ಮೈಸೂರು
Mysuru-ಮೈಸೂರು: ತನ್ನನ್ನು ಕೊಲೆ ಮಾಡಿಸ್ತಾನೆ ಎಂಬ ಭಯದಲ್ಲಿ ರೌಡಿಶೀಟರ್ ನ ಬರ್ಬರ ಹತ್ಯೆ – ಹುಡುಗಿಯ ಮೂಲಕ ಕರೆಸಿಕೊಂಡು ಕೊ*ಚ್ಚಿ ಹಾಕಿದ ತಂಡ
ಮೈಸೂರಿನ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವರುಣ ಗ್ರಾಮದ ಸನಿಹದಲ್ಲಿರುವ ಹೋಟೆಲ್ ಬಳಿ ಹತ್ಯೆ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ರೌಡಿಶೀಟರ್ ಕಾರ್ತಿಕ್ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು: ಮೈಸೂರಿನ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವರುಣ ಗ್ರಾಮದ ಸನಿಹದಲ್ಲಿರುವ ಹೋಟೆಲ್ ಬಳಿ ಹತ್ಯೆ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ರೌಡಿಶೀಟರ್ ಕಾರ್ತಿಕ್ ಎಂದು ಪೊಲೀಸರು ತಿಳಿಸಿದ್ದಾರೆ.
ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಐದು ಜನರ ತಂಡದಿಂದ ದುಷ್ಕೃತ್ಯ ಎಸಗಲಾಗಿದ್ದು, ಹತ್ಯೆಯ ದೃಶ್ಯ ಹೋಟೆಲ್ ಆವರಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಗೀಡಾದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್ ಹಾಗೂ ಗಾಯಿತ್ರಿಪುರಂ ನಿವಾಸಿ ಪ್ರವೀಣ್ ನಡುವೆ ಈ ಹಿಂದೆ ಗಲಾಟೆಯಾಗಿತ್ತು. ನಾಲೈದು ತಿಂಗಳ ಹಿಂದೆ ಹಣಕಾಸಿನ ವಿಚಾರಕ್ಕೆ ನಡೆದಿದ್ದ ಗಲಾಟೆಯಲ್ಲಿ ಪ್ರವೀಣ್ ಎಂಬಾತನನ್ನು ಕೊಲೆ ಮಾಡುವುದಾಗಿ ಕಾರ್ತಿಕ್ ಧಮ್ಕಿ ಹಾಕಿದ್ದ. ಹೀಗಾಗಿ ಕಾರ್ತಿಕ್ ಕೊಲೆ ಮಾಡ್ತಾನೆ ಎನ್ನುವ ಭಯದಲ್ಲೇ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆ ಚಿಕ್ಕಹಳ್ಳಿಯಲ್ಲಿ ನಡೆದ ಕೊಲೆ ಯತ್ನ ಕೇಸ್ನಲ್ಲಿ ಜೈಲು ಸೇರಿದ್ದ ಕಾರ್ತಿಕ್, ಬಳಿಕ ಬೇಲ್ ಮೇಲೆ ಹೊರಬಂದಿದ್ದ. ಹೀಗಾಗಿ ಈ ಸಂದರ್ಭ ನೋಡಿ, ಸ್ಕೆಚ್ ಹಾಕಿ ಕಾರ್ತಿಕ್ ಕೊಲೆ ಮಾಡಲಾಗಿದೆ.
ನನ್ನ ಮಗನಿಗೆ ರಾತ್ರಿ 10.45ಕ್ಕೆ ಫೋನ್ ಮಾಡಿದ್ದೆ, ಊಟ ಮಾಡಿಕೊಂಡು ಹೋಗಲು ಹೇಳಿದ್ದೆ. ಅದಕ್ಕೆ ಅವನು ಬರ್ತೀನಮ್ಮ ಚಪಾತಿ ಮಾಡಿಡು ಅಂತ ಹೇಳಿದ್ದ. ಕಾರ್ತಿಕ್ ರಾತ್ರಿ 11.30ಕ್ಕೆ ಬಂದು ಊಟ ಮಾಡಿಕೊಂಡು ಹೋಗಿದ್ದ. ನಂತರ ರಾತ್ರಿ 1.30ಕ್ಕೆ ಆತನ ಜೊತೆಗಿದ್ದ ಹುಡುಗಿಯಿಂದ ಪೋನ್ ಬಂದಿದೆ. ಆದರೆ ನಾನು ಕರೆ ಸ್ವೀಕರಿಸಲಿಲ್ಲ. ನಂತರ ಬೆಳಿಗ್ಗೆ ಆತನ ಸ್ನೇಹಿತರು ಮನೆ ಮುಂದೆ ಬಂದು ಕೂಗಾಡಿದಾಗ ವಿಷಯ ಗೊತ್ತಾಯಿತು ಎಂದು ಮೃತ ಕಾರ್ತಿಕ್ ತಾಯಿ ಶಾಂತಕುಮಾರಿ ಹೇಳಿಕೆ ನೀಡಿದ್ದಾರೆ.
ನಮ್ಮ ಏರಿಯಾದ ಲಕ್ಷ್ಮಿ ಎಂಬುವಳ ಮೂಲಕ ಈ ಕೊಲೆ ಆಗಿರಬಹುದು. ಲಕ್ಷ್ಮಿಯನ್ನು ಪ್ರವೀಣ್ ಟ್ರ್ಯಾಪ್ ಮಾಡಿದ್ದಾನೆ. ಆಕೆಯ ಮೂಲಕ ನನ್ನ ಮಗ ಇರುವ ಜಾಗವನ್ನು ಗೊತ್ತು ಮಾಡಿಕೊಂಡಿದ್ದಾನೆ.
ಲಕ್ಷ್ಮಿ ಮೂಲಕ ಪೋನ್ ಮಾಡಿಸಿ ಕರೆಸಿಕೊಂಡು ಕೊಲೆ ಮಾಡಿರಬಹುದು. ಇದು ಲಕ್ಷ್ಮಿ ಮುಖೇನವೇ ಆಗಿರುವ ಕೊಲೆ. ಆಕೆಯನ್ನು ಹಿಡಿದು ವಿಚಾರಿಸಿದರೆ ಎಲ್ಲವೂ ಗೊತ್ತಾಗುತ್ತದೆ. ನನ್ನನ್ನು ಎಲ್ಲರೂ ಬಂದು ಅಮ್ಮ ಅತ’ ಕರೆಯುತ್ತಾರೆ, ಯಾರ ಮೇಲೆ ನಾನು ಅನುಮಾನ ಪಡಲಿ ಹೇಳಿ ಎಂದು ಕಾರ್ತಿಕ್ ತಾಯಿ ಶಾಂತಕುಮಾರಿ ಹೇಳಿದ್ದಾರೆ.
ಮೈಸೂರು
H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್. ವಿಶ್ವನಾಥ್
ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.
ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್. ವಿಶ್ವನಾಥ್ ಟೀಕಿಸಿದರು.
ಮೈಸೂರು
Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.
ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ಮೈಸೂರು
Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.
ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.
‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.
‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.
ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.
ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.
ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.
ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ21 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್5 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು21 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















