ಮಂಗಳೂರು
Pratibha Kulai-ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್; ಪ್ರತಿಭಾ ಕುಳಾಯಿ ಆಯ್ಕೆ; ಏ.24ರಂದು ರಷ್ಯಾದ ಮಾಸ್ಕೋದಲ್ಲಿ ಪ್ರಶಸ್ತಿ ಪ್ರದಾನ
ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ 500ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ.
ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ 500ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ.
ರಷ್ಯಾದ ಮಾಸ್ಕೋದಲ್ಲಿ ಏಪ್ರಿಲ್ 24ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾಜ ಸೇವಾ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರತಿಭಾ ಕುಳಾಯಿ ಮಹಿಳೆಯರ ಸ್ವಾವಲಂಬಿ ಬದುಕು ರೂಪಿಸಲು ಮಾಡಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಹಣಕಾಸು ಸೌಲಭ್ಯ, ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಕಾನೂನು ನೆರವು, ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ ನೀಡುತ್ತಿದ್ದಾರೆ.
ಇದುವರೆಗೆ ಸಾವಿರಾರು ಮಹಿಳೆ ಮತ್ತು ವಿದ್ಯಾರ್ಥಿಗಳಿಗೆ ನೆರವು ನೀಡಿದ್ದಾರೆ.
ಸುರತ್ಕಲ್ ಕಾನ, ಬಾಳ ಪ್ರದೇಶದಲ್ಲಿರುವ ಮಂಗಳ ಮುಖಿಯರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯೊಂದಿಗೆ ಸೇರಿ ಶಾಶ್ವತ ಪುನರ್ವಸತಿಗೆ ಯೋಜನೆ ರೂಪಿಸಿದ್ದಾರೆ.
ಪ್ರತಿಭಾವಂತ ಪ್ರತಿಭಾ:
ಉನ್ನತ ಶಿಕ್ಷಣ: ಮಂಗಳೂರು ವಿವಿಯಿಂದ ಎಂ ಎಸ್ ಡಬ್ಸ್ಲುಉ ಪದವಿ, ತಮಿಳುನಾಡು ಸೇಲಂ ವಿವಿ ಯಿಂದ ಸೋಶೀಯಲ್ ವರ್ಕ್ ಗಾಗಿ ಎಂಫಿಲ್ ಪದವಿ. ಮೈಸೂರು ವಿವಿಯಿಂದ ಇಂಗ್ಲಿಷ್ ಎಂ.ಎ. ಪದವಿ ಪಡೆದಿದ್ದಾರೆ.
ಕಾಲೇಜು ಉಪನ್ಯಾಸಕಿಯಾಗಿ ಕೆಲಸ ಮಾಡಿದ ಪ್ರತಿಭಾ, ಶಿಕ್ಷಣ ಸಂಸ್ಥೆಗಳಲ್ಲಿ ಮನೋವಿಕಸನ ತಜ್ಞೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ಸಂಸ್ಥೆಗಳಲ್ಲಿ ವೃತ್ತಿ ಮಾರ್ಗದರ್ಶನ ನೀಡುತ್ತಿದ್ದಾರೆ.
ಮಂಗಳೂರು ಮಹಾನಗರಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಆಗಿ, ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದವರು. ಅತಿ ಹೆಚ್ಚು ಅನುದಾನ ಬಳಸಿ ಅಭಿವೃದ್ಧಿ ಕಾಮಗಾರಿ ನಡೆಸಿ ದಾಖಲೆ ಬರೆದವರು
*ಅಲಂಕಾರಿಕಾ ಮೀನುಸಾಕಣೆ ಕೇಂದ್ರ ನಿವರ್ವಹಿಸಿ 2011ರಲ್ಲಿ ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಕೃಷಿ ಮಹಿಳೆ ರಾಷ್ಟ್ರೀಯ ಪ್ರಶಸ್ತಿ ಗಳಿಸಿದವರು.
*ಸಮಾಜಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಹಿನ್ನೆಲೆಯಲ್ಲಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಅನುಭವ ಧಾರೆ ಎರೆಯುತ್ತಿದ್ದಾರೆ.
*ಕೊರೊನಾ ಕಾಲದಲ್ಲಿ ಲಾಕ್‌ಡೌನ್ ಸಂದರ್ಭ ಪ್ರತಿ ದಿನ 400ಕ್ಕೂ ಹೆಚ್ಚು ಮಂದಿಗೆ ಸ್ವತಃ ಊಟ ತಯಾರಿಸಿ ನಿರಾಶ್ರತಿರಿಗೆ ಹಗಲು ರಾತ್ರಿ ಊಟದ ಪ್ಯಾಕ್ ವಿತರಿಸಿದವರು.
*ಸಮಾಜ ಸೇವೆಯ ನಡುವೆ ಮೀನು ಕೃಷಿ,. ಬೇಸಾಯ, ಹಣ್ಣು ತರಕಾರಿ ತೋಟ ಕೂಡಾ ಮಾಡಿದ್ದಾರೆ. ಕಾರ್ಕಳ, ಕುಂದಾಪುರದಲ್ಲಿ ಕೃಷಿ ತಜ್ಞರೇ ಬೆರಗು ಪಡುವಂತಹ ಹಣ್ಣು ತರಕಾರಿ, ಅಡಕೆ ತೋಟ ಮಾಡಿದ್ದಾರೆ.
ಪ್ರತಿಷ್ಠಿತ ಗುರ್ಕಾರ ಮನೆತನದಲ್ಲಿ ಜನಿಸಿದ ಪ್ರತಿಭಾ ಕುಳಾಯಿ ಅವರ ಅಜ್ಜ ಶಿನಪ್ಪ ಮಾಸ್ಟರ್ ಶಿಕ್ಷಕರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸ್ಥಾಪಕಾಧ್ಯಕ್ಷ ಶೀನಪ್ಪ ಮಾಸ್ಟರ್ ಅವರ ಮಗ ಪ್ರಭಾಕರ ಕುಳಾಯಿ ಕೂಡಾ ಅದೇ ಹಾದಿಯಲ್ಲಿ ನಡೆದರು. ಮಾಸ್ಟ್ರ ಮೊಮ್ಮಗಳಾಗಿ ಸಮಾಜ ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು ದೀನ ದಲಿತರಿಗೆ ನೆರವಾಗುತ್ತಿದ್ದಾರೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ6 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು


















