Connect with us

ರಾಜಕೀಯ

Ashok Rai-ಹಿಂದುತ್ವದ ಬಗ್ಗೆ ಬೊಬ್ಬೆ ಹಾಕುವವರು ದೇವಸ್ಥಾನದ ರಸ್ತೆಯನ್ನೂ ಅಭಿವೃದ್ದಿ ಮಾಡಿಲ್ಲ…! ಭಾಷಣ ಮಾತ್ರ: ಶಾಸಕ ಅಶೋಕ್ ರೈ ಲೇವಡಿ

Published

on



Ad Widget

Ad Widget

Ad Widget

Ad Widget

ಪ್ರತೀ ಬಾರಿ ಚುನಾವಣೆ ಬಂದಾಗ, ‌ಧಾರ್ಮಿಕ ವೇದಿಕೆಗಳಲ್ಲಿ ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ದಿ ಮಾಡಬೇಕು ಎಂಬ ಕನಿಷ್ಡ ಜ್ಞಾನ ಬಾರದೇ ಇರುವುದು ಹಿಂದುತ್ವ ಭಾಷಣಗಾರರ ನಕಲಿತ್ವಕ್ಕೆ ಸಾಕ್ಷಿಯಾಗಿದೆ ,ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪ್ರತೀ ಬಾರಿ ಚುನಾವಣೆ ಬಂದಾಗ, ‌ಧಾರ್ಮಿಕ ವೇದಿಕೆಗಳಲ್ಲಿ ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ದಿ ಮಾಡಬೇಕು ಎಂಬ ಕನಿಷ್ಡ ಜ್ಞಾನ ಬಾರದೇ ಇರುವುದು ಹಿಂದುತ್ವ ಭಾಷಣಗಾರರ ನಕಲಿತ್ವಕ್ಕೆ ಸಾಕ್ಷಿಯಾಗಿದೆ ,ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಕೆಯ್ಯೂರು ಗ್ರಾಮದ ಗ್ರಾಮ ದೇವಸ್ಥಾನವಾದ ಶ್ರೀ‌ಮಹಿಷಮರ್ಧಿನಿ‌ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಈ ರಸ್ತೆಯನ್ನು ಅಭಿವೃದ್ದಿ ಮಾಡಿ ಎಂದು ಇಲ್ಲಿನ‌ಭಕ್ತಾದಿಗಳು ಕಳೆದ 20 ವರ್ಷಗಳಿಂದ ಮನವಿ ಮಾಡುತ್ತಿದ್ದಾರೆ ಆದರೆ ಇವರ ನೋವು ಯಾರಿಗೂ ಕೇಳಿಸಲಿಲ್ಲ.‌ ಹೋದಲ್ಲೆಲ್ಲಾ ಹಿಂದುತ್ವದ ಭಾಷಣ ಮಾಡಿ ,ನಾವು ಹಾಗೆ ,ನಾವು ಹೀಗೆ ಎಂದು ಭಾಷಣ ಬಿಗಿಯುವರೂ ಇಲ್ಲಿ ಶಾಸಕರಾಗಿದ್ದು ಅವರೂ ಇಲ್ಲಿಗೆ ಅನುದಾನ ನೀಡಿಲ್ಲ. ಹಿಂದುತ್ವ ಅಂದ್ರೆ ಕೇವಲ ಭಾಷಣ ದಲ್ಲಿ ಮಾತ್ರ ತೋರ್ಪಡಿಸಿದರೆ ಸಾಲದು ಹಿಂದೂ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನಾದರೂ ದುರಸ್ಥಿ ಮಾಡಿದ್ದರೆ ಇವರ ಹಿಂದುತ್ವ ಭಾಷಣಕ್ಕೆ ಕೊಂಚ ಗೌರವವಾದರೂ ಸಿಗುತ್ತಿತ್ತು ಎಂದು ಶಾಸಕರು ಲೇವಡಿ ಮಾಡಿದರು.



Ad Widget

ನಾನು ಶಾಸಕನಾಗುವ ಮೊದಲೂ ಶಾಸಕನಾದ ಬಳಿಕವೂ ದೇವಸ್ಥಾನದ ಜೀರ್ಣೋದ್ದಾರ, ಬ್ರಹ್ಮಕಲಶಕ್ಕೆ ಕೈ ಜೋಡಿಸಿದ್ದೇನೆ. ಶಾಸಕನಾದ ಬಳಿಕ ಹಿಂದೂ ದೇವಸ್ಥಾನಕ್ಕೆ 7.5 ಕೋಟಿ ರೂ ಅನುದಾನ ತಂದಿದ್ದೇನೆ. ಕೊಟ್ಟ ಮಾತಿನಂತೆ ನಡೆದಿದ್ದೇನೆ ನಾನೆಂದೂ ವೋಟಿಗಾಗಿ ಜನರ‌ಮುಂದೆ ರೈಲು ಬಿಡುವ ಕೆಲಸವನ್ನು ಮಾಡಿಲ್ಲ ಎಂದು ಹೇಳಿದರು.

Ad Widget

Ad Widget

ಶಾಸಕನಾದ ಬಳಿಕ ನಾನು ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ಶಾಸಕನಾಗಿ ಕೆಲಸ ಮಾಡಿದ್ದೇನೆ, ಎಲ್ಲೂ ಯಾರಿಗೂ ಮೋಸ ಮಾಡಿಲ್ಲ, ಅಧಿಕಾರದಲ್ಲಿ ರಾಜಧರ್ನ ಪಾಲಿಸಿದ್ದೇನೆ. ಎಲ್ಲಾ ಧರ್ಮದವರನ್ನೂ ಸಮಾನ ದೃಷ್ಟಿಯಿಂದ ಕಾಣುತ್ತಿದ್ದೇನೆ. ದೇಶದಲ್ಲಿ ಎಲ್ಲಾ ಜಾತಿ, ಧರ್ಮದವರು‌ ಸಹೋದರರಂತೆ ಬಾಳಿದರೆ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯ ಎಂದು ಹೇಳಿದರು.

ದೇವಸ್ಥಾನದ ರಸ್ತೆಗೆ 20 ಲಕ್ಷ ಅನುದಾನ:
ಇಲ್ಲಿನ ಗ್ರಾಮ ದೇವಸ್ಥಾನದ ರಸ್ತೆ ಕಾಂಕ್ರೀಟ್ ಗೆ 20 ಲಕ್ಷ ಅನುದಾನ ನೀಡಿದ್ದೇನೆ. ಕಳೆದ ಚುನಾವಣೆಯ ಸಮಯದಲ್ಲಿ ಕೊಟ್ಟ ಮಾತನ್ನು ಉಳಿಸಿದ್ದೇನೆ. ಕೆಯ್ಯೂರು ಗ್ರಾಮಕ್ಕೆ ಒಟ್ಟು 407 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ ಎಂದು ಹೇಳಿದ ಶಾಸಕರು ಪ್ರತೀ ಗ್ರಾಮಕ್ಕೆ ಅನುದಾನವನ್ನು ಸಮಪ್ರಮಾಣದಲ್ಲಿ‌ ಹಂಚಿಕೆ ಮಾಡಿದ್ದೇನೆ ಎಂದು ಹೇಳಿದರು.

20 ವರ್ಷದ ಬೇಡಿಕೆ ಈಡೇರಿದೆ: ಎ ಕೆ ಜಯರಾಮ ರೈ
ದೇವಸ್ಥಾನದ ರಸ್ತೆಯನ್ನು ಅಭಿವೃದ್ದಿ ಮಾಡಿ ಎಂದು ಕಳೆದ 20 ವರ್ಷಗಳಿಂದ ಮನವಿ ಮಾಡಿಕೊಂಡು ಬಂದಿದ್ದೇನೆ. ಈಬಾರಿ ಯೋಗ ಕೂಡಿ ಬಂದಿದೆ. ಅಶೋಕ್ ರೈ‌ಶಾಸಕರಾದ ಬಳಿಕ ಕೆಯ್ಯೂರು ಗ್ರಾಮದಲ್ಲಿ ಹೆಚ್ಚಿನ ಅಭಿವೃದ್ದಿ ಕೆಲಸಗಳು ನಡೆದಿದ್ದು ಇದಕ್ಕಾಗಿ ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎ ಕೆ ಜಯರಾಮ ರೈ ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಎ ಇಳಂತಾಜೆ ಸಂತೋಷ್ ರೈ, ವಲಯ ಕಾಂಗ್ರೆಸ್ ಅಧ್ಯಕ್ಷ ಜಯಂತ್ ಪೂಜಾರಿ ಕೆಂಗುಡೇಲು, ದಾಮೋದರ್ ಪೂಜಾರಿ ಕೆಂಗುಡೇಲು, ಶೀನಪ್ಪ ರೈ, ಅಶೋಕ್ ರೈ ದೇರ್ಲ, ಉಮಾಕಾಂತ್ ಬೈಲಾಡಿ,ಗ್ರಾಪಂ ಸದಸ್ಯ ಅಬ್ದುಲ್ ಖಾದರ್ ಮೇರ್ಲ, ಹನೀಫ್ ಕೆ ಎಂ ಮಾಡಾವು, ಆದರ್ಶ್ ರೈ ದೇವಿನಗರ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ರೂಪರೇಖಾ ಆಲ್ವ, ರಾಮಣ್ಣ ಪಿಲಿಂಜ, ಲಿಂಗಪ್ಪ ಗೌಡ ಕಣಿಯಾರು, ಬಡ್ಯಪ್ಪ ರೈ,ಬಾಬು ಎರಕ್ಕಲ,ಮತ್ತಿತರರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಅಂತರ ರಾಜ್ಯ

March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ

Published

on



Ad Widget

Ad Widget

Ad Widget

Ad Widget

ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.



Ad Widget

ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.

Continue Reading

ಸ್ಥಳೀಯ

Sharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ

Published

on



Ad Widget

Ad Widget

Ad Widget

Ad Widget

ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಶರವೂರು: ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಸಮೀಪದಲ್ಲಿರುವ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ನಾಡಿನ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾಗಿದ್ದು, ನವರಾತ್ರಿ ಉತ್ಸವವನ್ನು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ವೈಭವದಿಂದ ಆಚರಿಸುವ ಕ್ಷೇತ್ರವೆಂಬ ಖ್ಯಾತಿಯನ್ನು ಹೊಂದಿದೆ. ನವರಾತ್ರಿಯ ಸಂದರ್ಭದಲ್ಲಿ ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭಿಕ್ಷೆ, ಜನರ ಕಲ್ಯಾಣ ಹಾಗೂ ಲೋಕಶಾಂತಿಗಾಗಿ ಪ್ರಾರ್ಥಿಸಿದರು.



Ad Widget

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟ ಗಣ್ಯರು ಉಪಸ್ಥಿತರಿದ್ದರು.

Continue Reading

ಅಂತರ ರಾಜ್ಯ

By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ

Published

on



Ad Widget

Ad Widget

Ad Widget

Ad Widget

ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.

Ad Widget

Ad Widget <> Ad Widget

ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.



Ad Widget

ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.

Ad Widget

Ad Widget

ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.

ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading