ಕ್ರೀಡೆ
RCBvsCSK | ತವರು ನೆಲದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 2 ರನ್ ಗಳ ರೋಚಕ ಗೆಲುವು : ಮಳೆಯ ಭೀತಿಯಲ್ಲೂ ಪಂದ್ಯ ವೀಕ್ಷಿಸಲು ಬಂದ 25000 ಕ್ಕೂ ಹೆಚ್ಚು ಅಭಿಮಾನಿಗಳು
ಬೆಂಗಳೂರು: ಪಂದ್ಯದ ಅಂತಿಮ ಕ್ಷಣದ ಒತ್ತಡವನ್ನು ಸಮರ್ಥವಾಗಿ ಮೆಟ್ಟಿನಿಂತ ರಾಯಲ್ ಚಾಲೆಂಜರ್ಸ್ ತಂಡದ ವೇಗಿ ಯಶ್ ದಯಾಳ್, ಮೇ 3ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (RCBvsCSK) ತಂಡದ ವಿರುದ್ಧ ತಮ್ಮ ತಂಡಕ್ಕೆ 2 ರನ್‌ಗಳ ರೋಚಕ ಗೆಲುವು ತಂದಿಟ್ಟರು. ಪಂದ್ಯದ ಕೊನೆಯ ಎಸೆತದವೆರೆಗೂ ಕುತೂಹಲ ಹಿಡಿದಿಟ್ಟ ಪಂದ್ಯದಲ್ಲಿ ಹಲವು ವೈಫಲ್ಯಗಳ ನಡುವೆಯೂ ಆರ್‌ಸಿಬಿ ಗೆದ್ದು ಬೀಗಿತು. ಪಂದ್ಯ ಗೆಲ್ಲುತ್ತಿದ್ದಂತೆಯೇ ಪಕ್ಷಿಯಂತೆ ಯಶ್ ಹಾರಾಡಿದರು. ಸಹ ಆಟಗಾರರು ತಬ್ಬಿಕೊಂಡು ಸಂಭ್ರಮಿಸಿದರು. ಈ ಜಯದೊಂದಿಗೆ ಒಟ್ಟು 16 ಅಂಕಗಳನ್ನು ಕಲೆಹಾಕಿದ ಆರ್‌ಸಿಬಿ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿತು.
214 ರನ್‌ಗಳ ಕಠಿಣ ಗುರಿ ಪಡೆದ ಚೆನ್ನೈ, 20 ಓವರ್‌ಗಳಲ್ಲಿ 5 ವಿಕೆಟ್‌ಗೆ 211 ರನ್ ಗಳಿಸಲಷ್ಟೇ ಶಕ್ತಗೊಂಡಿತು. ಕೊನೆಯ ಓವರ್‌ನಲ್ಲಿ ಗೆಲುವಿಗೆ 13 ರನ್ ಗಳಿಸಬೇಕಿದ್ದ ಚೆನ್ನೈ, 11 ರನ್ ಗಳಿಸಲಷ್ಟೇ ಶಕ್ತಗೊಂಡಿತು. ಎರಡು ಬಾರಿ ಜೀವದಾನ ಪಡೆದು ಚೆನ್ನೈ ತಂಡದ ದಿಟ್ಟ ಹೋರಾಟಕ್ಕೆ ಸಾಕ್ಷಿಯಾದ ರವೀಂದ್ರ ಜಡೇಜಾ, 45 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಆರ್ ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ರೊಮಾನಿಯೊ ಶೆಪರ್ಡ್ ಅವರು ಕೇವಲ 14 ಎಸೆತಗಳಲ್ಲಿ 53 ರನ್ ಚಚ್ಚುವ ಮೂಲಕ ಆರ್ ಸಿಬಿ ತಂಡವು 213 ರನ್ ಗಳ ರೋಚಕ ಮೊತ್ತ ದಾಖಲಿಸಲು ನೆರವಾಗಿದ್ದರು. ಅಸಲಿಗೆ ಈ ಗೆಲುವಿನ ಶ್ರೇಯಸ್ಸು ಅವರಿಗೇ ದಕ್ಕಬೇಕು. ಅವರು ಸ್ಲಾಗ್ ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಆಡದಿದ್ದಿದ್ದರೆ ಆರ್ ಸಿಬಿ 200 ರನ್ ಗಳ ಆಜುಬಾಜಿನಲ್ಲಿ ಮೊತ್ತ ಪೇರಿಸುತ್ತಿತ್ತು. ಹಾಗಾಗಿದ್ದರೆ ಸಿಎಸ್ ಕೆ ತಂಡಕ್ಕೆ ಜಯ ಗಳಿಸಲು ಪ್ರಾಯಶಃ ಸಾಧ್ಯವಾಗುತ್ತಿತ್ತೇನೋ. ಆದರೆ, ಶೆಪರ್ಡ್ ಅವರ ಪರಿಶ್ರಮದಿಂದ ಆರ್ ಸಿಬಿ, ಒಂದು ಗೆಲುವು ತಂದುಕೊಡಬಹುದಾದ ಮೊತ್ತ ಪೇರಿಸಲು ಸಾಧ್ಯವಾಯಿತು. ಇದೇ ಕಾರಣಕ್ಕೆ ಅವರಿಗೆ ಈ ಪಂದ್ಯದ ನಂತರ ಪಂದ್ಯಶ್ರೇಷ್ಟ ಗೌರವ ನೀಡಲಾಯಿತು.
ಇದಲ್ಲದೆ, 14 ಎಸೆತಗಳಲ್ಲಿ 53 ರನ್ ಗಳಿಸಿದ ಶೆಪರ್ಡ್, ಐಪಿಎಲ್ ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 2ನೇ ಸ್ಥಾನವನ್ನು ಕೆಎಲ್ ರಾಹುಲ್ ಹಾಗೂ ಇನ್ನಿತರ ಬ್ಯಾಟ್ಸ್ ಮನ್ ಗಳ ಜೊತೆಗೆ ಹಂಚಿಕೊಂಡಿದ್ದಾರೆ.
ಆಯುಷ್ ಆಟಕ್ಕೆ ಬೆಚ್ಚಿದ ಆರ್‌ಸಿಬಿ
ಮುಂಬಯಿನ ಹದಿಹರೆಯದ ಬ್ಯಾಟಿಂಗ್ ಪ್ರತಿಭೆ ಆಯುಷ್ ಮಾತ್ರೆ ಆಟಕ್ಕೆ ಆರ್‌ಸಿಬಿ ಬೆಚ್ಚಿ ಬಿದ್ದಿತು. 5ನೇ ವಯಸ್ಸಿನಲ್ಲೇ ಕ್ರಿಕೆಟ್‌ನತ್ತ ವಾಲಿದ ಆಯುಶ್, 15ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್ ಅಪ್ಪಿಕೊಂಡರು. ತನ್ನ ಕನಸುಗಳನ್ನು ಬೆನ್ನಟ್ಟಲು ವಿರಾರ್ (ಮುಂಬಯಿ ಹೊರಗೆ) ನಿಂದ ಚರ್ಚ್ಗೇಟ್ (ವಾಂಖೆಡೆ ಕ್ರೀಡಾಂಗಣದ ಪಕ್ಕದಲ್ಲಿ) ವರೆಗೆ ರೈಲಿನಲ್ಲಿ ಸುಮಾರು 80 ಕಿಲೋಮೀಟರ್ ನಿತ್ಯ ಪ್ರಯಾಣಿಸಿದ್ದ ಅವರು 17ನೇ ವಯಸ್ಸಿನಲ್ಲಿ ಮುಂಬಯಿ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಐಪಿಎಲ್ 2025ರ ಹರಾಜಿನಲ್ಲಿ ಮ್ಹಾತ್ರೆ ಅವರನ್ನು ಯಾರೂ ಖರೀದಿಸಲಿಲ್ಲ. ಆದರೆ ಸಿಎಸ್‌ಕೆ ನಾಯಕ ಋುತುರಾಜ್ ಅವರ ಗಾಯದಿಂದಾಗಿ ಪಂದ್ಯಾವಳಿಯ ಮಧ್ಯದಲ್ಲಿ ತಂಡ ಸೇರಿದರು. ಮುಂಬಯಿನಲ್ಲಿಮುಂಬಯಿ ಇಂಡಿಯನ್ಸ್ ವಿರುದ್ಧವೇ ಆಡುವ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅವರು, ಆರ್‌ಸಿಬಿ ವಿರುದ್ಧ 48 ಎಸೆತಗಳಲ್ಲಿ 94 ರನ್ ಗಳಿಸಿ ಚೆನ್ನೈ ಹೋರಾಟಕ್ಕೆ ಬಲ ತುಂಬಿದರು. ಆದರೆ ಫಲ ದೊರೆಯಲಿಲ್ಲ.
ವರುಣನ ಕೃಪೆಯಿಂದಾಗಿ ಆರ್‌ಸಿಬಿ ತಂಡ ಪ್ರವಾಸಿ ಚೆನ್ನೈ ವಿರುದ್ಧ ಉತ್ತಮ ಪ್ರದರ್ಶನ ನೀಡಿತು. ಮಳೆಯ ಭೀತಿಯಲ್ಲೂ ಮೈದಾನಕ್ಕೆ ಬಂದ 25 ಸಾವಿರಕ್ಕೂ ಅಧಿಕ ಪ್ರೇಕ್ಷಕರು ವಿರಾಟ್ ಕೊಹ್ಲಿ(62; 33 ಎಸೆತ), ಜಾಕೋಬ್ ಬೆಥೆಲ್ (55 ; 33 ಎಸೆತ) ಮತ್ತು ರೊಮಾರಿಯೋ ಶೆಫರ್ಡ್ (53*; 14 ಎಸೆತ, 4 ಫೋರ್, 6 ಸಿಕ್ಸರ್) ಅವರ ಅತ್ಯುತ್ತಮ ಆಟವನ್ನು ಕಣ್ತುಂಬಿಸಿಕೊಂಡರು. ಸಿಎಂ ಸಿದ್ದರಾಮಯ್ಯ ಕ್ರೀಡಾಂಗಣಕ್ಕೆ ಬಂದು ಪಂದ್ಯಾಟ ವೀಕ್ಷಿಸಿದರು.

18 ಓವರ್‌ಗಳಲ್ಲಿ 5 ವಿಕೆಟ್‌ಗೆ 159 ರನ್ ಗಳಿಸಿದ್ದ ಆರ್‌ಸಿಬಿ, 180 ರಿಂದ 190ರ ಒಳಗೆ ಸೀಮಿತಗೊಳ್ಳಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ 19 ಮತ್ತು 20ನೇ ಓವರ್‌ನಲ್ಲಿ ಕ್ರಮವಾಗಿ 33 ಮತ್ತು 21 ರನ್ ಕಲೆಹಾಕಿದ ರೊಮಾರಿಯೊ ಶೆಫರ್ಡ್ ಮತ್ತು ಡೇವಿಡ್, ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಕೊನೆಯ 2 ಓವರ್‌ನಲ್ಲಿಈ ಜೋಡಿ 54 ರನ್ ಗಳಿಸಿ ದಾಖಲೆ ನಿರ್ಮಿಸಿತು. 2024ರಲ್ಲಿ ಡೆಲ್ಲಿ 53 ರನ್ ಗಳಿಸಿದ್ದು ಹಿಂದಿನ ದಾಖಲೆ.
ಗೇಲ್ ದಾಖಲೆ ಮುರಿದ ಕೊಹ್ಲಿ
ಚೆನ್ನೈ ವಿರುದ್ಧ 5 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ (62; 33 ಎಸೆತ, 5 ಫೋರ್, 5 ಸಿಕ್ಸರ್), ಟಿ20 ಮಾದರಿಯಲ್ಲಿ ಒಂದೇ ತಾಣದಲ್ಲಿ ಅತ್ಯಧಿಕ ಸಿಕ್ಸರ್ ದಾಖಲಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಿದರು. 3 ಸಿಕ್ಸರ್ ಸಿಡಿಸಿದ ವೇಳೆ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಕ್ರಿಸ್ ಗೇಲ್ ದಾಖಲಿಸಿದ್ದ 151 ಸಿಕ್ಸರ್‌ಗಳ ದಾಖಲೆಯನ್ನು ಅಳಿಸಿ ಹಾಕಿದರು. ಸದ್ಯ ಕೊಹ್ಲಿಬೆಂಗಳೂರಿನಲ್ಲಿ154 ಸಿಕ್ಸರ್ ಸಿಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಏತನ್ಮಧ್ಯೆ, ಕೊಹ್ಲಿ, ಐಪಿಎಲ್‌ನಲ್ಲಿ ಅತಿಹೆಚ್ಚು ಅರ್ಧ ಶತಕ ಗಳಿಸಿದ್ದ ಡೇವಿಡ್ ವಾರ್ನರ್(61) ಅವರ ದಾಖಲೆಯನ್ನು ಸರಿಗಟ್ಟಿದರು. ಚೆನ್ನೈ ವಿರುದ್ಧ 62 ರನ್ ಗಳಿದ ಕೊಹ್ಲಿ, ಐಪಿಎಲ್‌ನಲ್ಲಿಒಟ್ಟಾರೆ 62 ಅರ್ಧ ಶತಕ ಹಾಗೂ 8 ಶತಕ ಗಳಿಸಿದ್ದಾರೆ.
2ನೇ ಅತಿ ವೇಗದ ಅರ್ಧ ಶತಕ: ವೆಸ್ಟ್ ಇಂಡೀಸ್‌ನ ದೈತ್ಯ ಆಟಗಾರ ರೊಮಾರಿಯೊ ಶೆಫರ್ಡ್, ಐಪಿಎಲ್ ಇತಿಹಾಸದಲ್ಲಿ 2ನೇ ಜಂಟಿ ಅತಿ ವೇಗದ ಅರ್ಧ ಶತಕ ಗಳಿಸಿದರು. ಚೆನ್ನೈ ವಿರುದ್ಧ ಕೇವಲ 14 ಎಸೆತಗಳಲ್ಲಿ4 ಫೋರ್, 6 ಸಿಕ್ಸರ್ ಒಳಗೊಂಡ ಅಜೇಯ 53 ರನ್ ಗಳಿಸಿ ಈ ಸಾಧನೆ ಮಾಡಿದರು. 2023ರಲ್ಲಿರಾಜಸ್ಥಾನ ರಾಯಲ್ಸ್‌ನ ಯಶಸ್ವಿ ಜೈಸ್ವಾಲ್, ಕೆಕೆಆರ್ ವಿರುದ್ಧ 13 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ ದಾಖಲೆ ಹೊಂದಿದ್ದಾರೆ. ಆದರೆ 30 ವರ್ಷದ ಶೆಫರ್ಡ್ ಅವರ ಅರ್ಧ ಶತಕ ಹಾಲಿ ಟೂರ್ನಿಯಲ್ಲಿದಾಖಲಾದ ಅತಿ ವೇಗದ ಅರ್ಧ ಶತಕವಾಗಿದೆ.
ಟರ್ನಿಂಗ್ ಪಾಯಿಂಟ್ಸ್
16 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್‌ಗೆ 171 ರನ್ ಗಳಿಸಿದ್ದ ಸಿಎಸ್‌ಕೆ ಗೆಲುವಿನ ಹಾದಿಯಲ್ಲಿತ್ತು. ಆದರೆ ಎನ್‌ಗಿಡಿ ಎಸೆದ 17ನೇ ಓವರ್‌ನಲ್ಲಿಆಯುಶ್ ಮ್ಹಾತ್ರೆ (94) ಮತ್ತು ಡೆವಾಲ್ಡ್ ಬ್ರೆವಿಸ್(0) ಔಟ್ ಮಾಡಿದ್ದು, ಪಂದ್ಯವನ್ನು ಆರ್‌ಸಿಬಿಯತ್ತ ವಾಲುವಂತೆ ಮಾಡಿತು.
ಅಂಕಪಟ್ಟಿಯಲ್ಲಿ ಟಾಪ್ 1
ಈ ಗೆಲುವಿನಿಂದ ಅಂಕಪಟ್ಟಿಯಲ್ಲಿ ಆರ್ ಸಿಬಿ ಅಗ್ರಸ್ಥಾನಕ್ಕೇರಿದೆ. ಈವರೆಗೆ ಆಡಿರುವ 11 ಪಂದ್ಯಗಳಲ್ಲಿ ಎಂಟು ಪಂದ್ಯಗಳಲ್ಲಿ ಜಯ ಸಾಧಿಸಿ, ಮೂರು ಪಂದ್ಯಗಳಲ್ಲಿ ಸೋತು ಒಟ್ಟು 16 ಅಂಕಗಳನ್ನು ಗಳಿಸುವ ಮೂಲಕ ಅಂಕಪಟ್ಟಿಯ ಟಾಪ್ 1 ಸ್ಥಾನದಲ್ಲಿದೆ.
ಸಂಕ್ಷಿಪ್ತ ಸ್ಕೋರ್
ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ಗೆ 213
ಜಾಕೋಬ್ 55 (33 ಎಸೆತ, 8 ಬೌಂಡರಿ, 2 ಸಿಕ್ಸರ್), ಕೊಹ್ಲಿ 62 (33 ಎಸೆತ, 5 ಬೌಂಡರಿ, 5 ಸಿಕ್ಸರ್), ಶೆಪರ್ಡ್ 53 (14 ಎಸೆತ, 4 ಬೌಂಡರಿ, 6 ಸಿಕ್ಸರ್); ಮತೀಶಾ ಪಾಥಿರಾಣಾ 36 ರನ್ ನೀಡಿ 3 ವಿಕೆಟ್, ನೂರ್ ಅಹ್ಮದ್ 26ಕ್ಕೆ 1 ವಿಕೆಟ್.
ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 211
ಆಯುಷ್ 94 (48 ಎಸೆತ, 9 ಬೌಂಡರಿ, 5 ಸಿಕ್ಸರ್), ರವೀಂದ್ರ ಜಡೇಜಾ ಅಜೇಯ 77 (45 ಎಸೆತ, 8 ಬೌಂಡರಿ, 2 ಸಿಕ್ಸರ್); ಲುಂಗಿ (30 ರನ್ ನೀಡಿ 3 ವಿಕೆಟ್, ಕ್ರುನಾಲ್ ಪಾಂಡ್ಯ 24 ರನ್ ಗೆ 1 ವಿಕೆಟ್).
ಪಂದ್ಯಶ್ರೇಷ್ಠ: ರೊಮಾನಿಯೋ ಶೆಪರ್ಡ್
ಗೂಗಲ್ ನಲ್ಲಿ ಸಿಕ್ಕಾಪಟ್ಟೆ ಟ್ರೆಂಡ್
ಮೇ 3ರಂದು ನಡೆದಿದ್ದ ಆರ್ ಸಿಬಿ ವಿರುದ್ಧದ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಬಗ್ಗೆ ಗೂಗಲ್ ಬಳಕೆದಾರರು ತೀವ್ರವಾದ ಆಸಕ್ತಿ ತೋರಿದ್ದಾರೆ. ಈ ಪಂದ್ಯದ ಬಗ್ಗೆ ಶೇ. 100ಕ್ಕಿಂತ ಹೆಚ್ಚು ಗೂಗಲ್ ಬಳಕೆದಾರರು ಹುಡುಕಾಟ ನಡೆಸಿದ್ದರಿಂದಾಗಿ ಇದು ಮೇ 3 – 4ರ ಮಧ್ಯರಾತ್ರಿ ಬ್ರೇಕೌಟ್ ಹಂತಕ್ಕೆ ತಲುಪಿತ್ತು.
ಕರ್ನಾಟಕದಲ್ಲಿ ಶೇ. 100ರಷ್ಟು ಮಂದಿ ಈ ಪಂದ್ಯದ ಫಲಿತಾಂಶ ಹಾಗೂ ಮತ್ತಿತರ ಮಾಹಿತಿಗಳಿಗಾಗಿ ಹುಡುಕಾಟ ನಡೆಸಿದ್ದರೆ, ಒಡಿಶಾದ ಶೇ. 99 ಮಂದಿ, ಬಿಹಾರದ ಶೇ. 83 ಮಂದಿ, ಆಂಧ್ರಪ್ರದೇಶದ ಶೇ. 80 ಮಂದಿ ಹಾಗೂ ಪುದುಚ್ಚೇರಿಯ ಶೇ. 20 ಮಂದಿ ಈ ಪಂದ್ಯದ ಮಾಹಿತಿಗಾಗಿ ಹುಡುಕಾಡಿದ ಟಾಪ್ 5 ರಾಜ್ಯಗಳ ಗೂಗಲ್ ಬಳಕೆದಾರರಾಗಿದ್ದಾರೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ಕ್ರೀಡೆ
Asian Games-ಏಷ್ಯನ್ ಗೇಮ್ಸ್ ನಲ್ಲಿ ಮಿಂಚಿದ ಭಾರತದ ಮಹಿಳೆಯರು; 4×400 ರಿಲೇಯಲ್ಲಿ ಚಿನ್ನ, ಹೈಜಂಪ್-ಮಿಶ್ರ ರಿಲೇಯಲ್ಲಿ ಕಂಚು
ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
ನಗೋಯಾ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
4×400 ಮೀಟರ್ ರಿಲೇಯಲ್ಲಿ ಬಂಗಾರದ ಓಟ
ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಕಿರಣ್ ಪಹಾಲ್, ಎಂ.ಆರ್. ಪೂವಮ್ಮ, ಪ್ರಾಚಿ ಚೌಧರಿ ಹಾಗೂ ವಿಥ್ಯಾ ರಾಮರಾಜ್ ಅವರನ್ನೊಳಗೊಂಡ ಭಾರತ ತಂಡ 3:29.69 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡಿತು. ಬಹ್ರೇನ್ 3:30.21 ಸಮಯದೊಂದಿಗೆ ಬೆಳ್ಳಿ ಹಾಗೂ ಚೀನಾ 3:31.02 ಸಮಯದೊಂದಿಗೆ ಕಂಚಿನ ಪದಕ ಗೆದ್ದವು.
ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕ ಗೆದ್ದಂತಾಗಿದೆ. ವಿಥ್ಯಾ ರಾಮರಾಜ್ ಅವರಿಗೆ ಇದು ಕೂಟದ ಮೂರನೇ ಪದಕವಾಗಿದೆ. ಅವರು ಈ ಹಿಂದೆ ಮಿಶ್ರ 4×400 ಮೀಟರ್ ರಿಲೇಯಲ್ಲಿ ಬೆಳ್ಳಿ ಹಾಗೂ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಕಂಚು ಗೆದ್ದಿದ್ದರು.
ಹೈಜಂಪ್‌ನಲ್ಲಿ ಪೂಜಾಗೆ ಕಂಚು
ಮಹಿಳೆಯರ ಹೈಜಂಪ್ ಫೈನಲ್‌ನಲ್ಲಿ ಭಾರತದ ಪೂಜಾ ಸಿಂಗ್ 1.84 ಮೀಟರ್ ಎತ್ತರ ಜಿಗಿದು ಕಂಚಿನ ಪದಕ ಗೆದ್ದರು. 1.84 ಮೀಟರ್‌ವರೆಗಿನ ಎತ್ತರವನ್ನು ಅವರು ಯಶಸ್ವಿಯಾಗಿ ದಾಟಿದರೂ, 1.87 ಮೀಟರ್ ಎತ್ತರವನ್ನು ಮೂರು ಪ್ರಯತ್ನಗಳಲ್ಲೂ ದಾಟಲು ಸಾಧ್ಯವಾಗಲಿಲ್ಲ.
ಮಿಶ್ರ 4×100 ಮೀಟರ್ ರಿಲೇಯಲ್ಲಿ ಕಂಚು
ಗುರುಂದರ್‌ವೀರ್ ಸಿಂಗ್, ಸ್ನೇಹಾ ಸತ್ಯನಾರಾಯಣ, ಅನಿಮೇಶ್ ಕುಜುರ್ ಹಾಗೂ ಹರಿತಾ ಭದ್ರಾ ಅವರನ್ನೊಳಗೊಂಡ ಭಾರತ ತಂಡ ಮಿಶ್ರ 4×100 ಮೀಟರ್ ರಿಲೇಯಲ್ಲಿ 41.06 ಸೆಕೆಂಡ್‌ಗಳ ಋತುವಿನ ಅತ್ಯುತ್ತಮ ಸಮಯದೊಂದಿಗೆ ಕಂಚಿನ ಪದಕ ಗೆದ್ದಿತು.
ಚೀನಾ 40.78 ಸೆಕೆಂಡ್‌ಗಳಲ್ಲಿ ಚಿನ್ನ ಹಾಗೂ ಥೈಲ್ಯಾಂಡ್ 40.87 ಸೆಕೆಂಡ್‌ಗಳಲ್ಲಿ ಬೆಳ್ಳಿ ಪದಕ ಗೆದ್ದವು. ಭಾರತ 41.06 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆಯಿತು
ಕ್ರೀಡೆ
Fariba-ತಾಲಿಬಾನ್ ಆಡಳಿತದಲ್ಲಿ ಮಹಿಳೆಯರಿಗೆ ನಿರ್ಬಂಧ: ಪುರುಷರ ರೀತಿ ವೇಷ ಧರಿಸಿ ತರಬೇತಿ ಪಡೆದು ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಫರೀಬಾ..!
ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಐಚಿ-ನಗೋಯಾ: ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಜಪಾನ್‌ನ ಐಚಿ ಪ್ರಾಂತ್ಯದ ಶಿನ್‌ಶಿರೋ ಸೈಕ್ಲಿಂಗ್ ರೋಡ್ ಕೋರ್ಸ್‌ನಲ್ಲಿ ಸೆ.22ರಂದು ನಡೆದ ಮಹಿಳೆಯರ 90.4 ಕಿ.ಮೀ. ವೈಯಕ್ತಿಕ ರೋಡ್ ರೇಸ್‌ನಲ್ಲಿ 23 ವರ್ಷದ ಫರೀಬಾ ಬೆಳ್ಳಿ ಪದಕ ಗೆದ್ದರು. ಇದರೊಂದಿಗೆ 2002ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ರೋಚಕವಾಗಿ ನಡೆದ ಫೈನಲ್‌ನಲ್ಲಿ ಫರೀಬಾ ಹಾಗೂ ಚಿನ್ನದ ಪದಕ ಗೆದ್ದ ಚೀನಾದ ಗುವೋ ಲಿ ಇಬ್ಬರೂ 2 ಗಂಟೆ 50 ನಿಮಿಷ 05 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಎರಡು ಲ್ಯಾಪ್‌ಗಳಲ್ಲಿ ಫರೀಬಾ ಮುನ್ನಡೆ ಸಾಧಿಸಿದ್ದರು. ಆದರೆ ಅಂತಿಮ 300–400 ಮೀಟರ್‌ಗಳಲ್ಲಿ ಗುವೋ ಲಿ ಅತ್ಯಲ್ಪ ಅಂತರದಲ್ಲಿ ಮುನ್ನಡೆ ಪಡೆದು ಸ್ವರ್ಣ ಪದಕ ಗೆದ್ದರು. ಹಾಂಗ್‌ಕಾಂಗ್‌ನ ಲಿಯಾಂಗ್ ವಿಂಗ್ ಯೀ ಕಂಚಿನ ಪದಕ ಪಡೆದರು.
ಇದಕ್ಕೂ ಎರಡು ದಿನಗಳ ಮೊದಲು ನಡೆದ 24.2 ಕಿ.ಮೀ. ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಫರೀಬಾ ಏಳನೇ ಸ್ಥಾನ ಪಡೆದಿದ್ದರು.
ವೇಷ ಬದಲಿಸಿ ಸೈಕ್ಲಿಂಗ್ ತರಬೇತಿ
ಉತ್ತರ ಅಫ್ಘಾನಿಸ್ತಾನದ ಫರ್ಯಾಬ್ ಪ್ರಾಂತ್ಯದ ಫರೀಬಾ ತಮ್ಮ 15ನೇ ವಯಸ್ಸಿನಲ್ಲಿ ಅಕ್ಕ ಯುಲ್ದುಜ್ ಹಾಶಿಮಿ ಅವರ ಪ್ರೇರಣೆಯಿಂದ ಸೈಕ್ಲಿಂಗ್ ಆರಂಭಿಸಿದ್ದರು. ಮಹಿಳೆಯರು ಸಾರ್ವಜನಿಕವಾಗಿ ಸೈಕಲ್ ಚಲಾಯಿಸುವುದಕ್ಕೆ ವಿರೋಧವಿದ್ದ ಸಾಂಪ್ರದಾಯಿಕ ವಾತಾವರಣದಲ್ಲಿ ಗುರುತು ಪತ್ತೆಯಾಗದಂತೆ ಪುರುಷರ ವೇಷ ಧರಿಸಿ ಅವರು ತರಬೇತಿ ಪಡೆಯುತ್ತಿದ್ದರು.
ಮುಖಕ್ಕೆ ಎರಡು-ಮೂರು ಮಾಸ್ಕ್‌ಗಳು, ಹೆಡ್‌ಸ್ಕಾರ್ಫ್ ಹಾಗೂ ಸನ್‌ಗ್ಲಾಸ್ ಧರಿಸಿ ಸೈಕ್ಲಿಂಗ್ ಮಾಡುತ್ತಿದ್ದ ಫರೀಬಾ ಮತ್ತು ಅವರ ಸಹೋದರಿಗೆ ತರಬೇತಿ ವೇಳೆ ಜನರು ಕಲ್ಲು, ಬಾಟಲಿ ಎಸೆದು ನಿಂದಿಸುತ್ತಿದ್ದರು. ಇದೇ ವೇಳೆ ನಡೆದ ರಿಕ್ಷಾ ಅಪಘಾತದಲ್ಲಿ ಯುಲ್ದುಜ್ ಅವರ ಮಣಿಕಟ್ಟು ಮುರಿದ ಘಟನೆಯೂ ನಡೆದಿದೆ.
ತಾಲಿಬಾನ್ ಆಡಳಿತದ ಬಳಿಕ ದೇಶತ್ಯಾಗ
2020ರಲ್ಲಿ ಫರೀಬಾ ಮತ್ತು ಯುಲ್ದುಜ್ ಅಫ್ಘಾನಿಸ್ತಾನದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಕ್ರೀಡೆಗಳ ಮೇಲಿನ ನಿರ್ಬಂಧದಿಂದಾಗಿ ಅವರ ಕ್ರೀಡಾ ಬದುಕಿಗೂ ಸಂಕಷ್ಟ ಎದುರಾಯಿತು.
ಮಾಜಿ ವಿಶ್ವ ಚಾಂಪಿಯನ್ ಅಲೆಸ್ಸಾಂಡ್ರಾ ಕ್ಯಾಪೆಲ್ಲೊಟ್ಟೊ ಅವರ ನೆರವಿನಿಂದ ಸಹೋದರಿಯರು ಇಟಲಿಗೆ ವಲಸೆ ಹೋದರು. ಅಲ್ಲಿ ತರಬೇತಿ ಮುಂದುವರಿಸಿದ ಫರೀಬಾ 2022ರಲ್ಲಿ ಅಫ್ಘಾನ್ ರಾಷ್ಟ್ರೀಯ ಚಾಂಪಿಯನ್ ಆದರು. ಅಲ್ಲದೆ, UCI ರೇಸ್ ಗೆದ್ದ ಮೊದಲ ಅಫ್ಘಾನ್ ಮಹಿಳಾ ಸೈಕ್ಲಿಸ್ಟ್ ಎಂಬ ಸಾಧನೆ ಮಾಡಿದರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲೂ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದರು.
‘ಅಫ್ಘಾನ್ ಮಹಿಳೆಯರ ಶಕ್ತಿಯ ಸಂಕೇತ’
ಬೆಳ್ಳಿ ಪದಕ ಗೆದ್ದ ಬಳಿಕ ಮಾತನಾಡಿದ ಫರೀಬಾ, ಈ ಪದಕ ಅಫ್ಘಾನ್ ಮಹಿಳೆಯರ ಪ್ರತಿರೋಧ ಮತ್ತು ಶಕ್ತಿಯ ಸಂಕೇತವಾಗಿದೆ ಎಂದು ಹೇಳಿದರು.
“ನಾವು ಇಂದಿಗೂ ಬದುಕುಳಿದಿದ್ದೇವೆ ಮತ್ತು ಹೋರಾಡುತ್ತಿದ್ದೇವೆ ಎಂಬುದಕ್ಕೆ ಇದು ಸಾಕ್ಷಿ. ನನ್ನ ಮೇಲೆ ಬಿದ್ದ ಪ್ರತಿಯೊಂದು ಕಲ್ಲು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಶಕ್ತಿಯನ್ನು ನೀಡಿತು. ಮುಂದಿನ ಪೀಳಿಗೆಯ ಅಫ್ಘಾನ್ ಹೆಣ್ಣುಮಕ್ಕಳು ಯಾವುದೇ ಭಯವಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಅವರು ಆಶಯ ವ್ಯಕ್ತಪಡಿಸಿದರು.
ತಾಲಿಬಾನ್ ಆಡಳಿತದ ಬಳಿಕ ಅಫ್ಘಾನ್ ಮಹಿಳಾ ಕ್ರೀಡಾಪಟುಗಳ ಪರಿಸ್ಥಿತಿ ಜಾಗತಿಕ ಗಮನ ಸೆಳೆದಿದೆ. ನಿರಾಶ್ರಿತರಾಗಿರುವ ಅಫ್ಘಾನಿಸ್ತಾನದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ತರಬೇತಿ ಪಡೆಯುತ್ತಿರುವ ವರದಿಗಳೂ ಈ ಹಿಂದೆ ಪ್ರಕಟವಾಗಿದ್ದವು.
-
ನಿಧನ ವಾರ್ತೆ19 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ19 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ19 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















