ಶಿಕ್ಷಣ
Akshaya-ಅಕ್ಷಯ ಕಾಲೇಜಿನಲ್ಲಿ ಅಂತರ್ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ
ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ ಉದ್ಘಾಟನೆ ನಡೆಯಿತು.
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ ಉದ್ಘಾಟನೆ ಯನ್ನು ಶ್ರೀ ಅರುಣ್ ನಾಗೇ ಗೌಡ ಡಿ.ವೈ.ಎಸ್. ಪಿ ಪುತ್ತೂರು ವಿಭಾಗ ಇವರು ನಿರ್ವಹಿಸಿ ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ ನಿಭಾಯಿಸಿ ತಮ್ಮ ಪೋಷಕರಿಗೆ, ತಮಗೆ ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ ಮಾತ್ರವಲ್ಲ ಸಮಾಜದಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಾಲ್ಟರ್ ನಂದಲಿಕೆ ಸಂಸ್ಥಾಪಕರು ಡೈಜಿ ವರ್ಲ್ಡ್ ಮೀಡಿಯಾ ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಅಂಕ ಗಳಿಕೆ ಮತ್ತು ಸರ್ಟಿಫಿಕೇಟ್ ಗಿಂತಲೂ ತಾವು ಉತ್ಸಾಹಿಯಾಗಿ ಯಾವ ವಲಯಗಳಲ್ಲಿ ತಮ್ಮ ಇಚ್ಛೆಗೆ ಅನುಸಾರವಾಗಿ ತಮ್ಮನ್ನು ತಾವು ಹೇಗೆ ಧನಾತ್ಮಕ ವಾಗಿ ತೊಡಗಿಸಿಕೊಂಡಿದ್ದೀರಿ ಎಂಬುದು ಮುಖ್ಯ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಸಾಧಿಸುವ ಛಲ ಹೊಂದಿರಬೇಕು ಎಂದು ವಿದ್ಯಾರ್ಥಿ ಗಳಿಗೆ ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕುಮಾರಿ ಸಮನ್ವಿ ರೈ ಗಾಯಕಿ ಜೀ ಕನ್ನಡ ಸ. ರೀ ಗ. ಮ.ಪ 2020 ನೇ ಆವೃತ್ತಿ. ಇವರು ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಯಶಸ್ಸಿನ ಹಾದಿಯನ್ನು ತಿಳಿಸಿ “ಮರಳಿ ಯತ್ನವ ಮಾಡು, ಗುರಿ ತಲುಪುವ ತನಕ” ಸತತ ಪ್ರಯತ್ನವು ಫಲ ವನ್ನು ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅತಿಥಿಯಾಗಿ ಭಾಗವಹಿಸಿದ ರಾಹುಲ್ ಅಮೀನ್ ನಿರ್ದೇಶಕ ಮತ್ತು ನಟ ( ತುಳು, ಕನ್ನಡ) ಯುವ ಜನತೆ ದೇಶದ ಸಂಪತ್ತು ಮತ್ತು ಭವಿಷ್ಯ. ಈ ನಿಟ್ಟಿನಲ್ಲಿ ಕರ್ತವ್ಯ ಪ್ರಜ್ಞೆಯಿಂದ , ಸಮಯ ಪ್ರಜ್ಞೆಯಿಂದ ಜೀವನದ ಪ್ರತಿ ಹೆಜ್ಜೆ ಆನಂದಮಯವಾಗಿರ ಬೇಕು ಮತ್ತು ಸಮಾಜಕ್ಕೆ ಆಸರೆಯಾಗಿರಬೇಕು ಯುವ ಜನತೆಗೆ ಸ್ಫೂರ್ತಿ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಅಧ್ಯಕ್ಷರಾದ ಶ್ರೀಯುತ ಜಯಂತ್ ನಡುಬೈಲ್ ಮಾತನಾಡಿ ಕಾರ್ಯಕ್ರಮದಲ್ಲಿ ವಿವಿಧ ವಲಯಗಳಲ್ಲಿ ಸಾಧನೆ ಯನ್ನು ಮಾಡಿದ ವ್ಯಕ್ತಿ ಗಳನ್ನು ಆಹ್ವಾನಿಸುವ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಪ್ರೇರಣೆ ಯಾಗಲಿ , ಸಾಧಕರ ನಡೆದು ಬಂದ ದಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವಾಗಲಿ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ. ಎ , ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಂಚಾಲಕರಾದ ಶ್ರೀ ಹರಿಶ್ಚಂದ್ರ ಮತ್ತು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಜೀವನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕುಮಾರಿ ಪ್ರಕೃತಿ ಮತ್ತು ಬಳಗದವರು ಪ್ರಾರ್ಥಿಸಿದರು. ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಂಯೋಜಕರಾಗಿರುವ ಕುಮಾರಿ ಶ್ರುತ ರವರು ಸ್ವಾಗತಿಸಿ, ಶ್ರೀ ಗಂಧರ್ವ ರವರ ವಂದಿಸಿದರು. ಕಾರ್ಯಕ್ರಮವನ್ನು ಸಹ ಖಜಾಂಜಿ ಕುಮಾರಿ ಟೀನಾ ನಿರೂಪಿಸಿದರು.

ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”ರಲ್ಲಿ ಸುಮಾರು 20 ಕಾಲೇಜುಗಳು ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನವನ್ನು ನನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ, ದ್ವಿತೀಯ ಸ್ಥಾನವನ್ನು ತ್ರಿಷಾ ಕಾಲೇಜು, ಕಟಪಾಡಿ, ಉಡುಪಿ, ತೃತೀಯ ಸ್ಥಾನವನ್ನು ವಿವೇಕಾನಂದ ಬಿ.ಇಡಿ ಕಾಲೇಜು, ಪುತ್ತೂರು ಪಡೆದುಕೊಂಡರು.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.
ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.
ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ್ಯಕ್ರಮವನ್ನು ನಿರೂಪಿಸಿದರು.
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ6 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು7 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ7 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















