ವೈರಲ್ ನ್ಯೂಸ್
Indian Army Attack | ಪೆಹಲ್ಗಮ್ ನರಮೇಧ : ಉಗ್ರರ ಮನೆಗಳ ಧ್ವಂಸಕ್ಕಿಳಿದ ಸೇನೆ : ಉಗ್ರರ ಬೆಂಬಲಿಗರ ಬಂಧನ – ಸಾಮಾಜಿಕ ಕಾರ್ಯಕರ್ತನ ಗುಂಡಿಕ್ಕಿ ಕೊಂದ ಉಗ್ರ : ಪ್ರತಿಕಾರಕ್ಕಾಗಿ ತೀವ್ರ ಒತ್ತಾಯ
ಕಾಶ್ಮೀರ : ಪ್ರವಾಸಿಗರ ಮೇಲೆ ಕಿಂಚಿತ್ತು ಕರುಣೆ ಇಲ್ಲದೇ ಮನಸೋ ಇಚ್ಚೆ ಗುಂಡಿನ ಮಳೆಗೈದಿದ್ದ ಕ್ರಿಮಿಗಳ ನಾಶಕ್ಕೆ ತೊಡೆತಟ್ಟಿ ನಿಂತಿರುವ ಭಾರತೀಯ ಸೇನೆ ಉಗ್ರರನ್ನು ಹುಡುಕುತ್ತಿದೆ (Indian Army Attack). ಸೇನೆ ಪ್ರತೀಕಾರ ತೀರಿಸಿಕೊಳ್ಳಲು ಪಣತೊಟ್ಟು ನಿಂತಿದೆ. ಭಾರತೀಯರನ್ನು ಕೊಂದು ರಣಕೇಕೆ ಹಾಕಿದ್ದ ಪಾಪಿಗಳ ಮನೆಯನ್ನು ಈಗ ಉಡೀಸ್ ಮಾಡಿದೆ.
ಹಿಂದಿನಿಂದಲೂ ಜಮ್ಮು ಕಾಶ್ಮೀರದ ಭದ್ರತೆಯ ಹೊಣೆ ಕೇಂದ್ರ ಸರ್ಕಾರದ ಗೃಹ ಸಚಿವಲಾಯದ್ದಾಗಿದೆ. ಅಲ್ಲಿಯ ಪೊಲೀಸ್ ಮತ್ತು ಭಾರತೀಯ ಸೇನೆ ಎರಡೂ ಕೇಂದ್ರ ಸರ್ಕಾರದ ಅಧಿನದಲ್ಲಿದೆ.
ಸಾವಿರಾರು ಪ್ರವಾಸಿಗರಿರುವ ಪೆಹಲ್ಗಮ್ ನಲ್ಲಿ ಒಬ್ಬನೇ ಒಬ್ಬ ಸೇನಾ ಭದ್ರತೆ ಒದಗಿಸದೇ ಭದ್ರತಾ ವೈಫಲ್ಯವನ್ನೇಸಗಿ ಅಷ್ಟು ಪ್ರವಾಸಿಗರ ಹತ್ಯೆಗೆ ಕಾರಣ ಕೇಂದ್ರ ಸರ್ಕಾರವೆಂದು ಸಾಮಾಜಿಕ ಜಾಲತಾಣದಲ್ಲಿ ಜನಸಾಮಾನ್ಯರು ಹಾಗೂ ಹತ್ಯೆಯಾದ ಮನೆಯವರೂ ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ ತನ್ನ ಭದ್ರತಾ ವೈಫಲ್ಯವನ್ನು ಒಪ್ಪಿಕೊಂಡಿತ್ತು.
ನಿನ್ನೆ ಪೆಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಆದಿಲ್ಲ ಹಾಗೂ ಆಸೀಫ್ ಮನೆಗಳನ್ನು ನುಚ್ಚು ನೂರು ಮಾಡಿತ್ತು. ಇವತ್ತು ಐದು ಉಗ್ರರ ಮನೆಗಳನ್ನು ಧ್ವಂಸ ಮಾಡಿ ಪರಮ ಪಾಪಿಗಳನ್ನು ಹುಟ್ಟಡಗಿಸಲು ನಿರ್ಧಾರ ಮಾಡಿದೆ. ಜಮ್ಮು-ಕಾಶ್ಮೀರದಾದ್ಯಂತ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಿಲದಲ್ಲಿ ಅಡಗಿ ಕುಳಿತರು ನಿಮ್ಮನ್ನ ಬಿಡಲ್ಲ ಎಂಬ ಸಂದೇಶವನ್ನು ಸೇನೆ ರವಾನಿಸಿದೆ.
ದೇಶಾದ್ಯಂತ ಪೆಹಲ್ಗಮ್ ನರಮೇಧಕ್ಕೆ ಪ್ರತಿಕಾರದ ಕೂಗು ಹೆಚ್ಚಾಗುತ್ತಲೇ, ಉಗ್ರರನ್ನು ಬುಡಸಮೇತ ನಿರ್ನಾಮ ಮಾಡಲು ಪಣತೊಟ್ಟಿರುವ ಸೈನಿಕರು ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಸೇನಾ ಮುಖ್ಯಸ್ಥರು ಕಾಶ್ಮೀರಕ್ಕೆ ಭೇಟಿ ನೀಡಿದ ಬಳಿಕ ಸೈನಿಕರು ತಮ್ಮ ಆಪರೇಷನ್ ಅನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಪಾಕ್ ಉಗ್ರರಿಗೆ ಒಂದರಂತೆ ಹೊಡೆತವನ್ನು ನೀಡುತ್ತಿದೆ. ಉಗ್ರರರು ನೆಲೆಸಿರುವ ಪ್ರದೇಶಕ್ಕೆ ನುಗ್ಗಿ ಭಾರತೀಯ ಸೇನೆ ಹೊಡೆಯುತ್ತಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಿದೆ.
ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ.
ಈತ ಕಳೆದ ಮೂರ್ನಾಲ್ಕು ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತು ದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಲಾಗಿದೆ.
ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೂಡ ಕೆಡವಲಾಗಿದೆ.
ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎಂದು ಹೇಳಲಾಗಿದೆ. ಜೂನ್ 2023ರಿಂದ ಸಕ್ರಿಯವಾಗಿರುವ ಎಲ್‌ಇಟಿ ಭಯೋತ್ಪಾದಕ ಎಹ್ಸಾನ್ ಅಹ್ಮದ್ ಶೇಖ್ನ ಮತ್ತೊಂದು ಎರಡಂತಸ್ತಿನ ಮನೆಯನ್ನು ಕೆಡವಲಾಗಿದೆ. ಐದನೇ ಭಯೋತ್ಪಾದಕ ಹರಿಸ್ ಅಹ್ಮದ್‌ನ ಪುಲ್ವಾಮಾದ ಕಚಿಪೋರಾ ಪ್ರದೇಶದಲ್ಲಿರುವ ಮನೆಯನ್ನು ಕೂಡ ಸ್ಫೋಟ ಮಾಡಲಾಗಿದೆ. ಈ ಎಲ್ಲ ಭಯೋತ್ಪಾದಕರನ್ನು ವಾಂಟೆಡ್ ಲಿಸ್ಟ್ಗೆ ಸೇರಿಸಲಾಗಿದೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಅನಂತ್‌ನಾಗ್ ಪೊಲೀಸರು ಗುರುವಾರ ಬಿಡುಗಡೆ ಮಾಡಿದ್ದರು . ಇತರ ಇಬ್ಬರು ಶಂಕಿತರಾದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ.
ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಪ್ರದೇಶದಲ್ಲಿ ಇವರ ಹುಡುಕಾಟಕ್ಕೆ ಕಾರ್ಯಚರಣೆ ನಡೆಸಿದ್ದಾರೆ.
ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಸುಮಾರು ಆರೋಪಗಳು ಕೇಳಿಬಂದಿದ್ದವು, ಸ್ಥಳೀಯರ ಸಹಾಯ ಇಲ್ಲದೇ ಈ ದಾಳಿ ನಡೆಯಲು ಸಾಧ್ಯವಿಲ್ಲ, ಅಲ್ಲಿದ್ದವರೇ ಕುತಂತ್ರಿ ಕೆಲಸವನ್ನು ಮಾಡಿದ್ದಾರೆ ಎಂದೆಲ್ಲ ಆರೋಪ ಮಾಡಿದ್ರು. ಇದರ ಬೆನ್ನಲ್ಲೇ ಫೀಲ್ಡಿಗಿಳಿದ ಸೇನೆ ಈಗ ಉಗ್ರರಿಗೆ ನೆರವು ನೀಡಿದ ಇಬ್ಬರು ಸ್ಥಳೀಯರ ಬಂಧಿಸಿದೆ. ಕುಲ್ಗಾಮ್‌ನಲ್ಲಿ ಇಬ್ಬರು ಸ್ಥಳೀಯರನ್ನು ಬಂಧಿಸಿ ತೀವ್ರ ವಿಚಾರಣೆ ಮಾಡುತ್ತಿದೆ. ಬಂಧಿತರಿಂದ ಎರಡು ಪಿಸ್ತೂಲ್, ಮದ್ದುಗುಂಡುಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಬಳಿಕ ಇನ್ನಷ್ಟು ಸ್ಪೋಟಕ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಉಗ್ರರ ಸಂಹಾರಕ್ಕೆ ಪಣ ತೊಟ್ಟಿರುವ ಭಾರತೀಯ ಸೇನೆ, ಕ್ರಿಮಿಗಳಿಗೆ ಹುಡುಕಾಟ ನಡೆಸುತ್ತಿದೆ, ಮೊದಲನೇಯದಾಗಿ ಅವರಿದ್ದ ಮನೆಗಳನ್ನು ಧ್ವಂಸ ಮಾಡಿ ಪ್ರತೀಕಾರಕ್ಕೆ ಉತ್ತರ ಕೊಟ್ಟಿದೆ. ಅಲ್ಲದೇ ಬಾರಮುಲ್ಲಾದಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಕಾಶ್ಮೀರದಲ್ಲಿ 150ಕ್ಕೂ ಹೆಚ್ಚು ಉಗ್ರರು ಸಕ್ರಿಯರಾಗಿದ್ದು ಅವರನ್ನ ಬೇಟೆಯಾಡಲು ಸೇನೆ ಸಜ್ಜಾಗಿದೆ.
ಸಾಮಾಜಿಕ ಕಾರ್ಯಕರ್ತನ ಹತ್ಯೆ ಮಾಡಿದ ಉಗ್ರ : 45 ವರ್ಷದ ಸಾಮಾಜಿಕ ಕಾರ್ಯಕರ್ತ ಗುಲಾಮ್ ರಸೂಲ್ ಮಾಗ್ರೆ ಅವರ ನಿವಾಸಕ್ಕೆ ಶನಿವಾರ ತಡರಾತ್ರಿ ದಾಳಿ ನಡೆಸಿದ ಉಗ್ರ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ದಾಳಿ ಹಿಂದಿನ ಕಾರಣ ತಿಳಿದು ಬಂದಿಲ್ಲ. ಉಗ್ರನನ್ನು ಮಟ್ಟ ಹಾಕಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶಿಕ್ಷಣ
ಹವ್ಯಕ ಭಾಷಾ ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ; ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027ಕ್ಕೆ ಬರಹಗಳ ಆಹ್ವಾನ

ಪುತ್ತೂರು: ಹವ್ಯಕ ಭಾಷೆಯ ಸಾಹಿತ್ಯವನ್ನು ಬೆಳೆಸುವ ಹಾಗೂ ಹೊಸ ತಲೆಮಾರಿನ ಬರಹಗಾರರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಹವ್ಯಕ ವಿಶ್ವ’ ಡಿಜಿಟಲ್ ವೇದಿಕೆಯ ಮೊದಲ ವಾರ್ಷಿಕೋತ್ಸವದ ಅಂಗವಾಗಿ ‘ಸಂಕ್ರಾಂತಿ ಹವ್ಯಕ ಸಾಹಿತ್ಯ ಉತ್ಸವ-2027’ ಆಯೋಜಿಸಲಾಗಿದೆ. ಈ ಪ್ರಯುಕ್ತ ಹವ್ಯಕ ಭಾಷೆಯಲ್ಲಿ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತ್ಯಾಸಕ್ತರಿಂದ ಬರಹಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕದ ಕರಾವಳಿ ಭಾಗ (ಕಾಸರಗೋಡು ಸೇರಿದಂತೆ) ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಬಳಕೆಯಲ್ಲಿರುವ ಹವ್ಯಕ ಭಾಷೆಯ ಸಾಹಿತ್ಯಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ.
ಕಥೆ, ಕವನ, ಪ್ರಬಂಧ ಹಾಗೂ ಲಘುಬರಹ ಹೀಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕಥೆ ಮತ್ತು ಲಘುಬರಹ ವಿಭಾಗಗಳಲ್ಲಿ ಸ್ಪರ್ಧಿಗಳು ತಮ್ಮ ಇಷ್ಟದ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು. ಕವನ ವಿಭಾಗಕ್ಕೆ ‘ಹಳ್ಳಿ ಮನೆಯೋ/ಬದುಕೋ, ಪೇಟೆ ಮನೆಯೋ/ಬದುಕೋ’ ಎಂಬ ವಿಷಯ ನೀಡಲಾಗಿದೆ. ಪ್ರಬಂಧ ವಿಭಾಗದಲ್ಲಿ ‘ಹವ್ಯಕ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಜವಾಬ್ದಾರಿ’ ಎಂಬ ವಿಷಯದ ಕುರಿತು ಬರೆಯಬೇಕಾಗಿದೆ.
ಪ್ರತಿ ವಿಭಾಗದಲ್ಲಿ ಆಯ್ಕೆಯಾಗುವ ಬರಹಗಳಿಗೆ ಪ್ರಥಮ ಬಹುಮಾನವಾಗಿ 3,000 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ಮತ್ತು ದ್ವಿತೀಯ ಬಹುಮಾನವಾಗಿ 1,500 ರೂ. ನಗದು, ಫಲಕ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಸ್ಪರ್ಧೆಗೆ ಸಲ್ಲಿಸುವ ಬರಹಗಳು ಕಡ್ಡಾಯವಾಗಿ ಹವ್ಯಕ ಭಾಷೆಯಲ್ಲಿರಬೇಕು. ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು. ಬರಹಗಳನ್ನು ಯೂನಿಕೋಡ್ ಅಥವಾ ನುಡಿ ಫಾಂಟ್‌ನಲ್ಲಿ ಸಿದ್ಧಪಡಿಸಿ ವರ್ಡ್, ಪಿಡಿಎಫ್ ರೂಪದಲ್ಲಿ ಅಥವಾ ಕಾಗದದಲ್ಲಿ ಬರೆದು ಸ್ಕ್ಯಾನ್ ಮಾಡಿ ಕಳುಹಿಸಬಹುದು.
ಬರಹಗಳನ್ನು ಕಳುಹಿಸಲು 2026ರ ಡಿಸೆಂಬರ್ 1 ಕೊನೆಯ ದಿನವಾಗಿದ್ದು, ಸ್ಪರ್ಧೆಯ ಫಲಿತಾಂಶವನ್ನು 2027ರ ಜನವರಿ 14ರ ಸಂಕ್ರಾಂತಿ ದಿನ ಪ್ರಕಟಿಸಲಾಗುವುದು.
ಆಸಕ್ತರು ತಮ್ಮ ಬರಹಗಳನ್ನು editor@havyakavishwa.com ಅಥವಾ havyakavishwa@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ವಾಟ್ಸ್ಆ್ಯಪ್ ಮೂಲಕವೂ +91 6360604365 ಸಂಖ್ಯೆಗೆ ಕಳುಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ havyakavishwa.com ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಹವ್ಯಕ ವಿಶ್ವ ಬಳಗದ ಪರವಾಗಿ ಕೃಷ್ಣ ಕಿಶೋರ್ ಯೇನಂಕೂಡ್ಲು ತಿಳಿಸಿದ್ದಾರೆ.
ಸ್ಥಳೀಯ
Reels-ರೀಲ್ಸ್‌ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಧಾವಿಸಿ ಅದನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಘಟನೆ ಪೋಷಕರ ನಿರ್ಲಕ್ಷ್ಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಚಿತ್ರೀಕರಿಸುವುದರಲ್ಲಿ ದಂಪತಿಯೊಬ್ಬರು ಮಗ್ನರಾಗಿದ್ದ ವೇಳೆ ಅವರ ಪುಟ್ಟ ಮಗು ಸಮುದ್ರದ ಅಲೆಗಳ ನಡುವೆ ಸಿಲುಕಿ ಪರದಾಡಿದ ಘಟನೆಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಗುವಿನ ಅಪಾಯವನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಧಾವಿಸಿ ಅದನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಘಟನೆ ಪೋಷಕರ ನಿರ್ಲಕ್ಷ್ಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೊದಲ್ಲಿ ದಂಪತಿ ಮೊಬೈಲ್ ಫೋನ್ ಅಥವಾ ಸೆಲ್ಫಿ ಸ್ಟಿಕ್ ಬಳಸಿ ಕಡಲತೀರದಲ್ಲಿ ರೀಲ್ಸ್ ಚಿತ್ರೀಕರಿಸುತ್ತಿರುವುದು ಕಾಣಿಸುತ್ತದೆ. ನೀರಿನ ಸಮೀಪ ನಡೆಯುವಾಗ ಮಹಿಳೆ ಮಗುವಿನ ಕೈ ಹಿಡಿದಿರುತ್ತಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ಮಗು ಜಾರಿ ಮರಳಿನ ಮೇಲೆ ಬೀಳುತ್ತದೆ. ಈ ವೇಳೆ ಸಮುದ್ರದ ಅಲೆಗಳು ಮಗುವನ್ನು ಅತ್ತಿತ್ತ ತಳ್ಳಲಾರಂಭಿಸುತ್ತವೆ.
ಮಗು ಅಪಾಯದಲ್ಲಿರುವುದನ್ನು ಗಮನಿಸಿದರೂ ದಂಪತಿ ಚಿತ್ರೀಕರಣದಲ್ಲೇ ತಲ್ಲೀನರಾಗಿರುವಂತೆ ವಿಡಿಯೊದಲ್ಲಿ ಕಾಣಿಸುತ್ತದೆ. ಮಹಿಳೆ ಕ್ಯಾಮೆರಾ ಮುಂದೆ ಪೋಸ್ ನೀಡುತ್ತಿದ್ದರೆ, ಪುರುಷ ಚಿತ್ರೀಕರಣ ಮುಂದುವರಿಸುತ್ತಾನೆ. ಈ ನಡುವೆ ಮಗು ಅಲೆಗಳ ಹೊಡೆತಕ್ಕೆ ಸಿಲುಕಿ ಪರದಾಡುತ್ತದೆ. ಕೊನೆಗೆ ಪರಿಸ್ಥಿತಿಯನ್ನು ಗಮನಿಸಿದ ಸಾರ್ವಜನಿಕರೊಬ್ಬರು ತಕ್ಷಣ ಮಧ್ಯಪ್ರವೇಶಿಸಿ ಮಗುವನ್ನು ನೀರಿನಿಂದ ಹೊರತರುತ್ತಾರೆ.
‘ರೀಲ್ಸ್‌ಗಾಗಿ ಮಕ್ಕಳ ಸುರಕ್ಷತೆಯನ್ನೂ ಮರೆಯುವರೇ?’
ಎಕ್ಸ್ (X) ಬಳಕೆದಾರರಾದ ಮರಿಯಮ್ ಎಂಬುವವರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ತಾವು ಪತಿಯೊಂದಿಗೆ ಕಡಲತೀರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ದಂಪತಿ ರೀಲ್ಸ್ ಚಿತ್ರೀಕರಣದಲ್ಲಿ ಎಷ್ಟು ಮಗ್ನರಾಗಿದ್ದರೆಂದರೆ, ತಮ್ಮ ಮಗಳು ಎದುರಿಸುತ್ತಿದ್ದ ಅಪಾಯವನ್ನೇ ಗಮನಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರಿಂದ ಮಗು ಅಪಾಯದಿಂದ ಪಾರಾಯಿತು ಎಂದೂ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸುವ ಧಾವಂತದ ಬಗ್ಗೆ ಪ್ರಶ್ನಿಸಿರುವ ಮರಿಯಮ್, ರೀಲ್ಸ್ ಮಾಡುವುದು ಅಷ್ಟೊಂದು ಮುಖ್ಯವೇ? ಅದಕ್ಕಾಗಿ ಜನರು ತಮ್ಮ ಸ್ವಂತ ಮಕ್ಕಳ ಸುರಕ್ಷತೆಯನ್ನೂ ನಿರ್ಲಕ್ಷಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಘಟನೆಯ ಸತ್ಯಾಸತ್ಯತೆ ಬಗ್ಗೆ ಚರ್ಚೆ
ಮಂಗಳವಾರ ಸಂಜೆಯಿಂದ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎನ್ನಲಾಗಿದ್ದು, ಘಟನೆ ನಡೆದ ನಿಖರ ಸ್ಥಳ ಮತ್ತು ಸಮಯದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ವಿಡಿಯೊದಲ್ಲಿರುವ ವ್ಯಕ್ತಿಗಳ ಗುರುತನ್ನೂ ಸ್ವತಂತ್ರವಾಗಿ ದೃಢಪಡಿಸಲಾಗಿಲ್ಲ.
ವಿಡಿಯೊ ಕುರಿತು ಪ್ರತಿಕ್ರಿಯಿಸಿರುವ ಅನೇಕ ಬಳಕೆದಾರರು, ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಸಮುದ್ರದ ಅಲೆಗಳ ಸಮೀಪ ಮಕ್ಕಳ ಮೇಲೆ ಪೋಷಕರು ನಿರಂತರ ನಿಗಾ ಇರಿಸುವ ಅಗತ್ಯವನ್ನು ಈ ಘಟನೆ ನೆನಪಿಸಿದೆ.
ಇನ್ನೊಂದೆಡೆ, ವಿಡಿಯೊ ನಕಲಿಯಾಗಿರಬಹುದು ಅಥವಾ ವೈರಲ್ ಆಗುವ ಉದ್ದೇಶದಿಂದಲೇ ಯೋಜಿತವಾಗಿ ಚಿತ್ರೀಕರಿಸಿರಬಹುದು ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಆದರೆ, ಈ ವಾದಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಿಲ್ಲ. ಹೀಗಾಗಿ, ವಿಡಿಯೊದಲ್ಲಿನ ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ.
ವೈರಲ್ ನ್ಯೂಸ್
ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ
ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.
ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.
ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.
ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ನಿರೂಪಕಿ ಹಾಗೂ ವಾಯ್ಸ್‌ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್‌ಓವರ್‌ನ ವಿಶೇಷತೆಯಾಗಿದೆ.
ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್‌ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.
2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಮಂಗಳೂರು12 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ10 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
Uncategorized11 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್13 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಬಿಗ್ ನ್ಯೂಸ್4 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ರಾಜಕೀಯ11 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















