ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, […]" /> ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, […]"> Rakshit Shivaram-ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದೇವಸ್ಥಾನದ ಬ್ರಹ್ಮಕಲಶ ವೇದಿಕೆಯನ್ನು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ-ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ - Nikhara News | Kannada News Website
Connect with us

ಸ್ಥಳೀಯ

Rakshit Shivaram-ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದೇವಸ್ಥಾನದ ಬ್ರಹ್ಮಕಲಶ ವೇದಿಕೆಯನ್ನು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ-ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ

Published

on

Ad Widget

Ad Widget

Ad Widget

Ad Widget

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ ಎಂಬುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಖಂಡನೀಯ ಎಂಬುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಹೇಳಿದ್ದಾರೆ.

Ad Widget

Ad Widget alt="Ad Widget"/>

Ad Widget

ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಉಪಯೋಗಿಸುವ ಹರೀಶ್ ಪೂಂಜಾರ ನಡೆ ಅತ್ಯಂತ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ ಎಂದು ರಕ್ಷಿತ್ ಶಿವರಾಂ ಹೇಳಿದ್ದಾರೆ.

Ad Widget

Ad Widget <> Ad Widget

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟಿಸಲು ಉಪಯೋಗಿಸಿರುವುದು ಸರಿಯಲ್ಲ. ತೆಕ್ಕಾರು ಗ್ರಾಮದ ಎಲ್ಲರ ಸಹಕಾರದಿಂದ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಹಾಗೂ ಧಾರ್ಮಿಕ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಹಾಗೂ ಗ್ರಾಮದಲ್ಲಿ ಹಿಂದೂ- ಮುಸ್ಲಿಮರು ಅಣ್ಣ ತಮ್ಮಂದಿರಂತೆ ಇರುವುದನ್ನು ಸಹಿಸದ ಶಾಸಕರು ತನ್ನ ಭಾಷಣದುದ್ದಕ್ಕೂ ಮುಸ್ಲಿಮರ ಜೊತೆಗೆ ಯಾವುದೇ ಹಿಂದೂಗಳು ವ್ಯವಹರಿಸಬೇಡಿ , ಹಿಂದೂಗಳಿಗೆ ಸೌಹಾರ್ದತೆ ಅಗತ್ಯವಿಲ್ಲ ಎಂದು ಕರೆ ನೀಡುವ ಮೂಲಕ ಧಾರ್ಮಿಕ ಕೇಂದ್ರವನ್ನು ದ್ವೇಷದ ಕೇಂದ್ರವಾಗಿಸಿದ್ದಾರೆ. ಶಾಸಕರ ನಡೆ ತುಳುನಾಡಿನ ಸೌಹಾರ್ದತೆಗೆ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಬದ್ದವಾಗಿ ದೇಶದ ಸೌಹಾರ್ದತೆಯನ್ನು ಎತ್ತಿ ಹಿಡಿಯುತ್ತೇನೆ , ಸರ್ವಜನತೆಯನ್ನು ಸಮಾನತೆಯಿಂದ , ಸೌಹಾರ್ದತೆಯಿಂದ ನೋಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ ಶಾಸಕರು ಇದೀಗ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳಲು ಧಾರ್ಮಿಕ ವೇದಿಕೆಗಳನ್ನು ಉಪಯೋಗಿಸುತ್ತಿದ್ದಾರೆ‌.

Ad Widget

Ad Widget

ಮುಂದಿನ ದಿನಗಳಲ್ಲಿ ಜನರು ಧಾರ್ಮಿಕ ವೇದಿಕೆಗಳನ್ನು ತಮ್ಮ ರಾಜಕೀಯ ಉದ್ದೇಶಗಳಿಗೆ ಉಪಯೋಗಿಸಲು ಬಿಡಬಾರದು. ಅಂತಹ ಘಟನೆಗಳನ್ನು ಬಲವಾಗಿ ವಿರೋಧಿಸಿ , ತಮ್ಮ ಊರಿನ ಘನತೆ, ಗೌರವ, ಸೌಹಾರ್ದತೆಯನ್ನು ಉಳಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಘರ್ಷಣೆಗಳನ್ನು ತಿಳಿಗೊಳಿಸಬೇಕಾದ ಜನಪ್ರತಿನಿಧಿಯ ಈ ರೀತಿಯ ದ್ವೇಷ ಭಾಷಣ ಖಂಡನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!