Connect with us

ವರದಿಗಳು

Suhas Shetty | ಸುಹಾಸ ಬದುಕಿದ್ದು ಹಿಂದೂವಾಗಿಯೇ… ಬದುಕಿದ್ದು ಹಿಂದೂಗಳಿಗಾಗಿಯೇ… – ಕರಾವಳಿ ವಿಭಜಿಸಲು ಎಡಚರು ತೀರ್ಥಕ್ಷೇತ್ರಗಳನ್ನು ವಿವಾಧವಾಗಿಸುತ್ತಿದ್ದಾರೆ..! ಬಿ.ಎಲ್ ಸಂತೋಷ್

Published

on



Ad Widget

Ad Widget

Ad Widget

Ad Widget

ಶ್ರೀ ಸುಹಾಸ್ ಶೆಟ್ಟಿ ಹ*ತ್ಯೆಗೀಡಾಗಿ (Suhas Shetty) ಮೂರನೇ ದಿನ. ಕಣ್ಣಿನ ಮಂಜು ಮಾಸಲು ಹಲವು ದಿನಗಳು ಬೇಕು. ಎದೆಯ ದುಗುಡ ಕರಗಲು ಬಹಳ ದಿನಗಳೇ ಬೇಕು. ಸುಹಾಸನ ನೆನಪು ಶಾಶ್ವತ

Ad Widget

Ad Widget

Ad Widget

Ad Widget

ಪಹಲ್ಗಾಮಿನ ಯಾತ್ರಿಗಳಂತೆ ಸುಹಾಸ ಸಹ ಬಲಿಯಾಗಿದ್ದು ಆತ ಹಿಂದೂ ಎನ್ನುವ ಕಾರಣಕ್ಕೆ. ಹಾಗೆ ನೋಡಿದರೆ ಸುಹಾಸ ಬದುಕಿದ್ದು ಹಿಂದೂವಾಗಿಯೇ… ಬದುಕಿದ್ದು ಹಿಂದೂಗಳಿಗಾಗಿಯೇ… ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತನ್ನ ಫೇಸ್ಬುಕ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯನ್ನು ಸಂಖ್ಯೆ, ಮತಾಂಧತೆ ಹಾಗೂ ಹಿಂಸೆಯಿಂದ ವಶಪಡಿಸಿಕೊಳ್ಳುತ್ತೇವೆ ಎನ್ನುತ್ತಿರುವವರಿಗೆ ಸವಾಲಾಗಿರುವುದೇ ಸುಹಾಸ ಮತ್ತು ಸುಹಾಸನಂತೆ ಪೂರ್ಣ ವಿವೇಚನೆಯಿಂದ ಸಮಾಜದ ಬದುಕನ್ನು ಕಟ್ಟಿಕೊಂಡ ಮತ್ತು ಕಟ್ಟಿಕೊಡುತ್ತಿರುವ ಯುವಕರು, ಹಿರಿಯರು, ಮಾತೆಯರು…

Ad Widget

Ad Widget <> Ad Widget

ಜಿಹಾದಿಗಳಿಗೂ, ಅರ್ಬನ್ ನಕ್ಸಲರಿಗೂ ಮತಿಗೆಟ್ಟ ಎಡಚರಿಗೂ, ರಾಜಕೀಯ ಉನ್ಮಾದಿಗಳಿಗೂ ಸವಾಲಾಗಿರುವುದು ಅಲ್ಲಿ ಹಿಂದೂವಾಗಿ ಬದುಕಲು, ಬಾಳಲು, ಬಲಿಯಾಗಲು ಜನ ವಿವೇಕದಿಂದಲೇ ಸಿದ್ಧರಾಗಿದ್ದಾರೆಂಬುದು… ಆ ನಿಶ್ಚಯ ಆವೇಶದ್ದೂ ಅಲ್ಲ, ಹುಮ್ಮಸ್ಸಿನದ್ದೂ ಅಲ್ಲ, ಆಮಿಷದ್ದೂ ಅಲ್ಲ…



Ad Widget

ಕರಾವಳಿಯು ವಿವೇಕದಿಂದ ಮಾಗಿರುವುದು ಅಲ್ಲಿಯ ಮನೆಗಳಿಂದ, ಸಂಸ್ಕಾರದಿಂದ, ದೇವಾಲಯಗಳಿಂದ, ಭೂತಸ್ಥಾನಗಳಿಂದ, ನಾಗ ಆರಾಧನೆಯಿಂದ, ಭಜನೆ-ಉಪನ್ಯಾಸಗಳಿಂದ, ಯಕ್ಷಗಾನದಿಂದ… ಹತ್ತು ಹಲವು ಚಟುವಟಿಕೆಗಳಿಂದ… ಇದಕ್ಕೆಲ್ಲ ಪುಟವಿಟ್ಟಂತೆ ಜಾಗೃತ ಹಿಂದೂ ಚಟುವಟಿಕೆಯಿಂದ. ಇದೆಲ್ಲದರಿಂದ ಮೂಡಿಬಂದದ್ದು‌ ರಾಜಕೀಯಕ್ಕೆ ಹೊರತಾದ ಸಾಮಾಜಿಕ ಸಂಕಲ್ಪ. ಈ ಸಂಕಲ್ಪ ಎಡಚರಿಗೆ, ಅರ್ಬನ್ ನಕ್ಸಲರಿಗೆ, ಕಾಂಗ್ರೆಸ್ಸಿಗರಿಗೆ ಎಂದೂ ಅರ್ಥವಾಗದ್ದು… ಇಲ್ಲಿ ರಾಜಕೀಯ ಆಕಾಂಕ್ಷೆ ನಗಣ್ಯ.‌

Ad Widget

Ad Widget

ಸುಹಾಸನನ್ನು ರೌಡಿ ಶೀಟರ್ ಎಂದು ಬಿಂಬಿಸಲು ಪೊಲೀಸರು, ಕೆಲವು ಮಾಧ್ಯಮಗಳು, ಕಾಂಗ್ರೆಸ್ಸಿಗರು, ಎಡಚರು ಹಾಗೂ ಅವರೇ ಹಣಕೊಟ್ಟು ಆರಂಭಿಸಿದ ಸೋಶಿಯಲ್ ಮೀಡಿಯಾ ಹ್ಯಾಂಡಲ್‌ಗಳು (ನೂರಾರು) ಸ್ಪರ್ಧೆಗಿಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರೇ,
ನೀವು ರೌಡಿ‌ ಶೀಟರ್ ಎಂದು ಹೇಳಿದ ಕೂಡಲೇ ಸುಹಾಸ ರೌಡಿ ಆಗುವುದಿಲ್ಲ. ಹರ್ಷ, ಪ್ರವೀಣ ಎಲ್ಲೂ-ಎಂದೂ ರೌಡಿಗಳಾಗಿರಲಿಲ್ಲ… ಅವರನ್ನು ಕೊಂದವರು ಅವರನ್ನು ಕೊಂದಿದ್ದು ಹರ್ಷ, ಪ್ರವೀಣ ಹಿಂದೂ ಎನ್ನುವ ಕಾರಣಕ್ಕೆ… ಹಾಗೆಯೇ ಸುಹಾಸ ಕೂಡ. ನಿಮ್ಮ ಕರ್ತವ್ಯ ನೀವು ಮಾಡಿದಿದ್ದರೆ, ಮುಂದಿನ ಪೋಸ್ಟಿಂಗ್-ವರ್ಗಾವಣೆ ರಗಳೆಗೆ ಬೀಳದಿರದಿದ್ದರೆ ಸುಹಾಸ ಕೂಡ ರೌಡಿ ಶೀಟರ್ ಆಗುತ್ತಿರಲಿಲ್ಲ… ಹತ್ಯೆಗೀಡಾಗುತ್ತಲೂ ಇರಲಿಲ್ಲ. ಸುಹಾಸನ ಹತ್ಯೆಗೆ “ನೀವೂ” ಕಾರಣರೇ… ಎಂದು ಗಂಭೀರ ಆರೋಪ ಮಾಡಿದ್ದಾರೆ.

ಎಡಚರು, ಅರ್ಬನ್ ನಕ್ಸಲರ ಬಹುದೊಡ್ಡ ದಂಡು ಇಂದು ಕರಾವಳಿಯನ್ನು ವಿಭಜಿಸುವ ಯೋಜನೆ ಕೈಗೆತ್ತಿಕೊಂಡಿದೆ. ಭೂತಸ್ಥಾನಗಳಲ್ಲಿ ವಿಭಜನೆ ತರಲು ಯತ್ನಿಸುತ್ತಿದ್ದಾರೆ.‌ ತೀರ್ಥಕ್ಷೇತ್ರಗಳನ್ನು ವಿವಾದವಾಗಿಸುತ್ತಿದ್ದಾರೆ. ಹತ್ಯೆಯಲ್ಲಿ ಜಾತಿಯನ್ನು ಹುಡುಕುವ ಇವರು ಹತ್ಯೆಯ ಕಾರಣ ವಿಶ್ಲೇಷಿಸುವುದಿಲ್ಲ… ಅನುಕೂಲಕರ ವಿಶ್ಲೇಷಣೆ… Convenient analysis (ಎಡಚರ ಸಾಮಾನ್ಯ ಪ್ರವೃತ್ತಿ)

ಕರಾವಳಿಯ ಹಿಂದೂ ಇಂದು ಕವಲು ದಾರಿಯಲ್ಲಿದ್ದಾನೆ. ನಂಬಿದ ದಾರಿ… ಬದುಕುವ ದಾರಿ. ಹರ್ಷ, ಪ್ರವೀಣ, ಸುಖಾನಂದ… ಇವರೆಲ್ಲ ಆಯ್ದುಕೊಂಡದ್ದು ನಂಬಿದ ದಾರಿಯನ್ನು. ಸುಹಾಸ ಕೂಡ ಆಯ್ದುಕೊಂಡದ್ದು ನಂಬಿದ ದಾರಿಯನ್ನೇ.‌ ನಂಬುವ ದಾರಿಯಿಂದ ವಿಮುಖಗೊಳಿಸಲು ನೂರು ಶಕ್ತಿಗಳು… ನೂರು ತರ್ಕಗಳು… ನೂರು ಕಾರಣಗಳು. ಆದರೆ ನಂಬಿದ ದಾರಿಯಲ್ಲಿ ಸಾಗಲು ನಂಬಿಕೆಯೊಂದೇ ಆಧಾರ… ಸಂಖ್ಯೆ, ಹಿಂಸೆ, ಮತಾಂಧತೆಗೆ ತಲೆಬಾಗೆವೆಂಬ ಸಂಕಲ್ಪವೇ ಆಧಾರ.

ಆ ನಂಬಿದ ದಾರಿಯಲ್ಲಿ ನಡೆಯುವವರು, ನಡೆಸುವವರು, ಆಧಾರವಾಗುವವರು, ಜೊತೆಗೆ ನಿಲ್ಲುವ ಕುಟುಂಬದವರು, ಒಮ್ಮೆ ನಿಂತು ದೀರ್ಘ ಉಸಿರೆಳೆದು, ಪುನಃ ಸಂಕಲ್ಪಿಸಿ‌ ಮುನ್ನಡೆಯಲು ಆರಂಭಿಸಬೇಕಾದ ಘಟ್ಟದಲ್ಲಿದ್ದೇವೆ. ನಮ್ಮೊಳಗೆ ಬೇಧ ಹುಟ್ಟಿಸಲು ಬಂದು ಸೇರಿದವರಿದ್ದಾರೆ. ಮಹಾತ್ವಾಂಕ್ಷೆಯ ಕಾರಣಕ್ಕೆ ದಾರಿ ತಪ್ಪಿದವರಿದ್ದಾರೆ. ಆಸೆ ಬುರುಕರೂ ಇದ್ದಾರೆ. ಸುಡುವ ಮನೆಯಲ್ಲಿ ಚಳಿ ಕಾಯಿಸುವವರೂ‌ ಇದ್ದಾರೆ. ಎಲ್ಲವನ್ನೂ ಗುರುತಿಸಿ, ಅರ್ಥ ಮಾಡಿಕೊಂಡು, ಉತ್ತರ ಕಂಡುಕೊಂಡು “ನಂಬಿದ” ದಾರಿಯಲ್ಲೇ ಸಾಗಬೇಕಿದೆ. ಆ ದಾರಿಯಲ್ಲಿ ಇಂದೋ ನಾಳೆಯೋ ನಾನೂ ಪ್ರವೀಣನಾಗಬಹುದು, ನಾನೂ ಸುಹಾಸನಾಗಬಹುದು.

ನಂಬಿದ ಈ ದಾರಿಯಲ್ಲಿ ಸಾಗುವ ಕರಾವಳಿಗರ ವ್ಯಕ್ತಿಗತ ಹಾಗೂ ಸಾಮಾಜಿಕ ಸಂಕಲ್ಪಕ್ಕೆ ಶಕ್ತಿ ನೀಡಿ ಎಂದಷ್ಟೇ ಹರ್ಷ, ಪ್ರವೀಣ, ಸುಹಾಸನಂತಹ ಹತ್ತು ಹಲವು ಚೇತನಗಳಲ್ಲಿ ಕೇಳಿಕೊಳ್ಳಬಹುದು ಎಂದು ಬಿಎಲ್ ಸಂತೋಷ್ ಸಂತಾಪ ಸೂಚಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.



Ad Widget

ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.

ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Ad Widget
Continue Reading

ಅಂತರ ರಾಜ್ಯ

Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!

Published

on



Ad Widget

Ad Widget

Ad Widget

Ad Widget

ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.

Ad Widget

Ad Widget <> Ad Widget

ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.



Ad Widget

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.

Ad Widget

Ad Widget

₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.

ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.

ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.

Ad Widget

Ad Widget

Ad Widget

Ad Widget

ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget <> Ad Widget

ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.



Ad Widget

ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget

ಸಾವಿಗೂ ಮುನ್ನ ಏನಾಗಿತ್ತು?

ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.

ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.

ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading