ಸ್ಥಳೀಯ
Pramodadevi-4000 ಎಕ್ರೆಗೂ ಅಧಿಕ ಭೂಮಿಯನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯಾರ್ ಡಿಸಿಗೆ ಪತ್ರ : ಇಡೀ ಗ್ರಾಮವೇ ಖಾಲಿಯಾಗುವ ಭೀತಿಯಲ್ಲಿ ಎರಡು ಗ್ರಾಮಸ್ಥರು – ಜಿಲ್ಲಾಧಿಕಾರಿಗೆ ಮನವಿ
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು 4,000 ಎಕರೆಗೂ ಅಧಿಕ ಭೂಮಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಪತ್ರ ಬರೆದಿರುವುದು ಚಾಮರಾಜನಗರ ತಾಲೂಕಿನ ಹಲವು ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ.
ಚಾಮರಾಜನಗರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು 4,000 ಎಕರೆಗೂ ಅಧಿಕ ಭೂಮಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಪತ್ರ ಬರೆದಿರುವುದು ಚಾಮರಾಜನಗರ ತಾಲೂಕಿನ ಹಲವು ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ. ತಮ್ಮ ಜೀವನಾಧಾರವಾಗಿರುವ ಭೂಮಿಯು ಕಂದಾಯ ಗ್ರಾಮವಾಗುವ ಬದಲು ರಾಜಮಾತೆಯ ಹೆಸರಿಗೆ ಖಾತೆಯಾಗುವ ಭೀತಿಯಿಂದ ಸಿದ್ದಯ್ಯನಪುರ ಮತ್ತು ಅಟ್ಟಗುಳಿಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ, ಕಳೆದ 60-70 ವರ್ಷಗಳಿಂದ ಈ ಭೂಮಿಯನ್ನೇ ನಂಬಿಕೊಂಡು ಅವರು ಜೀವನ ಸಾಗಿಸುತ್ತಿದ್ದಾರೆ. “ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ನಮಗೆ 1,035 ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದರು. 1982ರಲ್ಲಿ ಆಗಿನ ಸಚಿವ ಬಿ. ರಾಚಯ್ಯ ಅವರ ಕಾಲದಲ್ಲಿ ಸರ್ಕಾರವು ಸಾಗುವಳಿ ಚೀಟಿಗಳನ್ನೂ ವಿತರಿಸಿತ್ತು. ಆದರೆ, ಈಗ ಪ್ರಮೋದಾದೇವಿ ಒಡೆಯರ್ ಅವರು ನಮ್ಮ ಗ್ರಾಮದ ಸರ್ವೇ ಸಂಖ್ಯೆಗಳನ್ನು ಉಲ್ಲೇಖಿಸಿ ಭೂಮಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಪತ್ರ ಬರೆದಿದ್ದಾರೆ,” ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದರು.
ಸಿದ್ದಯ್ಯನಪುರ ಗ್ರಾಮದಲ್ಲಿ 4,000ಕ್ಕೂ ಅಧಿಕ ಜನಸಂಖ್ಯೆಯಿದ್ದು, ಭೂಮಿಯನ್ನು ಪ್ರಮೋದಾದೇವಿಯವರಿಗೆ ಖಾತೆ ಮಾಡಿದರೆ ಇಡೀ ಗ್ರಾಮವನ್ನೇ ಖಾಲಿ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಅವರು ಸರ್ಕಾರವನ್ನು ಕೋರಿದ್ದಾರೆ.
ಕಂದಾಯ ಗ್ರಾಮ ಘೋಷಣೆಗೆ ಸಿದ್ಧತೆ
ಗ್ರಾಮಸ್ಥರ ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್, “ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಈಗಾಗಲೇ ಜಂಟಿ ಸರ್ವೇ ನಡೆಸಲಾಗಿದ್ದು, ಈ ಭೂಮಿಯನ್ನು ಸರ್ಕಾರಿ ಜಾಗವೆಂದು ದೃಢಪಡಿಸಲಾಗಿದೆ. ಇದನ್ನು ಕಂದಾಯ ಗ್ರಾಮವಾಗಿ ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ,” ಎಂದು ತಿಳಿಸಿದರು. ಪ್ರಮೋದಾದೇವಿ ಒಡೆಯರ್ ಅವರು ತಕರಾರು ಅರ್ಜಿ ಸಲ್ಲಿಸಿದ್ದರೂ, ಯಾವುದೇ ಪೂರಕ ದಾಖಲೆಗಳನ್ನು ಒದಗಿಸಿಲ್ಲ ಮತ್ತು ನ್ಯಾಯಾಲಯದ ಆದೇಶವೂ ಇಲ್ಲ. “ಆದ್ದರಿಂದ, ಗ್ರಾಮಸ್ಥರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ನಿಮ್ಮ ಗ್ರಾಮಗಳು ಶೀಘ್ರದಲ್ಲೇ ಕಂದಾಯ ಗ್ರಾಮಗಳಾಗಿ ಘೋಷಣೆಯಾಗಲಿವೆ,” ಎಂದು ಅವರು ಭರವಸೆ ನೀಡಿದರು.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
ಸ್ಥಳೀಯ7 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್7 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಂತರ ರಾಜ್ಯ24 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಪರಾಧ6 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ5 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ5 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್5 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಮಂಗಳೂರು23 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















