ನಿಧನ ವಾರ್ತೆ
Pahalgam-ಪಹಲ್ಗಾಮ್ ನರಮೇಧ ನಡೆಸಿದ ಭಯೋತ್ಪಾದಕರಿಗೆ ಆಹಾರ ಆಶ್ರಯ ನೀಡಿದ್ದ ಆರೋಪಿ ತನಿಖೆ ನಡೆಸುವಾಗ ತಪ್ಪಿಸಿಕೊಂಡು ನದಿಗೆ ಹಾರಿ ಮೇಲೆಬರಲಾಗದೇ ಸಾವು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪಹಲ್ಗಾಮ್ ಭಯೋತ್ಪಾಕದ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ವ್ಯಕ್ತಿಯೊಬ್ಬ, ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪಹಲ್ಗಾಮ್ ಭಯೋತ್ಪಾಕದ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ವ್ಯಕ್ತಿಯೊಬ್ಬ, ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವನ್ನಪ್ಪಿದ್ದಾನೆ.
ಇಮ್ತಿಯಾಜ್ ಅಹ್ಮದ್ ಮಾಗ್ರೆ (23 ವ) ಎಂಬಾತ ಪಹಲ್ಗಾಮ್ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ ಎಂದು ಮೂಲಗಳು ಖಚಿತಪಡಿಸಿವೆ.
ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಮ್ತಿಯಾಜ್ ಅಹ್ಮದ್ ಮಾಗ್ರೆನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಇಮ್ತಿಯಾಜ್ ತಾನು ಕಾಡಿನಲ್ಲಿ ಅಡಗಿದ್ದ ಭಯೋತ್ಪಾದಕರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ನೀಡುತ್ತಿರುವುದಾಗಿ ಒಪ್ಪಿಕೊಂಡಿದ್ದ.
ಪೊಲೀಸರು ಇಮ್ತಿಯಾಜ್‌ನನ್ನು ಭಯೋತ್ಪಾದಕರು ಅಡಗಿದ್ದ ಸ್ಥಳಕ್ಕೆ ಕೊಂಡೊಯ್ಯುತ್ತಿದ್ದಾಗ, ಆತ ತಪ್ಪಿಸಿಕೊಳ್ಳಲು ನದಿಗೆ ಹಾರಿದ್ದಾನೆ. ಆದರೆ ತುಂಬ ದೂರ ಈಜಲಾಗದೇ, ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಗಿ ಭದ್ರತಾ ಪಡೆಗಳು ತಿಳಿಸಿವೆ. ಆದರೆ ಈ ಘಟನೆ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ತನಿಖೆಗೆ ಒತ್ತಾಯ ಮಾಡಲಾಗಿದೆ.
ಕುಲ್ಗಾಮ್ ಜಿಲ್ಲೆಯ ತಂಗ್ಮಾರ್ಗ್ ಪ್ರದೇಶದ ಕಾಡಿನಲ್ಲಿ ಅಡಗಿದ್ದ ಪಹಲ್ಗಾಮ್ ಭಯೋತ್ಪಾದಕರಿಗೆ, ಇಮ್ತಿಯಾಜ್ ಅಹ್ಮದ್ ಮಾಗ್ರೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದ. ಈ ವಿಷಯ ತಿಳಿದ ಪೊಲೀಸರು ಆತನನ್ನು ಕಳೆದ ಶನಿವಾರ (ಮೇ. 3) ವಶಕ್ಕೆ ಪಡೆದರು. ವಿಚಾರಣೆ ವೇಳೆ, ತಾನು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿರುವುದಾಗಿ ಆತ ಒಪ್ಪಿಕೊಂಡನು. ನಂತರ, ಭಾನುವಾರ (ಮೇ.4) ಬೆಳಗ್ಗೆ, ಪೊಲೀಸರು ಮತ್ತು ಸೈನ್ಯದ ಜಂಟಿ ತಂಡದೊಂದಿಗೆ ಭಯೋತ್ಪಾದಕರ ಅಡಗುತಾಣದ ಮೇಲೆ ದಾಳಿ ಮಾಡಲು ಮಾಗ್ರೆಯನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಭದ್ರತಾ ಪಡೆಗಳ ವಾಹನ ವೇಶಾವ್ ನದಿಗೆ ಹಾರಿದನು. ಎತ್ತರದ ಪ್ರದೇಶದಿಂದ ಸೆರೆಹಿಡಿಯಲಾದ ವೀಡಿಯೊದಲ್ಲಿ, ಮಾಗ್ರೆ ನದಿಗೆ ಹಾರುವ ಮೊದಲು ಅರಣ್ಯ ಪ್ರದೇಶವನ್ನು ಗಮನಿಸುತ್ತಿರುವುದು ಕಂಡುಬರುತ್ತದೆ. ಆತ ನದಿಗೆ ಹಾರಿದ ತಕ್ಷಣ, ಪ್ರವಾಹದ ರಭಸಕ್ಕೆ ಕೊಚ್ಚಿ ಹೋದನು. ಈ ಸಂಪೂರ್ಣ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವವರನ್ನು ಭದ್ರತಾ ಪಡೆಗಳು ಖಂಡಿಸಿವೆ. “ಭದ್ರತಾ ಪಡೆಗಳನ್ನು ಮಾಗ್ರೆಯ ದುರದೃಷ್ಟಕರ ಸಾವಿಗೆ ತಪ್ಪಾಗಿ ದೂಷಿಸಬಾರದು” ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ರಾಜಕೀಯ ಆರೋಪಗಳು ಕೇಳಿಬಂದಿವೆ. ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಈ ಸಾವಿನಲ್ಲಿ ಸಂಚು ಅಡಗಿದೆ ಎಂದು ಆರೋಪಿಸಿದ್ದಾರೆ.
“ಕುಲ್ಗಾಮ್‌ನಲ್ಲಿ ಮತ್ತೊಂದು ಶವವು ನದಿಯಲ್ಲಿ ಪತ್ತೆಯಾಗಿದೆ. ಇದು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಇಮ್ತಿಯಾಜ್ ಮಾಗ್ರೆನನ್ನು ಎರಡು ದಿನಗಳ ಹಿಂದೆ ಸೈನ್ಯವು ವಿಚಾರಣೆಗೆ ಕರೆದೊಯ್ದಿತ್ತು. ಈಗ ಆತನ ಶವವು ನದಿಯಲ್ಲಿ ನಿಗೂಢವಾಗಿ ಪತ್ತೆಯಾಗಿದೆ” ಎಂದು ಮೆಹಬೂಬಾ ಮುಫ್ತಿ ತಮ್ಮ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದಕರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ಹಾಗೂ ಆಶ್ರಯ ನೀಡುತ್ತಿದ್ದ ಅನೇಕ ಸ್ಥಳೀಯರನ್ನು ಈ ಹಿಂದೆ ಬಂಧಿಸಲಾಗಿದೆ. ಈ ಪ್ರಕರಣವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುವವರ ಕುರಿತು ಚರ್ಚೆಗಳನ್ನು ಹುಟ್ಟು ಹಾಕಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















