ಚಿನ್ನ-ಬೆಳ್ಳಿ ದರ
Gold Rate Today-ಶಾಕ್ ನೀಡಿದ ಚಿನ್ನದ ಬೆಲೆ; 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ 1 ಲಕ್ಷ ರೂ – ಕಳೆದ 4 ತಿಂಗಳಲ್ಲಿ ಬರೋಬ್ಬರಿ 20 ಸಾವಿರ ರೂಪಾಯಿ ಏರಿಕೆ
ಚಿನ್ನದ ಬೆಲೆ ಗಗನಕ್ಕೇರಿದ್ದು, ಆಭರಣ ಪ್ರಿಯರಿಗೆ ಭಾರೀ ಆಘಾತವಾಗಿದೆ. ಅಕ್ಷಯ ತೃತೀಯಾದ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ತಲುಪಬಹುದು ಎಂಬ ಊಹೆಗೂ ಮುನ್ನವೇ, 24 ಕ್ಯಾರೆಟ್ ಚಿನ್ನದ ದರ ಈಗಲೇ ಈ ಐತಿಹಾಸಿಕ ಮಟ್ಟವನ್ನು ಮುಟ್ಟಿದೆ. ಸೋಮವಾರ ಬೆಂಗಳೂರಿನ ಮಾರುಕಟ್ಟೆಯಲ್ಲಿ 10 ಗ್ರಾಂ ಶುದ್ಧ ಚಿನ್ನದ ಬೆಲೆ, 3% ಜಿಎಸ್ಟಿ ಸೇರಿ, 1 ಲಕ್ಷ ರೂ. ದಾಟಿದೆ.
ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿದ್ದು, ಆಭರಣ ಪ್ರಿಯರಿಗೆ ಭಾರೀ ಆಘಾತವಾಗಿದೆ. ಅಕ್ಷಯ ತೃತೀಯಾದ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ತಲುಪಬಹುದು ಎಂಬ ಊಹೆಗೂ ಮುನ್ನವೇ, 24 ಕ್ಯಾರೆಟ್ ಚಿನ್ನದ ದರ ಈಗಲೇ ಈ ಐತಿಹಾಸಿಕ ಮಟ್ಟವನ್ನು ಮುಟ್ಟಿದೆ. ಸೋಮವಾರ ಬೆಂಗಳೂರಿನ ಮಾರುಕಟ್ಟೆಯಲ್ಲಿ 10 ಗ್ರಾಂ ಶುದ್ಧ ಚಿನ್ನದ ಬೆಲೆ, 3% ಜಿಎಸ್ಟಿ ಸೇರಿ, 1 ಲಕ್ಷ ರೂ. ದಾಟಿದೆ. ಕೇವಲ 18 ವರ್ಷಗಳ ಹಿಂದೆ 10,000 ರೂ. ಇದ್ದ ಚಿನ್ನದ ದರ ಈಗ ಹತ್ತು ಪಟ್ಟು ಏರಿಕೆಯಾಗಿದೆ!
ಮದುವೆ ಸೀಸನ್ನಲ್ಲಿ ಖರೀದಿದಾರರಿಗೆ ಕಂಗಾಲು
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಸೋಮವಾರ 92,000 ರೂ. ಆಸುಪಾಸಿನಲ್ಲಿದ್ದರೂ, ಜಿಎಸ್ಟಿ, ಮೇಕಿಂಗ್ ಚಾರ್ಜ್, ಮತ್ತು ವೇಸ್ಟೇಜ್ ಸೇರಿದರೆ 10 ಗ್ರಾಂ ಆಭರಣದ ಬೆಲೆಯೂ 1 ಲಕ್ಷ ರೂ. ಮೀರಿದೆ. ಇದರಿಂದ ಮದುವೆ ಸೀಸನ್ನಲ್ಲಿ ಚಿನ್ನ ಕೊಳ್ಳಲು ಯೋಜಿಸಿದವರು ಚಿಂತೆಗೀಡಾಗಿದ್ದಾರೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ (ಎಂಸಿಎಕ್ಸ್) 10 ಗ್ರಾಂ ಶುದ್ಧ ಚಿನ್ನದ ದರ 97,288 ರೂ. ದಾಖಲಾಗಿದ್ದು, ಭೌತಿಕ ಮಾರುಕಟ್ಟೆಯಲ್ಲಿ ಇದಕ್ಕಿಂತಲೂ ಹೆಚ್ಚಿನ ದರವಿದೆ.
2025ರಲ್ಲಿ ಚಿನ್ನದ ಬೆಲೆ ಏಕೆ ಏರಿಕೆ?
2025ರ ಮೊದಲ ನಾಲ್ಕು ತಿಂಗಳಲ್ಲಿ ಒಂದು ತೊಲ ಚಿನ್ನದ ಬೆಲೆ 20,800 ರೂ. (26%) ಏರಿಕೆಯಾಗಿದೆ. ಈ ಏರಿಕೆಗೆ ಮುಖ್ಯ ಕಾರಣ ಅಮೆರಿಕದ ಆರ್ಥಿಕ ನೀತಿಗಳು. ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ ಆರ್ಥಿಕ ನಿರ್ಧಾರಗಳು ಮತ್ತು ವಿದೇಶಿ ತೆರಿಗೆ ನೀತಿಗಳಿಂದ ಅಮೆರಿಕನ್ ಡಾಲರ್ ಮೌಲ್ಯ ಕುಸಿಯುತ್ತಿದೆ. ಇದರಿಂದ ಹೂಡಿಕೆದಾರರು ಡಾಲರ್ನಿಂದ ಹಿಂದೆ ಸರಿದು ಚಿನ್ನದಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಏರಿಕೆಯಾಗಿ ಬೆಲೆ ಗಗನಕ್ಕೇರಿದೆ.
ಚಿನ್ನದ ಬೆಲೆಯ ಏರುಗತಿ
2025 – ₹1,00,000
2024 – ₹78,000
2023 – ₹65,330
2022 – ₹52,670
2020 – ₹48,650
2015 – ₹26,350
2010 – ₹ 18,500
2007- ₹10,000
2000 – ₹4,400
1990 – ₹3,200
1980 – ₹ 1,330
1970 – ₹ 180
ಇನ್ನೂ ಏರಿಕೆಯಾಗುತ್ತಾ?
ತಜ್ಞರ ಪ್ರಕಾರ, ಚಿನ್ನದ ಬೆಲೆ ಸದ್ಯಕ್ಕೆ ಇಳಿಯುವ ಸಾಧ್ಯತೆ ಕಡಿಮೆ. ಕೆಲವರು ಬೆಲೆ ಇನ್ನಷ್ಟು ಏರಬಹುದು ಎಂದರೆ, ಇನ್ನು ಕೆಲವರು ಈ ಏರಿಕೆ ಕೃತಕವೆಂದು, ಭವಿಷ್ಯದಲ್ಲಿ ಇಳಿಕೆಯಾಗಬಹುದು ಎಂದಿದ್ದಾರೆ. ಆದರೆ, ಚಿನ್ನದ ಬೆಲೆಯ ಭವಿಷ್ಯವನ್ನು ನಿಖರವಾಗಿ ಊಹಿಸುವುದು ಕಷ್ಟ.
ಬೆಳ್ಳಿಯತ್ತ ಮುಖ ಮಾಡಿ!
ಚಿನ್ನದ ಬೆಲೆ ಗಗನಕ್ಕೇರಿದ್ದರಿಂದ, ಬೆಳ್ಳಿಯತ್ತ ಗಮನ ಹರಿಯುತ್ತಿದೆ. ಸದ್ಯ ಭಾರತದಲ್ಲಿ 1 ಕೆ.ಜಿ. ಬೆಳ್ಳಿಯ ಬೆಲೆ 1.05 ಲಕ್ಷ ರೂ. ಆಗಿದೆ. ತಜ್ಞರು ಬೆಳ್ಳಿಯಲ್ಲಿ ಈಗ ಹೂಡಿಕೆ ಮಾಡಿದರೆ ಭವಿಷ್ಯದಲ್ಲಿ ಉತ್ತಮ ಲಾಭ ಸಿಗಬಹುದು ಎಂದು ಸಲಹೆ ನೀಡಿದ್ದಾರೆ.
ಚಿನ್ನದ ಬೆಲೆಯ ಈ ಏರಿಕೆ ಆಭರಣ ಪ್ರಿಯರಿಗೆ ಆತಂಕವಾದರೂ, ಹೂಡಿಕೆದಾರರಿಗೆ ಲಾಭದಾಯಕವಾಗಿದೆ. ಆದರೆ, ಮಾರುಕಟ್ಟೆಯ ಏರಿಳಿತವನ್ನು ಗಮನಿಸಿ ಖರೀದಿ ನಿರ್ಧಾರ ತೆಗೆದುಕೊಳ್ಳುವುದು ಬುದ್ಧಿವಂತಿಕೆ.
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ಬಿಗ್ ನ್ಯೂಸ್14 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ13 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಅಂತರ ರಾಜ್ಯ11 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ12 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸುಳ್ಯ8 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ11 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ13 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸ್ಥಳೀಯ8 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!















