ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಯಿತು.
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಯಿತು.
ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ರೈ ಪ್ರಧಾನ ಕಾರ್ಯದರ್ಶಿಯಾದ ಅಜೇಯ ಪೈ, ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಸದಸ್ಯರಾದ ಈಶ್ವರ ಚಂದ್ರ, ಪ್ರಾಂಶುಪಾಲರಾದ ಮುರಳೀಧರ್ ಯಸ್ ಅನೇಕ ವಿದ್ಯಾರ್ಥಿಗಳು ಉಪನ್ಯಾಸಕ ಉಪನ್ಯಾಸಕೇತರ ವರ್ಗದವರು ಭಾಗವಹಿಸಿದ್ದರು.
ಮೊದಲಿಗೆ ಪ್ರಾಂಶುಪಾಲರಾದ ಮುರಳೀಧರ್ ಯಸ್ ತಮ್ಮ ಪ್ರಾಸ್ತವಿಕ ಭಾಷಣದಲ್ಲಿ ಮಾತನಾಡುತ್ತಾ “1986 ರಲ್ಲಿ ಶ್ರೀಯುತ ಉರಿ ಮಜಲು ರಾಮ್ ಭಟ್ ರವರ ನೇತೃತ್ವದಲ್ಲಿ ಪ್ರಾರಂಭವಾದ ಈ ಸಂಸ್ಥೆಯಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿ ದೇಶವಿದೇಶಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಾಗೂ ತಮ್ಮದೇ ಆದ ಉದ್ಯಮೆಗಳನ್ನು ಕೈಗೊಂಡು ಉತ್ತಮ ಜೀವನವನ್ನು ನಡೆಸುತ್ತಿದ್ದಾರೆ ನೀವೆಲ್ಲರೂ ಈ ವಿದ್ಯಾಸಂಸ್ಥೆಯೊಂದಿಗೆ ಕೈಜೋಡಿಸಿ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಬೇಕು ನಿಮ್ಮ ಬರುವಿಕೆ ನಮಗೆ ಸಂತೋಷ ಕೊಟ್ಟಿದೆ” ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರೂ ತಮ್ಮ ಭಾವನಾತ್ಮಕ ಅನುಭವಗಳನ್ನು ಹಂಚಿಕೊಂಡರು.
ಅರುಣ್ ಕುಮಾರ್ ಅಧ್ಯಕ್ಷರು ಹಿರಿಯ ವಿದ್ಯಾರ್ಥಿ ಸಂಘ ಇವರು ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಸೇರಿಸಿ ಜೋಡಿಸುವ ಕೆಲಸವನ್ನು ಮಾಡೋಣ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ಹಿರಿಯ ವಿದ್ಯಾರ್ಥಿಗಳನ್ನು ಜೋಡಿಸಿಕೊಂಡು ಸಂಸ್ಥೆಯನ್ನು ಬೆಳೆಸೋಣ”ಎಂದು ಕರೆಕೊಟ್ಟರು. ಮುಖ್ಯ ಅತಿಥಿಗಳಾದ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಮಾತನಾಡುತ್ತಾ “ಸರಿಯಾದ ವೇದಿಕೆ ಹಾಗೂ ಪೂರಕ ವಾತಾವರಣದೊಂದಿಗೆ ಮಾಡುವ ಕೆಲಸದಲ್ಲಿ ಪೂರ್ಣವಿಶ್ವಾಸವನ್ನು ಇಟ್ಟುಕೊಂಡು ಕೆಲಸ ಮಾಡೋಣ ಸಂಸ್ಥೆಯ ಮೇಲೆ ಗೌರವವನ್ನು ಇಟ್ಟು ಅದರ ಉನ್ನತಿಗೆ ಶ್ರಮಿಸೋಣ” ಎಂದರು.
ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಹಿರಿಯ ವಿದ್ಯಾರ್ಥಿನಿ ಹಾಗೂ ಹಿರಿಯ ಉಪನ್ಯಾಸಕಿ ಜಯಲಕ್ಷ್ಮಿ ಪ್ರಾರ್ಥಿಸಿದರು. ವಿನ್ಯಾಸ್ ಸ್ವಾಗತಿಸಿದರು.ಅಜೇಯ ಪೈ ವಂದಿಸಿದರು. ಅನ್ವಿತ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು14 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized15 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ15 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ14 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್15 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















