Connect with us

ಸ್ಥಳೀಯ

PM Modi-ಈ ದಾಳಿ ನಡೆಸಿದವರು ಎಲ್ಲೇ ಅಡಗಿದ್ದರೂ ಅವರನ್ನು ಹುಡುಕಿ ಶಿಕ್ಷೆ ವಿಧಿಸಲಾಗುವುದು : ಬಿಹಾರದಲ್ಲಿ ಶಪಥಗೈದ ಪ್ರಧಾನಿ ಮೋದಿ

Published

on

Ad Widget

Ad Widget

Ad Widget

Ad Widget

“ಭಾರತ ಈಗ ದು:ಖದಲ್ಲಿದೆ. ಭಾರತೀಯರ ಕಣ್ಣೀರು ಶೀಘ್ರದಲ್ಲೇ ಆಕ್ರೋಶವಾಗಿ ಸ್ಫೋಟಿಸಲಿದೆ. ಅಮಾಯಕ ಜೀವಗಳನ್ನು ಬಲಿ ಪಡೆದವರನ್ನು ಭಾರತ ಹುಡುಕಿ ಕೊಲ್ಲಲಿದೆ. ಇದು ನಮ್ಮ ಶಫಥ” ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಹಲ್ಗಾಮ್‌ ಉಗ್ರ ದಾಳಿ ಹಿನ್ನೆಲೆಯಲ್ಲಿ ದೇಶದ ಜನತೆಗೆ ನೀಡಿದ ಭರವಸೆ.

Ad Widget

Ad Widget

Ad Widget

Ad Widget

ಮಧುಬನಿ: “ಭಾರತ ಈಗ ದು:ಖದಲ್ಲಿದೆ. ಭಾರತೀಯರ ಕಣ್ಣೀರು ಶೀಘ್ರದಲ್ಲೇ ಆಕ್ರೋಶವಾಗಿ ಸ್ಫೋಟಿಸಲಿದೆ. ಅಮಾಯಕ ಜೀವಗಳನ್ನು ಬಲಿ ಪಡೆದವರನ್ನು ಭಾರತ ಹುಡುಕಿ ಕೊಲ್ಲಲಿದೆ. ಇದು ನಮ್ಮ ಶಫಥ” ಇದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಹಲ್ಗಾಮ್‌ ಉಗ್ರ ದಾಳಿ ಹಿನ್ನೆಲೆಯಲ್ಲಿ ದೇಶದ ಜನತೆಗೆ ನೀಡಿದ ಭರವಸೆ.

Ad Widget

Ad Widget alt="Ad Widget"/>

Ad Widget

3,480 ಕೋಟಿ ರೂ.ಗಳಿಗೂ ಹೆಚ್ಚಿನ ಅಭಿವೃದ್ಧಿ ಯೋಜನೆಗಳಿಗೆ ಬಿಹಾರದ ಮಧುಬನಿಯಲ್ಲಿ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಭಾಷಣ ಆರಂಭಕ್ಕೂ ಮುನ್ನ ಪಹಲ್ಗಾಮ್‌ ದಾಳಿಯಲ್ಲಿ ಹತರಾದವರ ಸ್ಮರಣಾರ್ಥ ಮೌನಾಚರಣೆ ನಡೆಸಿದರು. ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, “ಇಡೀ ದೇಶ ಮೃತರ ಕುಟುಂಬಸ್ಥರ ನೋವಿನಲ್ಲಿ ಭಾಗಿಯಾಗಿದೆ” ಎಂದು ಭಾವುಕರಾಗಿ ಹೇಳಿದರು.

Ad Widget

Ad Widget <> Ad Widget

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಅತ್ಯುಗ್ರವಾಗಿ ಖಂಡಿಸಿದ ಪ್ರಧಾನಿ ಮೋದಿ, ಇಂತಹ ರಣಹೇಡಿ ಕೃತ್ಯ ನಡೆಸಿದ ಭಯೋತ್ಪಾದಕರು ಎಲ್ಲೇ ಅಡಗಿದ್ದರೂ ಅವರನ್ನು ಹಿಡಿದು ಶಿಕ್ಷಿಸುವುದಾಗಿ ಶಪಥ ಮಾಡಿದರು.

“ಪಹಲ್ಗಾಮ್‌ ಉಗ್ರ ದಾಳಿಯನ್ನು ಖಂಡಿಸಲು ಪದಗಳು ಸಿಗುತ್ತಿಲ್ಲ. ಈ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರ ನೋವಿನಲ್ಲಿ ನಾವೆಲ್ಲಾ ಭಾಗಿಯಾಗಿದ್ದೇವೆ. ಆದರೆ ಈ ಅಮಾನವೀಯ ದಾಳಿಯನ್ನು ನಡೆಸಿದ ಉಗ್ರರನ್ನು ಶಿಕ್ಷಿಸದ ಹೊರತು, ಕೇಂದ್ರ ಸರ್ಕಾರ ನೆಮ್ಮದಿಯಿಂದ ನಿದ್ದೆ ಮಾಡುವುದಿಲ್ಲ” ಎಂದು ಪ್ರಧಾನಿ ಮೋದಿ ಗುಡುಗಿದರು.

Ad Widget

Ad Widget

“ಪಹಲ್ಗಾಮ್ ದಾಳಿ ನಡೆಸಿದವರಿಗೆ ಅತ್ಯುಗ್ರ ಶಿಕ್ಷೆ ಕಾದಿದೆ. ಭಾರತಾಂಬೆಯ ಮಕ್ಕಳನ್ನು ಅತ್ಯಂತ ಅಮಾನವೀಯವಾಗಿ ಕೊಂದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪಹಲ್ಗಾಮ್‌ ಉಗ್ರ ದಾಳಿಯಿಂದ ಭಾರತದಲ್ಲಿ ಮನೆ ಮಾಡಿರುವ ಆಕ್ರೋಶವನ್ನು ನಾವು ಗೌರವಿಸುತ್ತೇವೆ. ಶೀಘ್ರದಲ್ಲೇ ಈ ಉಗ್ರರನ್ನು ಹೆಡೆಮುರಿ ಕಟ್ಟಲಾಗುವುದು” ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಪಹಲ್ಗಾಮ್‌ನಲ್ಲಿ ದೇಶದ ಮೂಲೆ ಮೂಲೆಗಳಿಂದ ಬಂದಿದ್ದ ಪ್ರವಾಸಿಗರು ಹತರಾಗಿದ್ದಾರೆ. ಇಡೀ ದೇಶ ಈ ಉಗ್ರ ದಾಳಿಯಿಂದ ಆಕ್ರೋಶಗೊಂಡಿದೆ. ಭಾರತ ಸರ್ಕಾರ ಇದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಿದ್ದು, ನಮ್ಮವರನ್ನು ಕೊಂದ ಪಾಪಿಗಳು ಎಲ್ಲೇ ಅಡಗಿದ್ದರೂ ಸರಿ, ಅವರನ್ನು ಹುಡುಕಿ ಶಿಕ್ಷಿಸುವುದು ಖಚಿತ” ಎಂದು ಪ್ರಧಾನಿ ಮೋದಿ ಹೇಳಿದರು.

“ಪಹಲ್ಗಾಮ್‌ ದಾಳಿಯ ಹಿಂದಿರುವ ಕಾಣದ ಶಕ್ತಿಗಳ ಬಗ್ಗೆ ನಾವು ಚೆನ್ನಾಗಿ ಅರಿತಿದ್ದೇವೆ. ಉಗ್ರರ ಮೂಲಕ ಭಾರತೀಯರನ್ನು ಕೊಲ್ಲಿಸಿ ರಾಕ್ಷಸ ನಗು ಬೀರುತ್ತಿರುವವರು ಮುಂದಿನ ದಿನಗಳಲ್ಲಿ ಕಣ್ಣೀರು ಹಾಕಲಿದ್ದಾರೆ. ಪಹಲ್ಗಾಮ್‌ ದಾಳಿ ನಡೆಸಿದವರು ಮತ್ತು ದಾಳಿಯ ಯೋಜನೆ ರೂಪಿಸಿದವರು ಇಬ್ಬರಿಗೂ ಶಿಕ್ಷೆ ಕಟ್ಟಿಟ್ಟ ಬುತ್ತಿ” ಎಂದು ಪ್ರಧಾನಿ ಮೋದಿ ಇದೇ ವೇಳೆ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಒಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಖಂಡಿಸಿದ್ದು, ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳುವುದಾಗಿ ದೇಶದ ಜನತೆಗೆ ಭರವಸೆ ನೀಡಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!