Connect with us

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ: 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ; ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಕಾಯಕವಾಗಿದೆ : ಟಿ.ಬಿ. ಜಯಚಂದ್ರ

Published

on

Ad Widget

Ad Widget

Ad Widget

Ad Widget

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 53ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು.

Ad Widget

Ad Widget

Ad Widget

Ad Widget

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 53ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು.

Ad Widget

Ad Widget alt="Ad Widget"/>

Ad Widget

ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಮದುವೆಯ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ವೇದಘೋಷ, ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ಸಂಜೆ ಗಂಟೆ 6.48 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ನಡೆಯಿತು. ಅವರವರ ಜಾತಿ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸುಶ್ರಾವ್ಯವಾದ ಶೋಭಾನೆ ಹಾಡುಗಳು, ವಧು-ವರರಿಗೆ ಆರತಿ ಕಾರ್ಯಕ್ರಮ ಮದುವೆಗೆ ವಿಶೇಷ ಸೊಗಡನ್ನು ನೀಡಿತು.

Ad Widget

Ad Widget <> Ad Widget

ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ನೂತನ ದಂಪತಿಗಳಿಗೆ ಶುಭ ಹಾರೈಸಿ, ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಸೇವೆಯಾಗಿದೆ ಎಂದು ಹೇಳಿದರು. ನಾಡಿನೆಲ್ಲೆಡೆ ಬಹುಮುಖಿ ಸಮಾಜಸೇವಾ ಕಾರ್ಯಗಳ ಮೂಲಕ ಗ್ರಾಮೀಣ ಪ್ರದೇಶದ ಜನರಲ್ಲಿಯೂ ಹಣದ ಮಿತಬಳಕೆ, ಉಳಿತಾಯ ಹಾಗೂ ಸಮರ್ಪಕ ಹೂಡಿಕೆ ಬಗ್ಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವೆ ಹಾಗೂ ಸಾಧನೆ ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸರಳ ಸಾಮೂಹಿಕ ವಿವಾಹ ಅತ್ಯಂತ ಪುಣ್ಯದ ಕಾಯಕವಾಗಿದೆ. ಕಳೆದ 52 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹದಲ್ಲಿ 12,900 ಜೊತೆ ವಿವಾಹವಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯಜೀವನ ನಡೆಸುತ್ತಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದರು.

Ad Widget

Ad Widget

ತಾವು ಕಾನೂನು ಸಚಿವರಾಗಿದ್ದಾಗ ಸರಳ ಸಾಮೂಹಿಕ ವಿವಾಹ ಪದ್ಧತಿ ಜಾರಿಗೆ ತರಲು ಕಾನೂನು ರೂಪಿಸಿದ್ದೆ. ಆದರೆ ಸಚಿವಸಂಪುಟದಲ್ಲಿ ಹಾಗೂ ಇತರರು ಕೂಡಾ ಇದ್ದಕ್ಕೆ ವಿರೋಧ ವ್ಯಕ್ತಪಡಿಸಿರುವುದರಿಂದ ತಾನು ವಿಫಲನಾದೆ ಎಂದು ವಿಷಾದ ವ್ತಕ್ತಪಡಿಸಿದರು.

ಹೆಗ್ಗಡೆಯವರ ಕಷ್ಟದ ಕಾಲದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅವರಿಗೆ ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು. ಪೂಜ್ಯರ ಜೊತೆಗೆ ನಾವೆಲ್ಲ ಸದಾ ಸಿದ್ಧರೂ, ಬದ್ಧರೂ ಆಗಿದ್ದೇವೆ ಎಂದು ಅವರು ಭರವಸೆ ನೀಡಿದರು.

ಶುಭಾಶಂಸನೆ ಮಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಸನಾತನ ಪರಂಪರೆಯಲ್ಲಿ ಷೋಢಶ ಸಂಸ್ಕಾರಗಳಲ್ಲಿ ಮದುವೆ ಎಂಬುದು ಭಾವನಾತ್ಮಕ ಸಂಬAಧ ಹೊಂದಿದೆ. ಈ ಪವಿತ್ರ ಸಂಸ್ಕಾರ ಪಡೆದ ಪತಿ-ಪತ್ನಿ ಸಮಾನವಾಗಿ ಸುಖ-ಕಷ್ಟ, ನೋವು-ನಲಿವು ಎಲ್ಲವನ್ನೂ ಶಾಂತಿ ಮತ್ತು ತಾಳ್ಮೆಯಿಂದ ಅನುಭವಿಸಿ ಧನ್ಯತಾಭಾವ ಹೊಂದಿರಬೇಕು. ಸಾರ್ಥಕ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ವಧೂ-ವರರ ಪ್ರಮಾಣ ವಚನ:
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ ಮತ್ತು ಕಾಮಗಳಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆ ಎಂಬುದಾಗಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ಮದುವೆ ಆದವರು ದುಂದುವೆಚ್ಚ ಮಾಡಬಾರದು. ಸತ್ಕಾರಕೂಟ, ನಿಶ್ಚಿತಾರ್ಥ, ಅತಿಥಿ ಸತ್ಕಾರಕ್ಕೆಂದು ಅನಗತ್ಯ ವೆಚ್ಚ ಮಾಡಬಾರದು ಎಂದು ಸಲಹೆ ನೀಡಿದರು.

ಸಾಮೂಹಿಕ ವಿವಾಹ ಇಂದು ಹೆಚ್ಚು ಜನಪ್ರಿಯವಾಗುತ್ತಿದ್ದು ತಮಗೆ ಧನ್ಯತಾಭಾವ ಮೂಡಿಬಂದಿದೆ ಎಂದು ಹೇಳಿದರು.ಅನೇಕ ಮಂದಿ ದಾನಿಗಳು ನಗದು ದೇಣಿಗೆ, ಮಂಗಳಸೂತ್ರ, ಮೂಗುತಿ, ಸೀರೆ ಮೊದಲಾದವುಗಳನ್ನು ಉಚಿತ ಸಾಮೂಹಿಕ ವಿವಾಹಕ್ಕೆ ಕೊಡುಗೆಯಾಗಿ ನೀಡಿ ಪುಣ್ಯಭಾಗಿಗಳಾಗಿದ್ದಾರೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು.

ಧರ್ಮಸ್ಥಳದ ವತಿಯಿಂದ ನೂತನ ದಂಪತಿಗಳಿಗೆ ವಿಶೇಷ ಉಡುಗೊರೆ ನೀಡಲಾಯಿತು. ಹೇಮಾವತಿ ವಿ. ಹೆಗ್ಗಡೆಯವರು, ಶ್ರದ್ಧಾಅಮಿತ್, ಅಮಿತ್ ಉಪಸ್ಥಿತರಿದ್ದರು. ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಅಖಿಲೇಶ್ ಶೆಟ್ಟಿ ಧರ್ಮಸ್ಥಳ ಧನ್ಯವಾದವಿತ್ತರು. ಎಸ್.ಡಿ.ಎಂ. ಸನಿವಾಸ ಕಾಲೇಜಿನ ಪ್ರಾಂಶುಪಾಲ ಡಾ. ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!