ಅಪರಾಧ
Puttur-ಪುತ್ತೂರು: ಮಹಿಳಾ ವೈದ್ಯಾಧಿಕಾರಿ ವಿರುದ್ದ ಹಲ್ಲೆಗೆ ಯತ್ನಿಸಿ ಅನುಚಿತ ವರ್ತನೆ : ಕೋಮು ದ್ವೇಷದ ಸಂದೇಶ ಹರಡಿದ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವಂತಹ ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಕೇಸಿಗೆ ಒಳಗಾಗಿದ್ದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವಂತಹ ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಕೇಸಿಗೆ ಒಳಗಾಗಿದ್ದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹಿಳಾ ವೈದ್ಯಾಧಿಕಾರಿಯ ಜತೆ ತಾಯಿ ಮತ್ತು ಮಗ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಲು ಯತ್ನಿಸಿದ ಪ್ರಕರಣ ಪುತ್ತೂರಿನಲ್ಲಿ ನಡೆದ ಸಂದರ್ಭ ಆರೋಪಿಯು ವಾಟ್ಸಾಪ್ ಗುಂಪುಗಳಲ್ಲಿ ಕೋಮು ದ್ವೇಷದ ಸಂದೇಶಗಳನ್ನು ಹರಡಿರುವುದಾಗಿ ಕೇಸ್ ದಾಖಲಾಗಿತ್ತು.
‘ಅನು ಪುತ್ತೂರು’ ಎಂಬ ಮೊಬೈಲ್ ಖಾತೆಯಿಂದ ಈ ಕೋಮು ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಪತ್ತೆ ಹಚ್ಚಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಘಟನೆ ಹಿನ್ನೆಲೆ:
ಏಪ್ರಿಲ್ 27 ರಂದು ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ. ಆಂಜನೇಯ ರೆಡ್ಡಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಗಸ್ತು ತಿರುಗುತ್ತಿದ್ದಾಗ, ಕೆಲವು ವಾಟ್ಸಾಪ್ ಗುಂಪುಗಳಲ್ಲಿ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ದ್ವೇಷ ಬಿತ್ತುವಂತಹ ಬರಹಗಳು ಹರಿದಾಡುತ್ತಿರುವುದನ್ನು ಗಮನಿಸಿದರು. ಈ ಬಗ್ಗೆ ತನಿಖೆ ನಡೆಸಿದಾಗ, ‘ಅನು ಪುತ್ತೂರು’ ಎಂಬ ಹೆಸರಿನಿಂದ ಸಂದೇಶಗಳನ್ನು ಕಳುಹಿಸಿರುವುದು ಪತ್ತೆಯಾಗಿತ್ತು.
ಈ ರೀತಿಯ ಸಂದೇಶಗಳು ವಿವಿಧ ಸಮುದಾಯಗಳ ನಡುವೆ ವೈಷಮ್ಯ, ದ್ವೇಷ ಮತ್ತು ಕೋಮು ಭಾವನೆಗಳನ್ನು ಕೆರಳಿಸಿ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಪೊಲೀಸರು ಸಂದೇಶ ರವಾನಿಸಿದವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.
ಜಾಮೀನು ಮಂಜೂರು:
ಪ್ರಸ್ತುತ, ಈ ಪ್ರಕರಣದ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಯ ಪರವಾಗಿ ಚಾಣಕ್ಯ ಲಾ ಚೇಂಬರ್ಸ್ನ ವಕೀಲರಾದ ಶ್ಯಾಮ್ ಪ್ರಸಾದ್ ಕೈಲಾರ್, ಸುಮಾ ಟಿ.ಆರ್., ಚೇತನಾ ವಿ.ಎನ್., ವಿಮಲೇಶ್ ಕುಮಾರ್, ಮೇಘಾಶ್ರೀ, ಜಯಶ್ರೀ ಮತ್ತು ಸುಜನ್ಯ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಸ್ಥಳೀಯ
Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.
ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್22 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್21 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ20 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ20 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ19 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ21 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು18 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















