ಸ್ಥಳೀಯ
Vatsale-ಉಜಿರೆ: “ವತ್ಸಲೆ” ಕೃತಿ ಬಿಡುಗಡೆ; “ವಾತ್ಸಲ್ಯ” ನಿವಾಸಿಗಳ ಸಂತೃಪ್ತ ಜೀವನ ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡಿದೆ-ಡಿ. ವೀರೇಂದ್ರ ಹೆಗ್ಗಡೆ
“ವಾತ್ಸಲ್ಯ” ಮನೆ ನಿವಾಸಿಗಳ ಸಂತೃಪ್ತ ಮತ್ತು ನೆಮ್ಮದಿಯ ಜೀವನ ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿಯನ್ನು ನೀಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಉಜಿರೆ: “ವಾತ್ಸಲ್ಯ” ಮನೆ ನಿವಾಸಿಗಳ ಸಂತೃಪ್ತ ಮತ್ತು ನೆಮ್ಮದಿಯ ಜೀವನ ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿಯನ್ನು ನೀಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಬುಧವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೂಜಾ ಪ್ರಶಾಂತ್ ಶೆಟ್ಟಿ ರಚಿಸಿದ “ವತ್ಸಲೆ” ಕೃತಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ತಾವು ಇತ್ತೀಚೆಗೆ ಮೈಸೂರಿನಲ್ಲಿ “ವಾತ್ಸಲ್ಯ” ಮನೆಗೆ ಭೇಟಿ ನೀಡಿ ಪುಟ್ಟ ಮನೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿದ್ದು ನಿವಾಸಿಗಳ ಸಂತೃಪ್ತ ಜೀವನ ಕಂಡು ತಮಗೆ ಅತೀವ ಸಂತೋಷ ಮತ್ತು ತೃಪ್ತಿ ಉಂಟಾಯಿತು ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳಾ ಸಬಲೀಕರಣದ ರೂವಾರಿ ಹೇಮಾವತಿ ವೀ. ಹೆಗ್ಗಡೆಯವರ ಕನಸಿನ ಕೂಸು “ವಾತ್ಸಲ್ಯ” ಯೋಜನೆ. ಬದುಕಿನುದ್ದಕ್ಕೂ ಶ್ರಮ ಜೀವನ ಮಾಡಿ ಹೋರಾಡಿ ಬಳಲಿ ಬೆಂಡಾದ ಹಿರಿಯ ಜೀವಗಳಿಗೆ ಅಂತಿಮ ದಿನಗಳಲ್ಲಿ ಗೌರವದ, ನೆಮ್ಮದಿಯ ಸಂತೃಪ್ತ ಜೀವನ ಮಾಡಲು ಸೂರನ್ನು ಕಟ್ಟಿ ಕೊಡುವ ಕಾರ್ಯಕ್ರಮವೇ “ವಾತ್ಸಲ್ಯ”. ರಾಜ್ಯದೆಲ್ಲೆಡೆ ಈಗಾಗಲೆ 610 ಮನೆಗಳನ್ನು ಈ ಯೋಜನೆಯಡಿ ನಿರ್ಮಿಸಿದ್ದು ಬಡವರ ಪಾಲಿಗೆ ಆಶಾಜ್ಯೋತಿಯಾಗಿ, “ನಂದಾದೀಪ”ವಾಗಿ ಬೆಳಗುತ್ತಿವೆ.
ಲೇಖಕಿ ಪೂಜಾಪ್ರಶಾಂತ್ ಶೆಟ್ಟಿ ಫಲಾನುಭವಿಗಳ ಅನುಭವ, ಅನಿಸಿಕೆಗಳನ್ನು ಹೃದಯಸ್ಪರ್ಶಿಯಾಗಿ ಕಥೆಗಳ ಮೂಲಕ ಸಾದರಪಡಿಸಿದ್ದಾರೆ. ಇವರಿಗೆ ಸಂದೀಪ್ ದೇವ್ ಸಹಕರಿಸಿರುತ್ತಾರೆ.
ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ “ವಾತ್ಸಲ್ಯ” ಯೋಜನೆಯ ಅನುಷ್ಠಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ನಿಷ್ಠೆ, ಕಾಳಜಿ ಹಾಗೂ ಶ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು.
ಇದು ತಮಗೆ ಅತ್ಯಂತ ಆಪ್ತವಾದ ಕಾರ್ಯಕ್ರಮವಾಗಿದ್ದು “ವಾತ್ಸಲ್ಯ” ನಿವಾಸಿಗಳ ಪ್ರೀತಿ, ವಿಶ್ವಾಸ ಹಾಗೂ ಗೌರವ ತಿಳಿದು ನಮಗೆ ಸಂತೋಷವಾಗಿದೆ. ತಮ್ಮನ್ನೂ ಪ್ರೀತಿಸುವವರು “ಅಭಯ” ನೀಡುವವರೂ ಇದ್ದಾರೆ ಎಂಬ ವಿಶ್ವಾಸದಿಂದ ಅವರು ಇಂದು ಸಂತೃಪ್ತ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.
ಲೇಖಕಿ ಪೂಜಾ ಪ್ರಶಾಂತ್ ಶೆಟ್ಟಿ ಅವರನ್ನು ಹೇಮಾವತಿ ವೀ. ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು. ಡಿ. ಸುರೇಂದ್ರ ಕುಮಾರ್, ಅನಿತಾಸುರೇಂದ್ರ ಕುಮಾರ್, ಸೋನಿಯಾಯಶೋವರ್ಮ, ಅಮಿತ್, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ನಿಶ್ಚಲ್ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾದೇಶಿಕ ಹಣಕಾಸು ನಿರ್ದೇಶಕರು ಶಾಂತಾರಾಮ ಪೈ, ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಬಿಗ್ ನ್ಯೂಸ್24 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















