Connect with us

ಅಂತರ ರಾಜ್ಯ

Explosive material-ಪೂಂಚ್‌ ಭಯೋತ್ಪಾದಕ ಅಡಗುತಾಣಕ್ಕೆ ದಾಳಿ; ಭಾರೀ ಪ್ರಮಾಣದ ಸ್ಫೋಟಕ ವಸ್ತು, ವೈರ್‌ಲೆಸ್ ಸೆಟ್‌ಗಳು ಪತ್ತೆ

Published

on



Ad Widget

Ad Widget

Ad Widget

Ad Widget

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಕಣಿವೆಯಾದ್ಯಂತ ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿರುವ ಭದ್ರತಾ ಪಡೆಗಳು, ಪೂಂಚ್‌ ಜಿಲ್ಲೆಯಲ್ಲಿ ಇಂತದ್ದೊಂದು ಅಡಗುತಾಣದ ಮೇಲೆ ದಾಳಿ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಕಣಿವೆಯಾದ್ಯಂತ ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿರುವ ಭದ್ರತಾ ಪಡೆಗಳು, ಪೂಂಚ್‌ ಜಿಲ್ಲೆಯಲ್ಲಿ ಇಂತದ್ದೊಂದು ಅಡಗುತಾಣದ ಮೇಲೆ ದಾಳಿ ನಡೆಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ, ಪೂಂಚ್‌ ಜಿಲ್ಲೆಯಲ್ಲಿ ಭಯೋತ್ಪಾದಕ ಅಡಗುತಾಣವನ್ನು ಪತ್ತೆ ಮಾಡಿದೆ. ಈ ಭಯೋತ್ಪಾದಕರ ಅಡಗುತಾಣದಲ್ಲಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು, ವೈರ್‌ಲೆಸ್ ಸೆಟ್‌ಗಳು ಮತ್ತು ಹೊದಿಕೆಗಳು ಪತ್ತೆಯಾಗಿವೆ ಎಂದು ಭದ್ರತಾ ಮೂಲಗಳು ಮಾಹಿತಿ ನೀಡಿವೆ.

Ad Widget

Ad Widget <> Ad Widget

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿವೆ. ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಬಲಿ ತೆಗೆದುಕೊಂಡ ಘೋರ ದಾಳಿಯ ನಂತರ ಈ ಕಾರ್ಯಾಚರಣೆ ನಡೆದಿದೆ. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಪೂಂಚ್‌ನ ಸುರನ್‌ಕೋಟ್‌ನಲ್ಲಿ ಈ ಅಡಗುತಾಣವನ್ನು ಪತ್ತೆ ಮಾಡಿದ್ದಾರೆ.



Ad Widget

ಈ ಅಡಗುತಾಣದಲ್ಲಿ ಐದು ಸ್ಫೋಟಕ ಸಾಧನಗಳು, ಎರಡು ವೈರ್‌ಲೆಸ್ ಸೆಟ್‌ಗಳು ಮತ್ತು ಮೂರು ಹೊದಿಕೆಗಳು ಪತ್ತೆಯಾಗಿವೆ. ಭಯೋತ್ಪಾದಕರ ಉಪಸ್ಥಿತಿಯನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

Ad Widget

Ad Widget

ಪೂಂಚ್ ಮತ್ತು ರಜೌರಿ ಜಿಲ್ಲೆಗಳು ಕಳೆದ ಕೆಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳು ಮತ್ತು ಎನ್‌ಕೌಂಟರ್‌ಗಳ ಕೇಂದ್ರವಾಗಿವೆ. ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ ಕೆಲವೇ ಗಂಟೆಗಳ ನಂತರ, ಪೂಂಚ್ ಮತ್ತು ಇತರ ವಲಯಗಳ ಎಲ್‌ಓಸಿ ಬಳಿ ಪಾಕಿಸ್ತಾನ ಸೇನೆ ಮತ್ತೆ ಗುಂಡಿನ ದಾಳಿ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಸೇನೆ, “ಮೇ 4-5 ರ ಮಧ್ಯರಾತ್ರಿ ಪಾಕಿಸ್ತಾನ ಸೇನೆಯು ಕುಪ್ವಾರ, ಬಾರಾಮುಲ್ಲಾ, ಪೂಂಚ್, ರಜೌರಿ, ಮೆಂಧರ್, ನೌಶೇರಾ, ಸುಂದರ್‌ಬನಿ ಮತ್ತು ಅಖ್ನೂರ್‌ನ ಎಲ್‌ಓಸಿ ಬಳಿ ಗುಂಡಿನ ದಾಳಿಒ ನಡೆಸಿದೆ. ಭಾರತೀಯ ಯೋಧರು ತಕ್ಷಣವೇ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ” ಎಂದು ಸ್ಪಷ್ಟಪಡಿಸಿದೆ.

ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನವು ಒಟ್ಟು 11 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, ಭಾರತೀಯ ಸೇನೆ ಇದಕ್ಕೆ ದಿಟ್ಟ ಪ್ರತ್ಯುತ್ತರ ನೀಡುತ್ತಿದೆ. ಭಯೋತ್ಪಾದಕ ಅಡಗುತಾಣಗಳ ಕುರಿತು ಭಾರತೀಯ ಭದ್ರತಾ ಪಡೆಗಳಿಗೆ ಮಾಹಿತಿ ದೊರೆಯಬಾರದು ಎಂಬ ಪ್ರಯತ್ನದಲ್ಲಿರುವ ಪಾಕಿಸ್ತಾನ ಸೇನೆ, ಗಡಿಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ.

ಸದ್ಯ ಪೂಂಚ್‌ ಜಿಲ್ಲೆಯಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆಯಾಗಿರುವುದು, ಭಧ್ರತಾ ಪಡೆಗಳಿಗೆ ದೊರೆತ ಬಹುದೊಡ್ಡ ಯಶಸ್ಸು ಎಂದು ಹೇಳಲಾಗಿದೆ. ಪಹಲ್ಗಾಮ್‌ ದಾಳಿಕೋರರ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಗಡಿ ದಾಟಿ ತಪ್ಪಿಸಿಕೊಂಡು ಹೋಗದಂತೆ ಕಟ್ಟೆಚ್ಚರವಹಿಸಲಾಗಿದೆ.

ಒಟ್ಟಿನಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಕಣಿವೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಪಹಲ್ಗಾಮ್‌ ದಾಳಿಕೋರರಿಗೆ ಶಿಕ್ಷೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.

Ad Widget
Click to comment

Leave a Reply

ನಿಧನ ವಾರ್ತೆ

Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget

Ad Widget

ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

Ad Widget

Ad Widget <> Ad Widget

ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.



Ad Widget

ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.

Ad Widget

Ad Widget

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ

Published

on



Ad Widget

Ad Widget

Ad Widget

Ad Widget

ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.



Ad Widget

ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Ad Widget

ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ

ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Ad Widget
Continue Reading

ಅಂತರ ರಾಜ್ಯ

Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್

Published

on



Ad Widget

Ad Widget

Ad Widget

Ad Widget

ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.

Ad Widget

Ad Widget

Ad Widget

Ad Widget

ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.



Ad Widget

ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.

Ad Widget

Ad Widget

ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.

ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.

ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.‌

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading