ಪುತ್ತೂರು
Bharath Matavu-ಬೆಂಗಳೂರಿನ ‘ನಮ್ಮ ಕಂಬಳ’ದ ಸದಸ್ಯ ಪುತ್ತೂರಿನ ಭರತ್ ಮತಾವು ಹೃದಯಾಘಾತದಿಂದ ನಿಧನ
ಬೆಂಗಳೂರಿನಲ್ಲಿ ನಡೆದ ‘ನಮ್ಮ ಕಂಬಳ’ ದ ಸದಸ್ಯ ಭರತ್ ಮತಾವು (43 ವ) ಮೇ 1 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುತ್ತೂರು: ಬೆಂಗಳೂರಿನಲ್ಲಿ ನಡೆದ ‘ನಮ್ಮ ಕಂಬಳ’ ದ ಸದಸ್ಯ ಭರತ್ ಮತಾವು (43 ವ) ಮೇ 1 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಡ್ನೂರು ಗ್ರಾಮದ ಮತಾವು ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರನಾಗಿದ್ದ ಭರತ್ ಅವರು ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದು ಸ್ವಯಂ ಉದ್ಯೋಗ ನಡೆಸುತ್ತಿದ್ದರು. ಅಲ್ಲಿ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಭರತ್ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ ಮಾಡಾವು ಬಳಿಯಲ್ಲೂ ಚಿತ್ರೀಕರಣಗೊಂಡಿದ್ದ ಆ ಚಿತ್ರ ಪುತ್ತೂರಿನ ಚಿತ್ರಮಂದಿರದಲ್ಲೂ ಪ್ರದರ್ಶನ ಕಂಡಿತ್ತು.
ಮೃತ ಭರತ್ ಅವರು ತಾಯಿ ಜಯಂತಿ, ಪತ್ನಿ ರವಿಕಲಾ, ಪುತ್ರ ನಿಹಾರ್ ಮತ್ತು ಪುತ್ರಿ ಹಂಸಿಕಾ, ತಮ್ಮ ಆದರ್ಶ, ತಂಗಿ ಸೌಮ್ಯಾ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
ಶಿಕ್ಷಣ
Vidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ
ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.

ಪುತ್ತೂರು: ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಕರಾವಳಿ ಭಾಗದಲ್ಲಿ ಪದವೀಧರರ ಮಹಾಪೂರವಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಿವಿಲ್ ಸರ್ವೀಸಸ್ ಹಾಗೂ ರಕ್ಷಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಯುವಕರ ಭಾಗವಹಿಸುವಿಕೆ ಹಿಂದಿನಿಂದಲೂ ಕಡಿಮೆಯಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಕೇವಲ ಸಾಂಪ್ರದಾಯಿಕ ಉದ್ಯೋಗಗಳು ಅಥವಾ ಗಲ್ಫ್ ದೇಶಗಳ ವಲಸೆಗೆ ಸೀಮಿತರಾಗಿದ್ದರು. ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’ ಇಂಗ್ಲಿಷ್ ದಿನಪತ್ರಿಕೆಯೂ ಸಹ ವಿದ್ಯಾಮಾತಾ ಅಕಾಡೆಮಿಯ ಈ ಶೈಕ್ಷಣಿಕ ಬದಲಾವಣೆಯ ಹಾದಿಯನ್ನು ವಿಶೇಷವಾಗಿ ಶ್ಲಾಘಿಸಿ ವರದಿ ಮಾಡಿದೆ.
ಸಾಮಾನ್ಯವಾಗಿ ದೊಡ್ಡ ಮಟ್ಟದ ಕೋಚಿಂಗ್ ಸಂಸ್ಥೆಗಳು ನೂರರಲ್ಲಿ ಒಬ್ಬರು IAS ಅಥವಾ KAS ಅಧಿಕಾರಿಯಾದರೆ ಆ ಯಶಸ್ಸನ್ನು ಮಾತ್ರ ದೊಡ್ಡದಾಗಿ ಬಿಂಬಿಸುತ್ತವೆ. ಆದರೆ, ಆ ಪ್ರಕ್ರಿಯೆಯಲ್ಲಿ ಸ್ಪರ್ಧೆಗಿಳಿದು ಸೋತ ಉಳಿದ 99 ವಿದ್ಯಾರ್ಥಿಗಳ ಭವಿಷ್ಯದ ಕಥೆಯೇನು ಎಂಬ ಆಳವಾದ ಸಾಮಾಜಿಕ ಪ್ರಶ್ನೆಯನ್ನು ವಿದ್ಯಾಮಾತಾ ಅಕಾಡೆಮಿಯ ಮ್ಯಾನೇಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಮುಂದಿಟ್ಟಿದ್ದಾರೆ. ಒಬ್ಬ ವಿಜೇತನನ್ನು ರೂಪಿಸುವಷ್ಟೇ ಗಂಭೀರವಾಗಿ, ಅಲ್ಲಿ ಹಿನ್ನಡೆ ಅನುಭವಿಸುವ ಉಳಿದ 99 ವಿದ್ಯಾರ್ಥಿಗಳ ಬದುಕಿಗೂ ಭದ್ರತೆ ಮತ್ತು ಆತ್ಮವಿಶ್ವಾಸ ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸಂಸ್ಥೆಯ ಮೂಲ ಮಂತ್ರವಾಗಿದೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕೇವಲ ಅಂಕಗಳ ಬೆನ್ನೇರುವ ಯುವಜನತೆಗೆ ಪ್ರಾಯೋಗಿಕ ಕೌಶಲ್ಯ, ಸಂವಹನ ಕಲೆ ಹಾಗೂ ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸುವ ತಾಕತ್ತು ಕೊರತೆಯಿದೆ. ಸ್ನಾತಕೋತ್ತರ ಪದವಿ ಪಡೆದರೂ ಕನಿಷ್ಠ ಸ್ವ-ಪರಿಚಯ ಮಾಡಿಕೊಳ್ಳಲು ಅಥವಾ ಕಂಪ್ಯೂಟರ್ ನಿರ್ವಹಿಸಲು ಬಾರದ ಇಂದಿನ ಸ್ಥಿತಿಯನ್ನು ಬದಲಾಯಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸ್ವಾವಲಂಬನೆಯನ್ನು ತುಂಬುವ ಕೆಲಸ ಇಲ್ಲಿ ನಡೆಯುತ್ತಿದೆ.
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಿರ್ಣಾಯಕ ಹಂತದಲ್ಲಿ ಸಮಯವನ್ನು ವ್ಯರ್ಥ ಮಾಡದಂತೆ ಸಂಸ್ಥೆಯು ‘ಕಲಿಕೆಯೊಂದಿಗೆ ಗಳಿಕೆ’ ಎನ್ನುವ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಪಿಯುಸಿ (PUC) ಮುಗಿದ ಕೂಡಲೇ ದೂರಶಿಕ್ಷಣದ ಮೂಲಕ ಡಿಗ್ರಿ (ಬಿ.ಎ, ಬಿ.ಕಾಮ್, ಬಿ.ಬಿ.ಎ) ವ್ಯಾಸಂಗಕ್ಕೆ ದಾಖಲಾಗಿ, ಅದೇ ಮೂರು ವರ್ಷಗಳ ಅವಧಿಯಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್, ಪೊಲೀಸ್ ಹಾಗೂ ರರಣಾ ಪಡೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾನಾಂತರ ತರಬೇತಿ ಪಡೆಯಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಯು ಪದವಿ ಮುಗಿಸುವ ವೇಳೆಗೆ ಸರ್ಕಾರದ ಉದ್ಯೋಗ ಅಥವಾ ಉನ್ನತ ಖಾಸಗಿ ವಲಯದಲ್ಲಿ ನೆಲೆಗೊಳ್ಳಲು ಸಂಪೂರ್ಣ ಸಿದ್ಧನಾಗಿರುತ್ತಾನೆ.
ವಿಶೇಷವಾಗಿ ಭಾರತೀಯ ಭೂಸೇನೆ (Agniveer), ವಾಯುಸೇನೆ, ನೌಕಾಸೇನೆ, ಅರೆಮಿಲಿಟರಿ ಪಡೆಗಳು, ಕರ್ನಾಟಕ ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಗಾಗಿ ಯುವಕರಿಗೆ 17ನೇ ವಯಸ್ಸಿನಿಂದಲೇ ಸುವರ್ಣ ಅವಕಾಶಗಳಿವೆ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಲಿಖಿತ ಪರೀಕ್ಷೆಯಷ್ಟೇ ಅಲ್ಲದೆ, ನುರಿತ ತರಬೇತುದಾರರಿಂದ ಮೈದಾನದಲ್ಲಿ ದೈಹಿಕ ಕ್ಷಮತೆ ಮತ್ತು ಕಠಿಣ ತರಬೇತಿಯನ್ನು ನೀಡಲಾಗುತ್ತಿದೆ. ಇದರೊಂದಿಗೆ ನವೋದಯ, ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಗಳು, KAR-TET, KSET, NET, HSTR, PSTR, GPSTR ನಂತಹ ಶೈಕ್ಷಣಿಕ ಹಾಗೂ ಬೋಧನಾ ಅರ್ಹತಾ ಪರೀಕ್ಷೆಗಳಿಗೂ ಇಲ್ಲಿ ಅತ್ಯುತ್ತಮ ತರಬೇತಿ ಲಭ್ಯವಿದೆ.
ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ಅವರ ನೇತೃತ್ವದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳು ದಿನದ 24 ಗಂಟೆಯೂ ನಿರಾಳವಾಗಿ ಓದಲು ‘ದೇವಿದ್ಯಾ’ 24×7 ಸದಾಶಿವ ಅಧ್ಯಯನ ಗ್ರಂಥಾಲಯ ಹಾಗೂ AI ಚಾಲಿತ ಡಿಜಿಟಲ್ ಇಂಟರಾಕ್ಟಿವ್ ಪ್ಯಾನಲ್‌ಗಳನ್ನು ಹೊಂದಿರುವ ‘ಸ್ತುತ್ಯ’ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇದರೊಂದಿಗೆ ಟ್ಯಾಲಿ ಪ್ರೈಮ್, ಪ್ರಾಯೋಗಿಕ ಅಕೌಂಟಿಂಗ್, ಗಲ್ಫ್ ವ್ಯಾಟ್ (Gulf VAT), ಡೇಟಾ ಅನಾಲಿಟಿಕ್ಸ್, ಕೋಡ್-ಆರ್ಕಿಟೆಕ್ಟ್ ಪ್ರೋಗ್ರಾಮಿಂಗ್ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿಗಳನ್ನು ನೀಡುವುದರ ಮೂಲಕ ಕರಾವಳಿಯ ಯುವಜನತೆಯನ್ನು ಜಾಗತಿಕ ಮಟ್ಟದ ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಬರಿ ಅಂಕಗಳ ಕಾರ್ಖಾನೆಯಾಗದೆ, ಬದುಕಿನ ಪ್ರತಿ ಹಂತದಲ್ಲೂ ವಿದ್ಯಾರ್ಥಿಗೆ ಭರವಸೆಯ ದಾರಿದೀಪವಾಗುವ ಮೂಲಕ ವಿದ್ಯಾಮಾತಾ ಅಕಾಡೆಮಿಯು ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
Uncategorized14 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized17 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized16 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized18 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized16 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ43 minutes agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಶಿಕ್ಷಣ48 minutes agoVidyamata-ಕರಾವಳಿಯ ಯುವಜನತೆಯ ಉದ್ಯೋಗ ಸ್ವಪ್ನಕ್ಕೆ ‘ವಿದ್ಯಾಮಾತಾ’ ಆಸರೆ: ಬರಿ ಅಂಕಗಳಷ್ಟೇ ಅಲ್ಲ, ಬದುಕನ್ನು ಗೆಲ್ಲುವ ಕೌಶಲ್ಯವೇ ನಿಜವಾದ ಶಕ್ತಿ


















