ಅಪರಾಧ
Wing Commander-ಕೆಲಸ ಕಳೆದುಕೊಳ್ಳುವ ಸಂಕಷ್ಟದಲ್ಲಿ ವಿಂಗ್ ಕಮಾಂಡರ್ ಶಿಲಾಧಿತ್ಯ ಬೋಸ್ : ರೋಡ್ ರೇಜ್ ಪ್ರಕರಣದಿಂದ ಏರ್‌ಫೋರ್ಸ್ ಘನತೆಗೆ ಧಕ್ಕೆ
ಬೆಂಗಳೂರಿನ ಬೈಯಪ್ಪನ ಹಳ್ಳಿಯಲ್ಲಿ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾಧಿತ್ಯ ಬೋಸ್ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಬೈಕ್ ಸವಾರ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬೋಸ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬೆಂಗಳೂರಿನ ಬೈಯಪ್ಪನ ಹಳ್ಳಿಯಲ್ಲಿ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾಧಿತ್ಯ ಬೋಸ್ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಬೈಕ್ ಸವಾರ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬೋಸ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣದ ವಿವರ:
ಏಪ್ರಿಲ್ 21, 2025ರಂದು ನಡೆದ ಈ ಘಟನೆಯಲ್ಲಿ, ಶಿಲಾಧಿತ್ಯ ಬೋಸ್ ತಮ್ಮ ಕಾರಿನಿಂದ ಇಳಿದು ವಿಕಾಸ್ ಕುಮಾರ್ ಅವರ ಬೈಕ್‌ಗೆ ತಳ್ಳಿ, ಅವರನ್ನು ಕೆಳಗೆ ಬೀಳಿಸಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಸಿಟಿವಿ ದೃಶ್ಯಗಳು ಬೋಸ್‌ನಿಂದಲೇ ಹಲ್ಲೆ ಆರಂಭವಾಯಿತು ಎಂದು ತೋರಿಸಿದ್ದು, ಅವರ ಆರಂಭಿಕ ದೂರಿನಲ್ಲಿ ತಾವೇ ಹಲ್ಲೆಗೊಳಗಾದವರು ಎಂದು ಸುಳ್ಳು ಹೇಳಿರುವುದು ಬಯಲಾಗಿದೆ.
ಏರ್‌ಫೋರ್ಸ್‌ನಿಂದ ತನಿಖೆ:
ಈ ಘಟನೆಯಿಂದ ಭಾರತೀಯ ವಾಯುಸೇನೆಯ ಘನತೆಗೆ ಧಕ್ಕೆಯಾಗಿದೆ ಎಂದು ಪರಿಗಣಿಸಲಾಗಿದೆ. ವಾಯುಸೇನೆಯ ಅಧಿಕಾರಿಗಳು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಎಫ್‌ಐಆರ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ವಿಂಗ್ ಕಮಾಂಡರ್ ಬೋಸ್ ವಾಯುಸೇನೆಯ ಪ್ರೊಟೋಕಾಲ್ ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಕೋರ್ಟ್ ಆಫ್ ಇನ್‌ಕ್ವೈರಿ ನಡೆಯುವ ಸಾಧ್ಯತೆ ಇದೆ. ಮೇಖ್ರಿ ಸರ್ಕಲ್ ಬಳಿಯ ವಾಯುನೆಲೆ ಟ್ರೈನಿಂಗ್ ಕಮಾಂಡ್ ಸೆಂಟರ್‌ನಿಂದ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಲಾಗುವ ಸಂಭವವಿದೆ.
ನಿಯಮ ಉಲ್ಲಂಘನೆ:
ವಾಯುಸೇನೆಯ ನಿಯಮಗಳ ಪ್ರಕಾರ, ವಿಂಗ್ ಕಮಾಂಡರ್‌ನಂತಹ ಅಧಿಕಾರಿಗಳು ತಮ್ಮ ಗುರುತು ಬಹಿರಂಗವಾಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ, ಬೋಸ್ ಈ ಪ್ರಕರಣವನ್ನು ಭಾಷಾ ಸಂಘರ್ಷವೆಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಒಡ್ಡಿದ್ದಾರೆ ಎಂಬ ಆರೋಪವಿದೆ. ಇದರ ಜೊತೆಗೆ, ಸಾರ್ವಜನಿಕರೊಂದಿಗೆ ಕೆಟ್ಟ ವರ್ತನೆ, ಸುಳ್ಳು ದೂರು, ಮತ್ತು ದ್ವೇಷ ಬಿತ್ತುವ ಪ್ರಯತ್ನಗಳು ಮಿಲಿಟರಿ ನಿಯಮಗಳ ಉಲ್ಲಂಘನೆಯಾಗಿದ್ದು, ಇದು ಅವರ ವೃತ್ತಿಗೆ ಗಂಭೀರ ಪರಿಣಾಮ ಬೀರಬಹುದು.
ಕೆಲಸ ಕಳೆದುಕೊಳ್ಳುವ ಸಾಧ್ಯತೆ:
ವಾಯುಸೇನೆಯ ಉನ್ನತಾಧಿಕಾರಿಗಳು 15 ದಿನಗಳ ಒಳಗೆ ಈ ಘಟನೆಯ ವರದಿಯನ್ನು ಸಲ್ಲಿಸಲಿದ್ದಾರೆ. ತನಿಖೆಯಲ್ಲಿ ಬೋಸ್ ದೋಷಿಗಳೆಂದು ಸಾಬೀತಾದರೆ, ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಘಟನೆಯಿಂದ ವಾಯುಸೇನೆಯ ಘನತೆಗೆ ಧಕ್ಕೆಯಾಗಿರುವುದರಿಂದ, ಕಠಿಣ ಕ್ರಮ ಜರುಗಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗದು.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆ:
ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲವರು ಬೋಸ್‌ನ ವರ್ತನೆಯನ್ನು ಖಂಡಿಸಿದ್ದರೆ, ಇನ್ನೂ ಕೆಲವರು ಇದನ್ನು ಭಾಷಾ ಸಂಘರ್ಷವೆಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತೀರ್ಮಾನ:
ವಿಂಗ್ ಕಮಾಂಡರ್ ಶಿಲಾಧಿತ್ಯ ಬೋಸ್ ರೋಡ್ ರೇಜ್ ಪ್ರಕರಣದಿಂದ ಗಂಭೀರ ಕಾನೂನಾತ್ಮಕ ಮತ್ತು ವೃತ್ತಿಪರ ಸಂಕಷ್ಟದಲ್ಲಿದ್ದಾರೆ. ವಾಯುಸೇನೆಯ ತನಿಖೆ ಮತ್ತು ಪೊಲೀಸ್ ಕ್ರಮಗಳ ಫಲಿತಾಂಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ. ಪ್ರಕರಣದ ಪೂರ್ವಾಪರವನ್ನು ಗಮನಿಸಿದರೆ, ಅವರ ವಿರುದ್ಧ ಕಠಿಣ ಕ್ರಮ ಕಾಣುವ ಸಾಧ್ಯತೆ ಹೆಚ್ಚಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized2 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















