Connect with us

ಬಿಗ್ ನ್ಯೂಸ್

SDPI members-ಡಿ.ಜೆ ಹಳ್ಳಿ ಠಾಣೆಗೆ ಬೆಂಕಿ ಹಚ್ಚಿದ ಆರೋಪಿಯ ಕೊಲೆ : SDPI ಯ ಮೂವರ ಬಂಧನ

Published

on

Ad Widget

Ad Widget

Ad Widget

Ad Widget

ಡಿ.ಜಿ.ಹಳ್ಳಿ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯನ್ನು ಕೊಲೆ ಮಾಡಿ ಪರಾರಿ ಆಗಿದ್ದ ಮೂವರು ಆರೋಪಿಗಳಾದ, ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರಾದ ಮೊಹಮ್ಮದ್ ಓವೈಸ್, ಅಬ್ದುಲ್ ಅಲೀಮ್ ಹಾಗೂ ಮೊಹಮ್ಮದ್ ಹನೀಫ್ ನನ್ನು ಗೋವಿಂದಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಡಿ.ಜಿ.ಹಳ್ಳಿ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯನ್ನು ಕೊಲೆ ಮಾಡಿ ಪರಾರಿ ಆಗಿದ್ದ ಮೂವರು ಆರೋಪಿಗಳಾದ, ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರಾದ ಮೊಹಮ್ಮದ್ ಓವೈಸ್, ಅಬ್ದುಲ್ ಅಲೀಮ್ ಹಾಗೂ ಮೊಹಮ್ಮದ್ ಹನೀಫ್ ನನ್ನು ಗೋವಿಂದಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಏಪ್ರಿಲ್ 22ರ ರಾತ್ರಿ ಆಟೊದಲ್ಲಿ ಬಂದಿದ್ದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಇರ್ಫಾನ್‌ನನ್ನು ಕೊಲೆ ಮಾಡಿ ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.

Ad Widget

Ad Widget <> Ad Widget

ಇರ್ಫಾನ್ ಅಂದು ರಾತ್ರಿ 11 ಗಂಟೆಯ ಸುಮಾರಿಗೆ ಪತ್ನಿಯನ್ನು ಬಿಟ್ಟು ಎಚ್‌ಬಿಆರ್ ಲೇಔಟ್ ಬಳಿ ನಡೆದುಕೊಂಡು ಹೋಗುತ್ತಿದ್ದ. ಆಗ ಆಟೊದಲ್ಲಿ ಬಂದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಜೈಲಿನಲ್ಲೇ ಕೊಲೆಗೆ ಸಂಚು:
‘2020ರಲ್ಲಿ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಈ ಗಲಭೆ ಪ್ರಕರಣದ ಸಂಬಂಧ ಇರ್ಫಾನ್‌ನನ್ನು ಪೊಲೀಸರು ಬಂಧಿಸಿದ್ದರು. ಈತನ ಜತೆಗೆ ಅಬ್ಬಾಸ್ ಎಂಬಾತ ಸಹ ಜೈಲು ಸೇರಿದ್ದ. ಇಬ್ಬರೂ ಸ್ನೇಹಿತರಾಗಿದ್ದರು. ಕೆಲವು ತಿಂಗಳ ಹಿಂದೆ ಇರ್ಫಾನ್ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಜೈಲಿನಿಂದ ಹೊರಬಂದಿದ್ದ ಇರ್ಫಾನ್, ಅಬ್ಬಾಸ್‌ನ ಪತ್ನಿಯನ್ನು ಪರಿಚಯಿಸಿಕೊಂಡಿದ್ದ. ಆಕೆಯ ಜತೆಗೆ ಸ್ನೇಹ ಬೆಳೆಸಿದ್ದ. ಅಬ್ಬಾಸ್‌ನಿಂದ ವಿಚ್ಛೇದನ ಪಡೆಯುವಂತೆ ಇರ್ಫಾನ್ ಹೇಳುತ್ತಿದ್ದ. ಈ ವಿಷಯ ಜೈಲಿನಲ್ಲಿದ್ದ ಅಬ್ಬಾಸ್‌ಗೆ ಗೊತ್ತಾಗಿತ್ತು. ಜೈಲಿನಲ್ಲೇ ಕೊಲೆಗೆ ಸಂಚು ರೂಪಿಸಿದ್ದ’ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

‘ಸ್ನೇಹಿತರಾಗಿದ್ದ ಮೂವರು ಆರೋಪಿಗಳಿಗೆ ಅಬ್ಬಾಸ್ ಸುಪಾರಿ ನೀಡಿದ್ದ. ಅವರು ಆಟೊದಲ್ಲಿ ಬಂದು ಇರ್ಫಾನ್ ಕೊಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

ಬಂಧಿತ ಆರೋಪಿಗಳೆಲ್ಲರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರಾಗಿದ್ದರು. ಪ್ರಸ್ತುತ ಎಸ್‌ಡಿಪಿಐನಲ್ಲಿ ಇದ್ದರು. ಬಂಧಿತ ಮೂವರು ಆರೋಪಿಗಳು ಈ ಹಿಂದೆಯೂ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!