ಬಿಗ್ ನ್ಯೂಸ್
Om Prakash-ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಪತ್ನಿಯಿಂದ ಬರ್ಬರ ಹತ್ಯೆ : ತಂದೆಯ ಉಸಿರು ನಿಲ್ಲಿಸಲು ಮಗಳು ಸಾಥ್..! ತನಿಖಾಧಾರಿಗಳ ಮುಂದೆ ಪತ್ನಿ ಹೇಳಿದ್ದೇನು..?
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68 ವ.) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್‌ಗೆ ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಂದಿದ್ದಾರೆ. ಈ ವೇಳೆ, ಸುಮಾರು 10-15 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68 ವ.) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಪತ್ನಿ ಪಲ್ಲವಿ ಅವರೇ ಓಂ ಪ್ರಕಾಶ್‌ಗೆ ಚಾಕುವಿನಿಂದ 8-10 ಬಾರಿ ಎದೆ, ಹೊಟ್ಟೆ ಭಾಗಕ್ಕೆ ಇರಿದು ಕೊಂದಿದ್ದಾರೆ. ಈ ವೇಳೆ, ಸುಮಾರು 10-15 ನಿಮಿಷ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಈ ವೇಳೆ ಗಂಡನ ನರಳಾಟ ನೋಡುತ್ತಾ ಪತ್ನಿ ನಿಂತಿದ್ದರು. ಕೆಳಗಿನ ಮಹಡಿಯ ಹಾಲ್ ಸಂಪೂರ್ಣ ರಕ್ತಸಿಕ್ತವಾಗಿತ್ತು. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾದ ಪತ್ನಿ ಪಲ್ಲವಿ ಅವರು ಮಗಳ ಜತೆ ಸೇರಿ ಸಂಚು ರೂಪಿಸಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಓಂಪ್ರಕಾಶ್‌ರನ್ನು ಕೊಲೆ ಮಾಡಿರುವ ಶಂಕೆ ಮೂಡಿದೆ.
ಸ್ಥಳ ಮಹಜರು ನಡೆಸಿದ ಪೊಲೀಸರು ಪತ್ನಿ ಪಲ್ಲವಿ, ಮಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲೇ ಇದ್ದ ಚಾಕು ಸೀಜ್ ಮಾಡಿದ್ದಾರೆ. ಸೊಸೆ, ಮಗ ಊಟಕ್ಕೆ ಹೊರಗಡೆ ಹೋದಾಗ ತಾಯಿ ಪಲ್ಲವಿ, ಮಗಳು ಕೃತಿಕಾ ಜೊತೆ ಸೇರಿ ಕೊಂದಿದ್ದಾರೆ.
ಘಟನೆ ಬೆನ್ನಲ್ಲೇ ಡಿಜಿ ಅಲೋಕ್‌ಮೋಹನ್, ಬೆಂಗಳೂರು ಕಮಿಷನರ್ ದಯಾನಂದ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಓಂ ಪ್ರಕಾಶ್ ದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಹಾರದ ಚಂಪಾರಣ್ ಮೂಲದ ಓಂ ಪ್ರಕಾಶ್ 1981ನೇ ಕೇಡರ್‌ನ ಐಪಿಎಸ್ ಅಧಿಕಾರಿ, ರಾಷ್ಟ್ರಪತಿಗಳ ಪದಕ ಪಡೆದಿದ್ದರು. 2015ರಲ್ಲಿ 3 ವರ್ಷ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿದ್ದರು.
ಮಾನಸಿಕ ಕಾಯಿಲೆಗೆ ಸುಮಾರು 12 ವರ್ಷಗಳಿಂದ ಪಲ್ಲವಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಸ್ಕಿಜೋಫ್ರೇನಿಯ ಖಿನ್ನತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಇಂಥ ವ್ಯಕ್ತಿಗಳು ಸದಾ ಭ್ರಮೆಯ ಸ್ಥಿತಿಯಲ್ಲಿರುತ್ತಾರೆ. ಯಾವುದೋ ವಿಚಾರ ಕಲ್ಪಿಸಿಕೊಂಡು ಆತಂಕ ಪಡುತ್ತಿರುತ್ತಾರೆ. ಅದೇ ರೀತಿ ಪತಿ ಓಂಪ್ರಕಾಶ್ ಮೇಲೆ ಇಲ್ಲಸಲ್ಲದ ಊಹೆ ಮಾಡಿಕೊಂಡು ಜಗಳವಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.
”ಪತಿಯು ನನಗೆ ಮತ್ತು ಮಗಳು ಕೃತಿಗೆ ಚಿತ್ರಹಿಂಸೆ ಕೊಡುತ್ತಿದ್ದಾರೆ. ಮನೆಯಲ್ಲಿ ಸದಾ ಗನ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡುತ್ತೇನೆ ಎಂದು ಭಯಪಡಿಸುತ್ತಿದ್ದಾರೆ. ಹೀಗಾಗಿ, ಪತಿ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ,” ಎಂದು ಪಲ್ಲವಿ ಅವರು ಮೂರು ದಿನಗಳ ಹಿಂದೆ ಐಪಿಎಸ್ ಅಧಿಕಾರಿಗಳ ಫ್ಯಾಮಿಲಿ ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹಾಕಿದ್ದರು ಎಂದು ಮೂಲಗಳು ತಿಳಿಸಿವೆ.
ಖಾಕಿಗೆ ಸತಾಯಿಸಿದ ಅಮ್ಮ-ಮಗಳು:
ಕೊಲೆಯ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಮನೆಯೊಳಗೆ ಹೋಗಲು ಪಲ್ಲವಿ ಮತ್ತು ಅವರ ಮಗಳು ಕೃತಿ ಅವಕಾಶ ನೀಡದೆ ಸತಾಯಿಸಿದರು. ಅಮ್ಮ-ಮಗಳು ಅರ್ಧ ತಾಸಿಗೂ ಹೆಚ್ಚು ಕಾಲ ಬಾಗಿಲು ತೆರೆಯಲಿಲ್ಲ. ಹೀಗಾಗಿ, ಪೊಲೀಸರು ಬಾಗಿಲಲ್ಲೇ ಕಾದು ನಿಂತರು. ಕೊನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪಲ್ಲವಿ ಮತ್ತು ಕೃತಿ ಅವರ ಮನವೊಲಿಸಿ ಬಾಗಿಲು ತೆರೆಸಿದರು. ನಂತರ ಪೊಲೀಸರು ಮನೆಯನ್ನು ಪ್ರವೇಶಿಸಿ ಮಹಜರು ಪ್ರಕ್ರಿಯೆ ನಡೆಸಿದರು.
ವೃತ್ತಿಪರ ಕೊಲೆಗಾರರ ಮಾದರಿಯಲ್ಲಿ ಓಂಪ್ರಕಾಶ್‌ರನ್ನು ಕೊಲೆ ಮಾಡಲಾಗಿದೆ. ಮುಖ, ಮೂಗು, ಕಣ್ಣು ಹೀಗೆ ಸಿಕ್ಕಸಿಕ್ಕ ಕಡೆಗೆ ಚಾಕು ಇರಿಯಲಾಗಿದೆ. ಕೊಲೆ ನಡೆದ ಸ್ಥಳದ ತುಂಬೆಲ್ಲಾ ಕಾರದ ಪುಡಿ ಚೆಲ್ಲಾಡಿತ್ತು. ಹಾಲ್‌ನಲ್ಲಿ ಎರಡು ಚಾಕು ಮತ್ತು ಬಾಟಲಿ ಸಿಕ್ಕಿವೆ. ಪಲ್ಲವಿ ಅವರು ಕೃತ್ಯಕ್ಕೆ ಬಳಸಿ ಬೆಡ್‌ಶೀಟ್‌ನಲ್ಲಿ ಸುತ್ತಿ ಇಟ್ಟಿದ್ದ ಚಾಕುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಫ್ಲ್ಯಾಟ್‌ಗೆ ಶಿಫ್ಟ್:
ಬೆಂಗಳೂರಿನಲ್ಲಿ ಓಂಪ್ರಕಾಶ್ ಅವರಿಗೆ ಸೇರಿದ ಎರಡು ಮನೆಗಳಿವೆ. ಕಾವೇರಿ ಜಂಕ್ಷನ್ ಬಳಿಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಮತ್ತು ಎಚ್‌ಎಸ್‌ಆರ್ ಲೇಔಟ್‌ನ ಐಪಿಎಸ್ ಕ್ವಾರ್ಟರ್ಸ್‌ನಲ್ಲಿ ಮನೆ ಇದೆ. ಐಪಿಎಸ್ ಕ್ವಾರ್ಟರ್ಸ್‌ನ ಕಟ್ಟಡದ ಕೆಳ ಮಹಡಿಯಲ್ಲಿ ಓಂಪ್ರಕಾಶ್ ಮತ್ತು ಪಲ್ಲವಿ ವಾಸವಾಗಿದ್ದರು. ದಂಪತಿಯ ಮಗ ಕಾರ್ತಿಕೇಶ್ ಪತ್ನಿಯೊಂದಿಗೆ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿ ಹಾಗೂ ಓಂಪ್ರಕಾಶ್‌ರ ಮಗಳು ಎರಡನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಪತ್ನಿಯ ಜತೆ ಜಗಳವಾದಾಗ ಓಂಪ್ರಕಾಶ್, ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ವಾಸವಿರುತ್ತಿದ್ದರು.
ಕೊಲೆ ಘಟನೆ ನಡೆದ ವೇಳೆ ಇಡೀ ಕಟ್ಟಡದಲ್ಲಿಓಂಪ್ರಕಾಶ್ ಸೇರಿದಂತೆ ಮೂವರು ಇದ್ದ ಮಾಹಿತಿ ಸಿಕ್ಕಿದೆ. ಓಂಪ್ರಕಾಶ್‌ರ ಮಗ ಮತ್ತು ಸೊಸೆ ಹೊರಗೆ ಹೋಗಿದ್ದರು. ಪಲ್ಲವಿ ಮತ್ತು ಮಗಳು ಕೃತಿ ಮಾತ್ರ ಮನೆಯಲ್ಲಿದ್ದರು. ಆಸ್ತಿಯ ಸಂಬಂಧ ಓಂಪ್ರಕಾಶ್ ಮತ್ತು ಮಕ್ಕಳ ನಡುವೆಯೂ ಭಿನ್ನಾಭಿಪ್ರಾಯವಿತ್ತು. ಜತೆಗೆ, ದಂಪತಿ ಮಧ್ಯೆ ಹಲವು ವರ್ಷಗಳಿಂದ ಕೌಟುಂಬಿಕ ಕಲಹವಿತ್ತು. ಇದರಿಂದ ಪಲ್ಲವಿ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪತಿ ವಿರುದ್ಧ ಪತ್ನಿಯಿಂದ ಧರಣಿ
ಪಲ್ಲವಿ ಕೆಲವು ತಿಂಗಳ ಹಿಂದೆ ತಮ್ಮ ಮನೆ ಮುಂದೆಯೇ ಪತಿಯ ವಿರುದ್ಧ ಧರಣಿ ಮಾಡಿದ್ದರು. ನಂತರ ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಠಾಣೆಯಲ್ಲಿದೂರು ಸಹ ದಾಖಲಾಗಿತ್ತು. ಕೌಟುಂಬಿಕ ಕಲಹದ ಸಂಗತಿಯನ್ನು ಓಂಪ್ರಕಾಶ್, ಹಲವು ಬಾರಿ ಆಪ್ತ ಪೊಲೀಸ್ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದರು. ಅಲ್ಲದೆ, ಪತ್ನಿಯ ಕಿರುಕುಳ ತಾಳಲಾಗುತ್ತಿಲ್ಲಎಂದು ಅಲವತ್ತುಕೊಂಡಿದ್ದರು ಎಂದು ಗೊತ್ತಾಗಿದೆ.
ಎರಡು ವರ್ಷ ಪೊಲೀಸ್ ಮುಖ್ಯಸ್ಥರಾಗಿದ್ದರು !
1981ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಓಂಪ್ರಕಾಶ್, ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಉಪ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಎಸ್‌ಪಿ) ವೃತ್ತಿ ಬದುಕು ಆರಂಭಿಸಿದ್ದರು. 1993ರಲ್ಲಿಭಟ್ಕಳ ಕೋಮು ಗಲಭೆ ಸಂದರ್ಭದಲ್ಲಿಅವರನ್ನು ಅಲ್ಲಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆಡಳಿತ ವಿಭಾಗ, ಉತ್ತರ ವಲಯ, ತರಬೇತಿ ವಿಭಾಗ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿಅವರು ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಿಐಡಿ ಐಜಿಪಿ ಹಾಗೂ ಸಾರಿಗೆ ಇಲಾಖೆ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರು ಕೆಲ ವರ್ಷಗಳ ಕಾಲ ಅಪರಾಧ ಮತ್ತು ತಾಂತ್ರಿಕ ಸೇವೆಗಳು, ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗದಲ್ಲಿಎಡಿಜಿಪಿ ಆಗಿದ್ದರು.
ರಾಜ್ಯ ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಮಹಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು, 2015ರ ಮಾರ್ಚ್ನಲ್ಲಿ ರಾಜ್ಯದ 38ನೇ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ) ಅಧಿಕಾರ ಸ್ವೀಕರಿಸಿದ್ದರು. ಬಳಿಕ 2017ರವರೆಗೆ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ದೈಹಿಕ ಹಲ್ಲೆ ಹಾಗೂ ಹರಿತವಾದ ಆಯುಧದಿಂದ ಓಂಪ್ರಕಾಶ್‌ರನ್ನು ಕೊಲೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿಬಿದ್ದಿದ್ದ ಹರಿತ ಆಯುಧವನ್ನು ಜಪ್ತಿ ಮಾಡಲಾಗಿದೆ. ಘಟನೆ ವೇಳೆ ಮನೆಯಲ್ಲಿ ಮೂವರಿದ್ದರು. ಕೊಲೆಯ ಸಂಬಂಧ ಓಂಪ್ರಕಾಶ್‌ರ ಮಗ ಕಾರ್ತಿಕೇಶ್ ದೂರು ಕೊಟ್ಟಿದ್ದಾರೆ. ಕೊಲೆಗೆ ನಿಖರ ಕಾರಣ ಏನೆಂದು ಗೊತ್ತಾಗಿಲ್ಲ ಮತ್ತು ಈವರೆಗೂ ಯಾರನ್ನೂ ಬಂಧಿಸಿಲ್ಲ. ಕೆಲವರ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ ವಿಕಾಸ್‌ಕುಮಾರ್ ವಿಕಾಸ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ ವಿಭಾಗ)
ಕೊಲೆ ಘಟನೆ ವಿವರ ಬಾಯ್ಬಿಟ್ಟ ಪತ್ನಿ ಪಲ್ಲವಿ
ಹತ್ಯೆ ಘಟನೆ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ. ಇಂದು ಓಂ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.ಇ ನ್ನು ವಿಚಾರಣೆ ವೇಳೆ ಪತ್ನಿ ಹಲವು ವಿಚಾರಗಳನ್ನು ಹೇಳಿದ್ದಾರೆ.
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೇ ಗನ್ ತಂದು ಮಗಳಿಗೆ ಹಾಗೂ ನನಗೆ ಬೆದರಿಕೆ ಹಾಕುತ್ತಿದ್ದರು. ಭಾನುವಾರವೂ ಬೆಳಗ್ಗೆಯಿಂದಲೇ ಬೇರೆಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳ ಆಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂಬುದಾಗಿ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.
ಹೀಗಾಗಿ ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದ್ದು, ನಂತರ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ. ಘಟನೆ ನಂತರ ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದರು.
ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಸದ್ಯ ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.
ಹಲವು ಬಾರಿ ಇರಿತ:
ಪಲ್ಲವಿ ಅವರು ಓಂಪ್ರಕಾಶ್‌ರ ಕಣ್ಣಿಗೆ ಕಾರದ ಪುಡಿ ಎರಚಿ, ಮನಸೋಇಚ್ಛೆ ಚಾಕುವಿನಿಂದ ಚುಚ್ಚಿ ಚಿತ್ರಹಿಂಸೆ ಕೊಟ್ಟಿದ್ದಾರೆ. ಎದೆ, ಕೈಗಳು, ಹೊಟ್ಟೆಯ ಭಾಗಕ್ಕೆ 10ಕ್ಕೂ ಹೆಚ್ಚು ಬಾರಿ ಚಾಕು ಇರಿದಿದ್ದಾರೆ. ಹೊಟ್ಟೆಗೆ ನಾಲ್ಕರಿಂದ ಐದು ಬಾರಿ ಚಾಕು ಇರಿದಿರುವ ಕಾರಣ ತೀವ್ರ ರಕ್ತಸ್ರಾವವಾಗಿದೆ. ಕೊಲೆ ನಡೆದಿರುವ ಹಾಲ್‌ನ ತುಂಬೆಲ್ಲಾ ನೆತ್ತರು ಹರಿದಿದೆ.
ಓಂಪ್ರಕಾಶ್, ತೀವ್ರ ರಕ್ತಸ್ರಾವವದಿಂದ ಸುಮಾರು 20 ನಿಮಿಷಗಳ ಕಾಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಪತ್ನಿಗೆ ಮಗಳು ಕೃತಿಯೂ ಕೈಜೋಡಿಸಿರುವ ಸಾಧ್ಯತೆ ಇದೆ. ಪತಿಯ ನರಳಾಟ ನೋಡುತ್ತಾ ನಿಂತಿದ್ದ ಪಲ್ಲವಿ, ಅಂತಿಮವಾಗಿ ಓಂಪ್ರಕಾಶ್ ಮೃತಪಟ್ಟ ಬಳಿಕ ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿಗೆ ಹಾಗೂ ಸ್ಥಳೀಯ ಎಚ್‌ಎಸ್‌ಆರ್ ಠಾಣೆಗೆ ಕರೆ ಮಾಡಿ ಕೊಲೆ ವಿಚಾರ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ13 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್15 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಸಿನೆಮಾ14 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು


















