ಸ್ಥಳೀಯ
Ramesh Bhat Uppangala-ಜಿಲ್ಲೆಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಡಬದ ಆಲಂಕಾರು ಸಹಕಾರ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿಗೆ ತೀವ್ರ ಮುಖಭಂಗ; ಹೈಕೋರ್ಟ್ ತೀರ್ಪು ಪ್ರಕಟ : ರಮೇಶ್ ಭಟ್ ಉಪ್ಪಂಗಳ ಬಣಕ್ಕೆ ಜಯಭೇರಿ
ಜಿಲ್ಲೆಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಡಬ ತಾಲೂಕಿನ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಡಬ: ಜಿಲ್ಲೆಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಡಬ ತಾಲೂಕಿನ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಹಿಂದೆ ಫಲಿತಾಂಶ ಪ್ರಕಟಣೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಬಿಜೆಪಿಯ ಅಧಿಕೃತ ಬಣಕ್ಕೆ ಸೆಡ್ಡು ಹೊಡೆದು ಸ್ಪರ್ಧಿಸಿದ್ದ ರಮೇಶ್ ಭಟ್ ಉಪ್ಪಂಗಳ ನೇತೃತ್ವದ ಬಣವು ಸಂಘದ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಈ ಮೂಲಕ ಬಿಜೆಪಿ ನೇತೃತ್ವದ ಸಹಕಾರ ಭಾರತಿಗೆ ತೀವ್ರ ಮುಖಭಂಗವಾಗಿದೆ.
ಸಂಘದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲು ಮಾರ್ಚ್ 2 ರಂದು ಸಂಘದ ಪ್ರಧಾನ ಕಚೇರಿಯಲ್ಲಿ ಚುನಾವಣೆ ನಡೆದಿತ್ತು. ಈ ಸಂದರ್ಭದಲ್ಲಿ, ಕೆಲ ಮತದಾರರನ್ನು ಅನರ್ಹರೆಂದು ಪರಿಗಣಿಸಲಾಗಿದ್ದರೂ, ಹೈಕೋರ್ಟ್ ಅವರಿಗೆ ಮತದಾನ ಮಾಡಲು ಅವಕಾಶ ನೀಡಿತ್ತು. ಆದರೆ, ಮತ ಎಣಿಕೆ ನಡೆಸಿದ ಬಳಿಕ ಫಲಿತಾಂಶವನ್ನು ಘೋಷಿಸದಂತೆ ತಡೆ ನೀಡಿತ್ತು. ಈ ಕಾರಣದಿಂದಾಗಿ, ಮತ ಎಣಿಕೆ ಪೂರ್ಣಗೊಂಡಿದ್ದರೂ ಚುನಾವಣಾಧಿಕಾರಿಯವರು ಅಂತಿಮ ಫಲಿತಾಂಶವನ್ನು ಪ್ರಕಟಿಸಿರಲಿಲ್ಲ.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಏಪ್ರಿಲ್ 24 ರಂದು ತನ್ನ ಆದೇಶವನ್ನು ಪ್ರಕಟಿಸಿದೆ. ಅನರ್ಹ ಮತದಾರರೆಂದು ಪರಿಗಣಿಸಲ್ಪಟ್ಟವರ ಪರ ವಕೀಲರು ತಮ್ಮ ರಿಟ್ ಅರ್ಜಿಯನ್ನು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ, ಚುನಾವಣೆಯಲ್ಲಿ ಕೇವಲ ಅರ್ಹ ಮತದಾರರು ಚಲಾಯಿಸಿದ ಮತಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಅಂತಿಮ ಫಲಿತಾಂಶವನ್ನು ಘೋಷಿಸುವಂತೆ ಚುನಾವಣಾಧಿಕಾರಿಗೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ.
ಈ ತೀರ್ಪಿನನ್ವಯ, ರಮೇಶ್ ಭಟ್ ಉಪ್ಪಂಗಳ ಬಣದ 10 ಅಭ್ಯರ್ಥಿಗಳು ಮತ್ತು ಸಹಕಾರ ಭಾರತಿ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆಯಾಗಲಿದ್ದಾರೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಚುನಾವಣಾಧಿಕಾರಿಯವರು ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಆಯ್ಕೆಯಾದವರು : ಸಹಕಾರ ಭಾರತಿಯ 12, ರಮೇಶ್ ಭಟ್ ಉಪ್ಪಂಗಳ ಸಹಕಾರಿ ಬಳಗದ 12 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದರು. ರಮೇಶ್ ಭಟ್ ಉಪ್ಪಂಗಳ ಸಹಕಾರಿ ಬಳಗದಿಂದ ಸಾಮಾನ್ಯ ಕ್ಷೇತ್ರದಿಂದ ರಮೇಶ್ ಭಟ್ ಉಪ್ಪಂಗಳ, ಪದ್ಮಪ್ಪ ಗೌಡ, ದಯಾನಂದ ರೈ ಮನವಳಿಕೆ, ಕೇಶವ ಗೌಡ ಆಲಡ್ಕ ಉದಯ ಎಸ್. ಸಾಲ್ಯಾನ್, ಸಾಲಗಾರ ಮಹಿಳಾ ಮೀಸಲು ಕ್ಷೇತ್ರದಿಂದ ರತ್ನಾ ಬಿ.ಕೆ., ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ವಿಜಯ ಎಸ್., ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಿಂದ ಪದ್ಮಪ್ಪ ಗೌಡ ಕೆ., ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕುಂಞ ಮುಗೇರ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಅಶೋಕ, ಸಾಲಗಾರರಲ್ಲದ ಕ್ಷೇತ್ರದಿಂದ ಲೋಕೇಶ ಆಯ್ಕೆಯಾಗಿದ್ದಾರೆ.ಬಿಜೆಪಿ ಬೆಂಬಲಿತರಾದ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಅಶೋಕ ಗೋಕುಲನಗರ ಹಾಗೂ ಸಾಲಗಾರ ಮಹಿಳಾ ಮಹಿಳಾ ಮೀಸಲು ಕ್ಷೇತ್ರದಿಂದ ಗಾಯತ್ರಿ ಆಯ್ಕೆಯಾಗಿದ್ದಾರೆ. ಸೊಸೈಟಿ ಆಕ್ಟ್ ನ ನಿಭಂದನೆಗಳನ್ನು ಪೊರೈಸದ ಕಾರಣಕ್ಕೆ. ಹಲವು ಸಂಘದ ಸದಸ್ಯರ ಹೆಸರನ್ನು ಆರ್ಹ ಮತದಾರರ ಪಟ್ಟಿಯಿಂದ ಕೈ ಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅನರ್ಹಗೊಂಡಿದ್ದ ಮತದಾರರ ಪರವಾಗಿ ಎಲ್ಯಣ್ಣ ಪೂಜಾರಿ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ 423 ಮಂದಿಗೆ ಮತದಾನಕ್ಕೆ ಅವಕಾಶ ನೀಡಿ ಮುಂದಿನ ಆದೇಶದ ತನಕ ಫಲಿತಾಂಶ ಘೋಷಣೆಗೆ ತಡೆ ನೀಡಿತ್ತು.ಈ ಹಿನ್ನಲೆಯಲ್ಲಿ ಮತ ಎಣಿಕೆ ನಡೆದರೂ, ಚುನಾವಣಾಧಿಕಾರಿಯವರು ಫಲಿತಾಂಶ ಘೋಷಣೆ ಮಾಡಿಲ್ಲ. ಹೈಕೋರ್ಟ್ ಆದೇಶದ ಬಳಿಕ ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಶಿವಲಿಂಗಯ್ಯ ತಿಳಿಸಿದ್ದರು.
ಮತದಾನದ ಸಮಯದಲ್ಲಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಈ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿತ್ತು. ಶಾಸಕಿ ಭಾಗಿರಥಿ ಮುರುಳ್ಯ, ಸುಳ್ಯ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡೆ ಆಶಾ ತಿಮ್ಮಪ್ಪ ಗೌಡ ಚುನಾವಣೆ ಸಂದರ್ಭ ಆಲಂಕಾರಿನಲ್ಲೇ ಬೀಡುಬಿಟ್ಟಿದ್ದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು12 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized11 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಅಂತರ ರಾಜ್ಯ9 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್12 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ10 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್4 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















