ಎಕ್ಸ್‌ ಪ್ರೆಸ್‌ ವೇನ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ ಬಳಿ ನಡೆದ ಘಟನೆಯಲ್ಲಿ ಕಾರುಗಳು ಡಿಕ್ಕಿ ಹೊಡೆದ […]" /> ಎಕ್ಸ್‌ ಪ್ರೆಸ್‌ ವೇನ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ ಬಳಿ ನಡೆದ ಘಟನೆಯಲ್ಲಿ ಕಾರುಗಳು ಡಿಕ್ಕಿ ಹೊಡೆದ […]"> Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮೂರು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಮೃತ-10 ಮಂದಿಗೆ ಗಂಭೀರ ಗಾಯ - Nikhara News | Kannada News Website
Connect with us

ಸ್ಥಳೀಯ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮೂರು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಮೃತ-10 ಮಂದಿಗೆ ಗಂಭೀರ ಗಾಯ

Published

on

Ad Widget

Ad Widget

Ad Widget

Ad Widget

ಮಂಗಳವಾರ ರಾತ್ರಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮೂರು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರುಗಳು ನಜ್ಜುಗುಜ್ಜಾಗಿ, ಒಬ್ಬರು ಮೃತಪಟ್ಟಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ.

Ad Widget

Ad Widget

Ad Widget

Ad Widget

ರಾಮನಗರ: ಮಂಗಳವಾರ ರಾತ್ರಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಮೂರು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರುಗಳು ನಜ್ಜುಗುಜ್ಜಾಗಿ ಸಾವು ನೋವು ವರದಿಯಾಗಿವೆ.

Ad Widget

Ad Widget alt="Ad Widget"/>

Ad Widget

ಎಕ್ಸ್‌ ಪ್ರೆಸ್‌ ವೇನ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ ಬಳಿ ನಡೆದ ಘಟನೆಯಲ್ಲಿ ಕಾರುಗಳು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಒಬ್ಬರು ಮೃತಪಟ್ಟಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಬಳಿಕ ಕೆಲ ಕಾಲ ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು.

Ad Widget

Ad Widget <> Ad Widget

ಅಪಘಾತ ಸಂಭವಿಸಿದ್ದೇಗೆ?
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗ್ತಿದ್ದ ಹೋಂಡಾ ಸಿವಿಕ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಡಿವೈಡರ್‌ ದಾಟಿದ ಹೋಂಡಾ ಸಿವಿಕ್ ಕಾರು (ಮೈಸೂರಿನಿಂದ ಬೆಂಗಳೂರಿನ ಕಡೆಗೆ) ಎದುರು ಬರ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಅತಿ ವೇಗದ ಚಾಲನೆ ಹಿನ್ನೆಲೆ ನಿಯಂತ್ರಣ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಡಿಕ್ಕಿ ರಭಸಕ್ಕೆ ಕೇರಳ ನೋಂದಣಿಯ ಸ್ವಿಫ್ಟ್ ಡಿಸೈರ್ ಹಾಗೂ ವ್ಯಾಗನರ್ ಕಾರು ಸಂಪೂರ್ಣ ಜಖಂ ಆಗಿವೆ. ವ್ಯಾಗನರ್ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚನ್ನಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

ಪಡುಪಣಂಬೂರು ಬಳಿ ಸರಣಿ ಅಪಘಾತ
ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್‌ ಬಂಕ್‌ ಬಳಿಯ ಹೆದ್ದಾರಿ ಜಂಕ್ಷನ್‌ನಲ್ಲಿಇನೋವಾ ಕಾರು, ಟಿಪ್ಪರ್‌ ಮತ್ತು ಬೈಕ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.

ಬೈಕ್‌ ಸವಾರರಾದ ಮೂಲ್ಕಿ ಸಮೀಪದ ಕೆ.ಎಸ್‌. ರಾವ್‌ ನಗರ ಲಿಂಗಪ್ಪಯ್ಯ ಕಾಡು ನಿವಾಸಿಗಳಾದ ಭೂತಾಳ ಸಿದ್ದ (32) ಮತ್ತು ಮಲ್ಕಪ್ಪ(24) ಗಾಯಗೊಂಡವರು. ಭಟ್ಕಳದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಪಡುಪಣಂಬೂರು ಪೆಟ್ರೋಲ್‌ ಬಂಕ್‌ ಬಳಿಯ ಹೆದ್ದಾರಿ ಜಂಕ್ಷನ್‌ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಬ್ಬಿಣದ ತಡೆ ಬೇಲಿಗೆ ಡಿಕ್ಕಿ ಹೊಡೆಯಿತು. ಬಳಿಕ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ ಪೆಟ್ರೋಲ್‌ ಬಂಕ್‌ನಿಂದ ಹೆದ್ದಾರಿ ಯೂ ಟರ್ನ್‌ ಮಾಡುತ್ತಿದ್ದ ಟಿಪ್ಪರ್‌ಗೂ ಡಿಕ್ಕಿ ಹೊಡೆಯಿತು.

ಅಪಘಾತದ ರಭಸಕ್ಕೆ ಬೈಕ್‌ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಇನೋವಾ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ ಹಾಗೂ ಹಿಂಬದಿಯ ಟಯರ್‌ಗಳು ಪಂಕ್ಚರ್‌ ಆಗಿದೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಟೋಯಿಂಗ್‌ ವಾಹನದ ಮೂಲಕ ವಾಹನಗಳನ್ನು ತೆರವುಗೊಳಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.

Ad Widget

Ad Widget <> Ad Widget

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!