Connect with us

ಮಂಗಳೂರು

Suhas Shetty murder-ಸುಹಾಸ್ ಶೆಟ್ಟಿ ಕೊಲೆ : ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ : ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್; ಹಂತಕರನ್ನ ಶೀಘ್ರ ಪತ್ತೆ ಹಚ್ಚಿ – ಕಾನೂನು ಸುವ್ಯವಸ್ಥೆ ಕಾಪಾಡಿ – ಸ್ಪೀಕರ್ ಯು.ಟಿ ಖಾದರ್

Published

on

Ad Widget

Ad Widget

Ad Widget

Ad Widget

ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ad Widget

Ad Widget alt="Ad Widget"/>

Ad Widget

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ., ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ ಎಂದು ಉಸ್ತುವಾರಿ ಸಚಿವರು ಕಿವಿಮಾತು ಹೇಳಿದ್ದಾರೆ.

ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ರಾಜ್ಯ ಸರಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್, ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Ad Widget

Ad Widget

ಹಂತಕರನ್ನು ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಿ-ಯುಟಿ ಖಾದರ್‌
ಸುಹಾಸ್ ಶೆಟ್ಟಿ ಭೀಕರ ಹತ್ಯೆ ಹಿನ್ನೆಲೆ, ನಗರದಲ್ಲಿ ಪರಿಸ್ಥಿತಿ ಸಾಕಷ್ಟು ಹದಗೆಟ್ಟಿದೆ. ಹೀಗಾಗಿ, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದಿಂದ ದಾರುಣ ಹತ್ಯೆ
‘ಕಳೆದ 22 ತಿಂಗಳ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಮತಾಂಧ ಜಿಹಾದಿ ಬ್ರದರ್ಸ್‌ಗಳು ನಿರಂತರವಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದಾರೆ’. ‘ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ’.

‘ಸಿಎಂ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಪರೇಶ್ ಮೇಸ್ತಾ, ಪ್ರಶಾಂತ್ ಪೂಜಾರಿ, ಶರತ್‌ ಮಡಿವಾಳ, ರುದ್ರೇಶ್ ಅವರಂತಹ ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು. ಇವೆಲ್ಲ ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದ ನೇರ ಪ್ರಭಾವದಿಂದ ಆಗಿರುವ ದಾರುಣ ಹತ್ಯೆಗಳು. ಈಗ ಸಹೋದರ ಸುಹಾಸ್ ಶೆಟ್ಟಿ ಕೊಲೆಗೂ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣವೇ ಕಾರಣ’ ಎಂದು ದೂರಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಆರ್‌ ಆಶೋಕ್‌ ಆಕ್ರೋಶ ವ್ಯಕ್ತ ಪಡಿಸಿ, ಟ್ವೀಟ್‌ ಮಾಡಿದ್ದಾರೆ.

ಪೊಲೀಸರಿಂದ ಬಿಗಿ ಭದ್ರತೆ
ಸುಹಾಸ್ ಹತ್ಯೆ ಖಂಡಿಸಿ‌ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಈ ಹಿನ್ನೆಲೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಕೆಎಸ್ ಆರ್ ಪಿ ನಿಯೋಜಿಸಲಾಗಿದೆ. ಪೊಲೀಸರು ಗಸ್ತು ತಿರುಗುತ್ತಿದ್ದು, ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ತಡರಾತ್ರಿಯವರೆಗೆ ಎ.ಜೆ. ಆಸ್ಪತ್ರೆಯಲ್ಲಿ ಜನ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಮೇ 6ವರೆಗೆ ನಿಷೇಧಾಜ್ಞೆ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಕಿನ್ನಿಪದವಿನಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳು ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಎಂಬಾತನನ್ನು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಗೈದ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.

ಯಾರು ಈ ಸುಹಾಸ್‌ ಶೆಟ್ಟಿ?
ಸುರತ್ಕಲ್‌ನಲ್ಲಿ 2022ರ ಜುಲೈ 26 ರಂದು ನಡೆದ ಮೊಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್‌ ಕಾಟಿಪಳ್ಳ- ಕೋಡಿಕೆರೆ ನಿವಾಸಿ ಸುಹಾಸ್‌ ಶೆಟ್ಟಿ (42) ಎಂಬಾತನನ್ನು ಭೀಭತ್ಸವಾಗಿ ಕೊಲೆಗೈದ ಘಟನೆ ನಡೆದಿತ್ತು. ನೆಟ್ಟಾರು ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಜಿಲ್‌ ಎಂಬಾತನ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದಲ್ಲಿ ಸುಹಾಸ್‌ ಶೆಟ್ಟಿ ಕೂಡಾ ಆರೋಪಿಯಾಗಿ ಜೈಲು ಸೇರಿದ್ದ. ಸುಹಾಸ್‌ ಶೆಟ್ಟಿ ವಿರುದ್ಧ ಬಜಪೆ, ಬೆಳ್ತಂಗಡಿ, ಸುರತ್ಕಲ್‌ ವ್ಯಾಪ್ತಿಯಲ್ಲಿ ಒಟ್ಟು 5 ಪ್ರಕರಣಗಳಿವೆ. 2010ರಲ್ಲಿ ನಡೆದ ಕೊಲೆ ಪ್ರಕರಣದಲ್ಲೂಈತ ಆರೋಪಿಯಾಗಿದ್ದ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!