ಏ.27 ರಂದು […]" /> ಏ.27 ರಂದು […]"> Bannanje Raja | ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಭೂಗತ ದೊರೆ ಬನ್ನಂಜೆ ರಾಜನಿಗೆ ಪೆರೋಲ್ - ಹಿಂದೂ ಸಂಪ್ರದಾಯದಂತೆ 11 ದಿನ ನಡೆಯಲಿದೆ ತಂದೆಯ ಕಾರ್ಯ - ಉಡುಪಿಯ ಮನೆಯ ಸುತ್ತ ಬಿಗಿ ಭದ್ರತೆ - Nikhara News | Kannada News Website
Connect with us

ಬಿಗ್ ನ್ಯೂಸ್

Bannanje Raja | ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಭೂಗತ ದೊರೆ ಬನ್ನಂಜೆ ರಾಜನಿಗೆ ಪೆರೋಲ್ – ಹಿಂದೂ ಸಂಪ್ರದಾಯದಂತೆ 11 ದಿನ ನಡೆಯಲಿದೆ ತಂದೆಯ ಕಾರ್ಯ – ಉಡುಪಿಯ ಮನೆಯ ಸುತ್ತ ಬಿಗಿ ಭದ್ರತೆ

Published

on

Ad Widget

Ad Widget

Ad Widget

Ad Widget

ಉಡುಪಿ: ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್‌ ಅನುಮತಿ ನೀಡಿರುವ ಕಾರಣ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನನ್ನು (Bannanje Raja) ಉಡುಪಿಗೆ ಭಾನುವಾರ ಕರೆ ತರಲಾಯಿತು.

Ad Widget

Ad Widget

Ad Widget

Ad Widget

ಬೆಳಗಾವಿಯ ಜೈಲಿನಲ್ಲಿರುವ ಬನ್ನಂಜೆ ರಾಜನನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಮಲ್ಪೆಯ ಕಲ್ಮಾಡಿಯ ಸಸಿತೋಟ ಎಂಬಲ್ಲಿರುವ ಆತನ ಮನೆಗೆ ಕರೆದುಕೊಂಡು ಬಂದಿದ್ದಾರೆ. ಅಲ್ಲಿ ಆತ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾನೆ. ಬಳಿಕ ಮಲ್ಪೆ ಹಿಂದೂ ರುದ್ರಭೂಮಿಯಲ್ಲಿ ಆತನ ತಂದೆಯ ಅಂತ್ಯ ಸಂಸ್ಕಾರ ನೆರವೇರಿತು.

Ad Widget

Ad Widget alt="Ad Widget"/>

Ad Widget

ಏ.27 ರಂದು ನಿಧನರಾದ ತಂದೆ ಎಂ.ಸುಂದರ್ (88) ಅವರ ಅಂತಿಮ ಸಂಸ್ಕಾರ ಹಾಗೂ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಪೆರೋಲ್ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದನು. ಹೈಕೋರ್ಟ್ ಆತನಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಮೇ. 3ರಿಂದ ಮೇ. 14ರವರೆಗೆ ಪೆರೋಲ್ ನೀಡಿತ್ತು.

Ad Widget

Ad Widget <> Ad Widget

ಹಿಂದೂ ಧರ್ಮದ ಪ್ರಕಾರ ಅಂತಿಮವಿಧಿವಿಧಾನಗಳ ಕಾರ್ಯ 11 ದಿನಗಳವರೆಗೆ ನಡೆಯಲಿದೆ. ಅದರ ಆಚರಣೆಯಂತೆ ರಾಜನಿಗೆ ಪೆರೋಲ್ ಸಿಕ್ಕಿದೆ ಎನ್ನಲಾಗಿದೆ.

‘ತಂದೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಬಳಿಕ ಬನ್ನಂಜೆ ರಾಜ ಮನೆಯಿಂದ ಹೊರಗೆ ಬರಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಇದೇ 14ರಂದು ಆತನನ್ನು ಮತ್ತೆ ಬೆಳಗಾವಿಯ ಜೈಲಿಗೆ ಕರೆದೊಯ್ಯಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ.ತಿಳಿಸಿದ್ದಾರೆ.

Click to comment

Leave a Reply

ಬಿಗ್ ನ್ಯೂಸ್

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

Published

on

Ad Widget

Ad Widget

Ad Widget

Ad Widget

ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್‌ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.

Ad Widget

Ad Widget <> Ad Widget

ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್‌ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್‌ಗಳಿಗೂ ಅನ್ವಯಿಸುತ್ತದೆ.

ಗುಂಪು ಬುಕಿಂಗ್‌ಗೆ ಬರ್ತ್‌ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್‌ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್‌ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.

Ad Widget

Ad Widget

ಗುಂಪು ಟಿಕೆಟ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್‌ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
  • ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್‌ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
  • ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
  • ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
  • ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
  • ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
  • ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
  • ದುರುಪಯೋಗ ತಡೆಯಲು ಎಚ್ಚರಿಕೆ
  • ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್‌ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
  • ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
Ad Widget
Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!