Connect with us

ಕಾರ್ಯಕ್ರಮಗಳು

Kumkum Mahati-ಕುಂಕುಮ ಮಹತಿ ಕೃತಿ ಲೋಕಾರ್ಪಣೆ; ಕುಂಕುಮ ಧಾರಣೆ ದೇಹದೊಳಗಿನ ಚಕ್ರಗಳಿಗೆ ಪ್ರೇರಣೆ- ಕಶೆಕೋಡಿ; ಬೆಳ್ಳಗಿರುವುದೆಲ್ಲಾ ಹಾಲಲ್ಲ ಕೆಂಪು ಬಣ್ಣದ ಹುಡಿಗಳೆಲ್ಲ ಕುಂಕುಮವಲ್ಲ – ಮುಳಿಯ ಕೇಶವ ಪ್ರಸಾದ್; ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ – ಪಂಜಿಗುಡ್ಡೆ ಈಶ್ವರ ಭಟ್

Published

on

Ad Widget

Ad Widget

Ad Widget

Ad Widget

ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ರವಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು.

Ad Widget

Ad Widget

Ad Widget

Ad Widget

ಪುತ್ತೂರು, ಏಪ್ರಿಲ್ 27: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ರವಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ಸಭಾಂಗಣ ದಲ್ಲಿ ಲೋಕಾರ್ಪಣೆಗೊಂಡಿತು.

Ad Widget

Ad Widget alt="Ad Widget"/>

Ad Widget

ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ನೇತೃತ್ವದಲ್ಲಿ , ಮುಳಿಯ ಪ್ರತಿಷ್ಠಾನ ಪುತ್ತೂರು ಪ್ರಕಾಶನದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ. ಎಸ್ ಭಟ್ ಅವರು ಶ್ರೀ ಲಲಿತಾಂಬಿಕೆಗೆ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಧಾರ್ಮಿಕ ಚಿಂತಕ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಿ, ಮಹತಿ ಎಂದರೆ ಮಹತ್ವದಲ್ಲಿ ದೊಡ್ಡದು. ಗುಣದಲ್ಲಿ ಜೇಷ್ಠತ್ವ ಮುಖ್ಯ.ಕುಂಕುಮದ ಮಹತ್ವ ಕೃತಿಯಲ್ಲಿ ಕುಂಕುಮಕ್ಕಿಂತ ಹೆಚ್ಚು ಶ್ರೀ ಲಲಿತೆಯ ಮಾಹಿತಿಯು ಇದೆ. ಕುಂಕುಮ ದ ಬಗ್ಗೆ ಬರೆಯಬೇಕಾದರೆ ತಾಯಿ, ಜಗನ್ಮಾತೆಯ ಉಲ್ಲೇಖವೂ ಬೇಕು.

ಮುಖ, ಧರಿಸಿದ ವಸ್ತ್ರ, ಮಾತನಾಡುವ ಶೈಲಿ ನೋಡಿದಾಗ ಆ ವ್ಯಕ್ತಿಯ ವ್ಯಕ್ತಿತ್ವ ಗೊತ್ತಾಗುತ್ತದೆ. ವಿದ್ಯೆಯ ಜತೆ ವಿನಯವೂ ಇದ್ದರೆ ಮಾತ್ರ ಮನುಷ್ಯನಿಗೆ ಗೌರವ. ಸನಾತನ ಧರ್ಮದ ಆಚರಣೆ, ಸಂಸ್ಕಾರಗಳನ್ನು ಎಳೆಯ ಮಕ್ಕಳಿಗೆ ತಿಳಿಸಿಕೊಡುವ ಕೆಲಸ ಆಗಬೇಕು ಎನ್ನುತ್ತಾ ಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿ ಲೋಕಾರ್ಪಣೆ ಮಾಡುವ ಮುನ್ನ ಕುಂಕುಮ ಮಹತಿ ಕೃತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ. ಎಸ್ ಭಟ್ ಅವರು ಆರತಿ ಬೆಳಗಿರುವುದು ವಿಶೇಷವಾಗಿತ್ತು.

Ad Widget

Ad Widget

ಲೇಖಕಿ ಶೀಲಾ ಲಕ್ಷ್ಮಿ ಅವರು ಕೃತಿಯ ಪರಿಚಯ ಮಾಡಿ, ಕರಾವಳಿ ಭಾಗದಲ್ಲಿ ಜನ ಜೀವನದಲ್ಲಿ ನೀತಿ- ನಿಯಮ, ಕಟ್ಟು ಪಾಡುಗಳನ್ನು ಆಚರಿಸುತ್ತಾ ಬಂದಿದ್ದೇವೆ. ಇವು ನಂಬಿಕೆ ಆಧಾರದಲ್ಲಿ ನಿಂತಿವೆ. ಹಿಂದೆಯೂ ಕುಂಕುಮ ಧಾರಣೆ ಕಡ್ಡಾಯವಾಗಿತ್ತು. ಚಂಚಲ ಮನಸ್ಸನ್ನು ಇದು ನಿಯಂತ್ರಿಸುತ್ತದೆ ಎಂಬ ನಂಬಿಕೆ ಇತ್ತು ಎನ್ನುತ್ತಾ,ಕೃತಿ ರಚನೆಗೆ ಪ್ರೇರಣಾಶಕ್ತಿ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಯವರಿಗೆ ನಮನಗಳನ್ನು ಸಲ್ಲಿಸುತ್ತಾ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸಾವಯವ ಕುಂಕುಮವನ್ನು ಮಕ್ಕಳಿಗೆ ತಿಲಕವಿಡುವ ಮೂಲಕ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅನಾವರಣಗೊಳಿಸಿ, ಹಿಂದೂ ಧರ್ಮದ ರಕ್ಷಣೆಗೆ ಹಾಗೂ ಧಾರ್ಮಿಕ ವಿಚಾರಗಳಿಗೆ ದೇವಸ್ಥಾನದ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಸದಾ ಸಹಕಾರ ನೀಡಲಿದೆ ಎನ್ನುತ್ತಾ ಕೃತಿಯ ರಚನೆ ಕುರಿತು ಅಭಿನಂದನ ನುಡಿಗಳನ್ನಾಡಿದರು. ಬಳಿಕ ಆಗಮಿಸಿದ ಸರ್ವರಿಗೂ ಸಾವಯವ ಕುಂಕುಮ ಹಂಚಲಾಯಿತು.

ಗೌರವಾರ್ಪಣೆ ಧಾರ್ಮಿಕ ಶಿಕ್ಷಣ ಬೋಧಿಸುವ ಗುರುಗಳಾದ ಡಾ. ವಿಜಯ ಸರಸ್ವತಿ ಹಾಗೂ ಶ್ರೀಮತಿ ಶಂಕರಿ ಶರ್ಮ ಹಾಗೂ ಲೇಖಕಿ ಶ್ರೀಮತಿ ಶೀಲಾ ಲಕ್ಷ್ಮೀ ಕಾಸರಗೋಡು ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಬೆಳ್ಳಗಿರುವುದೆಲ್ಲಾ ಹಾಲಲ್ಲ, ಹಾಗೇನೆ ಕೆಂಪಗೆ ಇರುವುದೆಲ್ಲಾ ಕುಂಕುಮ ಅಲ್ಲ ಎಂದು ತಿಳಿಸಲು ಈ ಪುಸ್ತಕ ಎಂದರಲ್ಲದೇ, ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ಇದು ದೇವಾಲಯಗಳಲ್ಲಿ ಧರ್ಮ ಜಾಗೃತಿ, ಹಿಂದೂ ಧಾರ್ಮಿಕ ಶಿಕ್ಷಣ, ಸಂಸ್ಕೃತಿ ಪ್ರಸರಣ, ಸಮಾಜಸೇವಾ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಲಿದೆ ಎಂದರು.

ಕೃತಿ ಲೋಕಾರ್ಪಣೆಯ ಬಳಿಕ ಭಗವತ್ ಭಕ್ತ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆ ಯಿತು.

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಗಣೇಶ ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿವೇಕಾನಂದ ಸ್ನಾತಕೋತ್ತರ ವಿಭಾಗ ದ ಡೀನ್ ಡಾ. ವಿಜಯ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಕುಮಾರಿ ಸನ್ನಿಧಿ ಕಜೆ ಪ್ರಾರ್ಥನೆ ನೆರವೇರಿಸಿದರು, ಶ್ರೀಮತಿ ಪ್ರಭಾವತಿ ಹಾಗೂ ತೇಜಸ್ವಿನಿ ಅವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷ್ಣವೇಣಿ ಪ್ರಸಾದ್ ಮುಳಿಯ, ಪ್ರತಿ ದೇವಾಲಯಗಳಲ್ಲಿ ಕುಂಕುಮಾರ್ಚನೆ ನಡೆಯಬೇಕು. ಸದ್ವಿಚಾರಗಳು ಮಕ್ಕಳಿಗೆ ತಿಳಿಯಬೇಕು,ಮಾತೆಯರ ಮೂಲಕ ನಮ್ಮ ಸಂಸ್ಕೃತಿಯ ಶ್ರೀಮಂತಿಕೆ ಉಳಿಯುವಂತಾಗ ಬೇಕು. ಇದೇ ಮಾರ್ಗದಲ್ಲಿ ಕುಂಕುಮದ ಮಹತ್ವ ತಿಳಿಸುವ ಹೊತ್ತಗೆಯನ್ನು ಹೊರತರಲಾಗಿದೆ ಎಂದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಸ್ಥಳೀಯ

Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

Ad Widget

Ad Widget <> Ad Widget

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್‌ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್‌. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

Ad Widget

Ad Widget

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!