ಅಪರಾಧ
Bengaluru-ಬೆಂಗಳೂರು: ನಡುಬೀದಿಯಲ್ಲಿ ಯುವತಿ ಮೇಲೆ ದೌರ್ಜನ್ಯ: ಕೇರಳದಲ್ಲಿ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು
ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ, ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಸುಮಾರು 10 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸುವಲ್ಲಿ ಸುದ್ದಗುಂಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ, ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಸುಮಾರು 10 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸುವಲ್ಲಿ ಸುದ್ದಗುಂಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿದ್ದಾಪುರದ ಗುಲ್ಬರ್ಗಾ ಕಾಲೋನಿಯ ಸಂತೋಷ್ ಕುಮಾರ್ (26) ಬಂಧಿತ ಆರೋಪಿ. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಸುಮಾರು ಹತ್ತು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಏ.3ರಂದು ತಡರಾತ್ರಿ 1.55ರ ಸುಮಾರಿಗೆ ಆರೋಪಿ ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ನ 1ನೇ ಕ್ರಾಸ್ನಲ್ಲಿ ಘಟನೆ ನಡೆದಿತ್ತು. ತಮಿಳುನಾಡು ಮೂಲದ ಸಂತೋಷ್ ಕುಮಾರ್, ಸಿದ್ದಾಪುರದ ಗುಲ್ಬರ್ಗಾ ಕಾಲೋನಿಯಲ್ಲಿ ವಾಸವಾಗಿದ್ದ. ಬೆಳ್ಳಂದೂರಿನಲ್ಲಿರುವ ಶಕ್ತಿ ಮೋಟಾರ್ಸ್ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಆರೋಪಿ ಮದ್ಯದ ಅಮಲಿನಲ್ಲಿ ಏ.3ರಂದು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ ನ 1ನೇ ಕ್ರಾಸ್ನಲ್ಲಿ ತಡರಾತ್ರಿ 1.55ಕ್ಕೆ ಸ್ನೇಹಿತೆ ಜತೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ.
ಕಾಮುಕನ ಕೃತ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ಗೌಡ ಎಂಬವರು ನೀಡಿದ ದೂರಿನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದರು.
ತನ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ, ಹೊಸೂರು ಮಾರ್ಗವಾಗಿ ತಮಿಳುನಾಡಿನ ಸೇಲಂಗೆ ಹೋಗಿದ್ದ. ಅಲ್ಲಿಂದ ಕೇರಳದ ಕೊಝಿಕೋಡ್ ಹೋಗಿದ್ದ. ಅಂತಿಮವಾಗಿ ಅಲ್ಲಿನ ಗ್ರಾಮವೊಂದರಲ್ಲಿ ವಾಸವಾಗಿದ್ದ. ಪೊಲೀಸರ ದಾರಿ ತಪ್ಪಿಸುವ ಉದ್ದೇಶದಿಂದ ನಿರಂತರವಾಗಿ ಪ್ರಯಾಣ ಮಾಡುತ್ತಿದ್ದ. ಆತನ ಮೊಬೈಲ್ ನೆಟ್ವರ್ಕ್ ಆಧರಿಸಿ ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿ ಶೋರೂಮ್ನಲ್ಲಿ ಚಾಲಕನಾಗಿದ್ದರಿಂದ ಮಾಸಿಕ 25 ಸಾವಿರ ರೂ. ವೇತನ ಬರುತ್ತಿತ್ತು. ಏ.3ರಂದು ಆರೋಪಿಗೆ ವೇತನ ಆಗಿತ್ತು. ಕೃತ್ಯ ಎಸಗಿದ ಬಳಿಕ ಅದೇ ಹಣದಿಂದ ತಮಿಳುನಾಡು, ಕೇರಳದಲ್ಲಿ ಸುತ್ತಾಡಿದ್ದಾನೆ. ಪೊಲೀಸರ ದಾರಿ ತಪ್ಪಿಸಲು ನಿರಂತರವಾಗಿ ಪ್ರಯಾಣ ಮಾಡುತ್ತಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಬಸ್ ಮಾರ್ಗದಲ್ಲಿ ಮೊದಲು ಹೊಸೂರಿಗೆ ಹೋಗಿದ್ದ. ಅಲ್ಲಿಂದ ಸೇಲಂಗೆ, ಸೇಲಂನಿಂದ ಕೋಝಿಕೋಡ್ಗೆ ಹೋಗಿದ್ದ. ಕೋಝಿಕೋಡ್ ಸಮೀಪದ ನಡುವಿನಂಗಡಿ ಎಂಬ ಹಳ್ಳಿಯಲ್ಲಿ ಅಡಗಿಕೂತಿದ್ದ. ವಿಶೇಷ ತಂಡದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಚಾಲಕನ ಕೆಲಸ ಮಾಡುವಾಗ ಈ ಹಿಂದೆ ಪರಿಚಿತರಾಗಿದ್ದ ಇತರೆ ಚಾಲಕರ ನೆರವು ಪಡೆದು ಅವರ ರೂಮ್ಗಳಲ್ಲಿ ಉಳಿದುಕೊಂಡಿದ್ದ. ಬೆಂಗಳೂರಿನಲ್ಲಿ ಕಡಿಮೆ ಸಂಬಳದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟಿದ್ದೇನೆ. ಇನ್ಮುಂದೆ ಇಲ್ಲಿಯೇ ಕೆಲಸ ಮಾಡುವುದಾಗಿ ಅವರ ಬಳಿ ಸುಳ್ಳು ಹೇಳಿ ಉಳಿದುಕೊಂಡಿರುವುದು ತನಿಖೆಯಿಂದ ತಿಳಿದು ಬಂದಿದೆ.
ಪ್ರಕರಣವೇನು?
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ನ 1ನೇ ಕ್ರಾಸ್ನಲ್ಲಿ ಏ.3ರ ಮಧ್ಯರಾತ್ರಿ 1.55ಕ್ಕೆ ಇಬ್ಬರು ಯುವತಿಯರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಯುವತಿಯರು ಜೋರಾಗಿ ಕಿರುಚಿದ ಪರಿಣಾಮ ಆತ ಪರಾರಿಯಾಗಿದ್ದ. ಆಗ್ನೆಯ ವಿಭಾಗದ ಡಿಸಿಪಿ ಸಾರಾಫಾತೀಮಾ, ಮೈಕೋ ಲೇಔಟ್ ಉಪವಿಭಾಗದ ಎಸಿಪಿ ಶಿವಶಂಕರ್ ರೆಡ್ಡಿ ಮಾರ್ಗದರ್ಶನದಲ್ಲಿ ಸುದ್ದಗುಂಟೆಪಾಳ್ಯ ಠಾಣಾಧಿಕಾರಿ ರಮೇಶ್ ಎಸ್. ಬಸವನಗೌಡ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
ಅಪರಾಧ
Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್ನಲ್ಲಿ ‘INDIA STORES FOR YOU’ ಎಂಬ ಆನ್ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.
ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.
ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.
ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.
ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಅಪರಾಧ
Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಪಟ್ಟಣಗೆರೆಯ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್ನಲ್ಲಿ ಹಾಜರಿದ್ದರು ಎನ್ನಲಾಗಿದೆ.
ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.
‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಈಗಾಗಲೇ ಪಟ್ಟಣಗೆರೆ ಶೆಡ್ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.
ಧನ್ವಿರ್ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.
ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
-
ಕ್ರೈಂ15 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ15 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು14 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ13 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ9 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್15 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ9 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ14 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
















