ಉಡುಪಿ
Udupi-ಉಡುಪಿ : ಅಕ್ರಮ ಕೆಂಪುಕಲ್ಲು ಗಣಿಗಾರಿಕೆ : 9 ಪೊಲೀಸರ ಅಮಾನತು ಮಾಡಿದ ಎಸ್ಪಿ
ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಯ ನಿಯಂತ್ರಣದಲ್ಲಿ ಸ್ಥಳೀಯ ಪೊಲೀಸ್ ವ್ಯವಸ್ಥೆಯ ವೈಫಲ್ಯ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಮೂರು ಪ್ರಮುಖ ಠಾಣೆಗಳ 9 ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.
ಉಡುಪಿ: ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಯ ನಿಯಂತ್ರಣದಲ್ಲಿ ಸ್ಥಳೀಯ ಪೊಲೀಸ್ ವ್ಯವಸ್ಥೆಯ ವೈಫಲ್ಯ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಮೂರು ಪ್ರಮುಖ ಠಾಣೆಗಳ 9 ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.
ಬೈಂದೂರು, ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯ ಚಟುವಟಿಕೆಗಳ ಮೇಲೆ ನಿಗಾ ಇಡುವಲ್ಲಿ ಮತ್ತು ಅದರ ಬಗ್ಗೆ ಮೇಲಧಿಕಾರಿಗಳಿಗೆ ನಿಖರ ಮಾಹಿತಿ ನೀಡುವಲ್ಲಿ ಈ ಸಿಬ್ಬಂದಿ ವಿಫಲರಾಗಿದ್ದಾರೆ ಎಂಬುದು ಅಮಾನತಿಗೆ ಪ್ರಮುಖ ಕಾರಣವಾಗಿದೆ. ವ್ಯವಸ್ಥಿತವಾಗಿ ನಡೆಯುವ ಈ ಅಕ್ರಮಕ್ಕೆ ಸ್ಥಳೀಯ ಮಟ್ಟದಲ್ಲಿ ರಕ್ಷಣೆ ಇದೆಯೇ ಎಂಬ ಸಂಶಯ ಮೂಡುವಂತಿದೆ.
ಸದ್ಯಕ್ಕೆ ಅಮಾನತುಗೊಂಡವರ ನೇರ ಶಾಮೀಲಾತಿ ಬಗ್ಗೆ ಪುರಾವೆಗಳಿಲ್ಲ ಎಂದು ಎಸ್ಪಿ ಡಾ. ಕೆ. ಅರುಣ್ ತಿಳಿಸಿದ್ದರೂ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಠಾಣೆಗಳ ಉಪ-ನಿರೀಕ್ಷಕರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಯನ್ನು ಸೂಚಿಸುತ್ತದೆ. ಈ ವಿಚಾರಣೆಯು ಇನ್ನಷ್ಟು ಆಳವಾದ ಸತ್ಯಗಳನ್ನು ಹೊರತರಬಹುದೆಂಬ ನಿರೀಕ್ಷೆಯಿದೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಸುಳ್ಯ23 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ23 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ20 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ನಿಧನ ವಾರ್ತೆ4 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಮಂಗಳೂರು20 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ಅಂತರ ರಾಜ್ಯ4 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ3 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ4 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















