Connect with us

ಮಂಗಳೂರು

Parameshwar-ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ‘ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ವೈಭವೀಕರಣ ಬೇಡ’ ಎಂದ ಗೃಹ ಸಚಿವ ಪರಮೇಶ್ವರ್

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಸುಹಾಸ್ ಶೆಟ್ಟಿಯ ಕ್ರಿಮಿನಲ್ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, ಇಂತಹ ವ್ಯಕ್ತಿಗಳನ್ನು ವೈಭವೀಕರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಇತ್ತೀಚೆಗೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಸುಹಾಸ್ ಶೆಟ್ಟಿಯ ಕ್ರಿಮಿನಲ್ ಹಿನ್ನೆಲೆಯನ್ನು ಉಲ್ಲೇಖಿಸಿದ ಅವರು, ಇಂತಹ ವ್ಯಕ್ತಿಗಳನ್ನು ವೈಭವೀಕರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಸುಹಾಸ್ ಶೆಟ್ಟಿ ಮೇಲೆ ಎರಡು ಕೊಲೆ ಪ್ರಕರಣಗಳು ಸೇರಿದಂತೆ ಒಟ್ಟು ಐದು ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಆತ ಓರ್ವ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿ. ಕ್ರಿಮಿನಲ್‌ಗಳನ್ನು ವೈಭವೀಕರಿಸುವ ಕೆಲಸವನ್ನು ಯಾರೂ ಮಾಡಬಾರದು. ಈ ಬಗ್ಗೆ ರಾಜಕೀಯ ಪಕ್ಷಗಳಿಗೂ ಅರಿವಿರಬೇಕು. ಸರ್ಕಾರವಾಗಲಿ, ಪೊಲೀಸರಾಗಲಿ ಆತನನ್ನು ವೈಭವೀಕರಿಸಿಲ್ಲ,” ಎಂದು ಖಡಾಖಂಡಿತವಾಗಿ ನುಡಿದರು.

Ad Widget

Ad Widget <> Ad Widget

“ಸುಹಾಸ್ ಶೆಟ್ಟಿಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸರು ಆತನನ್ನು ಕರೆದು ಮುಂಚಿತವಾಗಿಯೇ ಎಚ್ಚರಿಸಿದ್ದರು,” ಎಂಬ ಮಾಹಿತಿಯನ್ನೂ ಸಚಿವರು ಬಹಿರಂಗಪಡಿಸಿದರು.



Ad Widget

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, “ಹಿಂದೆ ಆಗಿರುವುದು ಒಂದು ಭಾಗ, ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಸಮಾಜದಲ್ಲಿ ಶಾಂತಿ ಕದಡುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.

Ad Widget

Ad Widget

ಚೂರಿ ಇರಿತ ಪ್ರಕರಣ: ಮೂವರ ಬಂಧನ
ಸುಹಾಸ್ ಶೆಟ್ಟಿ ಕೊಲೆಯಾದ ನಂತರ ಮಂಗಳೂರಿನಲ್ಲಿ ನಡೆದಿದ್ದ ಮತ್ತೊಂದು ಚೂರಿ ಇರಿತ ಪ್ರಕರಣದ ಬಗ್ಗೆಯೂ ಮಾತನಾಡಿದ ಗೃಹ ಸಚಿವರು, “ಈ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ,” ಎಂದು ತಿಳಿಸಿದರು.

ನಗರದ ಕಾನೂನು ಸುವ್ಯವಸ್ಥೆ ಹಾಗೂ ಹತ್ಯೆ ಪ್ರಕರಣದ ತನಿಖೆಯ ಪ್ರಗತಿ ಪರಿಶೀಲಿಸಲು ಗೃಹ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದರು

Ad Widget
Click to comment

Leave a Reply

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಅಪರಾಧ

Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!

Published

on



Ad Widget

Ad Widget

Ad Widget

Ad Widget

ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು



Ad Widget

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

Ad Widget

Ad Widget

ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading