ಬಿಗ್ ನ್ಯೂಸ್
G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ.
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ.
ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ 25,000/- ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಹಾಗೂ ಆಕರ್ಷಕ ಉಡುಗೊರೆಗಳನ್ನು ಪಡೆದುಕೊಳ್ಳುವ ಅವಕಾಶವಿದೆ.
ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಆಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.
ಪುರಾತನ ಆಭರಣಗಳ ವಿಭಾಗ “ಪ್ರಾಚಿ”ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆ್ಯಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. ನೂತನ ಆ್ಯಂಟಿಕ್ “ಪ್ರಾಚಿ ಎಲೈಟ್” ವಿಭಾಗದಲ್ಲಿ ಅತ್ಯುತ್ತಮ ಕೆಲಸಗಾರಿಕೆ ಹಾಗೂ ಹೊಸ ವಿನ್ಯಾಸದಿಂದ ಕಣ್ಮನ ಸೆಳೆಯುವ ಲೈಟ್ ವೈಟ್ ಆಭರಣಗಳು ಲಭ್ಯವಿದೆ.
ಅದೇ ರೀತಿ “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 2000ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಬುತ ವಜ್ರಾಭರಣಗಳ ಸಂಗ್ರಹವಿದೆ. “ಪಾರ್ಥ” ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆ್ಯಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.
ವಿಶ್ವಾಸ, ಪರಿಶುದ್ದತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Uncategorized12 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized9 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized11 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized14 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized12 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized11 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















