Connect with us

ಸ್ಥಳೀಯ

Bodyguard arrested-ರಿಕ್ಕಿ ರೈ ಶೂಟೌಟ್‌ ಪ್ರಕರಣ: ಬಾಡಿಗಾರ್ಡ್ ಮೋನಪ್ಪ ಅರೆಸ್ಟ್

Published

on

Ad Widget

Ad Widget

Ad Widget

Ad Widget

ರಾಮನಗರದಲ್ಲಿ ಕೆಲವು ದಿನಗಳ ಹಿಂದೆ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮೇಲೆ ಗುಂಡು ಹಾರಿಸಲಾಗಿತ್ತು. ಈ ಕೇಸಲ್ಲಿ, ಈಗ ರಿಕ್ಕಿ ರೈ ಅವರ ಬಾಡಿಗಾರ್ಡ್ ಆಗಿದ್ದ ಮೋನಪ್ಪ ವಿಠಲ ಎಂಬುವವರನ್ನು ಬಿಡದಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ರಾಮನಗರದಲ್ಲಿ ಕೆಲವು ದಿನಗಳ ಹಿಂದೆ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮೇಲೆ ಗುಂಡು ಹಾರಿಸಲಾಗಿತ್ತು. ಈ ಕೇಸಲ್ಲಿ, ಈಗ ರಿಕ್ಕಿ ರೈ ಅವರ ಬಾಡಿಗಾರ್ಡ್ ಆಗಿದ್ದ ಮೋನಪ್ಪ ವಿಠಲ ಎಂಬುವವರನ್ನು ಬಿಡದಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಅರೆಸ್ಟ್ ಮಾಡಿದ ಮೋನಪ್ಪನನ್ನು ಕೋರ್ಟಿಗೆ ಹಾಜರುಪಡಿಸಿ, 10 ದಿನಗಳ ಕಾಲ ಹೆಚ್ಚಿನ ವಿಚಾರಣೆ ಮಾಡಲು ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಎರಡು ದಿನಗಳ ಹಿಂದೆ ವಿಚಾರಣೆಗೆ ಕರೆದಾಗ, ಮೋನಪ್ಪ ಅವರಿಗೆ ಎದೆ ನೋವು ಬಂದಿತ್ತು. ಆಸ್ಪತ್ರೆಗೆ ಸೇರಿಸಿದ್ದರು. ಈಗ ಹುಷಾರಾದ ಮೇಲೆ ಅರೆಸ್ಟ್ ಮಾಡಲಾಗಿದೆ.

Ad Widget

Ad Widget <> Ad Widget

ಯಾಕೆ ಅರೆಸ್ಟ್?
ಪೊಲೀಸರಿಗೆ ಮೋನಪ್ಪನ ಮೇಲೆ ಅನುಮಾನ ಬಂದಿದೆ. ಅವರ ಹತ್ತಿರ ಇದ್ದ ಗನ್ (ಬಂದೂಕು) ತೆಗೆದುಕೊಂಡಿದ್ದಾರೆ. ಆ ಗನ್‌ನಲ್ಲಿ ಇರಬೇಕಾದಷ್ಟು ಗುಂಡುಗಳು ಇರಲಿಲ್ಲ. ಅಲ್ಲದೇ ಆತನ ನಡವಳಿಕೆಯೂ ಸರಿ ಇರಲಿಲ್ಲ. ಅದಕ್ಕಾಗಿ ಅವನನ್ನು ಅರೆಸ್ಟ್ ಮಾಡಿದ್ದಾರೆ.

ರಿಕ್ಕಿ ರೈ ಜೊತೆ ಇದ್ದ ಬೇರೆ ಬಾಡಿಗಾರ್ಡ್‌ಗಳ 7 ಗನ್‌ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಯಾವ ಗನ್‌ನಿಂದ ಗುಂಡು ಹಾರಿಸಿದ್ದು ಎಂದು ಲ್ಯಾಬ್ ರಿಪೋರ್ಟ್ ಬಂದ ಮೇಲೆ ತಿಳಿಯುತ್ತದೆ.

Ad Widget

Ad Widget

ಪೊಲೀಸರು ಮುತ್ತಪ್ಪ ರೈ ಅವರ ಹಳೆಯ ಸ್ನೇಹಿತ ರಾಕೇಶ್ ಮಲ್ಲಿ ಮತ್ತು ಇನ್ನೊಬ್ಬ ಆರೋಪಿ ನಿತೀಶ್ ಶೆಟ್ಟಿಯನ್ನು ವಿಚಾರಣೆ ಮಾಡಿದ್ದಾರೆ. ಇನ್ನೂ ಇಬ್ಬರು ಆರೋಪಿಗಳಾದ ಅನುರಾಧಾ ಮತ್ತು ವೈದ್ಯನಾಥನ್ ವಿಚಾರಣೆಗೆ ಬರಲು ಸ್ವಲ್ಪ ಸಮಯ ಬೇಕು ಎಂದು ಕೇಳಿದ್ದಾರೆ ಎಂದು ಎಸ್‌.ಪಿ. ತಿಳಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ಸವಣೂರು ಸಹಕಾರ ಸಂಘ; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರದಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸವಣೂರು ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸವಣೂರು ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!