ಬಿಗ್ ನ್ಯೂಸ್
Beer-ಬಿಯರ್ ಪ್ರಿಯರಿಗೆ ಸರ್ಕಾರದ ‘ಬರೆ’; ಶೀಘ್ರದಲ್ಲೇ 10ರಿಂದ 15 ರೂ. ಹೆಚ್ಚಳ ಸಾಧ್ಯತೆ…
ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ.10ರಷ್ಟು ಹೆಚ್ಚಿಸಲು ಸರಕಾರ ನಿರ್ಧರಿಸಿದ್ದು, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರಿಗೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಅಬಕಾರಿ ಇಲಾಖೆಯ ಈ ನಿರ್ಧಾರದಿಂದ ಶೀಘ್ರದಲ್ಲೇ ಬಿಯರ್ 10ರಿಂದ 15 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ.
ಬೆಂಗಳೂರು, ಮೇ 4: ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ.10ರಷ್ಟು ಹೆಚ್ಚಿಸಲು ಸರಕಾರ ನಿರ್ಧರಿಸಿದ್ದು, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರಿಗೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಅಬಕಾರಿ ಇಲಾಖೆಯ ಈ ನಿರ್ಧಾರದಿಂದ ಶೀಘ್ರದಲ್ಲೇ ಬಿಯರ್ 10ರಿಂದ 15 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಬಿಯರ್ ಮೇಲಿನ ಎಇಡಿಯು ಉತ್ಪಾದನ ವೆಚ್ಚವು ಶೇ. 195ರಷ್ಟಿದೆ. ಈಗ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.205ಕ್ಕೆ ಹೆಚ್ಚಿಸುವ ಬಗ್ಗೆ ಹೊಸ ಕರಡು ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಪ್ರೀಮಿಯಂ ಅಥವಾ ಇತರ ಬಿಯರ್ ಬ್ಯಾಂಡ್ ಗಳ ಬೆಲೆಯು ಪ್ರತಿ ಬಾಟಲಿಗೆ ಸರಾಸರಿ 10ರಿಂದ 15 ರೂ. ಹೆಚ್ಚಾಗಬಹುದೆಂದು ನಿರೀಕ್ಷಿಸಲಾಗಿದೆ ಎಂದು ವೈನ್ ಅಸೋಸಿಯೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.
ಸರಕಾರದ ಕ್ರಮಕ್ಕೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದೆ. ಮದ್ಯ ಮತ್ತು ಬಿಯರ್ ದರಗಳ ಮೇಲೆ ಹೆಚ್ಚುವರಿ ಅಬಕಾರಿ ಶುಲ್ಕವನ್ನು ನಿಗದಿಪಡಿಸುವಾಗ ವೈಜ್ಞಾನಿಕ ಮಾನದಂಡಗಳನ್ನು ಅಳವಡಿಸಬೇಕು ಎಂದು
ಮೂರನೇ ಬಾರಿಗೆ ತೆರಿಗೆ ಹೆಚ್ಚಳ
ಮಧ್ಯಮ ಶ್ರೇಣಿಯ ಮತ್ತು ಅಗ್ಗದಸ್ಥಳೀಯ ಬ್ಯಾಂಡ್ ಗಳ ಬಿಯರ್ ದರ 5 ರೂ. ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ, ದರ ಏರಿಕೆಯು ಬ್ಯಾಂಡ್ ನಿಂದ ಬ್ಯಾಂಡ್ ವ್ಯತ್ಯಾಸವಾಗುವ ಸಾಧ್ಯತೆಯಿದೆ. 20.23ರ ಜುಲೈಯಲ್ಲಿ ಕಾಂಗ್ರೆಸ್ ಸರಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.475ರಿಂದಶೇ.185 ಕ್ಕೆ ಹಚ್ಚಿಸಿತ್ತು. 2025ರ ಜ.20ರಂದು ಬಜೆಟ್ ಗೂ ಮುನ್ನವೇ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.185 ರಿಂದ ಶೇ.195ಕ್ಕೆ ಹೆಚ್ಚಿಸಲಾಗಿತ್ತು. ಈಗ ಮೂರನೇ ಬಾರಿಗೆ ತೆರಿಗೆ ಹೆಚ್ಚಳ ಮಾಡಲು ಸರಕಾರ ಮುಂದಾಗಿದೆ. ಕಳೆದ ಎರಡು ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದಾಗ ರಾಜ್ಯದಲ್ಲಿ ವಿವಿಧ 6 ಬಗೆಯ ಬಿಯರ್ ಗಳು ಕನಿಷ್ಠ10 ರೂ.ನಿಂದ ಗರಿಷ್ಠ 45 ರೂ.ವರೆಗೂ ದುಬಾರಿಯಾಗಿತ್ತು.
ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಆಕ್ಷೇಪ
ಅಬಕಾರಿ ಇಲಾಖೆಯ ನಿರ್ಧಾರಕ್ಕೆ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಸೋಸಿಯೇಶನ್ ಅಧ್ಯಕ್ಷ ಎಸ್. ಗುರುಸ್ವಾಮಿ ಮೈಸೂರು, ಮಾರಾಟಕ್ಕೆ ಹೊಡೆತ ಬೀಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಯರ್ ದರ ಏರಿಕೆ ಸಂಬಂಧ ಅಸೋಸಿಯೇಶನ್ ಆಕ್ಷೇಪಣೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ.
ಮದ್ಯ ಮತ್ತು ಬಿಯರ್ ವರಗಳನ್ನು ನಿಗದಿಪಡಿಸುವಾಗ ಚಿಲ್ಲರೆ ಮದ್ಯ ಮಾರಾಟಗಾರರ ಸಂಘಗಳ ಸಭೆ ಕರೆದು ಅಭಿಪ್ರಾಯಗಳನ್ನು ಪಡೆದುಕೊಳ್ಳುವಂತೆ ಆಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ ಅಬಕಾರಿ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ದರಗಳ ಯಾವತ್ತೂ ಗ್ರಾಹಕರ ಕೈಗೆಟಕುವಂತಿರಬೇಕು ಎಂದು ಆಗ್ರಹಿಸಿದ್ದಾರೆ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















