲು ಮತ್ತು ಯಾವುದೇ ದಾಳಿ ಆಗದೇ ಇರಲು ಈ ಚಾರ್ಟರ್ಡ್ ವಿಮಾನಕ್ಕೆ ನಕಲಿ ಕೋಡ್ ನೀಡಲಾಗಿತ್ತು. ಹೀಗಾಗಿ ಯಾವ ವಿಮಾನದಲ್ಲಿ ರಾಣಾನನ್ನು ಕರೆತರಲಾಗುತ್ತಿದೆ? ಎಷ್ಟು ಗಂಟೆಗೆ ದೆಹಲಿಗೆ ವಿಮಾನ ಲ್ಯಾಂಡ್ ಆಗುತ್ತಿದೆ ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ.
ಇನ್ನೊಂದು ಮುಖ್ಯವಾದ ವಿಚಾರ ಏನೆಂದರೆ ಅಮೆರಿಕದ ಸುಪ್ರೀಂ ಕೋರ್ಟ್ ರಾಣಾನನ್ನು ಗಡಿಪಾರು ಮಾಡುವಾಗ ಹಲವಾರು ಷರತ್ತುಗಳನ್ನು ವಿಧಿಸಿತ್ತು. ಒಂದು ವೇಳೆ ರಾಣಾ ಕರೆತರುವಾಗ ಏನಾದರೂ ಹೆಚ್ಚು ಕಡಿಮೆಯಾದರೂ ಭಾರತದ ರಕ್ಷಣಾ ಸಂಸ್ಥೆಗಳಿಗೆ ಕಪ್ಪು ಚುಕ್ಕೆ ಬರುತ್ತಿತ್ತು. ಅಷ್ಟೇ ಅಲ್ಲದೇ ಭವಿಷ್ಯದಲ್ಲಿ ಬೇರೆ ದೇಶದಿಂದ ಉಗ್ರರನ್ನು ಕರೆ ತರುವ ಕಾರ್ಯಾಚರಣೆಗೂ ಅಡ್ಡಿಯಾಗುತ್ತಿತ್ತು. ಈ ಕಾರಣಕ್ಕೆ ಬಹಳ ಎಚ್ಚರಿಕೆ ವಹಿಸಿ ವಿಶೇಷ ವಿಮಾನದ ಮೂಲಕ ರಾಣಾನನ್ನು ಭಾರತಕ್ಕೆ ಕರೆತರಲಾಗಿದೆ.
ವಿಮಾನವು ಬುಧವಾರ ನಸುಕಿನ ಜಾವ ಅಮೆರಿಕದ ಲಾಸ್ ಏಂಜಲೀಸ್ನಿಂದ ಹೊರಟು ರೊಮೇನಿಯಾದಲ್ಲಿ ಪಿಟ್ ಸ್ಟಾಪ್ ನಂತರ ಸಂಜೆ 6 ಗಂಟೆ ಸುಮಾರಿಗೆ ದೆಹಲಿಯಲ್ಲಿ ಲ್ಯಾಂಡ್ ಆಯ್ತು. ವಿಮಾನವು ಸುಮಾರು 11 ಗಂಟೆಗಳ ಕಾಲ ರೊಮೇನಿಯನ್ ರಾಜಧಾನಿಯಲ್ಲಿ ನಿಂತಿತ್ತು.
ಭಾರತಕ್ಕೆ ಹಿಂದಿರುಗುವ ವಿಮಾನದಲ್ಲಿ, ರಾಣಾ ಮಧ್ಯದಲ್ಲಿ ಕುಳಿತಿದ್ದ ಮತ್ತು ಆತನ ಸುತ್ತಲಿನ ಎಲ್ಲಾ ಆಸನಗಳಲ್ಲಿ NSG ಕಮಾಂಡೋಗಳು ಇದ್ದರು. ನಂತರ ಹಿರಿಯ NIA ಅಧಿಕಾರಿಗಳು ಇದ್ದರು.
ವಿಮಾನದಲ್ಲಿ ಇರುತ್ತೆ ಟ್ರಾನ್ಸ್ಪಾಂಡರ್ ಕೋಡ್
ಆಕಾಶದಲ್ಲಿ ಹಾರಾಡುವ ಪ್ರತಿ ವಿಮಾನಕ್ಕೆ ಟ್ರಾನ್ಸ್ಪಾಂಡರ್ ಕೋಡ್ ಇರುತ್ತದೆ. ಟ್ರಾನ್ಸ್ಪಾಂಡರ್ ಕೋಡ್ ಮೂಲಕ ವಿಮಾನವನ್ನು ಗುರುತಿಸಲಾಗುತ್ತದೆ ಮತ್ತು ಟ್ರ್ಯಾಕ್ ಮಾಡಲಾಗುತ್ತದೆ. ಹಲವಾರು ಸಂಸ್ಥೆಗಳು ಈ ಕೋಡ್ ಬಳಸಿಕೊಂಡು ಆ ವಿಮಾನ ಸದ್ಯ ಯಾವ ಸ್ಥಳದಲ್ಲಿ ಹಾರಾಡುತ್ತಿದೆ ಎಂಬ ಕ್ಷಣ ಕ್ಷಣದ ಮಾಹಿತಿಯನ್ನು ಅಪ್ಡೇಟ್ ಮಾಡುತ್ತಿರುತ್ತದೆ.
ಈ ಕೋಡ್ಗಳನ್ನು ವಾಯು ಸಂಚಾರ ನಿಯಂತ್ರಣದಿಂದ (ATC) ವಿಮಾನಗಳಿಗೆ ನಿಯೋಜಿಸಲಾಗುತ್ತದೆ. ಅವುಗಳನ್ನು ವಿಮಾನದ ಟ್ರಾನ್ಸ್ಪಾಂಡರ್ನೊಂದಿಗೆ ಬಳಸಲಾಗುತ್ತದೆ. ಈ ಕೋಡ್ ಮೂಲಕವೇ ನಿರ್ದಿಷ್ಟ ವಿಮಾನವನ್ನು ಗುರುತಿಸಲು, ಅದರ ಹಾರಾಟದ ಮಾರ್ಗ, ಎತ್ತರ ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಟ್ರ್ಯಾಕ್ ಮಾಡಲಾಗುತ್ತದೆ.
ವಿಮಾನ ತರಬೇತಿ ಸಮಯ ಅಥವಾ ರಾಡಾರ್ ವ್ಯವಸ್ಥೆಗಳನ್ನು ಪರೀಕ್ಷಿಸಲು ಡಮ್ಮಿ ಕೋಡ್ಗಳನ್ನು ಬಳಸಲಾಗುತ್ತದೆ. ಆದರೆ ಅವುಗಳನ್ನು ನೈಜ ಹಾರಾಟ ಕಾರ್ಯಾಚರಣೆಗಳಿಗೆ ಬಳಸಲಾಗುವುದಿಲ್ಲ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಅಂತರ ರಾಜ್ಯ
Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.
ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.
ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.
ಏಪ್ರಿಲ್ನಲ್ಲಿ ಘೋಷಿಸಲಾಗಿದ್ದ ಎಸ್ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್ಎಸ್ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಅಂತರ ರಾಜ್ಯ
Chinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು ಆಹಾರ ವ್ಯವಸ್ಥೆಯ ಕುರಿತು ವಕೀಲರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ಢಾಕಾ: ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಹಾಗೂ ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಿಂದ ಢಾಕಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅವರ ಆರೋಗ್ಯ ಮತ್ತು ಆಹಾರ ವ್ಯವಸ್ಥೆಯ ಕುರಿತು ವಕೀಲರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
ಕಟ್ಟುನಿಟ್ಟಿನ ಸಸ್ಯಾಹಾರಿಯಾಗಿರುವ ಚಿನ್ಮಯ ಕೃಷ್ಣ ದಾಸ್ ಅವರು ತಮ್ಮ ಆಹಾರವನ್ನು ತಾವೇ ತಯಾರಿಸಿಕೊಂಡು ಸೇವಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಆದರೆ, ಢಾಕಾ ಕೇಂದ್ರ ಕಾರಾಗೃಹದಲ್ಲಿ ಈ ಸೌಲಭ್ಯ ಲಭ್ಯವಿಲ್ಲದಿರುವುದು ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅವರ ಪರ ವಕೀಲ ಅಪೂರ್ವ ಕುಮಾರ್ ಭಟ್ಟಾಚಾರ್ಯ ತಿಳಿಸಿದ್ದಾರೆ.
ಚಿನ್ಮಯ ಕೃಷ್ಣ ದಾಸ್ ಅವರು ಬ್ರಹ್ಮಚಾರಿ ಹಾಗೂ ವೈಷ್ಣವ ಪರಂಪರೆಯನ್ನು ಅನುಸರಿಸುವ ಸನ್ಯಾಸಿಯಾಗಿದ್ದು, ಕಟ್ಟುನಿಟ್ಟಿನ ಸಸ್ಯಾಹಾರ ಪದ್ಧತಿಯನ್ನು ಪಾಲಿಸುತ್ತಾರೆ. ಚಟ್ಟೋಗ್ರಾಮ್ ಕೇಂದ್ರ ಕಾರಾಗೃಹದಲ್ಲಿದ್ದಾಗ ರಂಗನಾಥನ್ ಬ್ರಹ್ಮಚಾರಿ ಎಂಬ ಮತ್ತೊಬ್ಬ ಆರೋಪಿಯು ಅವರಿಗೆ ಅಡುಗೆ ಮಾಡಲು ನೆರವಾಗುತ್ತಿದ್ದರು. ಇದರಿಂದ ಸುಮಾರು ಎರಡು ವರ್ಷಗಳ ಬಂಧನದ ಅವಧಿಯಲ್ಲೂ ತಮ್ಮ ಆಹಾರ ಪದ್ಧತಿಯನ್ನು ಮುಂದುವರಿಸಲು ಸಾಧ್ಯವಾಗಿತ್ತು ಎಂದು ವಕೀಲರು ವಿವರಿಸಿದ್ದಾರೆ.
ಇದಲ್ಲದೆ, ಚಿನ್ಮಯ ಕೃಷ್ಣ ದಾಸ್ ಅವರು ಗಂಭೀರ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಆಹಾರವನ್ನು ಸೇವಿಸಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ ಎಂದು ವಕೀಲರು ಹೇಳಿದ್ದಾರೆ.
ಢಾಕಾ ಕೇಂದ್ರ ಕಾರಾಗೃಹದಲ್ಲಿ ಸ್ವತಃ ಅಡುಗೆ ಮಾಡಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ ಸದ್ಯ ಅವರು ಹಣ್ಣುಗಳನ್ನು ಮಾತ್ರ ಸೇವಿಸುತ್ತಿದ್ದಾರೆ. “ಅವರಿಗೆ ಅಗತ್ಯವಾದ ಆಹಾರ ಸಿಗುತ್ತಿಲ್ಲ. ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂಬ ಆತಂಕ ನನಗಿದೆ” ಎಂದು ಅಪೂರ್ವ ಕುಮಾರ್ ಭಟ್ಟಾಚಾರ್ಯ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಸೋಮವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಚಿನ್ಮಯ ಕೃಷ್ಣ ದಾಸ್ ಅವರನ್ನು ಚಟ್ಟೋಗ್ರಾಮ್ನಿಂದ ಢಾಕಾಗೆ ಕರೆತರಲಾಗಿದೆ. ಅವರನ್ನು ಕರೆದೊಯ್ಯುತ್ತಿದ್ದ ವಾಹನ ಬೆಳಗ್ಗೆ ಸುಮಾರು 10 ಗಂಟೆಗೆ ಢಾಕಾ ಕೇಂದ್ರ ಕಾರಾಗೃಹ ತಲುಪಿತ್ತು.
ಚಟ್ಟೋಗ್ರಾಮ್ ನ್ಯಾಯಾಲಯದ ಗಲಭೆ ಪ್ರಕರಣದ ಹಿನ್ನೆಲೆ
ಸನಾತನ ಜಾಗರಣ ಜೋಟ್ ಸಂಘಟನೆಯ ವಕ್ತಾರರಾಗಿರುವ ಚಿನ್ಮಯ ಕೃಷ್ಣ ದಾಸ್ ಅವರನ್ನು 2024ರ ನವೆಂಬರ್ 25ರಂದು ಢಾಕಾದಲ್ಲಿ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.
2024ರ ಅಕ್ಟೋಬರ್ 31ರಂದು ಈ ಪ್ರಕರಣ ದಾಖಲಾಗಿತ್ತು. ಚಟ್ಟೋಗ್ರಾಮ್ನ ಚಂದ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹ್ರಾ ವಾರ್ಡ್ನ ಆಗಿನ ಬಿಎನ್ಪಿ ಪ್ರಧಾನ ಕಾರ್ಯದರ್ಶಿ ಫಿರೋಜ್ ಖಾನ್ ದೂರು ದಾಖಲಿಸಿದ್ದರು. ರಾಷ್ಟ್ರೀಯ ಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಚಿನ್ಮಯ ಕೃಷ್ಣ ದಾಸ್ ಸೇರಿದಂತೆ ಒಟ್ಟು 19 ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಬಳಿಕ ಫಿರೋಜ್ ಖಾನ್ ಅವರನ್ನು ಬಿಎನ್ಪಿ ಪಕ್ಷದ ಹುದ್ದೆಯಿಂದ ಬಿಡುಗಡೆಗೊಳಿಸಿತ್ತು.
2024ರ ನವೆಂಬರ್ 26ರಂದು ಚಿನ್ಮಯ ಕೃಷ್ಣ ದಾಸ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಚಟ್ಟೋಗ್ರಾಮ್ ನ್ಯಾಯಾಲಯದ ಆವರಣದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ವಕೀಲ ಸೈಫುಲ್ ಇಸ್ಲಾಂ ಅವರ ಮೇಲೆ ಹಲ್ಲೆ ನಡೆಸಿ, ಹರಿತವಾದ ಆಯುಧಗಳಿಂದ ಹತ್ಯೆ ಮಾಡಲಾಗಿತ್ತು.
ಈ ಸಂಬಂಧ ಮೃತ ವಕೀಲರ ತಂದೆ ಜಮಾಲ್ ಉದ್ದೀನ್ ಅವರು 31 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು. ಇದರ ಜೊತೆಗೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ವಕೀಲರು ಹಾಗೂ ನ್ಯಾಯಾಲಯಕ್ಕೆ ಬಂದವರ ಮೇಲೆ ಹಲ್ಲೆ ಮತ್ತು ಸ್ಫೋಟಕ ವಸ್ತುಗಳ ಬಳಕೆಗೆ ಸಂಬಂಧಿಸಿದಂತೆ ಇನ್ನೂ ಐದು ಪ್ರಕರಣಗಳು ದಾಖಲಾಗಿದ್ದವು.
2025ರ ಜುಲೈ 1ರಂದು ತನಿಖಾಧಿಕಾರಿಗಳು ಚಟ್ಟೋಗ್ರಾಮ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಚಿನ್ಮಯ ದಾಸ್ ಸೇರಿದಂತೆ 38 ಮಂದಿಯ ಹೆಸರುಗಳನ್ನು ಉಲ್ಲೇಖಿಸಿದ್ದರು. ಆರೋಪಪಟ್ಟಿಯ ಅಂಶಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೂರುದಾರರು ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು.
2025ರ ಆಗಸ್ಟ್ 25ರಂದು ನ್ಯಾಯಾಲಯವು ಸುಕಾಂತ ದತ್ತ ಸೇರಿದಂತೆ ಒಟ್ಟು 39 ಆರೋಪಿಗಳ ವಿರುದ್ಧದ ಆರೋಪಪಟ್ಟಿಯನ್ನು ಅಂಗೀಕರಿಸಿತು. ಸದ್ಯ ಪ್ರಕರಣದ ವಿಚಾರಣೆಯು ಚಟ್ಟೋಗ್ರಾಮ್ ವಿಭಾಗೀಯ ತ್ವರಿತ ವಿಚಾರಣಾ ನ್ಯಾಯಮಂಡಳಿಯಲ್ಲಿ ನಡೆಯುತ್ತಿದ್ದು, ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ.
ಚಿನ್ಮಯ ಕೃಷ್ಣ ದಾಸ್ ಅವರ ಜೈಲು ಸ್ಥಳಾಂತರದ ಬೆನ್ನಲ್ಲೇ ಅವರ ಆಹಾರ ಪದ್ಧತಿ, ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಢಾಕಾ ಕೇಂದ್ರ ಕಾರಾಗೃಹದಲ್ಲಿ ಅವರಿಗೆ ಅಗತ್ಯವಾದ ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















