Connect with us

ವರದಿಗಳು

Pahalgum | ಕೇವಲ ನಾಲ್ಕು ಉಗ್ರರು ಪ್ರವಾಸಿಗರನ್ನು ಅಡ್ಡಗಟ್ಟಿ ಯಾವಾ ರೀತಿ ದಾಳಿ ನಡೆಸಿದರು ಗೊತ್ತೇ..? ಮಾಜಿ ಸೈನಿಕ ಹಾಲಿ ಉಗ್ರನ ಪ್ಲಾನ್ ನಲ್ಲಿ ನಡೆದ ದಾಳಿಯ ವಿವರಗಳು ತನಿಖಾ ಸಂದರ್ಭ ಹೊರಬಿದ್ದದ್ದು ಹೀಗೆ ..!

Published

on



Ad Widget

Ad Widget

Ad Widget

Ad Widget

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ (Pahalgum) ಉಗ್ರರು ನಡೆಸಿದ ನರಮೇಧದಲ್ಲಿ ಬದುಕುಳಿದವರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಹಲವು ಸಂಗತಿಗಳನ್ನು ಹೊರಹಾಕಿದೆ. ದಾಳಿ ವೇಳೆ ಬೈಸರನ್‌ ಕಣಿವೆಯಲ್ಲಿ ತಪ್ಪಿಸಿಕೊಳ್ಳಲು ಪ್ರವಾಸಿಗರಿಗೆ ಯಾವುದೇ ಮಾರ್ಗಗಳು ಇರಲಿಲ್ಲ. ಉಗ್ರರು ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಬಂಧಿಸಿದ್ದರು. ಇದೊಂದು ಪೂರ್ವಯೋಜಿತ ಕೃತ್ಯವಾಗಿತ್ತು ಎಂದು ತನಿಖಾ ವರದಿಗಳು ಹೇಳಿವೆ. ನಾಲ್ಕು ಸೈನಿಕರ ಭದ್ರತೆ ಇರುತ್ತಿದ್ದರೂ ಪ್ರವಾಸಿಗರ ನರಮೇಧ ತಪ್ಪಿಸಬಹುದಿತ್ತು.

Ad Widget

Ad Widget

Ad Widget

Ad Widget

ಕೃತ್ಯದಲ್ಲಿ ನಾಲ್ವರು ಉಗ್ರರದ್ದು ನೇರ ಪಾತ್ರವಿರುವುದು ಬಹುತೇಕ ಸ್ಪಷ್ಟಗೊಂಡಿದೆ. ಇಬ್ಬರು ಪ್ರವೇಶ ದ್ವಾರದಲ್ಲಿ ನಿಂತಿದ್ದರೆ, ಮತ್ತೊಬ್ಬ ನಿರ್ಗಮನ ದ್ವಾರಲ್ಲಿದ್ದ. ಇನ್ನೊಬ್ಬ ಅರಣ್ಯದಲ್ಲಿ ಅಡಗಿಕೊಂಡಿದ್ದ ಎಂದು ತನಿಖಾ ವರದಿಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಮೊದಲು ಉಗ್ರರು ನಿರ್ಗಮನ ದ್ವಾರದಲ್ಲಿ ಗುಂಡಿನ ದಾಳಿ ನಡೆಸಿದರು. ಇದರ ಬೆನ್ನಲ್ಲೇ ಪ್ರವಾಸಿಗರು ಭಯದಿಂದ ಓಡ ತೊಡಗಿದರು. ಈ ಸಂದರ್ಭದಲ್ಲಿ ಇನ್ನಿಬ್ಬರು ಉಗ್ರರು ಮನಬಂದಂತೆ ಗುಂಡಿನ ಮಳೆ ಸುರಿಸಲು ಆರಂಭಿಸಿದರು ಎಂಬ ಪ್ರತ್ಯಕ್ಷ ದರ್ಶಿಗಳ ಹೇಳಿಕೆಗಳನ್ನು ತನಿಖಾ ತಂಡಗಳು ದಾಖಲಿಸಿಕೊಂಡಿವೆ.

Ad Widget

Ad Widget <> Ad Widget

ಪ್ರವೇಶ ದ್ವಾರದಲ್ಲಿದ್ದ ಉಗ್ರರು ಮಹಿಳೆಯರು ಹಾಗೂ ಪುರುಷರನ್ನು ಬೇರ್ಪಡಿಸಿ ನಿಲ್ಲುವಂತೆ ಹೇಳಿದ್ದರು. ಇದಕ್ಕೆ ಪ್ರವಾಸಿಗರು ಆಕ್ಷೇಪಿಸಿದರು. ಆಗ ಟೆರರಿಸ್ಟ್‌ಗಳು ಹಿಂದೂಗಳು, ಮುಸ್ಲಿಮರು ಬೇರೆ ಬೇರೆಯಾಗಿ ನಿಲ್ಲುವಂತೆ ಹೇಳಿದರು. ಇದಕ್ಕೂ ಪ್ರವಾಸಿಗರು ಒಪ್ಪದಿದ್ದಾಗ ‘ಕಲ್ಮಾ’ ಪಠಿಸುವಂತೆ ಆಗ್ರಹಿಸಿ ಬರದಿದ್ದವರ ಮೇಲೆ ಗುಂಡು ಹಾರಿಸಿದರು. ಪ್ರವೇಶ ದ್ವಾರದ ಬಳಿ ನೌಕಾಪಡೆ ಅಧಿಕಾರಿ ಲೆಫಿನೆಂಟ್‌ ವಿನಯ್‌ ನರ್ವಾಲ್‌ ಉಗ್ರರಿಂದ ಗುಂಡೇಟು ತಿಂದು ಮೃತಪಟ್ಟ ಮೊದಲ ವ್ಯಕ್ತಿಯಾಗಿದ್ದರು.



Ad Widget

ಎನ್‌ಐಎ ತಂಡ ಭೇಟಿ
ಘಟನಾ ಸ್ಥಳಕ್ಕೆ ಎನ್‌ಐಎ ತಂಡ ಭೇಟಿ ಕೊಟ್ಟಿದೆ. 45 ಸ್ಥಳೀಯ ಮಳಿಗೆಗಳ ಮಾಲೀಕರು ಹಾಗೂ ಕುದುರೆ ಸವಾರರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆಹಾಕುತ್ತಿದೆ. ಭಯೋತ್ಪಾದಕರು ‘ಮೊಬೈಲ್‌ ಪೇಯ್ಡ್‌ ಅಪ್ಲಿಕೇಷನ್‌’ ಬಳಸಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

Ad Widget

Ad Widget

ಆಹಾರ ಮಳಿಗೆಯತ್ತ ಕಾಯುತ್ತಿದ್ದರು :
ಉಗ್ರರು ಬೈಸರನ್‌ ಕಣಿವೆಯಲ್ಲಿ ಆಹಾರ ಮಳಿಗೆ ಬಳಿ ಹೊಂಚು ಹಾಕಿ ಕುಳಿತಿದ್ದರು. ಪ್ರವಾಸಿಗರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು ನಂತರ ಗುಂಡು ಹಾರಿಸಿ, ಅಲ್ಲಿಂದ ಅರಣ್ಯ ಪ್ರದೇಶದೊಳಕ್ಕೆ ಪರಾರಿಯಾದರು ಎಂದು ವರದಿಗಳು ಹೇಳಿವೆ.

ಉಗ್ರರಲ್ಲಿ ಒಬ್ಬಾತ ಪಾಕ್‌ನ ಮಾಜಿ ಸೈನಿಕ
ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರೆ ಉಗ್ರನೊಬ್ಬ ಪಾಕಿಸ್ತಾನ ಸೇನೆಯ ಮಾಜಿ ಸೈನಿಕನಾಗಿದ್ದು, ಕಠಿಣ ರೀತಿಯ ಪ್ಯಾರಾ ಕಮಾಂಡೊ ತರಬೇತಿ ಪಡೆದಿದ್ದ ಎಂದು ಮೂಲಗಳು ಹೇಳಿವೆ. ಹಾಶಿಮ್‌ ಮೂಸಾ ಹತ್ಯಾಕಾಂಡ ನಡೆಸುವ ಉದ್ದೇಶಕ್ಕಾಗಿಯೇ ಸೇನೆ ತೊರೆದು, ಲಷ್ಕರೆ ಎ ತಯ್ಬಾ ಉಗ್ರ ಸಂಘಟನೆ ಸೇರಿದ್ದ ಎಂದು ತಿಳಿದುಬಂದಿದೆ.

20ರ ಆಜು ಬಾಜು ಇರುವ ಹಾಶಿಮ್‌ ಮೂಸಾ ಕಥುವಾ ಹಾಗೂ ಸಾಂಬಾ ಸೆಕ್ಟರ್‌ ಮೂಲಕ ಭಾರತದ ಗಡಿ ನುಸುಳಿ ರಜೌರಿ-ಪೂಂಚ್‌ ವಲಯದ ಡೇರಾ ಕಿ ಗಲಿ ಪ್ರದೇಶಕ್ಕೆ ಬಂದು ಅಲ್ಲಿ ಸಕ್ರಿಯನಾಗಿದ್ದುಕೊಂಡು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ಭದ್ರತಾ ಪಡೆಗಳ ಮೇಲೆ ಉಗ್ರರು ಈ ಹಿಂದೆ ನಡೆಸಿದ ಕೆಲವು ದಾಳಿಗಳಲ್ಲಿ ಈತ ಭಾಗಿಯಾಗಿದ್ದ ಎಂದು ತನಿಖಾ ವರದಿಗಳನ್ನು ಉಲ್ಲೇಖಿಸಿ ಕೆಲವು ಆಂಗ್ಲಮಾಧ್ಯಮಗಳು ವರದಿ ಮಾಡಿವೆ.

ದಾಳಿಯ ಮಾಸ್ಟರ್‌ಮೈಂಡ್‌ ಹಾಶಿಮ್‌ ಮೂಸಾ ಎಂಬುದು ತಿಳಿದುಬಂದಿದೆ. ಗುಡ್ಡಗಾಡು ಪ್ರದೇಶದಲ್ಲಿ ಹೇಗೆ ಕಾರ್ಯಾಚರಣೆ ನಡೆಸಬೇಕು, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೇಗೆ ಬಳಸಬೇಕು ಎಂಬ ಬಗ್ಗೆ ತರಬೇತಿ ಪಡೆದುಕೊಂಡಿದ್ದ.

48 ಪ್ರವಾಸಿ ತಾಣಗಳಿಗೆ ಪ್ರವೇಶವಿಲ್ಲ
ಭದ್ರತೆ ದೃಷ್ಟಿಯಿಂದ ಜಮ್ಮು-ಕಾಶ್ಮೀರ ಸರಕಾರವು 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿದೆ. ಕಣಿವೆಯಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಗಳ ಕುರಿತು ಗುಪ್ತಚರ ಇಲಾಖೆಯ ವರದಿ ಆಧರಿಸಿ ಜಮ್ಮು-ಕಾಶ್ಮೀರ ಸರಕಾರ ಈ ನಿರ್ಧಾರ ಕೈಗೊಂಡಿದೆ. ಕಣಿವೆಯಲ್ಲಿಉಗ್ರ ಸಂಘಟನೆಗಳ ಕೆಲವು ಸ್ಲೀಪರ್‌ ಸೆಲ್‌ಗಳು ಸಕ್ರಿಯವಾಗಿವೆ. ಪ್ರವಾಸಿಗರು, ಕಾಶ್ಮೀರಿ ಪಂಡಿತರು, ಗುಪ್ತಚರ, ಸಿಐಡಿ, ರೈಲ್ವೆ ಹೀಗೆ ಕೆಲವು ಇಲಾಖೆಗಳ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುವ ಸಾಧ್ಯತೆಯೂ ಇದೆ ಎಂದು ಗುಪ್ತಚರ ವರದಿಗಳು ಎಚ್ಚರಿಸಿವೆ.

ಪಾಕ್‌ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್‌
ಪಹಲ್ಗಾಮ್‌ ನರಮೇಧದ ಬೆನ್ನಲ್ಲೇ ಪಾಕಿಸ್ತಾನವನ್ನು ಆರ್ಥಿಕವಾಗಿ ಬಗ್ಗುಬಡಿಯಲು ಭಾರತವು ಹಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಈಗ, ಪಾಕಿಸ್ತಾನದ ವಿಮಾನಯಾನ ಸಂಸ್ಥೆಗಳು ಭಾರತದ ವಾಯುಪ್ರದೇಶವನ್ನು ಬಳಸದಂತೆ ನಿರ್ಬಂಧ ಹೇರಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ. ಈಗಾಗಲೇ ಪಾಕಿಸ್ತಾನದ ಕೆಲವು ಏರ್‌ಲೈನ್ಸ್‌ಗಳು ಭಾರತದ ವಾಯುಪ್ರದೇಶವನ್ನು ಬಳಸದೇ ಬೇರೆ ಮಾರ್ಗಗಳನ್ನು ಹುಡುಕಿಕೊಂಡಿವೆ. ಭಾರತದ ವಾಯುಪ್ರದೇಶ ಬಂದ್‌ ಆದರೆ ಪಾಕಿಸ್ತಾನದ ವಿಮಾನಗಳು ಮಲೇಷ್ಯಾದಂಥ ಆಗ್ನೇಯ ಏಷ್ಯಾದ ರಾಷ್ಟ್ರಗಳನ್ನು ತಲುಪಲು ಚೀನಾ ಅಥವಾ ಶ್ರೀಲಂಕಾದ ಮೂಲಕ ತೆರಳಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ನಿಂದ ಗಡಿಯಲ್ಲಿ ರೇಡಾರ್‌ ಸಿಸ್ಟಮ್‌
ಪಹಲ್ಗಾಮ್‌ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದು ನಿಶ್ಚಿತವಾಗಿದೆ. ಆದರೆ, ಈ ಪ್ರತೀಕಾರದ ಭೀತಿಯಲ್ಲಿಪಾಕಿಸ್ತಾನ ಸೇನೆಯು ಸಿಯಾಲ್‌ಕೋಟ್‌ ಸೆಕ್ಟರ್‌ ಸೇರಿದಂತೆ ಕೆಲವು ಗಡಿ ಭಾಗದ ಆಯಕಟ್ಟಿನ ಪ್ರದೇಶಗಳಲ್ಲಿ ಟಿಪಿಎಸ್‌-77 ರೇಡಾರ್‌ ಸಿಸ್ಟಮ್‌ಗಳನ್ನು ರವಾನಿಸುತ್ತಿದೆ. ಭಾರತ ಸೇನೆಯ ಚಲನವಲನಗಳ ಮೇಲೆ ಕಣ್ಣಿಡಲು ಎಲೆಕ್ಟ್ರಾನಿಕ್ಸ್‌ ಯುದ್ಧ ಸಲಕರಣೆಗಳನ್ನು ಗಡಿ ಭಾಗಕ್ಕೆ ರವಾನಿಸುತ್ತಿದೆ ಎಂದು ಮೂಲಗಳು ಹೇಳಿವೆ.

Ad Widget
Click to comment

Leave a Reply

ಅಂತರ ರಾಜ್ಯ

DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Ad Widget

Ad Widget <> Ad Widget

ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.



Ad Widget

ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget

‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾ‌ರ್ ಹೇಳಿದರು.

ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.

ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.

‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.

ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾ‌ರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.

Ad Widget
Continue Reading

ಅಂತರ ರಾಜ್ಯ

Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್

Published

on



Ad Widget

Ad Widget

Ad Widget

Ad Widget

ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget

Ad Widget

ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.

Ad Widget

Ad Widget <> Ad Widget

ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.



Ad Widget

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.

Ad Widget

Ad Widget

ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

ಗಣ್ಯರಿಂದ ಸಂತಾಪ
ನಾನಾ ಪಾಟೇಕ‌ರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.

ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading